< ಪ್ರಕಟಣೆ 3 >

1 “ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ, ದೇವರ ಏಳು ಆತ್ಮಗಳನ್ನು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವವನು ಹೇಳುವುದೇನಂದರೆ, ನಿನ್ನ ಕೃತ್ಯಗಳನ್ನು ನಾನು ಬಲ್ಲೆನು. ಜೀವಿಸುವವನು ಎಂಬ ಹೆಸರು ನಿನಗಿದ್ದರೂ ನೀನುಸತ್ತವನಾಗಿರುವೆ.
Escribe al ángel de la iglesia de Sardis. Estas cosas dice el que tiene los siete espíritus de Dios y las siete estrellas: Conozco tus obras, que tienes fama de que vives, pero estás muerta.
2 “ಎಚ್ಚರವಾಗು, ಸಾಯುವ ಹಾಗಿರುವಉಳಿದವುಗಳನ್ನು ಬಲಪಡಿಸು. ಏಕೆಂದರೆ ನನ್ನ ದೇವರ ಮುಂದೆ ನಿನ್ನ ಕೃತ್ಯಗಳಲ್ಲಿ ಒಂದಾದರೂ ಪರಿಪೂರ್ಣವಾದದ್ದೆಂದು ನನಗೆ ಕಂಡುಬರಲಿಲ್ಲ.
Sé vigilante y confirma el resto de las cosas que estaban a punto de morir, porque no hallé tus obras cumplidas delante de mi Dios.
3 ಆದುದರಿಂದ ನೀನು ಹೊಂದಿಕೊಂಡಿದ್ದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದು ಅದನ್ನು ಕಾಪಾಡಿಕೊಂಡು ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ. ನೀನು ಎಚ್ಚರಗೊಳ್ಳದಿದ್ದರೆಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನಲ್ಲಿಗೆ ಬರುವೆನೆಂಬುದು ನಿನಗೆ ತಿಳಿಯುವುದೇ ಇಲ್ಲ.
Recuerda, pues, cómo recibiste y escuchaste, guarda y cambia de mente. Pues si no velas, iré como ladrón, y que de ningún modo sepas a qué hora llegaré sobre ti.
4 ಆದರೂತಮ್ಮ ಅಂಗಿಗಳನ್ನು ಮಲಿನ ಮಾಡಿಕೊಳ್ಳದಿರುವ ಸ್ವಲ್ಪ ಜನರು ಸಾರ್ದಿಸಿನಲ್ಲಿ ನಿನಗಿದ್ದಾರೆ. ಅವರುಯೋಗ್ಯರಾಗಿರುವುದರಿಂದಶುಭ್ರವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು.
Pero tienes unos pocos hombres en Sardis que no mancharon sus ropas, y andarán conmigo de blanco porque son dignos.
5 ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು. ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ, ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು.
El que así vence se cubrirá con ropas blancas, y de ningún modo borraré su nombre del rollo de la vida. Confesaré su nombre delante de mi Padre y delante de sus santos ángeles.
6 ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.
El que tiene oído, escuche lo que dice el Espíritu a las iglesias.
7 “ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ, ಪರಿಶುದ್ಧನೂ, ಸತ್ಯವಂತನೂ, ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ, ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,
Escribe al ángel de la iglesia de Filadelfia. Estas cosas dice el Santo, el Verdadero, el que tiene la llave de David, el que abre y ninguno cierra, y cuando cierra ninguno abre:
8 ನಿನ್ನ ಕೃತ್ಯಗಳನ್ನು ಬಲ್ಲೆನು. ನಿನಗಿರುವ ಶಕ್ತಿ ಕೊಂಚವಾಗಿದ್ದರೂ ನೀನು ನನ್ನ ಹೆಸರನ್ನು ನಿರಾಕರಿಸದೆ, ನನ್ನ ವಾಕ್ಯವನ್ನು ಕಾಪಾಡಿದ್ದರಿಂದ ಇಗೋನಿನ್ನೆದುರಿನಲ್ಲಿ ಒಂದು ಬಾಗಿಲನ್ನು ತೆರೆದಿಟ್ಟಿದ್ದೇನೆ. ಯಾರೂ ಅದನ್ನು ಮುಚ್ಚಲಾರರು.
Conozco tus obras. Observa que coloqué delante de ti una puerta abierta que nadie puede cerrar, porque tienes una pequeña fuerza. Guardaste mi Palabra y no negaste mi Nombre.
9 ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನುಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರುನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು.
Como ves, te entrego [a algunos] de la congregación de Satanás, de los que dicen ser judíos y no son, sino se engañan y mienten. Afirmo que los impulsaré a que vengan y adoren delante de tus pies y reconozcan que Yo te amé.
10 ೧೦ ಸೈರಣೆಯಿಂದಿರಬೇಕೆಂಬನನ್ನ ಆಜ್ಞೆಯನ್ನು ನೀನು ಪಾಲಿಸಿದ್ದರಿಂದ, ಭೂಲೋಕದ ನಿವಾಸಿಗಳೆಲ್ಲರನ್ನು ಪರೀಕ್ಷಿಸುವುದಕ್ಕಾಗಿ ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.
Puesto que guardaste la Palabra de mi paciencia, Yo también te guardaré de la hora de la prueba que viene sobre el mundo entero para probar a los que moran sobre la tierra.
11 ೧೧ ನಾನುಬೇಗನೇ ಬರುತ್ತೇನೆ, ನಿನ್ನ ಕಿರೀಟವನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು.
¡Vengo sin demora! Retén lo que tienes para que ninguno tome tu corona.
12 ೧೨ ಯಾವನು ಜಯಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿಸ್ತಂಭವಾಗಿ ನಿಲ್ಲಿಸುವೆನು. ಅವನು ಎಂದಿಗೂ ಅಲ್ಲಿಂದ ಕದಲುವುದೇ ಇಲ್ಲ. ಇದಲ್ಲದೆನನ್ನ ದೇವರ ಹೆಸರನ್ನು, ನನ್ನದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ, ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.
Al que vence lo estableceré como columna en el Santuario de mi Dios, y que ya nunca jamás salga afuera. Y escribiré sobre él el Nombre de mi Dios y el nombre de la ciudad de mi Dios, la Nueva Jerusalén, la cual desciende del cielo de mi Dios, y mi Nombre nuevo.
13 ೧೩ ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.
El que tiene oído, escuche lo que dice el Espíritu a las iglesias.
14 ೧೪ “ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ, ನಂಬಿಗಸ್ತನೂ, ಸತ್ಯ ಸಾಕ್ಷಿಯೂ, ದೇವರ ಸೃಷ್ಟಿಗೆ ಮೂಲನೂ ಆಗಿರುವ‘ಆಮೆನ್’ ಎಂಬಾತನುಹೇಳುವುದೇನಂದರೆ,
Escribe al ángel de la iglesia de Laodicea. Estas cosas dice el Amén, el Testigo fiel y verdadero, el Principio de la creación de Dios:
15 ೧೫ ನಿನ್ನ ಕೃತ್ಯಗಳನ್ನು ಬಲ್ಲೆನು. ನೀನು ತಣ್ಣಗಿರುವವನೂ ಅಲ್ಲ ಬೆಚ್ಚಗಿರುವವನೂ ಅಲ್ಲ ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇದ್ದಿದ್ದರೆ ಚೆನ್ನಾಗಿತ್ತು.
Conozco tus obras, que no eres frío ni caliente. ¡Ojalá fueras frío o caliente!
16 ೧೬ ನೀನು ಬೆಚ್ಚಗೂ ಅಲ್ಲದೆ ತಣ್ಣಗೂ ಅಲ್ಲದೆ ಉಗುರು ಬೆಚ್ಚಗಿರುವುದರಿಂದ ನಿನ್ನನ್ನು ನನ್ನ ಬಾಯೊಳಗಿಂದ ಉಗಿದು ಬಿಡುವೆನು.
Así que, porque eres tibio, y no caliente ni frío, te vomitaré de mi boca.
17 ೧೭ ನೀನು ನಿನ್ನ ವಿಷಯದಲ್ಲಿನಾನು ಐಶ್ವರ್ಯವಂತನು, ಸಂಪನ್ನನು, ಯಾವುದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ. ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಭಾಗ್ಯನು, ದರಿದ್ರನು, ಕುರುಡನು, ಬೆತ್ತಲೆಯಾಗಿರುವವನೂ ಆಗಿರುವುದನ್ನು ತಿಳಿಯದೇ ಇರುವೆ.
Porque dices: ¡Soy rico! Y: ¡Fui enriquecido! Y: ¡De nada tengo necesidad! No sabes que tú eres el desventurado, miserable, pobre, ciego y desnudo.
18 ೧೮ ನೀನು ಐಶ್ವರ್ಯವಂತನಾಗಲು ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ, ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಅಂಜನವನ್ನೂ ನನ್ನಿಂದಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.
Te aconsejo que compres de Mí oro refinado en fuego para que seas rico, ropas blancas para que te cubras y no sea mostrada la vergüenza de tu desnudez, y colirio para ungir tus ojos a fin de que mires.
19 ೧೯ ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.
Yo reprendo y disciplino a todos los que amo. Por tanto, sé fervoroso y cambia de mente.
20 ೨೦ ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು.
¡Aquí estoy en pie a la puerta y golpeo [con la mano]! Si alguno escucha mi voz y abre la puerta, entraré a él, comeré con él y él conmigo.
21 ೨೧ ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇಜಯಶಾಲಿಯಾದವನಿಗೆನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.
Al que vence le concederé que se siente conmigo en mi trono, como Yo también vencí, y me senté con mi Padre en su trono.
22 ೨೨ ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.”
El que tiene oído, escuche lo que dice el Espíritu a las iglesias.

< ಪ್ರಕಟಣೆ 3 >