< ಪ್ರಕಟಣೆ 2 >

1 “ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ, ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದುಕೊಂಡುಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ಸಂಚರಿಸುವಾತನು ಹೇಳುವುದೇನಂದರೆ,
Khu pelela unghulei khu Efesi usimbe: 'Angha nghu mamenyu ngha ula uvei ibateilile inondwe incho lekhela khumo mukheivokho khya mwene eikhya khundyo umwene uvei inghenda pafibaleilo fya nyale lekhela khumo ifya lutalama iita,”
2 “ನಿನ್ನ ಕೃತ್ಯಗಳನ್ನೂ, ಪ್ರಯಾಸವನ್ನೂ, ತಾಳ್ಮೆಯನ್ನೂ, ಬಲ್ಲೆನು. ನೀನು ದುರ್ಜನರನ್ನು ಸಹಿಸಲಾರೆ, ಅಪೊಸ್ತಲರಲ್ಲದಿದ್ದರೂತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನುಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ.
“Neinchimanyile imbombo nchakho nulweiyumeileincho lwakho pa mbombo na vuvukifu nukhuta savahile ukhuva paninie navavivi, hange puvanghelile voni vavo vikheinchova ukhuta vapositili, humbe savapositili puvavonikhe ukhuta vadesi.
3 ನೀನು ತಾಳ್ಮೆಯುಳ್ಳವನಾಗಿನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಸಹಿಸಿಕೊಂಡರೂ ಬಿದ್ದುಹೋಗದೆ ಇದ್ದುದನ್ನು ನಾನು ಬಲ್ಲೆನು.
Neilumanyile ukhuta uleinulweiyei yumeileincho nulweikasyo, hange punkuvilwe fincho savali ya lifavwa lyango, hange sunghatile.
4 ಆದರೂ ನಿನ್ನ ಮೇಲೆ ಹೊರಿಸಬೇಕಾದ ಆಪಾದನೆ ಒಂದಿದೆ. ಮೊದಲು ನಿನಗೆ ನನ್ನ ಮೇಲಿದ್ದ ಪ್ರೀತಿ ಈಗಿಲ್ಲ.
Pu leino neileineilimenyu ulunghano lwakho lula ululanchi.
5 ಆದ್ದರಿಂದ ನೀನು ಎಲ್ಲಿಂದ ಬಿದ್ದಿರುವಿಯೋ ಅದನ್ನು ನಿನ್ನ ನೆನಪಿಗೆ ತಂದುಕೋ. ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ಮಾನಸಾಂತರಪಡದಿದ್ದರೆನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದು ಹಾಕುವೆನು.
Pu leino nkumbuheincha nukhuvomba imbombo ingolofu nchila incho vwa vombangha ulutanchi. Pu ungave savwipela, pwu nikhwincha khulyuve nikhukheihencha ikhibateilo khya nyale ukhuhuma upwukhikhale.
6 ಆದರೆ ನಿನ್ನಲ್ಲಿ ಒಳ್ಳೆಯದು ಒಂದುಂಟು, ಅದೇನೆಂದರೆ ನಾನು ದ್ವೇಷಿಸುವನಿಕೊಲಾಯಿತರ ಕೃತ್ಯಗಳನ್ನು ನೀನೂ ಸಹ ದ್ವೇಷಿಸುತ್ತಿರುವಿ.
Puleino uve uleinancho inchi, vuvipa fincho khunchila inchu ava Nikolao vikhunchivomba, nchincho na yune nivipa pa incho.
7 ದೇವರಾತ್ಮನು ಸಭೆಗಳಿಗೆ ಹೇಳುವುದನ್ನುಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆದೇವರ ಪರದೈಸಿನಲ್ಲಿರುವಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಅನುಮತಿ ಕೊಡುವೆನು.
Umwene uveialeinimbulukhutu apuleikhanghe nchila nchincho u membo ukhungheivula eimipelela ula unduti pali nghoha veinikhupinchangha uvulenghefu uvwa khulya pabeikhi unghwa vwumi unghulei pa paladisi ya Nguluve.'
8 “ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ, ಆದಿಯು, ಅಂತ್ಯವೂ ಆಗಿರುವಾತನು, ಸತ್ತವನಾಗಿದ್ದು ಜೀವಿತನಾಗಿ ಎದ್ದು ಬಂದಾತನೂಹೇಳುವುದೇನಂದರೆ,
Khuvasuhwa avamupelela unghwa Similina simba: '(Haya ni maneno ya yule ambaye ni mwanzo na mwisho ambaye alikufa na kuwa hai tena: )
9 ನಾನು ನಿನ್ನ ಸಂಕಟವನ್ನೂನಿನ್ನ ಬಡತನವನ್ನೂ ಬಲ್ಲೆನು, ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನು ಬಲ್ಲೆನು. ಅವರು ಯೆಹೂದ್ಯರಲ್ಲ, ಸೈತಾನನಸಭಾಮಂದಿರದವರಾಗಿದ್ದಾರೆ.
'“Neivumanyile uvunkuveilwa vwakho nuvunghachu (pu leino uve uleikavi), nu vudesi vwa vala avavikheinchova ukhuta va Yuta (pu leino savuvene pa mnyumba yakhweisayeila undunghu).
10 ೧೦ ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತುಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕನಂಬಿಗಸ್ತನಾಗಿರು, ನಾನು ನಿನಗೆಜೀವದ ಕಿರೀಟವನ್ನು ಕೊಡುವೆನು.
Uladwadangha uvunkuvilwa uvuyakheiva vakhuvuvonangha. Lola! Utavanghwa inonghwa avange ndyumwe avaveikhe mudeindeiliwe munyumba ya vanyanyololo, ulwakhuva muleipakhu ngeliwa puyamunkuveilwa amanchuva eikheinchingho. Muwenchanghe vangholofu nakhukhufikha paseikhei unghwa khufwa, pu ya nikhuvapa uludinghuleilo lwa vwumi.
11 ೧೧ ದೇವರಾತ್ಮನು ಸಭೆಗಳಿಗೆ ಹೇಳುವುದನ್ನುಕಿವಿಯುಳ್ಳವನು ಕೇಳಲಿ. ಜಯಹೊಂದುವವನಿಗೆಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.
Engave uleinumbulukhutu puleikhangha unghu u mepo ukhungheivula eimipelela. Ula uvei iva induti sayiveyangheikha nukhufwa ulwa veilei.'
12 ೧೨ “ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ, ಹರಿತವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳುವುದೇನಂದರೆ,
“Khupelela unghwa mu Peligamo simba: 'Angha nghu nghala unghu inchova ula uvyalei neilimundu leila eilitema khyoni khyoni.
13 ೧೩ ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು. ಅದು ಸೈತಾನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ದೃಢವಾಗಿ ಹಿಡಿದುಕೊಂಡಿರುವಿ. ಸೈತಾನನ ನಿವಾಸವಾದ ನಿನ್ನ ಪಟ್ಟಣದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟಾಗಲೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ನಿರಾಕರಿಸಲಿಲ್ಲ.
'“Nei pa manyile pala upwuvutama pale upu kheileipwo eikheinyalwanghula eikhya setano. Paninie neiyo uve uleibite fincho eilitavwa lyango hange suleyile palweideikho ulwa khunyeideikha une. Nafifinghono fila ifyu u Antipa utangeili vango mukhonchova, ungholofu vango uveiabudiwe mundyumwe, apo pwu usetano itama.
14 ೧೪ ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ. ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದುಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ.
Puleino neilainangho amamenyu madebe palyuve: uleinavanu ukhwa avavikonga ulumanyisyo ulu u Blyamu, amanyisyangha khwa Balakhi upyu aveikha ingofyo khunya Israeli, ukhuta pwu valye ifinu fifyo fiveikhivwe fya nekhelo ya minguluve nu vulinghu.
15 ೧೫ ಹಾಗೆಯೇ, ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿಮ್ಮಲ್ಲಿದ್ದಾರೆ.
Mu njeila eiyo nayuve uleinavo avanu avange vavo vibite nukhubadama mulumanyisyo lwa va Nikolao.
16 ೧೬ ಆದ್ದರಿಂದ ನೀನು ಪಶ್ಚಾತ್ತಾಪಪಟ್ಟು ತಿರುಗಿಕೊಳ್ಳದಿದ್ದರೆನಾನು ಬೇಗನೆ ನಿನ್ನ ಬಳಿಗೆ ಬಂದುನನ್ನ ಬಾಯಿಂದ ಹೊರಬರುವ ಕತ್ತಿಯಿಂದಅವರ ಮೇಲೆ ಯುದ್ಧ ಮಾಡುವೆನು.
Pu leino pela! Nu pungave savwipela, nikhwincha lulu, punipelangha eilinghoha pavene ni mundu eiyihuma mundomo nghwango.
17 ೧೭ ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆಬಚ್ಚಿಟ್ಟಿರುವಮನ್ನವೆಂಬ ಆಹಾರವನ್ನು ಕೊಡುವೆನು. ಇದಲ್ಲದೆ ಅವನಿಗೆ ಬಿಳೀಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಮತ್ತಾರಿಗೂ ತಿಳಿಯದು.
Uvei aleinimbulukhutu apuleikhanghe eilimenyu eilei eilyu u mepo ukhungheivula eimipelela. Ula uvei iva nduti palinghoha venikhupa pakhunghaveila eikhakhulya eikhinonu (manna) ikheileikhuvutitu, hangepunikhupa neilinyanga, eilipya pa kyanya palinganga, eilitavwa eileiasikhuli uvyaleimanyile mwene ula uveiikhulyupeila vei aleimanyile.'
18 ೧೮ “ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ, ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವುದೇನಂದರೆ,
“Mupelela unghwa suhwa uva khu Thiatila pusimbe: “Angha nghu mamenyu ngha swambe va Nguluve, umwene uvyalei na mahiho anghaleindululincho lwa mwoto, ni nyayo nchilindutofu unghunghung'ala imbalafu fincho:
19 ೧೯ ನಿನ್ನ ಕೃತ್ಯಗಳನ್ನೂ, ನಿನ್ನ ಪ್ರೀತಿಯನ್ನೂ, ನಂಬಿಕೆಯನ್ನೂ, ಸೇವೆಯನ್ನೂ ಮತ್ತು ತಾಳ್ಮೆಯನ್ನೂ ಬಲ್ಲೆನು. ಇದಲ್ಲದೆ ನಿನ್ನ ಇತ್ತೀಚಿನ ಕೃತ್ಯಗಳು ನಿನ್ನ ಮೊದಲಿನ ಕೃತ್ಯಗಳಿಗಿಂತ ಮೇಲಾದದ್ದು ಎಂದು ಬಲ್ಲೆನು.
'“Ninchimanyile imbombo nchakho - ulunghano lwakho nu lweideikho navavuvombeli nulweiyumeileincho nuvukifu vwakho, nukhuta khila leikhyuvimbile akhaseikhi akha khiluteilile pakhila ikhyukhavombile pavutenguleilo.
20 ೨೦ ನಿನ್ನ ವಿರುದ್ಧ ನನಗೆ ಅಪಾದನೆ ಒಂದಿದೆ. ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು, ಜಾರತ್ವಮಾಡಬಹುದೆಂದೂವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಅನುಮತಿಯನ್ನು ಕೊಟ್ಟಿರುವಿ.
Pu leino neileinalyo eilei palyuve: pakhuva vukhumwumeileila fincho udala u Yesebeli uvei ikheinchova yuywa ukhuta veinyamalangho udala. Mundumanyisyo lwa mwene ikhuvayancha avavombi vango ukhulinghupa paninie nukhulya ifinu ifya nekhelo ya minghuluve.
21 ೨೧ ಜಾರತ್ವವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು, ಆದರೆ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಳಿಗೆ ಮನಸ್ಸು ಬರಲಿಲ್ಲ.
Ngapile useikhi unghwa khupela, ukhuta akilivukhe, pu leino sinonghwa ukhupela uvuvivi vwa mwene nukhukilivakha.
22 ೨೨ ಇಗೋ, ಅವಳು ಹಾಸಿಗೆಯಲ್ಲಿ ಬಿದ್ದುಕೊಂಡಿರುವಂತೆ ಮಾಡುವೆನು ಮತ್ತು ಅವಳೊಂದಿಗೆ ವ್ಯಭಿಚಾರಮಾಡುವವರು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಂಡು ಬಿಡದೆ ಹೋದರೆ ಅವರನ್ನು ಮಹಾ ಸಂಕಟದಲ್ಲಿ ಬೀಳುವಂತೆ ಮಾಡುವೆನು.
Lola! leino pulikhubeilusyanga pakhihangha ikhyavulinghu paninie navala uvwakhalinghupangha navo, ukhuta pavave ndunghaduncho ulwavunkuveilwa. Yeingave ndakheikhi huba vapele khukhila eikhyu avombile.
23 ೨೩ ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.
Pu une nikhuvabudangha avana vamwene vafwe neimipelela nghyoni yanghikhulumanya ukhuta une nene nilola muvwanasyale na muvumbula. Punikhupinchangha umo umo ndyumwe mukheinghelelo khya mbombo ncha mwene.
24 ೨೪ “ಆದರೆ ಥುವತೈರದಲ್ಲಿರುವ ಉಳಿದವರಿಗೆ, ಅಂದರೆ ಸೈತಾನನಿಂದ ಪ್ರೇರಿತವಾದ ದುರ್ಬೋಧನೆಯ ಆಳವನ್ನು ಯಾರಾರು ತಿಳಿಯದೆಯೂ ಅದನ್ನು ಅವಲಂಬಿಸದೆಯೂ ಇರುತ್ತಾರೋ ಅವರಿಗೆ ಹೇಳುವುದೇನಂದರೆ, ನಾನುಮತ್ತೊಂದು ಭಾರವನ್ನು ನಿಮ್ಮ ಮೇಲೆ ಹಾಕುವುದಿಲ್ಲ.
Pu leino khumweivamo ndyumwe mwei musinghiile umu mu Thiatila, khuvala vooni avasavikonga ulumanyisyo ulu, na yumwe mweisamukheimanyile ilekhuincha setano, pu miita khulyumwe sangaveikhe khulyumwe unvhingho unghwakhuvongelencha.'
25 ೨೫ ಆದರೆನೀವು ಹೊಂದಿರುವುದನ್ನು ನಾನು ಬರುವ ತನಕ ಭದ್ರವಾಗಿ ಹಿಡಿದುಕೊಂಡಿರಿ.
Mukhila ikhyumuleinakhyo mukhibate nukhubadama fincho paeikhyo impakha paseikhi unghu yakheiva nikhwincha.
26 ೨೬ ಯಾವನು ಜಯಶಾಲಿಯಾಗಿ ನನಗೆ ಮೆಚ್ಚಿಕೆಯಾದ ಕೃತ್ಯಗಳನ್ನುಕಡೆಯವರೆಗೂ ನಡಿಸುತ್ತಾನೋ, ಅವನಿಗೆ ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು.‘ಅವನುಕಬ್ಬಿಣದ ಕೋಲಿನಿಂದ ಅವರನ್ನು ಆಳುವನು, ಮಣ್ಣಿನ ಮಡಿಕೆಗಳು ಒಡೆಯುವಂತೆ ಅವರ ಬಲ ಮುರಿದು ಹೋಗುವುದು.’ ಇದಲ್ಲದೆಉದಯ ನಕ್ಷತ್ರವನ್ನು ಅವನಿಗೆ ಕೊಡುವೆನು.
Ula uvei iva ndutu nukhukonga kheile ikhyunivomba impakha pavasileilo, pu khumwene uywa nikhupi nchangha uvuvaha vwa pafilunga fyoni avapaneni vevenchangha pasi pa mwene.
27 ೨೭
Uvuvaha vwa mwene pwikhuva longonchangha nukhuva Nkuludeva vavene voni.'
28 ೨೮
Nduvu niopeilile ukhuhuma khwa Daada pu une puyanikhupa nulutodwe ulwa pavusikhu vwakeilo.
29 ೨೯ ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.
Ula uvyalei nimbulukhutu apuleikhanghe kheila eikhyu u mepo ikhungheivula eimipalela.'

< ಪ್ರಕಟಣೆ 2 >