< ಪ್ರಕಟಣೆ 16 >

1 ಆಗ ಆಲಯದೊಳಗಿಂದ ಬಂದ ಮಹಾಧ್ವನಿಯನ್ನು ನಾನು ಕೇಳಿದೆನು. ಅದು ಆ ಏಳು ಮಂದಿ ದೇವದೂತರಿಗೆ, “ನೀವು ಹೋಗಿ ಆ ಏಳು ಬಟ್ಟಲುಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿಯಿರಿ” ಎಂದು ಹೇಳಿತು.
Тоді я почув гучний голос із Храму, який казав семи ангелам: «Ідіть та вилийте на землю сім чаш Божого гніву».
2 ಆಗ ಮೊದಲನೆಯ ದೇವದೂತನು ಹೋಗಿ ತನ್ನ ಬಟ್ಟಲಲ್ಲಿ ಇದ್ದದ್ದನ್ನು ಭೂಮಿಯ ಮೇಲೆ ಸುರಿಯಲು ಮೃಗದ ಗುರುತನ್ನು ಹಾಕಿಸಿಕೊಂಡವರು, ಅದರ ವಿಗ್ರಹವನ್ನು ಆರಾಧಿಸುವ ಎಲ್ಲಾ ಜನರ ಮೇಲೆ ಭೀಕರವಾದ ಕೆಟ್ಟ ಹುಣ್ಣುಗಳು ಎದ್ದವು.
Перший [ангел] пішов і вилив свою чашу на землю, і з’явилися болючі вирази та жахливі гнійні рани в людей, які мали знак звіра й поклонялися його образу.
3 ಎರಡನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸಮುದ್ರದಲ್ಲಿ ಸುರಿದನು. ಅದು ಸತ್ತ ಮನುಷ್ಯನ ರಕ್ತದ ಹಾಗಾಯಿತು ಮತ್ತು ಸಮುದ್ರದಲ್ಲಿದ್ದ ಸಕಲ ಜೀವಿಗಳೂ ಸತ್ತವು.
Другий [ангел] вилив свою чашу на море, і воно стало наче кров мерця, і все живе в морі загинуло.
4 ಮೂರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ನದಿಗಳ ಮತ್ತು ನೀರಿನ ಬುಗ್ಗೆಗಳ ಮೇಲೆ ಸುರಿದನು. ಆಗ ಅವುಗಳ ನೀರು ರಕ್ತವಾಯಿತು.
Третій [ангел] вилив свою чашу на річки та джерела води, і вони стали кров’ю.
5 ಆ ಮೇಲೆ ಜಲಾಧಿಪತಿಯಾದ ದೂತನು, “ನೀನು ಇರುವಾತನೂ ಇದ್ದಾತನೂ ಪರಿಶುದ್ಧನಾಗಿರುವಾತನು ಆಗಿರುವ ದೇವರು, ಏಕೆಂದರೆ ನೀನು ಈ ರೀತಿ ನ್ಯಾಯತೀರ್ಪುಗಳನ್ನು ಮಾಡಿದ್ದರಿಂದ ನೀತಿಸ್ವರೂಪನೇ ಆಗಿರುವಿ.
Тоді я почув ангела вод, що казав: «Праведний Ти, Хто є і Хто був, Святий Ти, бо так присудив.
6 ಅವರು ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದ್ದರಿಂದ, ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.
Адже вони пролили кров святих та пророків, і Ти дав їм пити кров. Вони варті [цього]!»
7 ಆ ಮೇಲೆ ಯಜ್ಞವೇದಿಯು ಮಾತನಾಡುತ್ತಾ, “ದೇವರಾದ ಕರ್ತನೇ ಸರ್ವಶಕ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ” ಎಂದು ಹೇಳುವುದನ್ನು ಕೇಳಿದೆನು.
І я почув вівтар, що казав: «Так, Господи Боже, Вседержителю, правдиві й справедливі Твої суди!»
8 ನಾಲ್ಕನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸೂರ್ಯನ ಮೇಲೆ ಸುರಿದನು. ಆಗ ಸೂರ್ಯನಿಗೆ ಬೆಂಕಿಯಂಥ ಬಿಸಿಲಿನಿಂದ ಮನುಷ್ಯರನ್ನು ಸುಡುವ ಅನುಮತಿ ಕೊಡಲ್ಪಟ್ಟಿತು.
Четвертий [ангел] вилив свою чашу на сонце, і йому дозволено було палити людей вогнем.
9 ಮನುಷ್ಯರು ಬಲವಾದ ಬಿಸಿಲಿನಿಂದ ಸುಟ್ಟುಹೋದಾಗ್ಯೂ ಅವರು ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದಲ್ಲದೆ, ಅವರು ಪಶ್ಚಾತ್ತಾಪಪಡಲಿಲ್ಲ ಆತನಿಗೆ ಮಹಿಮೆಯನ್ನು ಸಲ್ಲಿಸಲಿಲ್ಲ.
І велика спека обпалювала людей, так що вони зневажали ім’я Бога, Який має владу над цими карами, але вони не покаялись і не прославили Його.
10 ೧೦ ಐದನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಮೃಗದ ಸಿಂಹಾಸನದ ಮೇಲೆ ಸುರಿಯಲು ಅದರ ರಾಜ್ಯವು ಕತ್ತಲಾಯಿತು. ಜನರು ಯಾತನೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು,
П’ятий [ангел] вилив свою чашу на престол звіра, і його царство занурилось у темряву. [Люди] від болю кусали свої язики
11 ೧೧ ತಮ್ಮ ಯಾತನೆಗಳಿಗಾಗಿಯೂ ಹುಣ್ಣುಗಳ ದೆಸೆಯಿಂದಲೂ ಪರಲೋಕದ ದೇವರನ್ನು ದೂಷಿಸಿದಲ್ಲದೆ. ಅವರು ತಮ್ಮ ಕೃತ್ಯಗಳಿಗಾಗಿ ಮಾನಸಾಂತರ ಹೊಂದಲಿಲ್ಲ.
й зневажали Бога небесного через їхні болі та рани, але вони не покаялись у своїх ділах.
12 ೧೨ ಆರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಯೂಫ್ರೆಟಿಸ್ ಎಂಬ ಮಹಾ ನದಿಯಲ್ಲಿ ಸುರಿಯಲು, ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ ಅದರ ನೀರು ಬತ್ತಿಹೋಯಿತು.
Шостий [ангел] вилив свою чашу на велику річку Євфрат, і вода її висохла, щоб підготувати шлях царям зі Сходу.
13 ೧೩ ಆಗ ಘಟಸರ್ಪದ ಬಾಯಿಂದ, ಮೃಗದ ಬಾಯಿಂದ ಮತ್ತು ಸುಳ್ಳುಪ್ರವಾದಿಯ ಬಾಯಿಂದ ಕಪ್ಪೆಗಳಂತಿದ್ದ ಮೂರು ಅಶುದ್ಧಾತ್ಮಗಳು ಬರುವುದನ್ನು ಕಂಡೆನು.
Потім я побачив, як із пащі дракона, з пащі звіра та з уст лжепророка вийшли три нечисті духи, схожі на жаб.
14 ೧೪ ಇವು ಸೂಚಕಕಾರ್ಯಗಳನ್ನು ಮಾಡುವ ಭೂತಾತ್ಮಗಳಾಗಿದ್ದು ಭೂಲೋಕದ ಎಲ್ಲಾ ರಾಜರುಗಳ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದ ಯುದ್ಧಕ್ಕಾಗಿ ಅವರನ್ನು ಕೂಡಿಸುತ್ತಿದ್ದವು.
Це демонічні духи, які роблять знамення, вони виходять до царів усього світу, щоб зібрати їх для битви у великий День Бога Вседержителя.
15 ೧೫ “ಇಗೋಕಳ್ಳನು ಬರುವಂತೆ ಬರುತ್ತೇನೆ. ತಾನುಬೆತ್ತಲೆಯಾಗಿ ತಿರುಗಾಡಿ ಜನರಿಂದ ಅವಮಾನಕ್ಕೆ ಗುರಿಯಾಗದಂತೆಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳುವವನು ಧನ್ಯನು.”
«Ось Я приходжу, як злодій! Блаженний той, хто пильнує й зберігає свій одяг, щоб не ходити оголеним і щоб [люди] не бачили його сорому».
16 ೧೬ ಆಗ ಅವು ಭೂರಾಜರನ್ನು ಇಬ್ರಿಯ ಭಾಷೆಯಲ್ಲಿ ಅರ್ಮಗೆದ್ದೋನ್ ಎಂದು ಕರೆಯಲ್ಪಡುವ ಸ್ಥಳಕ್ಕೆ ಕೂಡಿಸಿದವು.
Потім [нечисті духи] зібрали [царів] на місце, яке єврейською називається Армагеддон.
17 ೧೭ ಏಳನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ವಾಯುಮಂಡಲದ ಮೇಲೆ ಸುರಿಯಲು ಆಗ ಆಲಯದ ಸಿಂಹಾಸನದಿಂದ ಮಹಾಧ್ವನಿಯು ಉಂಟಾಗಿ “ಸಂಭವಿಸಿ ಆಯಿತು” ಎಂದು ಹೇಳಿತು.
Сьомий [ангел] вилив свою чашу в повітря, і з Храму від престолу пролунав гучний голос, що казав: «Звершилося!»
18 ೧೮ ಆಗ ಮಿಂಚುಗಳೂ, ನಾದಗಳೂ, ಗುಡುಗುಗಳೂ ಉಂಟಾದವು ಇದಲ್ಲದೆ ಮಹಾ ಭೂಕಂಪವಾಯಿತು. ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ.
Потім спалахнули блискавки, пролунали голоси та громи й стався великий землетрус. Такого землетрусу не було відтоді, як людство [живе] на землі, настільки сильним був землетрус.
19 ೧೯ ಮಹಾ ಪಟ್ಟಣವು ಮೂರು ಭಾಗವಾಗಿ ಬಿರಿಯಿತು ಮತ್ತು ಜನಾಂಗಗಳ ಪಟ್ಟಣಗಳು ಬಿದ್ದವು. ಆಗ ದೇವರು ತನ್ನ ಸನ್ನಿಧಿಯಲ್ಲಿ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕೊಟ್ಟನು.
Велике місто розділилося на три частини, і міста народів розпалися. Бог згадав великий Вавилон і дав йому чашу, наповнену вином Його лютого гніву.
20 ೨೦ ಆಗ ಪ್ರತಿಯೊಂದು ದ್ವೀಪವು ಓಡಿಹೋಗಿ ಮರೆಯಾದವು ಬೆಟ್ಟಗಳು ಕಾಣದಂತಾದವು.
Кожен острів утік, і гір неможливо було знайти.
21 ೨೧ ಮತ್ತು ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಅಲಿಕಲ್ಲು ಸುಮಾರು ನಲ್ವತ್ತು ಕಿಲೊಗ್ರಾಮಿನಷ್ಟು ತೂಕವಾಗಿತ್ತು. ಆ ಆಲಿಕಲ್ಲಿನ ಮಳೆಯ ಉಪದ್ರವವು ಬಹಳ ವಿಪರೀತವಾದ್ದರಿಂದ ಆ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು ದೇವರನ್ನು ದೂಷಿಸಿದರು.
Величезний град, завбільшки з талант, падав із неба на людей. І вони зневажали Бога через кару градом, бо кара була дуже велика.

< ಪ್ರಕಟಣೆ 16 >