< ಪ್ರಕಟಣೆ 19 >
1 ೧ ಇದಾದ ಮೇಲೆ ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಧ್ವನಿಯನ್ನು ಕೇಳಿದೆನು. ಅವರು, “ಹಲ್ಲೆಲೂಯಾ. ರಕ್ಷಣೆಯೂ, ಮಹಿಮೆಯೂ, ಶಕ್ತಿಯೂ ನಮ್ಮ ದೇವರಿಗೆ ಸೇರಿದ್ದಾಗಿವೆ.
Ma kuri in kunna nimgirang ni dang dang, gu ugurna udang dang Akura Asesere. wa gusa, haliluya ubura, nan ninonzo, nan nikara a hora Asere aru vat.
2 ೨ ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.” ಎಂದು ಹೇಳಿ,
Ubarka umeme kadundere kani, ma Mara tize a nice night karuwa me sa ma Cari unee me in madini ma tiney.
3 ೩ ಎರಡನೆಯ ಸಾರಿ, “ಹಲ್ಲೆಲೂಯಾ ಎಂದು ಆರ್ಭಟಿಸಿ, ಅವಳ ದಹನದಿಂದುಂಟಾದ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿಹೋಗುತ್ತಿರುತ್ತದೆ” ಎಂದು ಹೇಳಿದರು. (aiōn )
We kuri wa gu, haliluya. mucungo marii aje innu nyeze ko uya uganiya. (aiōn )
4 ೪ ಆಗ ಇಪ್ಪತ್ನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ ಅಡ್ಡಬಿದ್ದು ಸಿಂಹಾಸನದ ಮೇಲೆ ಕುಳಿತಿರುವ ದೇವರಿಗೆ ಆರಾಧನೆ ಮಾಡಿ, “ಆಮೆನ್, ಹಲ್ಲೆಲೂಯಾ” ಎಂದರು.
Anaa je aino are Inna nazi man nan na nu huma we nazi war nonzo Asere as ma ciki a hire atigomo, we gu, na acukuno anime, haliluya.
5 ೫ ಆ ಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಧ್ವನಿಯು, “ದೇವರ ಸೇವಕರೆಲ್ಲರೂ, ದೇವರಿಗೆ ಭಯಪಡುವ ಶ್ರೇಷ್ಠರು ಮತ್ತು ಕನಿಷ್ಠರು ನಮ್ಮ ದೇವರನ್ನು ಕೊಂಡಾಡಿರಿ” ಎಂದು ಹೇಳಿತು.
Ni mgirang na na suri a hire a ticukum ta Asere ni gu, wuza Asere are ninonzo vat ushi arere ameme shi Ana a biyau hi meme Ana cini cin man named dang dang.
6 ೬ ತರುವಾಯ ಬಹುದೊಡ್ಡ ಜನರ ಸಮೂಹದ ಶಬ್ದವು ಜಲಪ್ರವಾಹದ ಘೋಷದಂತೆಯೂ ಭಯಂಕರವಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಸ್ವರವನ್ನು ಕೇಳಿದೆನು. ಅದು, “ಹಲ್ಲೆಲೂಯಾ, ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು ಆಳುತ್ತಾನೆ.
Ma kuri in kunna nire nigmirang nanu gbardang, gu nimgirang ni mgwei sa ma ori gu nigmirang ni tuzza inni Kara nagu, haliluya, Asere aru mazi inni kara Asesere any vat.
7 ೭ ಯಜ್ಞದ ಕುರಿಮರಿಯಾದಾತನ ವಿವಾಹಕಾಲವು ಬಂದಿತೆಂದು ಸಂತೋಷಪಡೋಣ, ಹರ್ಷಗೊಳ್ಳೋಣ, ಆತನನ್ನು ಘನಪಡಿಸೋಣ, ಏಕೆಂದರೆ ಆತನನ್ನು ವಿವಾಹವಾಗುವ ಕನ್ಯೆಯು ತನ್ನನ್ನು ತಾನೇ ಸಿದ್ಧಮಾಡಿಕೊಂಡಿದ್ದಾಳೆ” ಎಂದು ಹೇಳಿತು.
Na ti wu apuru arum ti kuri ti nya me ninonzo, a nya vana ubitam a biki, unee umeme ma bee me.
8 ೮ ಪ್ರಕಾಶಮಾನವೂ, ನಿರ್ಮಲವೂ ಆದ ನಯವಾದ ನಾರುಮಡಿಯನ್ನು ಧರಿಸಿಕೊಳ್ಳುವುದಕ್ಕೆ ಆಕೆಗೆ ಕೃಪೆ ಲಭಿಸಿತು. (ಆ ನಾರುಮಡಿ ಅಂದರೆ ದೇವಜನರ ನೀತಿಕೃತ್ಯಗಳೇ).
A hem me ma impi nice nimeme innu gyebtu uwalwal ulau ugyebtu uluut, tang tanu Asere tini.
9 ೯ ಇದಲ್ಲದೆ ಅವನು ನನ್ನ ಸಂಗಡ ಮಾತನಾಡುತ್ತಾ, “ಯಜ್ಞದ ಕುರಿಮರಿಯಾದಾತನ ವಿವಾಹದ ಔತಣಕ್ಕೆ ಆಹ್ವಾನಿಸಲ್ಪಟ್ಟವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿ, “ಈ ಮಾತುಗಳು ದೇವರ ಸತ್ಯವಚನಗಳಾಗಿವೆ” ಅಂದನು.
Ma gu inmi, nyettike, anu agogoni wani sa a titi we u Hana ani gurna man Anya vana ubitam. Ma kuri ma gu, in mi tide ti geme ta Asere tini to kadundere. M
10 ೧೦ ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮೇಲೆ ಬೀಳಲು ಅವನು, “ಹೀಗೆ ಮಾಡಬೇಡ ನೋಡು, ನಾನು ನಿನಗೂ, ಯೇಸುವಿನ ಬಗ್ಗೆ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಸೇವೆಯನ್ನು ಮಾಡುವ ದಾಸನಾಗಿದ್ದೇನೆ, ದೇವರಿಗೆ ಆರಾಧನೆ ಮಾಡು, ಯೇಸುವಿನ ಸಾಕ್ಷಿಯು ಪ್ರವಾದನೆಯ ಆತ್ಮವೇ” ಎಂದು ಹೇಳಿದನು.
a tunguno a my henu mu meme in nonzo me, ma gu in mi, Kati unonzom ba, mi uroni uni rere mani nan Hu nan na henu aweme as wa canti niza ni Yeso wa nonzo Asere mani, ubuka u Yeso bibe be nu Asere bini.
11 ೧೧ ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ ನಂಬಿಗಸ್ತನು, ಸತ್ಯವಂತನು ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ.
Ma iri a paki asesere bire barka birum nan uye azesere me, a gusi in me unu ulau nan uka dundere, a nyimo Una uriri uni ma benkizi Anabu ma wuza nikono.
12 ೧೨ ಆತನ ಕಣ್ಣುಗಳು ಬೆಂಕಿಯ ಜ್ವಾಲೆಯಂತಿವೆ, ಆತನ ತಲೆಯ ಮೇಲೆ ಅನೇಕ ಕಿರೀಟಗಳುಂಟು, ಆತನಿಗೆ ಒಂದು ಹೆಸರು ಬರೆದುಕೊಡಲ್ಪಟ್ಟಿದೆ, ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು.
Aje ameme nilem nuraa nini, nice nimeme a ere a tigomo inni za as a nyetiken, me Mani cas ma Russ nini a nyimo any vat, a kem unu rusa ba.
13 ೧೩ ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿಕೊಂಡಿದ್ದನು. ಆತನಿಗೆ ದೇವರ ವಾಕ್ಯವೆಂದು ಹೆಸರು.
Ma soki udibi in maye niza ni meme tide ta Asere tini.
14 ೧೪ ಪರಲೋಕದಲ್ಲಿರುವ ಸೈನ್ಯವು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಹತ್ತಿದವರಾಗಿ ಆತನನ್ನು ಹಿಂಬಾಲಿಸಿದರು.
Ana nikono na Asesere wa ori, we tarsi azesere ibarka irum, we soki tigyebtu ti riri ti rum to lau.
15 ೧೫ ಜನಾಂಗಗಳನ್ನು ಕತ್ತರಿಸಿಹಾಕುವುದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಟು ಬರುತ್ತದೆ. ಆತನು ಅವರನ್ನು ಕಬ್ಬಿಣದ ದಂಡದಿಂದ ಆಳುವನು. ಅವನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.
A nyimo anyo ameme uharda utire ususo barki a tiri anabu, madi canti we innu bina azumo innu patala a hira a mgwei ma anab utumza Iriba Asere.
16 ೧೬ ಆತನ ವಸ್ತ್ರದ ಮೇಲೂ, ತೊಡೆಯ ಮೇಲೂ “ರಾಜಾಧಿರಾಜನೂ ಕರ್ತಾಧಿ ಕರ್ತನೂ” ಎಂಬ ಹೆಸರು ಬರೆದಿದೆ.
Azesere udibi umeme man no toh me maxi inni za as a nyetike, Ugomo wa gomo nan Aco wan ka coo.
17 ೧೭ ಆ ಮೇಲೆ ಒಬ್ಬ ದೇವದೂತನು ಸೂರ್ಯನಲ್ಲಿ ನಿಂತಿರುವುದನ್ನು ಕಂಡೆನು. ಅವನು ಮಹಾ ಸ್ವರದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ, “ಬನ್ನಿರಿ, ದೇವರು ಮಾಡಿಸುವ ಮಹಾ ಔತಣಕ್ಕೆ ಸೇರಿ ಬನ್ನಿರಿ,
Ma iri bire bibie bi kadura ka Asere ma turi uwui ma hirza nimgirang inni Kara ma gu inni yin vat sa ihirsa azesere, ayeni igurna a hira anigurna na na Asere.
18 ೧೮ ರಾಜರ ಮಾಂಸವನ್ನೂ, ಸಹಸ್ರಾಧಿಪತಿಗಳ ಮಾಂಸವನ್ನೂ, ಪರಾಕ್ರಮಶಾಲಿಗಳ ಮಾಂಸವನ್ನೂ, ಕುದುರೆಗಳ ಮಾಂಸವನ್ನೂ, ಕುದುರೆ ಸವಾರರ ಮಾಂಸವನ್ನೂ, ಸ್ವತಂತ್ರರೂ, ದಾಸರೂ, ಶ್ರೇಷ್ಠರು ಮತ್ತು ಕನಿಷ್ಠರು ಇವರೆಲ್ಲರ ಮಾಂಸವನ್ನೂ ತಿನ್ನುವುದಕ್ಕೆ ಬನ್ನಿರಿ” ಎಂದು ಹೇಳಿದನು.
Barki ire inama ya Gomo man ni nama ya nu ani kono, man ni nama anu agbakum, man ni nama ibarka, nan nu nyeze me nan ninama us nu vat, ahana nan na arere, a dang dang nan na cin cin.
19 ೧೯ ತರುವಾಯ ಆ ಮೃಗವೂ, ಭೂರಾಜರೂ, ಅವರ ಸೈನ್ಯಗಳವರೂ ಆ ಕುದುರೆಯ ಮೇಲೆ ಕುಳಿತಿದ್ದವನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧಮಾಡುವುದಕ್ಕಾಗಿ ಕೂಡಿಬಂದಿರುವುದನ್ನು ಕಂಡೆನು.
Ma iri binama ba iro nan na gomo unee nan nanu ani kono wa oro nipum barki wa we wu nikono nan nu uye sa ma ciki azesere a barka nan anu a cin cin.
20 ೨೦ ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು. (Limnē Pyr )
A meki binama be iro me nan nunu umacico sa ma ke ma tumi intize ajee as ake arangi me a karti me ukaba u shaida ubinama be iro me nan na nu sa we nonzo makeri me areki we ware me a nyimo ura, a huma me a nyimo uwa intire ikibiritu me. (Limnē Pyr )
21 ೨೧ ಉಳಿದವರು ಆ ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಬಂದ ಇಬ್ಬಾಯಿ ಕತ್ತಿಯಿಂದ ಹತರಾದರು, ಪಕ್ಷಿಗಳೆಲ್ಲಾ ಅವರ ಮಾಂಸವನ್ನು ಹೊಟ್ಟೆತುಂಬಾ ತಿಂದವು.
Ahu ukasu me innu harda unu sa ma ciki azesere a barka, uharda me sa a suso a nyimo a nyo ameme inyin vat ya tii inni nama iweme.