< ಪ್ರಕಟಣೆ 16 >
1 ೧ ಆಗ ಆಲಯದೊಳಗಿಂದ ಬಂದ ಮಹಾಧ್ವನಿಯನ್ನು ನಾನು ಕೇಳಿದೆನು. ಅದು ಆ ಏಳು ಮಂದಿ ದೇವದೂತರಿಗೆ, “ನೀವು ಹೋಗಿ ಆ ಏಳು ಬಟ್ಟಲುಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿಯಿರಿ” ಎಂದು ಹೇಳಿತು.
Un es dzirdēju stipru balsi no Dieva nama sakām uz tiem septiņiem eņģeļiem: ejat un izlejat Dieva dusmības kausus uz zemi.
2 ೨ ಆಗ ಮೊದಲನೆಯ ದೇವದೂತನು ಹೋಗಿ ತನ್ನ ಬಟ್ಟಲಲ್ಲಿ ಇದ್ದದ್ದನ್ನು ಭೂಮಿಯ ಮೇಲೆ ಸುರಿಯಲು ಮೃಗದ ಗುರುತನ್ನು ಹಾಕಿಸಿಕೊಂಡವರು, ಅದರ ವಿಗ್ರಹವನ್ನು ಆರಾಧಿಸುವ ಎಲ್ಲಾ ಜನರ ಮೇಲೆ ಭೀಕರವಾದ ಕೆಟ್ಟ ಹುಣ್ಣುಗಳು ಎದ್ದವು.
Un tas pirmais nogāja un izlēja savu kausu uz zemi, un tur ļauns un nikns augonis piemetās tiem cilvēkiem, kam tā zvēra zīme bija, un kas viņa bildi pielūdza.
3 ೩ ಎರಡನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸಮುದ್ರದಲ್ಲಿ ಸುರಿದನು. ಅದು ಸತ್ತ ಮನುಷ್ಯನ ರಕ್ತದ ಹಾಗಾಯಿತು ಮತ್ತು ಸಮುದ್ರದಲ್ಲಿದ್ದ ಸಕಲ ಜೀವಿಗಳೂ ಸತ್ತವು.
Un tas otrais eņģelis savu kausu izlēja jūrā, un tā palika par asinīm, kā no miruša, un ikviena dzīva dvaša jūrā nomira.
4 ೪ ಮೂರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ನದಿಗಳ ಮತ್ತು ನೀರಿನ ಬುಗ್ಗೆಗಳ ಮೇಲೆ ಸುರಿದನು. ಆಗ ಅವುಗಳ ನೀರು ರಕ್ತವಾಯಿತು.
Un tas trešais eņģelis izlēja savu kausu upēs un ūdeņu avotos, un tie palika par asinīm.
5 ೫ ಆ ಮೇಲೆ ಜಲಾಧಿಪತಿಯಾದ ದೂತನು, “ನೀನು ಇರುವಾತನೂ ಇದ್ದಾತನೂ ಪರಿಶುದ್ಧನಾಗಿರುವಾತನು ಆಗಿರುವ ದೇವರು, ಏಕೆಂದರೆ ನೀನು ಈ ರೀತಿ ನ್ಯಾಯತೀರ್ಪುಗಳನ್ನು ಮಾಡಿದ್ದರಿಂದ ನೀತಿಸ್ವರೂಪನೇ ಆಗಿರುವಿ.
Un es dzirdēju to ūdeņu eņģeli sakām: Kungs, kas ir un kas bijis, Tu esi taisns un svēts, ka Tu tā esi tiesājis.
6 ೬ ಅವರು ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದ್ದರಿಂದ, ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.
Jo tie to svēto un to praviešu asinis ir izlējuši; tāpēc Tu tiem arīdzan asinis esi devis dzert, jo tie to pelnījuši.
7 ೭ ಆ ಮೇಲೆ ಯಜ್ಞವೇದಿಯು ಮಾತನಾಡುತ್ತಾ, “ದೇವರಾದ ಕರ್ತನೇ ಸರ್ವಶಕ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ” ಎಂದು ಹೇಳುವುದನ್ನು ಕೇಳಿದೆನು.
Un es dzirdēju citu no tā altāra sakām: tiešām, Kungs Dievs, visu Valdītājs, patiesīgas un taisnas ir Tavas tiesas.
8 ೮ ನಾಲ್ಕನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸೂರ್ಯನ ಮೇಲೆ ಸುರಿದನು. ಆಗ ಸೂರ್ಯನಿಗೆ ಬೆಂಕಿಯಂಥ ಬಿಸಿಲಿನಿಂದ ಮನುಷ್ಯರನ್ನು ಸುಡುವ ಅನುಮತಿ ಕೊಡಲ್ಪಟ್ಟಿತು.
Un tas ceturtais eņģelis izlēja savu kausu uz sauli, un viņam tapa dots, cilvēkus dedzināt ar uguni.
9 ೯ ಮನುಷ್ಯರು ಬಲವಾದ ಬಿಸಿಲಿನಿಂದ ಸುಟ್ಟುಹೋದಾಗ್ಯೂ ಅವರು ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದಲ್ಲದೆ, ಅವರು ಪಶ್ಚಾತ್ತಾಪಪಡಲಿಲ್ಲ ಆತನಿಗೆ ಮಹಿಮೆಯನ್ನು ಸಲ್ಲಿಸಲಿಲ್ಲ.
Un cilvēki tapa dedzināti ar lielu karstumu un zaimoja Tā Dieva vārdu, kam vara ir pār šīm mocībām. Bet tie neatgriezās no grēkiem, Viņam dot godu.
10 ೧೦ ಐದನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಮೃಗದ ಸಿಂಹಾಸನದ ಮೇಲೆ ಸುರಿಯಲು ಅದರ ರಾಜ್ಯವು ಕತ್ತಲಾಯಿತು. ಜನರು ಯಾತನೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು,
Un tas piektais eņģelis savu kausu izlēja uz tā zvēra goda krēslu, un viņa valsts tapa aptumšota, un tie no sāpēm sakoda savas mēles,
11 ೧೧ ತಮ್ಮ ಯಾತನೆಗಳಿಗಾಗಿಯೂ ಹುಣ್ಣುಗಳ ದೆಸೆಯಿಂದಲೂ ಪರಲೋಕದ ದೇವರನ್ನು ದೂಷಿಸಿದಲ್ಲದೆ. ಅವರು ತಮ್ಮ ಕೃತ್ಯಗಳಿಗಾಗಿ ಮಾನಸಾಂತರ ಹೊಂದಲಿಲ್ಲ.
Un zaimoja To Dievu debesīs savu sāpju dēļ un savu augoņu dēļ, un neatgriezās no saviem darbiem.
12 ೧೨ ಆರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಯೂಫ್ರೆಟಿಸ್ ಎಂಬ ಮಹಾ ನದಿಯಲ್ಲಿ ಸುರಿಯಲು, ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ ಅದರ ನೀರು ಬತ್ತಿಹೋಯಿತು.
Un tas sestais eņģelis savu kausu izlēja uz to lielo Eifrates upi, un viņas ūdens izsīka, ka taptu sataisīts ceļš tiem ķēniņiem no saules lēkšanas puses.
13 ೧೩ ಆಗ ಘಟಸರ್ಪದ ಬಾಯಿಂದ, ಮೃಗದ ಬಾಯಿಂದ ಮತ್ತು ಸುಳ್ಳುಪ್ರವಾದಿಯ ಬಾಯಿಂದ ಕಪ್ಪೆಗಳಂತಿದ್ದ ಮೂರು ಅಶುದ್ಧಾತ್ಮಗಳು ಬರುವುದನ್ನು ಕಂಡೆನು.
Un es redzēju no tā pūķa mutes un no tā zvēra mutes un no tā viltīgā pravieša mutes nākam trīs nešķīstus garus, vardēm līdzīgus.
14 ೧೪ ಇವು ಸೂಚಕಕಾರ್ಯಗಳನ್ನು ಮಾಡುವ ಭೂತಾತ್ಮಗಳಾಗಿದ್ದು ಭೂಲೋಕದ ಎಲ್ಲಾ ರಾಜರುಗಳ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದ ಯುದ್ಧಕ್ಕಾಗಿ ಅವರನ್ನು ಕೂಡಿಸುತ್ತಿದ್ದವು.
Jo tie ir velnu gari, kas dara zīmes un iziet pie visas pasaules ķēniņiem, tos sapulcināt uz karu, Dieva, tā Visuvarenā, lielā dienā.
15 ೧೫ “ಇಗೋಕಳ್ಳನು ಬರುವಂತೆ ಬರುತ್ತೇನೆ. ತಾನುಬೆತ್ತಲೆಯಾಗಿ ತಿರುಗಾಡಿ ಜನರಿಂದ ಅವಮಾನಕ್ಕೆ ಗುರಿಯಾಗದಂತೆಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳುವವನು ಧನ್ಯನು.”
“Redzi, Es nāku kā zaglis: svētīgs, kas nomodā un savas drēbes sarga, ka tas nestaigā pliks un viņa kauns netop redzēts.”
16 ೧೬ ಆಗ ಅವು ಭೂರಾಜರನ್ನು ಇಬ್ರಿಯ ಭಾಷೆಯಲ್ಲಿ ಅರ್ಮಗೆದ್ದೋನ್ ಎಂದು ಕರೆಯಲ್ಪಡುವ ಸ್ಥಳಕ್ಕೆ ಕೂಡಿಸಿದವು.
Un viņš tos sapulcināja uz to vietu, kas ebrejiski top saukta Armaģedon.
17 ೧೭ ಏಳನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ವಾಯುಮಂಡಲದ ಮೇಲೆ ಸುರಿಯಲು ಆಗ ಆಲಯದ ಸಿಂಹಾಸನದಿಂದ ಮಹಾಧ್ವನಿಯು ಉಂಟಾಗಿ “ಸಂಭವಿಸಿ ಆಯಿತು” ಎಂದು ಹೇಳಿತು.
Un tas septītais eņģelis savu kausu izlēja gaisā, un stipra balss nāca no tā debes' nama, no tā goda krēsla, sacīdama: ir noticis.
18 ೧೮ ಆಗ ಮಿಂಚುಗಳೂ, ನಾದಗಳೂ, ಗುಡುಗುಗಳೂ ಉಂಟಾದವು ಇದಲ್ಲದೆ ಮಹಾ ಭೂಕಂಪವಾಯಿತು. ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ.
Un balsis un pērkoni un zibeņi cēlās. Un tad notika liela zemes trīcēšana, kāda vēl nav notikusi, kamēr cilvēki virs zemes bijuši, tāda un tik liela zemes trīcēšana.
19 ೧೯ ಮಹಾ ಪಟ್ಟಣವು ಮೂರು ಭಾಗವಾಗಿ ಬಿರಿಯಿತು ಮತ್ತು ಜನಾಂಗಗಳ ಪಟ್ಟಣಗಳು ಬಿದ್ದವು. ಆಗ ದೇವರು ತನ್ನ ಸನ್ನಿಧಿಯಲ್ಲಿ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕೊಟ್ಟನು.
Un tā lielā pilsēta dalījās trijās daļās, un pagānu pilsētas sagruva, un Bābele, tā lielā, tapa pieminēta Dieva priekšā, ka tai taptu dots viņa dusmības un bardzības vīna biķeris.
20 ೨೦ ಆಗ ಪ್ರತಿಯೊಂದು ದ್ವೀಪವು ಓಡಿಹೋಗಿ ಮರೆಯಾದವು ಬೆಟ್ಟಗಳು ಕಾಣದಂತಾದವು.
Un visas salas bēga, un kalni netapa atrasti.
21 ೨೧ ಮತ್ತು ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಅಲಿಕಲ್ಲು ಸುಮಾರು ನಲ್ವತ್ತು ಕಿಲೊಗ್ರಾಮಿನಷ್ಟು ತೂಕವಾಗಿತ್ತು. ಆ ಆಲಿಕಲ್ಲಿನ ಮಳೆಯ ಉಪದ್ರವವು ಬಹಳ ವಿಪರೀತವಾದ್ದರಿಂದ ಆ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು ದೇವರನ್ನು ದೂಷಿಸಿದರು.
Un liela krusa, triju podu smaga, krita no debesīm uz cilvēkiem, un cilvēki zaimoja Dievu tās mocības dēļ caur to krusu; jo viņas mocība ir varen liela.