< ಕೀರ್ತನೆಗಳು 99 >

1 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಜನಾಂಗಗಳು ನಡುಗಲಿ. ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; ಭೂಮಿಯು ಕಂಪಿಸಲಿ.
The Lord reigneth; people tremble: he sitteth enthroned over the cherubim; the earth is moved.
2 ಚೀಯೋನಿನಲ್ಲಿರುವ ಯೆಹೋವನು ದೊಡ್ಡವನು; ಆತನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು.
The Lord is great in Zion; and he is exalted above all the people.
3 ಅವರು ಯೆಹೋವನ ಭಯಂಕರವಾದ ಮಹಾನಾಮವನ್ನು ಕೊಂಡಾಡಲಿ; ಆತನು ಪರಿಶುದ್ಧನು.
They will give thanks to thy name, great, and terrible, [and] holy it is.
4 ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ; ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ, ಯಾಕೋಬ್ಯರಲ್ಲಿ ನ್ಯಾಯ, ನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ.
And to the power of the king who loveth justice and righteousness hast thou truly executed in Jacob.
5 ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; ಆತನ ಪಾದಪೀಠದ ಮುಂದೆ ಅಡ್ಡಬೀಳಿರಿ. ಆತನು ಪರಿಶುದ್ಧನು.
Exalt ye the Lord our God, and bow yourselves down before his footstool: he is holy.—
6 ಆತನ ಯಾಜಕರಲ್ಲಿ ಮೋಶೆ ಮತ್ತು ಆರೋನರೂ, ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿದಾಗೆಲ್ಲ, ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು.
Moses and Aaron were among his priests, and Samuel among those that call on his name; they called on the Lord, and he answered them.
7 ಆತನು ಮೇಘಸ್ತಂಭದಲ್ಲಿದ್ದು ಅವರೊಡನೆ ಮಾತನಾಡುತ್ತಿದ್ದನು; ಅವರು ಆತನ ವಿಧಿನಿಯಮಗಳನ್ನು ಕೈಕೊಂಡವರು.
In the pillar of cloud he used to speak unto them: they kept his testimonies, and the statutes which he had given unto them.
8 ನಮ್ಮ ಯೆಹೋವ ದೇವರೇ, ಅವರಿಗೆ ಸದುತ್ತರ ಕೊಟ್ಟವನು ನೀನೇ. ನೀನು ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸುತ್ತಿದ್ದರೂ, ಕ್ಷಮಿಸುವ ದೇವರಾಗಿದ್ದಿ.
O Lord, our God, thou didst answer them: thou wast a forgiving God unto them, yet also an avenger for their wrong doings.
9 ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; ಆತನ ಪರಿಶುದ್ಧಪರ್ವತದ ಕಡೆಗೆ ಅಡ್ಡಬೀಳಿರಿ. ನಮ್ಮ ಯೆಹೋವ ದೇವರು ಪರಿಶುದ್ಧನು.
Exalt the Lord our God, and bow yourselves down before his holy mount; for holy is the Lord our God.

< ಕೀರ್ತನೆಗಳು 99 >