< ಕೀರ್ತನೆಗಳು 98 >
1 ೧ ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ. ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ.
Psalmo. Kantu al la Eternulo novan kanton, Ĉar miraklojn Li faris; Helpis Lin Lia dekstra mano kaj Lia sankta brako.
2 ೨ ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ.
La Eternulo aperigis Sian savon; Antaŭ la okuloj de la popoloj Li malkaŝis Sian justecon.
3 ೩ ಆತನು ಇಸ್ರಾಯೇಲನ ಮನೆತನದವರ ಬಗ್ಗೆ ಇದ್ದ, ತನ್ನ ಪ್ರೀತಿ, ಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. ಭೂಲೋಕದ ಎಲ್ಲಾ ಕಡೆಯವರೂ, ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡಿದ್ದಾರೆ.
Li memoras Sian bonecon kaj Sian fidelecon al la domo de Izrael. Vidis ĉiuj finoj de la tero la helpon de nia Dio.
4 ೪ ಸಮಸ್ತ ಭೂನಿವಾಸಿಗಳೇ, ಯೆಹೋವನಿಗೆ ಜಯಘೋಷಮಾಡಿರಿ; ಹರ್ಷಿಸಿರಿ, ಉತ್ಸಾಹಧ್ವನಿಮಾಡಿ ಹಾಡಿರಿ.
Ĝoje kriu al la Eternulo la tuta tero; Kantu, gloru, kaj muziku.
5 ೫ ಕಿನ್ನರಿಯೊಡನೆ ಯೆಹೋವನನ್ನು ಸ್ತುತಿಸಿರಿ; ಕಿನ್ನರಿಯನ್ನು ನುಡಿಸುತ್ತಾ ಭಜಿಸಿರಿ.
Muziku al la Eternulo per harpo, Per harpo kaj per sonoj de psalmo.
6 ೬ ತುತ್ತೂರಿಗಳನ್ನೂ, ಕೊಂಬನ್ನೂ ಊದುತ್ತಾ, ಯೆಹೋವರಾಜನಿಗೆ ಜಯಘೋಷಮಾಡಿರಿ.
Per trumpetoj kaj per sono de korno Ĝoje kriu antaŭ la Reĝo, la Eternulo.
7 ೭ ಯೆಹೋವನ ಮುಂದೆ ಸಮುದ್ರವೂ, ಅದರಲ್ಲಿರುವುದೆಲ್ಲವೂ, ಭೂಮಿಯೂ, ಅದರ ನಿವಾಸಿಗಳೂ ಘೋಷಿಸಲಿ.
Bruu la maro, kaj ĉio, kio ĝin plenigas, La mondo kaj ĝiaj loĝantoj.
8 ೮ ನದಿಗಳು ಚಪ್ಪಾಳೆ ಹೊಡೆಯಲಿ; ಪರ್ವತಗಳೆಲ್ಲಾ ಉತ್ಸಾಹಧ್ವನಿಮಾಡಲಿ.
La riveroj plaŭdu per la manoj, La montoj kune kantu ĝoje,
9 ೯ ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ; ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು.
Antaŭ la Eternulo, ĉar Li venas, por juĝi la teron; Li juĝos la mondon kun justeco kaj la popolojn kun vereco.