< ಪ್ರಕಟಣೆ 11 >
1 ೧ ತರುವಾಯ ಅಳತೆಗೊಲಿನಂಥ ಒಂದು ಕೋಲನ್ನು ನನಗೆ ಕೊಟ್ಟು ಹೀಗೆ ತಿಳಿಸಲಾಯಿತು, “ನೀನೆದ್ದು ದೇವರ ಆಲಯವನ್ನೂ ಯಜ್ಞವೇದಿಯನ್ನೂ ಅಳತೆಮಾಡಿ ಆಲಯದಲ್ಲಿ ಆರಾಧನೆಮಾಡುವವರನ್ನು ಎಣಿಕೆಮಾಡು.
O MEN song dueta sokon pot pang dong ia. Amen inda: Uda, song im en kaudok en Kot, o pei saraui, o irail me kaukaudok lole!
2 ೨ ಆಲಯದ ಹೊರಗಿರುವ ಹೊರಾಂಗಣವನ್ನು ಅಳೆಯದೆ ಬಿಟ್ಟುಬಿಡು, ಅದು ಅನ್ಯಜನರಿಗಾಗಿ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಲವತ್ತೆರಡು ತಿಂಗಳು ತುಳಿದಾಡುವರು.
A kapil penan im en kaudok kasela liki o der song, pwe a pangalanger men liki kan o kanim saraui re pan kakaue saunipong paeisok riau.
3 ೩ ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.”
O I pan kamanada nai saunkadede riamen, o ira pan kokop wei ran kid riepuki woneisok, likau kida likau tol.
4 ೪ ಭೂಲೋಕದ ಒಡೆಯನ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಮತ್ತು ಎರಡು ದೀಪಸ್ತಂಭಗಳೂ ಇವರೇ.
Ira tuka olip riapot o lamp riau, me mimi mon Kaun en sappa.
5 ೫ ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿಯು ಹೊರಟು ಇವರ ಶತ್ರುಗಳನ್ನು ದಹಿಸಿಬಿಡುವುದು. ಇವರಿಗೆ ಕೇಡನ್ನು ಉಂಟುಮಾಡಬಯಸುವವರಿಗೆ ಆ ರೀತಿಯಾಗಿ ಹತರಾಗಬೇಕು.
Ma amen men kame ira, kisiniai pan lus wei sang nan au ara, ap karongala naira imwintiti kan. O ma amen men kame ira, a pan kamela.
6 ೬ ಅವರು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಅವರಿಗೆ ಇರುವುದು. ಇದಲ್ಲದೆ ಅವರಿಗೆ ಇಷ್ಟಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹಿಂಸಿಸುವುದಕ್ಕೂ ಅಧಿಕಾರವುಂಟು.
Ira manaman ong en pinala lang, pwe ede katau arain ara kokopada, o ira kaun en pil, ira kak kawuk ong nta pil akan o kame ki sappa song en kamekam karos, due ira inong iong.
7 ೭ ಅವರು ತಮ್ಮ ಸಾಕ್ಷಿಗಳನ್ನು ಹೇಳಿ ಮುಗಿಸಿದ ನಂತರ, ಅಧೋಲೋಕದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವುದು. (Abyssos )
Ira lao kanikiela ara kadede, man o, me pan pwarada sang wasa lol, pan pei ong ira, kaloe ira di, kame ira la. (Abyssos )
8 ೮ ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಸಾಂಕೇತಿಕವಾಗಿ ಸೊದೋಮ್ ಎಂದು, ಐಗುಪ್ತ ಎಂದೂ ಹೆಸರುಗಳುಂಟು. ಇವರ ಒಡೆಯನು ಸಹ ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟಿದ್ದನು.
O kalep ara pan wonon nani al en kanim lapalap, me ad a ni karaseras Sodom o Äkipten, wasa ar Kaun pil kalopular.
9 ೯ ಸಕಲ ಜನ, ಕುಲ, ಭಾಷೆ, ಜನಾಂಗಗಳಿಗೆ ಸೇರಿದವರು ಈ ಸಾಕ್ಷಿಗಳ ಶವಗಳನ್ನು ಮೂರುವರೆ ದಿನಗಳವರೆಗೂ ನೋಡುವರು ಮತ್ತು ಅವರ ಶವಗಳನ್ನು ಸಮಾಧಿಯಲ್ಲಿ ಇಡಗೊಡಿಸುವುದಿಲ್ಲ.
Ari, me toto sang ren men liki kan, o kainok, o lokaia, o aramas akan pan kilang kalep ara ran silu alep, o irail sota pan mueid ong, me ara kalep pan saredi nan sousou.
10 ೧೦ ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಹಿಂಸಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.
O irail, me kaukauson sappa, kaneket kin ira o pereperen, re pan pakisakis pena, pwe saukop riamen et kin kaloke irail, me kaukauson sappa.
11 ೧೧ ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಶ್ವಾಸವು ಬಂದು ಆ ಶವಗಳಲ್ಲಿ ಪ್ರವೇಶಿಸಲು, ಅವರು ಕಾಲೂರಿ ನಿಲ್ಲುವರು. ಅವರನ್ನು ನೋಡಿದವರೆಲ್ಲರೂ ಭಯದಿಂದ ನಡುಗಿದರು.
A murin ran silu alep maur sang ren Kot pil til wong lol ara, rap u ni nä ara, a irail, me kilang ira, masakada kaualap.
12 ೧೨ ಅನಂತರ ಅವರಿಗೆ, “ಇಲ್ಲಿ ಮೇಲಕ್ಕೆ ಏರಿ ಬನ್ನಿರಿ!” ಎಂದು ಆಕಾಶದಿಂದ ಮಹಾ ವಾಣಿಯು ತಿಳಿಸಿತು. ಅದನ್ನು ಕೇಳಿ ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು. ಅವರ ಶತ್ರುಗಳು ಅವರನ್ನು ನೋಡುತ್ತಾ ಇದ್ದರು.
O i ronger ngil laud eu sang lang mamasani ong ira: Koma koda dong met! Ira ap kokidalang dapok, o imwintiti ara kilang ira.
13 ೧೩ ಅದೇ ಗಳಿಗೆಯಲ್ಲಿ ಮಹಾ ಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು. ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತು ಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರನ್ನು ಘನಪಡಿಸಿದರು.
Ni auer ota sappa rerer kaualap, eisokkis eu en kanim olar ni rerer, o mar isekid en aramas mekilar, me tei kan masakalar, rap landar Kot en lang.
14 ೧೪ ಎರಡನೆಯ ವಿಪತ್ತು ಕಳೆದುಹೋಯಿತು. ಇಗೋ, ಮೂರನೆಯ ವಿಪತ್ತು ಬೇಗನೆ ಬರುತ್ತಿದೆ.
Kamekam kariau wiauier. Kilang kamekam kasilu me pan pitipit wiaui.
15 ೧೫ ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು. (aiōn )
Tounlang kaisimen pepeuk koronete. Ngil laud ap wiauier nanlang indinda: Wein sappa id wialar wein atail Kaun o sapwilim a Kristus. A pan kotin kaunda kokolata. (aiōn )
16 ೧೬ ತರುವಾಯ ದೇವರ ಸಮಕ್ಷಮದಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಆತನಿಗೆ ಅಡ್ಡಬಿದ್ದು,
A lapalap riek pamen, me ariri Kot pon mol arail, rap pupedi ni silang ir pongi Kot masani:
17 ೧೭ “ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೇ ಇದ್ದಾತನೇ, ನೀನು ನಿನ್ನ ಮಹಾ ಅಧಿಕಾರವನ್ನು ವಹಿಸಿಕೊಂಡು ಆಳುತ್ತಿರುವುದರಿಂದ ನಾವು ನಿನಗೆ ಕೃತಜ್ಞತಾಸುತ್ತಿ ಸಲ್ಲಿಸುತ್ತೇವೆ.
Se danke komui, Maing Kot, Kaun en meakaros, me kotikot metet, o me kotikot mas o, pwe re kotin aleer ar manaman lapalap, o kotin Nanmarki lar.
18 ೧೮ ಜನಾಂಗಗಳು ಕೋಪಿಸಿಕೊಂಡವು. ನಿನ್ನ ಕೋಪವೂ ಪ್ರಕಟವಾಯಿತು. ಸತ್ತವರು ತೀರ್ಪುಹೊಂದುವ ಸಮಯವು ಬಂದಿದೆ. ನೀನು ನಿನ್ನ ದಾಸರಾದ ಪ್ರವಾದಿಗಳಿಗೂ, ದೇವಜನರಿಗೂ, ನಿನ್ನ ನಾಮಕ್ಕೆ ಭಯಪಡುವ ಹಿರಿಯರೂ ಕಿರಿಯರೂ ಆಗಿರುವ ನಿನ್ನ ಭಕ್ತರಿಗೆ ಪ್ರತಿಫಲವನ್ನು ಕೊಡುವುದಕ್ಕೂ ಲೋಕನಾಶಕರನ್ನು ವಿನಾಶಗೊಳಿಸುವ ಕಾಲವು ಬಂದಿದೆ” ಎಂದು ಆತನನ್ನು ಆರಾಧಿಸಿದರು.
O wei kan makaradar, a ar ongiong leler, o a leler ansaun melar akan pakadeik, o a leler ansau en katingi sapwilim omui ladu saukop akan o saraui kan; irail, me lomwineki mar ar, tikitik kan o lapalap akan, o en kawe irail, me kin kawela sappa.
19 ೧೯ ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು. ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ, ಗರ್ಜನೆ, ಗುಡುಗು, ಮಿಂಚುಗಳು, ಭೂಕಂಪವು, ದೊಡ್ಡ ಆಲಿಕಲ್ಲಿನ ಮಳೆಯೂ ಸುರಿಯಿತು.
Im en kaudok en Kot, mi nanlang, ritidar, o kopa en inau pingngar nan im en kaudok o; a liol, o ngil akan, o nansapwe kan, o rerer en sappa, o akel lapalap wiauiedar.