< ಪ್ರಕಟಣೆ 22 +
1 ೧ ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು,
En hij toonde mij een zuivere rivier van het water des levens, klaar als kristal, voortkomende uit den troon Gods, en des Lams.
2 ೨ ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿ ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳು ಒಂದೊಂದ್ದು ತರಹದ ಫಲವನ್ನು ಬಿಡುತ್ತಾ ಹನ್ನೆರಡು ತರಹದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗಗಳವರನ್ನು ವಾಸಿಮಾಡುವಂಥದಾಗಿದ್ದವು.
In het midden van haar straat en op de ene en de andere zijde der rivier was de boom des levens, voortbrengende twaalf vruchten, van maand tot maand gevende zijne vrucht; en de bladeren des booms waren tot genezing der heidenen.
3 ೩ ಇನ್ನೂ ಯಾವ ಶಾಪವು ಇರುವುದಿಲ್ಲ. ಆ ಪಟ್ಟಣದಲ್ಲಿ ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನವಿರುವುದು. ಆತನ ಸೇವಕರು ಆತನಿಗೆ ಸೇವೆ ಮಾಡುವರು.
En geen vervloeking zal er meer tegen iemand zijn; en de troon Gods en des Lams zal daarin zijn, en Zijn dienstknechten zullen Hem dienen;
4 ೪ ಅವರು ಆತನ ಮುಖವನ್ನು ನೋಡುವರು. ಅವರ ಹಣೆಯ ಮೇಲೆ ಆತನ ಹೆಸರು ಇರುವುದು.
En zullen Zijn aangezicht zien, en Zijn Naam zal op hun voorhoofden zijn.
5 ೫ ಇನ್ನು ರಾತ್ರಿಯೇ ಇರುವುದಿಲ್ಲ. ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗಿರುವುದಿಲ್ಲ. ದೇವರಾದ ಕರ್ತನೇ ಅವರಿಗೆ ಬೆಳಕಾಗಿರುವನು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು. (aiōn )
En aldaar zal geen nacht zijn, en zij zullen geen kaars noch licht der zon van node hebben; want de Heere God verlicht hen; en zij zullen als koningen heersen in alle eeuwigheid. (aiōn )
6 ೬ ಆ ಮೇಲೆ ದೇವದೂತನು ನನಗೆ, “ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳನ್ನು ಪ್ರೇರೇಪಿಸುವ ದೇವರಾದ ಕರ್ತನು ಅತಿಶೀಘ್ರದಲ್ಲಿ ಸಂಭವಿಸತಕ್ಕ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ತನ್ನ ದೇವದೂತನನ್ನು ಕಳುಹಿಸಿಕೊಟ್ಟನು.
En hij zeide tot mij: Deze woorden zijn getrouw en waarachtig; en de Heere, de God der heilige profeten, heeft Zijn engel gezonden, om Zijn dienstknechten te tonen, hetgeen haast moet geschieden.
7 ೭ “ಇಗೋ ನೋಡು! ನಾನುಅತಿಬೇಗನೆ ಬರುತ್ತೇನೆ! ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳನ್ನು ಕೈಕೊಂಡು ನಡೆಯುವವನು ಧನ್ಯನು” ಎಂದು ಹೇಳಿದನು.
Zie, Ik kom haastiglijk zalig is hij, die de woorden der profetie dezes boeks bewaart.
8 ೮ ಯೋಹಾನನೆಂಬ ನಾನೇ, ಈ ಸಂಗತಿಗಳನ್ನು ಕೇಳಿದವನೂ ನೋಡಿದವನೂ ಆಗಿದ್ದೇನೆ. ನಾನು ಈ ಸಂಗತಿಗಳನ್ನು ಕೇಳಿ ಕಂಡಾಗ, ಈ ಸಂಗತಿಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.
En ik, Johannes, ben degene, die deze dingen gezien en gehoord heb. En toen ik ze gehoord en gezien had, viel ik neder om aan te bidden voor de voeten des engels, die mij deze dingen toonde.
9 ೯ ಆದರೆ ಅವನು ನನಗೆ, “ನೀನು ಹಾಗೆ ಮಾಡಬೇಡ! ನೋಡು. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ, ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಕೊಂಡು ನಡೆಯುವವರಿಗೂ ಸೇವೆಯನ್ನು ಮಾಡುವ ಸೇವಕನಾಗಿದ್ದೇನೆ. ದೇವರನ್ನೇ ಆರಾಧಿಸು” ಎಂದು ಹೇಳಿದನು.
En hij zeide tot mij: Zie, dat gij het niet doet; want ik ben uw mededienstknecht, en uwer broederen, der profeten, en dergenen, die de woorden dezes boeks bewaren; aanbid God.
10 ೧೦ ಇದಲ್ಲದೆ ಅವನು ನನಗೆ ಈ ಪುಸ್ತಕದಲ್ಲಿರುವ “ಪ್ರವಾದನಾ ವಾಕ್ಯಗಳಿಗೆ ಮುದ್ರೆಹಾಕಬೇಡ. ಏಕೆಂದರೆ ಇವು ನೆರವೇರುವ ಕಾಲವು ಸಮೀಪವಾಗಿದೆ.
En hij zeide tot mij: Verzegel de woorden der profetie dezes boeks niet; want de tijd is nabij.
11 ೧೧ ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ. ಮೈಲಿಗೆಯಾಗಿರುವವನು ತನ್ನನ್ನು ಇನ್ನು ಮೈಲಿಗೆಯ ಮಾಡಿಕೊಳ್ಳಲಿ, ನೀತಿವಂತನು ಇನ್ನೂ ನೀತಿವಂತನಾಗಲಿ ಮತ್ತು ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ.”
Die onrecht doet, dat hij nog onrecht doe; en die vuil is, dat hij nog vuil worde; en die rechtvaardig is, dat hij nog gerechtvaardigd worde; en die heilig is, dat hij nog geheiligd worde.
12 ೧೨ “ನೋಡು! ನಾನು ಬೇಗನೇ ಬರುತ್ತೇನೆ. ನಾನು ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕಂತೆ ಕೊಡತಕ್ಕಪ್ರತಿಫಲವು ನನ್ನಲ್ಲಿದೆ.
En zie, Ik kom haastiglijk en Mijn loon is met Mij, om een iegelijk te vergelden, gelijk zijn werk zal zijn.
13 ೧೩ ನಾನೇಆದಿಯೂ, ಅಂತ್ಯವೂ, ಮೊದಲನೆಯವನೂ, ಕಡೆಯವನೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ.
Ik ben de Alfa, en de Omega, het Begin en het Einde; de Eerste en de Laatste.
14 ೧೪ “ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆಜೀವವೃಕ್ಷದ ಹಕ್ಕು ಇರುವುದು. ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.
Zalig zijn zij, die Zijn geboden doen, opdat hun macht zij aan den boom des levens, en zij door de poorten mogen ingaan in de stad.
15 ೧೫ ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂಹೊರಗಿರುವರು” ಎಂದು ಹೇಳಿದನು.
Maar buiten zullen zijn de honden, en de tovenaars, en de hoereerders, en de doodslagers, en de afgodendienaars, en een iegelijk, die de leugen liefheeft, en doet.
16 ೧೬ “ಯೇಸುವೆಂಬ ನಾನುನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನುದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂಅವನ ಸಂತತಿಯೂಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.”
Ik, Jezus, heb Mijn engel gezonden om ulieden deze dingen te getuigen in de Gemeenten. Ik ben de Wortel en het geslacht Davids, de blinkende Morgenster.
17 ೧೭ ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.
En de Geest en de Bruid zeggen: Kom! En die het hoort, zegge: Kom! En die dorst heeft, kome; en die wil, neme het water des levens om niet.
18 ೧೮ ಈ ಪುಸ್ತಕದ ಪ್ರವಾದನಾ ವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನೆಂದರೆ, ಇವುಗಳಿಗೆ ಯಾವನಾದರೂ ಹೆಚ್ಚು ಮಾತುಗಳನ್ನು ಕೂಡಿಸಿದರೆ, ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ಕೊಡುವನು.
Want ik betuig aan een iegelijk, die de woorden der profetie dezes boeks hoort: Indien iemand tot deze dingen toedoet, God zal hem toedoen de plagen, die in dit boek geschreven zijn.
19 ೧೯ ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ ಪರಿಶುದ್ಧ ಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು.
En indien iemand afdoet van de woorden des boeks dezer profetie, God zal zijn deel afdoen uit het boek des levens, en uit de heilige stad, en uit hetgeen in dit boek geschreven is.
20 ೨೦ ಈ ವಿಷಯಗಳಲ್ಲಿ ಸಾಕ್ಷಿ ಹೇಳುವವನು, “ಹೌದು ನಾನು ನಿಜವಾಗಿಬೇಗನೇ ಬರುತ್ತೇನೆ!” ಎಂದು ಹೇಳುತ್ತಾನೆ. ಆಮೆನ್. ಕರ್ತನಾದ ಯೇಸುವೇ ಬಾ.
Die deze dingen getuigt, zegt: Ja, Ik kom haastiglijk. Amen. Ja, kom, Heere Jezus!
21 ೨೧ ಕರ್ತನಾದ ಯೇಸುವಿನ ಕೃಪೆಯು ಎಲ್ಲರೊಂದಿಗೆ ಇರಲಿ. ಆಮೆನ್!
De genade van onzen Heere Jezus Christus zij met u allen. Amen.