< ಪ್ರಕಟಣೆ 5 >
1 ೧ ನಾನು ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ಕಂಡೆನು. ಅದರ ಒಳಭಾಗದಲ್ಲಿಯೂ ಮತ್ತು ಹೊರಭಾಗದಲ್ಲಿಯೂ ಬರೆಯಲ್ಪಟ್ಟಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.
I viděl jsem po pravici sedícího na trůnu knihy popsané vnitř i zevnitř, zapečetěné sedmi pečetmi
2 ೨ ಇದಲ್ಲದೆ ಬಲಿಷ್ಠನಾದ ಒಬ್ಬ ದೇವದೂತನು “ಈ ಸುರುಳಿಯನ್ನು ಬಿಚ್ಚುವುದಕ್ಕೂ ಇದರ ಮುದ್ರೆಗಳನ್ನು ಒಡೆಯುವುದಕ್ಕೂ ಯಾವನು ಯೋಗ್ಯನು?” ಎಂದು ಮಹಾಶಬ್ದದಿಂದ ಕೂಗುವುದನ್ನು ಕಂಡೆನು.
A viděl jsem anděla silného, volajícího hlasem velikým: Kdo jest hoden otevříti knihy tyto a zrušiti pečeti jejich?
3 ೩ ಆದರೆ ಆ ಸುರುಳಿಯನ್ನು ತೆರೆಯುವುದಕ್ಕಾದರೂ ಅದರೊಳಗೆ ನೋಡುವುದಕ್ಕಾದರೂ ಪರಲೋಕದಲ್ಲಿಯಾಗಲಿ, ಭೂಮಿಯಲ್ಲಿಯಾಗಲಿ, ಭೂಮಿಯ ಕೆಳಗಾಗಲಿ ಯಾರಿಂದಲೂ ಆಗಲಿಲ್ಲ.
I nemohl žádný, ani na nebi, ani na zemi, ani pod zemí, otevříti knih, ani pohleděti do nich.
4 ೪ ಸುರುಳಿಯನ್ನು ತೆರೆಯುವುದಕ್ಕಾಗಲಿ ಅದನ್ನು ನೋಡುವುದಕ್ಕಾಗಲಿ ಯೋಗ್ಯನಾದವನು ಒಬ್ಬನೂ ಸಿಕ್ಕಲಿಲ್ಲವೆಂದು ನಾನು ಬಹಳವಾಗಿ ದುಃಖಿಸುತ್ತಿರುವಾಗ.
Pročež já plakal jsem velmi, že není nalezen žádný, kterýž by hoden byl otevříti a čísti tu knihu, ani pohleděti do ní.
5 ೫ ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ ನೋಡು, ಯೂದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜನೂ ಆಗಿರುವ ಒಬ್ಬನು, ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನೂ ತೆರೆಯುವುದಕ್ಕೆ ಜಯವೀರನಾಗಿದ್ದಾನೆ” ಎಂದು ಹೇಳಿದನು.
Tedy jeden z starců dí mi: Neplač. Aj, zvítězilť Lev, ten, kterýž jest z pokolení Judova, kořen Davidův, aby otevřel tu knihu a zrušil sedm pečetí jejích.
6 ೬ ಸಿಂಹಾಸನವು, ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ ಒಂದು ಕುರಿಮರಿಯು ವಧಿಸಲ್ಪಟಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಏನೆಂದರೆ ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳೇ.
I viděl jsem, a aj, mezi trůnem a čtyřmi zvířaty a mezi starci Beránek stojí jako zabitý, maje sedm rohů a sedm očí, jenž jsou sedm Duchů Božích, poslaných na všecku zemi.
7 ೭ ಈತನು ಮುಂದೆ ಬಂದು ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯೊಳಗಿಂದ ಆ ಸುರುಳಿಯನ್ನು ತೆಗೆದುಕೊಂಡನು.
I přišel a vzal knihy z pravice toho, kterýž seděl na trůnu.
8 ೮ ಅದನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಪಾದಕ್ಕೆ ಅಡ್ಡ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.
A jakž vzal knihy, ihned těch čtvero zvířat a těch čtyřmecítma starců padlo před Beránkem, majíce jeden každý z nich harfu a báně zlaté plné vůně, jenž jsou modlitby svatých.
9 ೯ ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.
A zpívali píseň novou, řkouce: Hoden jsi vzíti knihy a otevříti pečeti jejich. Nebo jsi zabit, a vykoupils nás Bohu krví svou ze všelikého pokolení a jazyku a lidu i národu.
10 ೧೦ ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ, ಯಾಜಕರನ್ನಾಗಿಯೂ ಮಾಡಿರುವೆ. ಅವರು ಭೂಮಿಯನ್ನು ಆಳುವರು.”
A učinil jsi nás Bohu našemu krále a kněží, a budeme kralovati na zemi.
11 ೧೧ ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.
I viděl jsem a slyšel hlas andělů mnohých okolo trůnu a zvířat a starců, a byl počet jejich stokrát tisíc tisíců a desetkrát sto tisíců,
12 ೧೨ ಅವರು “ವಧಿಸಲ್ಪಟ್ಟ ಕುರಿಮರಿಯು ಬಲ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಘನತೆ, ಮಹಿಮೆ ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯನು” ಎಂದು ಮಹಾಧ್ವನಿಯಿಂದ ಹಾಡಿದರು.
Řkoucích velikým hlasem: Hodenť jest ten zabitý Beránek vzíti moc, a bohatství, i moudrost, i sílu, i čest, i slávu, i požehnání.
13 ೧೩ ಇದಲ್ಲದೆ ಆಕಾಶದಲ್ಲಿಯೂ, ಭೂಮಿಯ ಮೇಲೆಯೂ, ಭೂಮಿಯ ಕೆಳಗಡೆಯೂ, ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಅಂದರೆ ಭೂಮ್ಯಾಕಾಶ ಸಮುದ್ರಗಳೊಳಗೆ ಇರುವುದೆಲ್ಲವೂ, “ಸಿಂಹಾಸನದ ಮೇಲೆ ಕುಳಿತಿದ್ದಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರ, ಗೌರವ, ಮಹಿಮೆ, ಅಧಿಪತ್ಯಗಳು ಯುಗಯುಗಾಂತರಗಳಲ್ಲಿಯೂ ಇರಲಿ” ಎಂದು ಹೇಳುವುದನ್ನು ಕೇಳಿದೆನು. (aiōn )
Též všecko stvoření, kteréž jest na nebi, i na zemi, i pod zemí, i v moři, i všecko, což v nich jest, slyšel jsem řkoucí: Sedícímu na trůnu a Beránkovi požehnání, čest a sláva i síla na věky věků. (aiōn )
14 ೧೪ ಆಗ ನಾಲ್ಕು ಜೀವಿಗಳು “ಆಮೆನ್” ಅಂದವು ಮತ್ತು ಹಿರಿಯರು ಅಡ್ಡಬಿದ್ದು ಆರಾಧಿಸಿದರು.
Ètvero pak zvířat řeklo: Amen. A těch čtyřmecítma starců padlo, a klaněli se živému na věky věků.