< ಪ್ರಕಟಣೆ 17 >

1 ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು, “ಬಾ, ಬಹಳ ನೀರುಗಳ ಮೇಲೆ ಕುಳಿತ್ತಿರುವ ಮಹಾ ಜಾರಸ್ತ್ರೀಗೆ ಆಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ.
拿着七碗的七位天使中,有一位前來對我說:「你到這裏來,我將坐在眾水上的大淫婦所要受的刑罰指給你看。
2 ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು ಮತ್ತು ಭೂನಿವಾಸಿಗಳು ಆಕೆಯ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು” ಎಂದು ನನಗೆ ಹೇಳಿದನು.
地上的君王與她行淫,住在地上的人喝醉了她淫亂的酒。」
3 ಆಗ ಅವನು ದೇವರಾತ್ಮವಶನಾದ ನನ್ನನ್ನು ಎತ್ತಿಕೊಂಡು ಮರುಭೂಮಿಗೆ ಹೋದನು. ಅಲ್ಲಿ ನಾನು ಕಡುಗೆಂಪು ಬಣ್ಣದ ಮೃಗದ ಮೇಲೆ ಕುಳಿತಿದ್ದ ಒಬ್ಬ ಸ್ತ್ರೀಯನ್ನು ಕಂಡೆನು. ಆ ಮೃಗದ ಮೈಮೇಲೆಲ್ಲಾ ದೂಷಣೆಗಳಿಂದ ಕೂಡಿದ್ದ ಹೆಸರುಗಳು ತುಂಬಿದ್ದವು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು.
我被聖靈感動,天使帶我到曠野去,我就看見一個女人騎在朱紅色的獸上;那獸有七頭十角,遍體有褻瀆的名號。
4 ಆ ಸ್ತ್ರೀಯು ಧೂಮ್ರವರ್ಣದ ವಸ್ತ್ರಗಳನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ, ರತ್ನ, ಮುತ್ತುಗಳಿಂದ ಅಲಂಕರಿಸಿಕೊಂಡಿದ್ದಳು. ಆಕೆಯು ತನ್ನ ಕೈಯಲ್ಲಿ ಅಸಹ್ಯವಾದವುಗಳಿಂದಲೂ ಮತ್ತು ತನ್ನ ಅಶುದ್ಧ ಜಾರತ್ವಗಳಿಂದಲೂ ತುಂಬಿದ ಚಿನ್ನದ ಬಟ್ಟಲನ್ನು ಹಿಡಿದುಕೊಂಡಿದ್ದಳು.
那女人穿着紫色和朱紅色的衣服,用金子、寶石、珍珠為妝飾;手拿金杯,杯中盛滿了可憎之物,就是她淫亂的污穢。
5 ಅವಳ ಹಣೆಯ ಮೇಲೆ, “ಮಹತ್ತಾದ ಬಾಬೆಲೆಂಬ ಭೂಮಿಯಲ್ಲಿರುವ ಜಾರಸ್ತ್ರೀಯರ ಅಸಹ್ಯವಾದ ಕಾರ್ಯಗಳ ಮಾತೆ” ಎಂಬ ಹೆಸರನ್ನು ಬರೆಯಲಾಗಿತ್ತು.
在她額上有名寫着說:「奧祕哉!大巴比倫,作世上的淫婦和一切可憎之物的母。」
6 ಆ ಸ್ತ್ರೀಯು ನೀತಿವಂತರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿನೀಡಿ ಹತರಾದವರ ರಕ್ತವನ್ನು ಕುಡಿದು ಮತ್ತಳಾಗಿರುವುದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.
我又看見那女人喝醉了聖徒的血和為耶穌作見證之人的血。 我看見她,就大大地希奇。
7 ಆದರೆ ಆ ದೇವದೂತನು ನನ್ನನ್ನು ಕುರಿತು ಹೇಳಿದ್ದೇನಂದರೆ “ನೀನು ಆಶ್ಚರ್ಯ ಪಡುತ್ತಿರುವುದೇತಕ್ಕೆ? ಆ ಸ್ತ್ರೀಯ ವಿಷಯವಾಗಿಯೂ, ಅವಳ ವಾಹನವಾಗಿದ್ದ ಮೃಗದ ವಿಷಯವಾಗಿಯೂ, ಏಳು ತಲೆಗಳೂ ಹತ್ತು ಕೊಂಬುಗಳುಳ್ಳ ಮೃಗ ಇರುವ ಗೂಢಾರ್ಥವನ್ನು ನಾನು ನಿನಗೆ ವಿವರಿಸುತ್ತೇನೆ.
天使對我說:「你為甚麼希奇呢?我要將這女人和馱着她的那七頭十角獸的奧祕告訴你。
8 ನೀನು ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು ಅಧೋಲೋಕದೊಳಗಿನಿಂದ ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು. (Abyssos g12)
你所看見的獸,先前有,如今沒有,將要從無底坑裏上來,又要歸於沉淪。凡住在地上、名字從創世以來沒有記在生命冊上的,見先前有、如今沒有、以後再有的獸,就必希奇。 (Abyssos g12)
9 “ಇದನ್ನು ಗ್ರಹಿಸಿಕೊಳ್ಳಲು ಜ್ಞಾನವೂ, ವಿವೇಕವೂ ಬೇಕು. ಆ ಏಳು ತಲೆಗಳು ಆ ಹೆಂಗಸು ಕುಳಿತುಕೊಂಡಿರುವ ಏಳು ಬೆಟ್ಟಗಳಾಗಿವೆ.
智慧的心在此可以思想。那七頭就是女人所坐的七座山,
10 ೧೦ ಇದಲ್ಲದೆ ಅವು ಏಳು ರಾಜರುಗಳೂ ಆಗಿದ್ದಾರೆ. ಅವರಲ್ಲಿ ಐದು ರಾಜರು ಬಿದ್ದಿದ್ದಾರೆ. ಒಬ್ಬನು ಇದ್ದಾನೆ. ಮತ್ತೊಬ್ಬನು ಇನ್ನು ಬಂದಿಲ್ಲ. ಅವನು ಬಂದಾಗ ಸ್ವಲ್ಪ ಕಾಲ ಇರಬೇಕಾಗುತ್ತದೆ.
又是七位王;五位已經傾倒了,一位還在,一位還沒有來到;他來的時候,必須暫時存留。
11 ೧೧ ಇದಲ್ಲದೆ ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯ ಅರಸನು. ಆದರೆ ಅವನು ಆ ಏಳು ರಾಜರುಗಳಲ್ಲಿ ಒಬ್ಬನಾಗಿದ್ದಾನೆ, ಅವನು ನಾಶಕ್ಕೆ ಹೋಗುವನು.
那先前有如今沒有的獸,就是第八位;他也和那七位同列,並且歸於沉淪。
12 ೧೨ “ನೀನು ನೋಡಿದ ಆ ಹತ್ತು ಕೊಂಬುಗಳು ಇನ್ನೂ ರಾಜ್ಯವನ್ನು ಹೊಂದದಿರುವ ಹತ್ತು ರಾಜರುಗಳಾಗಿದ್ದಾರೆ. ಆದರೆ ಅವು ರಾಜರಂತೆ ಒಂದು ಗಳಿಗೆಯವರೆಗೆ ಆಳುವ ಅಧಿಕಾರವನ್ನು ಮೃಗದೊಂದಿಗೆ ಹೊಂದುವರು.
你所看見的那十角就是十王;他們還沒有得國,但他們一時之間要和獸同得權柄,與王一樣。
13 ೧೩ ಅವರು ಏಕ ಮನಸ್ಸುಳ್ಳವರಾಗಿ ತಮ್ಮ ಬಲವನ್ನೂ ಅಧಿಕಾರವನ್ನೂ ಮೃಗಕ್ಕೆ ಕೊಡುವರು.
他們同心合意將自己的能力、權柄給那獸。
14 ೧೪ ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”
他們與羔羊爭戰,羔羊必勝過他們,因為羔羊是萬主之主、萬王之王。同着羔羊的,就是蒙召、被選、有忠心的,也必得勝。」
15 ೧೫ ಇನ್ನೂ ಆ ದೇವದೂತನು ನನಗೆ ಹೇಳಿದ್ದೇನಂದರೆ, “ಆ ಜಾರಸ್ತ್ರೀ ಕುಳಿತ್ತಿದ್ದ ನೀರನ್ನು ನೀನು ನೋಡಿದೆಯಲ್ಲ, ಅವು ಜನಾಂಗಳನ್ನು, ಜನ ಸಮೂಹಗಳನ್ನು, ರಾಷ್ಟ್ರಗಳನ್ನು, ಭಾಷೆಗಳನ್ನು ಸೂಚಿಸುತ್ತದೆ ಎಂದನು.
天使又對我說:「你所看見那淫婦坐的眾水,就是多民、多人、多國、多方。
16 ೧೬ ಇದಲ್ಲದೆ ನೀನು ನೋಡಿದ ಹತ್ತು ಕೊಂಬುಗಳು ಮತ್ತು ಮೃಗವನ್ನು ಕಂಡೆಯಲ್ಲ? ಅವುಗಳು ಜಾರಸ್ತ್ರೀಯನ್ನು ದ್ವೇಷಿಸಿ, ಅವಳನ್ನು ಗತಿಯಿಲ್ಲದವಳನ್ನಾಗಿಯೂ ಬಟ್ಟೆ ಇಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು, ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುವರು.
你所看見的那十角與獸必恨這淫婦,使她冷落赤身,又要吃她的肉,用火將她燒盡。
17 ೧೭ ಏಕೆಂದರೆ ದೇವರು ತನ್ನ ವಾಕ್ಯವನ್ನು ನೆರವೇರಿಸುವುದಕ್ಕಾಗಿಯೂ, ನೆರವೇರಿಸುವಂತೆಯೂ ತನ್ನ ಚಿತ್ತವನ್ನು ಅವರು ಒಂದೇ ಅಭಿಪ್ರಾಯವುಳ್ಳವರಾಗಿ ತಮ್ಮ ಅಧಿಕಾರವನ್ನು ಮೃಗಕ್ಕೆ ಕೊಡುವುದಕ್ಕೂ ಇದನ್ನು ಅವುಗಳ ಹೃದಯಗಳಲ್ಲಿ ಇರಿಸಿದ್ದನು.
因為上帝使諸王同心合意,遵行他的旨意,把自己的國給那獸,直等到上帝的話都應驗了。
18 ೧೮ ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುವ ಅಧಿಕಾರ ಹೊಂದಿದ ಮಹಾನಗರಿಯೇ ಆಗಿದೆ.”
你所看見的那女人就是管轄地上眾王的大城。」

< ಪ್ರಕಟಣೆ 17 >