< ಪ್ರಕಟಣೆ 15 >

1 ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ನಾನು ನೋಡಿದೆನು. ಏಳು ಮಂದಿ ದೇವದೂತರ ಕೈಯಲ್ಲಿ ಏಳು ಉಪದ್ರವಗಳಿದ್ದವು, ಇವು ಕಡೇ ಉಪದ್ರವಗಳು. ಇವುಗಳೊಂದಿಗೆ ದೇವರ ರೌದ್ರವು ಸಂಪೂರ್ಣವಾಗುವುದು.
ഞാൻ വലുതും അത്ഭുതവുമായ മറ്റൊരു അടയാളം സ്വർഗ്ഗത്തിൽ കണ്ടു; ഒടുക്കത്തെ ഏഴു ബാധയുമുള്ള ഏഴു ദൂതന്മാരെ തന്നേ; അതോടുകൂടെ ദൈവക്രോധം തീർന്നു.
2 ನಾನು ನೋಡಲಾಗಿ ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಏನೋ ಒಂದು ನನಗೆ ಕಾಣಿಸಿತು. ಆಗ ಮೃಗಕ್ಕೆ ಮತ್ತು ಅದರ ವಿಗ್ರಹಕ್ಕೆ ಆರಾಧಿಸದೆಯೂ ಅದರ ಹೆಸರನ್ನು ಪ್ರತಿನಿಧಿಸುವ ಸಂಖ್ಯೆಯ ಮುದ್ರೆಯನ್ನು ಹಾಕಿಸಿಕೊಳ್ಳದೆ ಜಯ ಹೊಂದಿದವರು ದೇವರಿಂದ ಕೊಡಲ್ಪಟ್ಟ ವೀಣೆಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು ಗಾಜಿನ ಸಮುದ್ರದ ಬಳಿಯಲ್ಲಿ ನಿಂತಿದ್ದರು.
തീ കലർന്ന പളുങ്കുകടൽപോലെ ഒന്നും മൃഗത്തോടും അതിന്റെ പ്രതിമയോടും പേരിന്റെ സംഖ്യയോടും ജയിച്ചവർ ദൈവത്തിന്റെ വീണകൾ പിടിച്ചുംകൊണ്ടു പളുങ്കുകടലിന്നരികെ നില്ക്കുന്നതും ഞാൻ കണ്ടു.
3 ಅವರು ದೇವರ ದಾಸನಾದ ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, “ಕರ್ತನಾದ ದೇವರೇ ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ಸರ್ವಜನಾಂಗಗಳ ಅರಸನೇ. ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
അവർ ദൈവത്തിന്റെ ദാസനായ മോശെയുടെ പാട്ടും കുഞ്ഞാടിന്റെ പാട്ടും പാടി ചൊല്ലിയതു: സർവ്വശക്തിയുള്ള ദൈവമായ കർത്താവേ, നിന്റെ പ്രവൃത്തികൾ വലുതും അത്ഭുതവുമായവ; സർവ്വജാതികളുടെയും രാജാവേ, നിന്റെ വഴികൾ നീതിയും സത്യവുമുള്ളവ.
4 ಕರ್ತನೇ, ನಿನಗೆ ಭಯಪಡದವರು ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು ನಿನ್ನನ್ನು ಆರಾಧಿಸುವರು.”
കർത്താവേ, ആർ നിന്റെ നാമത്തെ ഭയപ്പെടാതെയും മഹത്വപ്പെടുത്താതെയും ഇരിക്കും? നീയല്ലോ ഏകപരിശുദ്ധൻ; നിന്റെ ന്യായവിധികൾ വിളങ്ങിവന്നതിനാൽ സകല ജാതികളും വന്നു തിരുസന്നിധിയിൽ നമസ്കരിക്കും.
5 ಇದಾದ ನಂತರ ನಾನು ನೋಡಿದಾಗ ಪರಲೋಕದಲ್ಲಿರುವ ದೇವದರ್ಶನ ಗುಡಾರದ ಪವಿತ್ರ ಸ್ಥಾನವು ತೆರೆಯಲ್ಪಟ್ಟಿತು.
ഇതിന്റെ ശേഷം സ്വർഗ്ഗത്തിലെ സാക്ഷ്യകൂടാരമായ ദൈവാലയം തുറന്നതു ഞാൻ കണ്ടു.
6 ಆ ಆಲಯದೊಳಗಿಂದ ಏಳು ಉಪದ್ರವಗಳನ್ನು ಕೈಯಲ್ಲಿ ಹಿಡಿದಿರುವ ಆ ಏಳು ಮಂದಿ ದೇವದೂತರು ಬಂದರು. ಅವರು ಶುಭ್ರವೂ, ಪ್ರಕಾಶವೂ ಆದ ನಾರುಮಡಿಯನ್ನು ಧರಿಸಿಕೊಂಡಿದ್ದರು. ಮತ್ತು ತಮ್ಮ ಎದೆಗಳ ಮೇಲೆ ಚಿನ್ನದ ಪಟ್ಟಿಯನ್ನು ಕಟ್ಟಿಕೊಂಡಿದ್ದರು.
ഏഴു ബാധയുള്ള ഏഴു ദൂതന്മാരും ശുദ്ധവും ശുഭ്രവുമായുള്ള ശണവസ്ത്രം ധരിച്ചും മാറത്തു പൊൻകച്ച കെട്ടിയുംകൊണ്ടു ദൈവാലയത്തിൽ നിന്നു പുറപ്പെട്ടുവന്നു.
7 ನಾಲ್ಕು ಜೀವಿಗಳಲ್ಲಿ ಒಂದು ಆ ಏಳು ಮಂದಿ ದೇವದೂತರಿಗೆ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನಾದ ದೇವರ ರೌದ್ರದಿಂದ ತುಂಬಿದ್ದ ಏಳು ಚಿನ್ನದ ಬಟ್ಟಲುಗಳನ್ನು ಕೊಟ್ಟಿತು. (aiōn g165)
അപ്പോൾ നാലു ജീവികളിൽ ഒന്നു എന്നെന്നേക്കും ജീവിച്ചിരിക്കുന്ന ദൈവത്തിന്റെ ക്രോധം നിറഞ്ഞ ഏഴു പൊൻകലശം ആ ഏഴു ദൂതന്മാർക്കു കൊടുത്തു. (aiōn g165)
8 ದೇವರ ಮಹಿಮೆಯಿಂದಲೂ, ಆತನ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಆ ಆಲಯ ತುಂಬಿತ್ತು. ಆ ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ ಆ ಆಲಯವನ್ನು ಪ್ರವೇಶಿಸುವುದಕ್ಕೆ ಯಾರಿಂದಲೂ ಸಾಧ್ಯವಾಗಲಿಲ್ಲ.
ദൈവത്തിന്റെ തേജസ്സും ശക്തിയും ഹേതുവായിട്ടു ദൈവാലയം പുകകൊണ്ടു നിറഞ്ഞു; ഏഴു ദൂതന്മാരുടെ ബാധ ഏഴും കഴിയുവോളം ദൈവാലയത്തിൽ കടപ്പാൻ ആർക്കും കഴിഞ്ഞില്ല.

< ಪ್ರಕಟಣೆ 15 >