< ಪ್ರಕಟಣೆ 14 >
1 ೧ ಆನಂತರ ನಾನು ನೋಡಲಾಗಿ ಯಜ್ಞದ ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರುವುದನ್ನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. ಅವರ ಹಣೆಯ ಮೇಲೆ ಆತನ ಹೆಸರೂ ಆತನ ತಂದೆಯ ಹೆಸರೂ ಬರೆಯಲ್ಪಟ್ಟಿದ್ದವು.
And I looked, and lo, there was the Lamb standing on Mount Zion, and with were a hundred and forty and four thousand who had his name and his Father’s name written on their foreheads.
2 ೨ ಇದಲ್ಲದೆ ಪರಲೋಕದಿಂದ ಜಲಪ್ರವಾಹದ ಘೋಷದಂತೆಯೂ ದೊಡ್ಡ ಗುಡುಗಿನ ಶಬ್ದದಂತೆಯೂ ಇದ್ದ ಮಹಾಶಬ್ದವನ್ನು ಕೇಳಿದೆನು. ನಾನು ಕೇಳಿದ ಆ ಶಬ್ದವು ವೀಣೆಗಳನ್ನು ನುಡಿಸಿಕೊಂಡು ಹಾಡುತ್ತಿರುವ ವೀಣೆಗಾರರ ಶಬ್ದದಂತಿತ್ತು.
And I heard a voice from heaven like the voice of many waters, and the voice of a great thunder; and I heard the voice of harpers harping on their harps.
3 ೩ ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡನ್ನು ಹಾಡಿದರು. ಭೂಲೋಕದಿಂದ ಕೊಂಡುಕೊಳ್ಳಲ್ಪಟ್ಟ ಆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಜನರ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.
They were singing a new song before the throne, and before the four Living Creatures and the Elders; and none can learn that song, except the one hundred and forty and four thousand, who had been redeemed from the earth.
4 ೪ ಇವರು ಕನ್ಯೆಯರಂತೆ ಕಳಂಕರಹಿತರು, ಸ್ತ್ರೀ ಸಹವಾಸದಿಂದ ಮಲಿನರಾಗದವರು. ಯಜ್ಞದ ಕುರಿಮರಿಯಾದಾತನು ಎಲ್ಲಿ ಹೋದರೂ ಇವರು ಆತನನ್ನು ಹಿಂಬಾಲಿಸುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.
These are they who were not defiled with women; for they are celibates. They follow the Lamb wherever he goes. They have been redeemed from among men to be the first-fruits unto God and the Lamb.
5 ೫ ಇವರ ಬಾಯಲ್ಲಿ ಸುಳ್ಳು ಇರಲೇ ಇಲ್ಲ. ಇವರು ನಿರ್ದೋಷಿಗಳಾಗಿದ್ದಾರೆ.
No lie was ever found on their lips; they are spotless.
6 ೬ ಮತ್ತೊಬ್ಬ ದೇವದೂತನು ಆಕಾಶಮಧ್ಯದಲ್ಲಿ ಹಾರಾಡುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ಜನಾಂಗ, ಕುಲ, ಭಾಷೆ, ಜನಗಳೆಲ್ಲರಿಗೆ ಸಾರಿಹೇಳುವುದಕ್ಕಾಗಿ ನಿತ್ಯವಾದ ಶುಭವರ್ತಮಾನವು ಆತನಲ್ಲಿತ್ತು. (aiōnios )
Then I saw another angel who was flying in mid-heaven. He had an eternal evangel, to evangelize all the dwellers on the earth, of every nation and tribe and tongue and people. (aiōnios )
7 ೭ ಆ ದೂತನು, “ನೀವೆಲ್ಲರೂ ದೇವರಿಗೆ ಭಯಪಟ್ಟು ಆತನಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಆತನು ನ್ಯಾಯತೀರ್ಪು ಮಾಡುವ ಸಮಯವು ಬಂದಿದೆ. ಭೂಲೋಕ ಪರಲೋಕಗಳನ್ನೂ, ಸಮುದ್ರವನ್ನೂ, ನೀರಿನ ಬುಗ್ಗೆಗಳನ್ನೂ ಉಂಟುಮಾಡಿದಾತನನ್ನು ಆರಾಧಿಸಿರಿ” ಎಂದು ಮಹಾಧ್ವನಿಯಿಂದ ಹೇಳಿದನು.
And he cried with a loud voice. "Fear God and give him glory, Because the hour of his judgment is come. And worship Him who made the heavens and the earth And the sea and springs of waters."
8 ೮ ಅವನ ಹಿಂದೆ ಎರಡನೆಯ ದೇವದೂತನು ಬಂದು, “ಬಿದ್ದಳು! ಬಿದ್ದಳು! ಬಾಬೆಲೆಂಬ ಮಹಾನಗರಿಯು ಬಿದ್ದಳು, ಆಕೆಯು ಸಕಲ ಜನಾಂಗಗಳಿಗೆ ತನ್ನ ಅತಿ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿಸಿದಳು” ಎಂದು ಹೇಳಿದನು.
Then a second angel followed, crying, "Fallen, fallen is Babylon the Great, Who has made all the nations drink the wine Of the frenzy of her fornication."
9 ೯ ಅವನ ಹಿಂದೆ ಮೂರನೆಯ ದೇವದೂತನು ಬಂದು, “ಯಾವನಾದರೂ ಯಾವುದೇ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿಕೊಂಡಿದ್ದರೆ,
And another angel, a third, followed them, crying with a mighty voice. "Whoever worships the beast and his image, And receives a brand on his forehead or on his hand,
10 ೧೦ ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.
He also shall drink of the wine of the wrath of God, Poured out unmixed in the cup of his anger; And he shall be tormented with fire and brimstone In the presence of the holy angels, And in the presence of the Lamb,
11 ೧೧ ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ, ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರಾಗಲಿ ಹಗಲೂ ರಾತ್ರಿ ವಿಶ್ರಾಂತಿಯಿಲ್ಲದೆ ಇರುವರು” ಎಂದು ಮಹಾಶಬ್ದದಿಂದ ಹೇಳಿದನು. (aiōn )
And the smoke of their torment ascends forever and ever; And they have no rest day or night, Who worship the beast and his image, And all who receive the brand of his name." (aiōn )
12 ೧೨ ಇದರಲ್ಲಿ ದೇವರ ಆಜ್ಞೆಗಳನ್ನೂ, ಯೇಸುವಿನ ಬಗ್ಗೆ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ಇಲ್ಲಿ ತೋರಿಬರಬೇಕಾಗಿದೆ.
Here is the endurance of the saints, those who keep the commandments of God, and the faith of Jesus.
13 ೧೩ ಪರಲೋಕದಿಂದ ಒಂದು ಧ್ವನಿಯು ನನಗೆ ಕೇಳಿಸಿತು. ಅದು, “ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು, “ಹೌದು, ಅವರು ಧನ್ಯರೇ. ಅವರು ತಮ್ಮ ಶ್ರಮೆಗಳಿಂದ ಮುಕ್ತರಾಗಿ ವಿಶ್ರಮಿಸಿಕೊಳ್ಳುತ್ತಾರೆ ಮತ್ತು ಅವರ ಸುಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ” ಎಂದು ಹೇಳುತ್ತಾನೆ.
And I heard a voice from heaven, saying, "Write, Blessed are the dead that die in the Lord from henceforth! Yea, says the Spirit, that they may rest from their labors, For their deeds do follow them."
14 ೧೪ ಆಗ ನಾನು ನೋಡಲಾಗಿ ಇಗೋ, ಒಂದು ಬಿಳಿ ಮೇಘವು ಕಾಣಿಸಿತು. ಆ ಮೇಘದ ಮೇಲೆ ಮನುಷ್ಯಕುಮಾರನಂತಿದ್ದ ಒಬ್ಬಾತನು ಕುಳಿತಿರುವುದನ್ನು ಕಂಡೆನು. ಆತನ ತಲೆಯ ಮೇಲೆ ಚಿನ್ನದ ಕಿರೀಟವೂ, ಆತನ ಕೈಯಲ್ಲಿ ಹರಿತವಾದ ಕುಡುಗೋಲೂ ಇದ್ದವು.
And I looked, and lo, a white cloud; and on the cloud I saw One sitting like to a son of man, with a golden crown on his head, and a sharp sickle in his hand.
15 ೧೫ ಆಗ ಮತ್ತೊಬ್ಬ ದೂತನು ದೇವಾಲಯದೊಳಗಿನಿಂದ ಬಂದು ಮೇಘದ ಮೇಲೆ ಕುಳಿತಿದ್ದಾತನಿಗೆ, “ಭೂಮಿಯ ಪೈರು ಮಾಗಿದೆ, ಕೊಯ್ಯುವ ಕಾಲ ಬಂದಿದೆ. ನಿನ್ನ ಕುಡುಗೋಲನ್ನು ಹಾಕಿ ಪೈರನ್ನು ಕೊಯ್ಯಿ” ಎಂದು ಮಹಾಧ್ವನಿಯಿಂದ ಕೂಗಿದನು.
And another angel came out of the temple, shouting with a loud voice to him who sat on the cloud. "Thrust in your sickle, and reap; for the time to reap is come. The harvest of the earth is overripe."
16 ೧೬ ಮೇಘದ ಮೇಲೆ ಕುಳಿತಿದ್ದಾತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದನು. ಆಗ ಭೂಮಿಯ ಪೈರು ಕೊಯ್ಯಲ್ಪಟ್ಟಿತು.
And he who sat on the cloud thrust in his sickle upon the earth; and the earth was reaped.
17 ೧೭ ಮತ್ತೊಬ್ಬ ದೇವದೂತನು ಪರಲೋಕದಲ್ಲಿರುವ ದೇವಾಲಯದೊಳಗಿನಿಂದ ಬಂದನು. ಅವನ ಬಳಿಯೂ ಹರಿತವಾದ ಕುಡುಗೋಲು ಇತ್ತು.
And another angel came out of the temple which is in heaven, and he, too, had a sharp sickle.
18 ೧೮ ತರುವಾಯ ಬೆಂಕಿಯ ಮೇಲೆ ಅಧಿಕಾರ ಹೊಂದಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು, ಆ ಹರಿತವಾದ ಕುಡುಗೋಲಿನವನಿಗೆ, “ನಿನ್ನ ಹರಿತವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷಿಗೊಂಚಲುಗಳನ್ನು ಕೊಯ್ಯಿ. ಅದರ ಹಣ್ಣುಗಳು ಪೂರಾ ಮಾಗಿವೆ” ಎಂದು ಮಹಾಧ್ವನಿಯಿಂದ ಕೂಗಿದನು.
And another angel came from the altar, the angel who has power over fire, and he called with a loud voice to the one who had the sharp sickle, saying, "Thrust in your sharp sickle, And gather the clusters of the vine of the earth, For its grapes are fully ripe."
19 ೧೯ ಆಗ ಆ ದೂತನು ತನ್ನ ಕುಡುಗೋಲಿನಿಂದ ಭೂಮಿಯ ಮೇಲಿನ ದ್ರಾಕ್ಷಿಬಳ್ಳಿಯಲ್ಲಿದ್ದ ದ್ರಾಕ್ಷಿಹಣ್ಣನ್ನು ಕೊಯ್ದು ಕೂಡಿಸಿ, ದೇವರ ರೌದ್ರವೆಂಬ ದ್ರಾಕ್ಷಿಯ ದೊಡ್ಡ ಆಲೆಗೆ ಹಾಕಿದನು.
So the angel thrust his sickle into the earth and gathered the clusters of the vine of the earth, and threw them into the winepress, the great winepress of the wrath of God.
20 ೨೦ ಆಗ ಆಲೆಯನ್ನು ಪಟ್ಟಣದ ಹೊರಗೆ ತೆಗೆದುಕೊಂಡು ಹೋಗಿ ತುಳಿದರು. ಆ ಆಲೆಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಮೇಲಕ್ಕೆ ಬಂದು ಮುನ್ನೂರು ಕಿಲೋಮೀಟರಿನಷ್ಟು ದೂರ ಹರಿಯಿತು.
And the winepress was trodden outside the city, and blood gushed out of the winepress, even to the bridles of the horses, as far as two hundred miles.