< ಪ್ರಕಟಣೆ 21 >

1 ತರುವಾಯ ನೂತನ ಆಕಾಶವನ್ನೂ ನೂತನ ಭೂಮಿಯನ್ನೂ ಕಂಡೆನು. ಮೊದಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು. ಇನ್ನು ಸಮುದ್ರವು ಇಲ್ಲ.
Og jeg så en ny himmel og en ny jord; for den første himmel og den første jord var veket bort, og havet er ikke mere.
2 ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮ್ ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾಗಿರುವ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು.
Og jeg så den hellige stad, det nye Jerusalem, stige ned av himmelen fra Gud, gjort i stand som en brud som er prydet for sin brudgom.
3 ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು.
Og jeg hørte en høi røst fra tronen si: Se, Guds bolig er hos menneskene, og han skal bo hos dem; og de skal være hans folk, og Gud selv skal være hos dem og være deres Gud;
4 ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು.
og han skal tørke bort hver tåre av deres øine, og døden skal ikke være mere, og ikke sorg og ikke skrik og ikke pine skal være mere; for de første ting er veket bort.
5 ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಇಗೋ, ನಾನು ಎಲ್ಲವನ್ನು ನೂತನಗೊಳಿಸುತ್ತೇನೆ” ಎಂದನು. ಮತ್ತು ಒಬ್ಬನು ನನಗೆ, “ನೀನು ಇದನ್ನು ಬರೆ. ಏಕೆಂದರೆ ಈ ಮಾತುಗಳು ನಂಬತಕ್ಕವೂ, ಸತ್ಯವಾದವೂ ಆಗಿವೆ” ಎಂದು ಹೇಳಿದನು.
Og han som satt på tronen, sa: Se, jeg gjør alle ting nye. Og han sier til mig: Skriv! for disse ord er troverdige og sanne.
6 ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಎಲ್ಲಾ ನೆರವೇರಿತು, ನಾನೇ ಆದಿಯು, ಅಂತ್ಯವೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಕ್ರಯವಿಲ್ಲದೆ ಕುಡಿಯುವುದಕ್ಕೆ ಕೊಡುವೆನು.
Og han sa til mig: Det er skjedd. Jeg er Alfa og Omega, begynnelsen og enden. Jeg vil gi den tørste av livsens vannkilde uforskyldt.
7 ಜಯ ಹೊಂದುವವನು ಇವುಗಳಿಗೆ ಬಾಧ್ಯನಾಗುವನು. ನಾನು ಅವನಿಗೆ ದೇವರಾಗಿರುವೆನು. ಅವನು ನನಗೆ ಮಗನಾಗಿರುವನು.
Den som seirer, skal arve alle ting, og jeg vil være hans Gud, og han skal være min sønn.
8 ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು. (Limnē Pyr g3041 g4442)
Men de redde og vantro og vederstyggelige og manndraperne og horkarlene og trollmennene og avgudsdyrkerne og alle løgnerne, deres del skal være i sjøen som brenner med ild og svovel; det er den annen død. (Limnē Pyr g3041 g4442)
9 ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ, “ಬಾ ಕುರಿಮರಿಯಾದಾತನಿಗೆ ಹೆಂಡತಿಯಾಗಲಿರುವ ವಧುವನ್ನು ನಿನಗೆ ತೋರಿಸುವೆನು” ಎಂದು ಹೇಳಿ,
Og en av de syv engler som hadde de syv skåler, fulle av de syv siste plager, kom til mig og talte med mig og sa: Kom, jeg vil vise dig bruden, Lammets hustru.
10 ೧೦ ದೇವರಾತ್ಮನಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ, ಯೆರೂಸಲೇಮೆಂಬ ಪರಿಶುದ್ಧ ಪಟ್ಟಣವು ಪರಲೋಕದೊಳಗಿಂದ, ದೇವರ ಬಳಿಯಿಂದ ಇಳಿದುಬರುವುದನ್ನು ನನಗೆ ತೋರಿಸಿದನು.
Og han førte mig i ånden bort på et stort og høit fjell og viste mig den hellige stad Jerusalem, som steg ned av himmelen fra Gud;
11 ೧೧ ಅದು ದೇವರ ತೇಜಸ್ಸಿನಿಂದ ಕೂಡಿತ್ತು. ಪಟ್ಟಣವು ಅಮೂಲ್ಯ ರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು, ಸ್ವಚ್ಛವಾದ ಸ್ಫಟಿಕದಂತೆ ಶುಭ್ರವಾಗಿತ್ತು.
den hadde Guds herlighet, og dens lys var som den kosteligste sten, som krystallklar jaspis.
12 ೧೨ ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಗೋಡೆ ಇತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಅವುಗಳ ಮೇಲೆ ಇಸ್ರಾಯೇಲ್ಯರ ಹನ್ನೆರಡು ಕುಲಗಳ ಹೆಸರುಗಳು ಬರೆಯಲ್ಪಟ್ಟಿದ್ದವು.
Og den hadde en stor og høi mur; den hadde tolv porter, og på portene tolv engler og innskrevne navn, navnene på Israels barns tolv stammer;
13 ೧೩ ಪೂರ್ವ ದಿಕ್ಕಿನಲ್ಲಿ ಮೂರು ಬಾಗಿಲುಗಳು, ಉತ್ತರ ದಿಕ್ಕಿನಲ್ಲಿ ಮೂರು ಬಾಗಿಲುಗಳು ದಕ್ಷಿಣ ದಿಕ್ಕಿನಲ್ಲಿ ಮೂರು ಬಾಗಿಲುಗಳು ಪಶ್ಚಿಮ ದಿಕ್ಕಿನಲ್ಲಿ ಮೂರು ಬಾಗಿಲುಗಳು ಇದ್ದವು.
mot øst var tre porter, mot nord tre porter, mot syd tre porter, mot vest tre porter.
14 ೧೪ ಪಟ್ಟಣದ ಪ್ರಾಕಾರಕ್ಕೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಯಜ್ಞದ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.
Og stadens mur hadde tolv grunnstener, og på dem navnene på Lammets tolv apostler.
15 ೧೫ ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಬಾಗಿಲುಗಳನ್ನೂ ಅದರ ಗೋಡೆಯನ್ನೂ ಅಳತೆ ಮಾಡುವುದಕ್ಕಾಗಿ ತನ್ನ ಕೈಯಲ್ಲಿ ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು.
Og han som talte med mig, hadde et gullrør forat han skulde måle staden og dens porter og dens mur.
16 ೧೬ ಆ ಪಟ್ಟಣವು ಚಚ್ಚೌಕವಾಗಿತ್ತು. ಅದರ ಉದ್ದವು ಅದರ ಅಗಲದಷ್ಟಿತ್ತು. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು. ಅಳತೆಯು ಸುಮಾರು 2,200 ಕಿಲೋಮೀಟರುಗಳಷ್ಟಿತ್ತು. ಅದರ ಉದ್ದವು, ಅಗಲವು, ಎತ್ತರವು ಸಮವಾಗಿದ್ದವು.
Og staden ligger i en firkant, og dens lengde er så stor som bredden. Og han målte staden med røret: tolv tusen stadier; lengden og bredden og høiden på den er like.
17 ೧೭ ಅವನು ಅದರ ಗೋಡೆಯನ್ನು ಅಳತೆ ಮಾಡಿದನು. ಅದು ನೂರನಲ್ವತ್ತು ನಾಲ್ಕು ಮೊಳವಾಗಿತ್ತು. ಈ ಲೆಕ್ಕದಲ್ಲಿ ಮನುಷ್ಯನ ಮೊಳ ಎಂದರೆ ದೇವದೂತನ ಮೊಳ.
Og han målte dens mur: hundre og fire og firti alen, efter menneskemål, som og er engle-mål.
18 ೧೮ ಆ ಗೋಡೆಯು ಸೂರ್ಯಕಾಂತ ಶಿಲೆಯಿಂದ ಕಟ್ಟಲ್ಪಟ್ಟಿತ್ತು ಪಟ್ಟಣವು ಶುದ್ಧ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು.
Og dens mur var bygget av jaspis, og staden var av rent gull, lik rent glass.
19 ೧೯ ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲ ವಿಧವಾದ ರತ್ನಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿವಾರವು ಸೂರ್ಯಕಾಂತಶಿಲೆ ಎರಡನೆಯದು ನೀಲಮಣಿ ಮೂರನೆಯದು ಪಚ್ಚೆ. ನಾಲ್ಕನೆಯದು ಪದ್ಮರಾಗ,
Og grunnstenene i stadens mur var prydet med allslags kostelig sten; den første grunnsten var jaspis, den annen safir, den tredje kalkedon, den fjerde smaragd,
20 ೨೦ ಐದನೆಯದು ಗೋಮೇಧಿಕ, ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಇಂದ್ರನೀಲ, ಹನ್ನೆರಡನೆಯದು ನೀಲಸ್ಫಟಿಕ,
den femte sardonyks, den sjette sarder, den syvende krysolitt, den åttende beryll, den niende topas, den tiende krysopras, den ellevte hyasint, den tolvte ametyst.
21 ೨೧ ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿ ಹೆಬ್ಬಾಗಿಲೂ ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಶುದ್ಧವಾದ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು.
Og de tolv porter var tolv perler; hver av portene var av én perle; og stadens gate var rent gull, som klart glass.
22 ೨೨ ಪಟ್ಟಣದಲ್ಲಿ ನಾನು ದೇವಾಲಯವನ್ನು ಕಾಣಲಿಲ್ಲ. ಏಕೆಂದರೆ ಸರ್ವಶಕ್ತನಾಗಿರುವ ದೇವರಾದ ಕರ್ತನೂ ಯಜ್ಞದ ಕುರಿಮರಿಯಾದಾತನೂ ಅದರ ದೇವಾಲಯವಾಗಿದ್ದಾರೆ.
Og noget tempel så jeg ikke i den; for dens tempel er Gud Herren, den allmektige, og Lammet.
23 ೨೩ ಪಟ್ಟಣಕ್ಕೆ ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ, ಏಕೆಂದರೆ ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು.
Og staden trenger ikke solen eller månen til å lyse for sig; for Guds herlighet oplyser den, og Lammet er dens lys.
24 ೨೪ ಅದರ ಬೆಳಕಿನಿಂದ ಜನಾಂಗಗಳವರು ನಡೆದಾಡುವರು. ಭೂರಾಜರು ತಮ್ಮ ವೈಭವವನ್ನು ಅದರೊಳಗೆ ತರುವರು.
Og folkeslagene skal vandre i dens lys, og kongene på jorden bærer sin herlighet inn i den.
25 ೨೫ ಅದರ ಹೆಬ್ಬಾಗಿಲುಗಳನ್ನು ಹಗಲಿನಲ್ಲಿ ಮುಚ್ಚುವುದೇ ಇಲ್ಲ. ಅಲ್ಲಿ ರಾತ್ರಿಯಂತೂ ಇಲ್ಲವೇ ಇಲ್ಲ.
Og dens porter skal aldri lukkes om dagen; for natt skal ikke være der;
26 ೨೬ ಜನಾಂಗಗಳ ವೈಭವವೂ ಗೌರವವೂ ಅಲ್ಲಿಗೆ ತರಲ್ಪಡುವವು.
og de skal bære folkeslagenes herlighet og ære inn i den.
27 ೨೭ ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.
Og intet urent skal komme inn i den, og ingen som farer med stygghet og løgn, men bare de som er innskrevet i livsens bok hos Lammet.

< ಪ್ರಕಟಣೆ 21 >