< ಪ್ರಕಟಣೆ 20 >
1 ೧ ಆಗ ಒಬ್ಬ ದೇವದೂತನು ಅಧೋಲೋಕದ ಬೀಗದ ಕೈಯನ್ನೂ ಮತ್ತು ದೊಡ್ಡ ಸರಪಣಿಯನ್ನೂ ಕೈಯಲ್ಲಿ ಹಿಡಿದುಕೊಂಡು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು. (Abyssos )
Kisha niliona malaika akishuka kutoka mbinguni, akiwa na ufunguo wa shimo lisilo na mwisho na mnyororo mkubwa mkononi mwake. (Abyssos )
2 ೨ ಅವನು ಪಿಶಾಚಿಯೂ ಸೈತಾನನೂ ಆಗಿರುವ ಪುರಾತನ ಸರ್ಪವೆಂಬ ಘಟಸರ್ಪವನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.
Alimshika yule joka, nyoka wa zamani, ambaye ni ibilisi au Shetani, na kumfunga miaka elfu.
3 ೩ ಆ ಸಾವಿರ ವರ್ಷ ಮುಗಿಯುವ ತನಕ ಸೈತಾನನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೇವದೂತನು ಅವನನ್ನು ಅಧೋಲೋಕಕ್ಕೆ ತಳ್ಳಿ ಬಾಗಿಲು ಮುಚ್ಚಿ ಅದಕ್ಕೆ ಮುದ್ರೆಹಾಕಿದನು. ಆ ಸಾವಿರ ವರ್ಷಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ಆಗುವುದು. (Abyssos )
Alimtupa kwenye shimo lisilo na mwisho, akalifunga na kulitia mhuri juu yake. Hii ilikuwa hivyo ili kwamba asiwadanganye mataifa tena mpaka miaka elfu itakapoisha. Baada ya hapo, ataachiwa huru kwa muda mchache. (Abyssos )
4 ೪ ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.
Kisha niliona viti vya enzi. Waliokuwa wamevikalia ni wale ambao walikuwa wamepewa mamlaka ya kuhukumu. Vilevile niliona nafsi za wale ambao walikuwa wamekatwa vichwa kwa ajili ya ushuhuda kuhusu Yesu na kwa neno la Mungu. Walikuwa hawajamwabudu mnyama au sanamu yake, na walikataa kupokea alama juu ya paji za nyuso zao au mkono. Walikuja uzimani, na wakatawala pamoja na Kristo kwa miaka elfu.
5 ೫ ಸತ್ತವರಲ್ಲಿ ಉಳಿದವರು ಆ ಸಾವಿರ ವರ್ಷಗಳ ಮುಗಿಯುವವರೆಗೂ ಜೀವಿತರಾಗಿ ಏಳಲಿಲ್ಲ. ಇದೇ ಮೊದಲನೇಯ ಪುನರುತ್ಥಾನವು.
Wafu waliobaki hawakuja uzimani mpaka miaka elfu ilipokuwa imeisha. Huu ndio ufufuo wa kwanza.
6 ೬ ಮೊದಲನೇಯ ಪುನರುತ್ಥಾನದಲ್ಲಿ ಸೇರಿದವರು ಧನ್ಯರೂ ಮತ್ತು ಪರಿಶುದ್ಧರೂ ಆಗಿದ್ದಾರೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಆ ಸಾವಿರ ವರ್ಷ ಆಳುವರು.
Mbarikiwa na mtakatifu ni mtu yeyote ambaye achukua nafasi katika ufufuo wa kwanza! Mauti ya pili haina nguvu juu ya watu kama hawa. Patakuwa na makuhani wa Mungu na wa Kristo na watatawala na yeye kwa miaka elfu.
7 ೭ ಆ ಸಾವಿರ ವರ್ಷಗಳು ಮುಗಿದ ಮೇಲೆ ಸೈತಾನನಿಗೆ ಸೆರೆಯಿಂದ ಬಿಡುಗಡೆಯಾಗುವುದು.
Wakati miaka elfu itakapofikia mwisho, Shetani atafunguliwa kutoka gerezani mwake.
8 ೮ ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ದೇಶಗಳನ್ನು ಮೋಸಗೊಳಿಸಿ, ಗೋಗ್ ಮತ್ತು ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಯುದ್ಧಕ್ಕೆ ಸೇರಿಸುವನು. ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವುದು.
Atakwenda nje kuwadanganya mataifa katika kona nne za dunia -Gogu na Magogu - kuwaleta pamoja kwa ajili ya vita. Watakuwa wengi kama mchanga wa bahari.
9 ೯ ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ದೇವಜನರ ಪಾಳೆಯಕ್ಕೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕುವರು. ಆದರೆ ಪರಲೋಕದಿಂದ ಬೆಂಕಿ ಇಳಿದು ಬಂದು ಅವರನ್ನು ದಹಿಸಿಬಿಡುವುದು.
Walikwenda juu kwenye tambarare ya nchi nao walizunguka kambi ya waumini, mji upendwao. Lakini moto ulikuja kutoka mbinguni na kuwaangamiza.
10 ೧೦ ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು. (aiōn , Limnē Pyr )
Shetani, ambaye aliwadanganya, alitupwa ndani ya ziwa liwakalo kiberiti, ambamo mnyama na nabii wa uongo walikuwa wameshatupwa. Watateswa mchana na usiku milele na milele. (aiōn , Limnē Pyr )
11 ೧೧ ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.
Kisha niliona kiti cha enzi kikubwa cheupe na yule ambaye alikaa juu yake. Dunia na mbingu zilikimbia mbali kutoka katika uwepo wake, lakini hapakuwako nafasi ya wao kwenda.
12 ೧೨ ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.
Niliwaona waliokufa - hodari na wasio wa muhimu wamesimama katika kiti cha enzi, na vitabu vilifunuliwa. Kisha kitabu kingine kilifunguliwa - Kitabu cha Uzima. Wafu walihukumiwa kwa kile kilichoandikwa ndani ya vitabu, matokeo ya kile walichokifanya.
13 ೧೩ ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು. (Hadēs )
Bahari iliwatoa wafu ambao walikuwa ndani yake. Kifo na kuzimu viliwatoa wafu ambao walikuwa ndani yake, na wafu walihukumiwa kulingana na walichofanya. (Hadēs )
14 ೧೪ ಆ ಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು. (Hadēs , Limnē Pyr )
Kifo na kuzimu zilitupwa ndani ya ziwa la moto. Hii ni mauti ya pili - ziwa la moto. (Hadēs , Limnē Pyr )
15 ೧೫ ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು. (Limnē Pyr )
Kama jina la yeyote halikupatikana limeandikwa ndani ya Kitabu cha Uzima, alitupwa ndani ya ziwa la moto. (Limnē Pyr )