< ಪ್ರಕಟಣೆ 6 >

1 ಕುರಿಮರಿಯಾದಾತನು ಆ ಏಳು ಮುದ್ರೆಗಳಲ್ಲಿ ಒಂದು ಮುದ್ರೆಯನ್ನು ಒಡೆಯುವಾಗ ನಾನು ನೋಡಿದೆನು ಮತ್ತು ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿಯು ಗುಡುಗಿನಂತಿದ್ದ ಸ್ವರದಿಂದ “ಬಾ!” ಎಂದು ಹೇಳುವುದನ್ನು ಕೇಳಿದೆನು.
Tuuno in ceptena te sung pan khat a hon keima in ka mu hi, taciang nganhing li te sung pan khat in, hongpai tan a en in, a ci aw sia vanto nging bang in ka za hi.
2 ನಾನು ನೋಡಲು ಇಗೋ ಒಂದು ಬಿಳಿ ಕುದುರೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನು ಕೈಯಲ್ಲಿ ಒಂದು ಬಿಲ್ಲನ್ನು ಹಿಡಿದಿದ್ದನು. ಅವನಿಗೆ ಒಂದು ಕಿರೀಟವು ಕೊಡಲ್ಪಟ್ಟಿತು. ಅವನು ಜಯಿಸುವವನಾಗಿ ಜಯಿಸುವುದಕ್ಕೋಸ್ಕರ ಹೊರಟನು.
Taciang in ka en a, siphu ngo ka mu hi: siphu tung a to pa in thal nei hi; kumpi tokhum zong pia a; zawna nga in le zawna nga thua tu in kuan khia hi.
3 ಆತನು ಎರಡನೆಯ ಮುದ್ರೆಯನ್ನು ಒಡೆದಾಗ ಎರಡನೆಯ ಜೀವಿಯು “ಬಾ”! ಎಂದು ಹೇಳುವುದನ್ನು ಕೇಳಿದೆನು.
Ceptena ni na a hon ciang in, nganhing ni na in, hongpai tan a en in, hong ci ka za hi.
4 ಆಗ ಕೆಂಪಾಗಿರುವ ಮತ್ತೊಂದು ಕುದುರೆಯು ಹೊರಟು ಬಂದಿತು. ಅದರ ಮೇಲೆ ಸವಾರಿಮಾಡುವವನಿಗೆ ಭೂಲೋಕದಿಂದ ಸಮಾಧಾನವನ್ನು ತೆಗೆದುಬಿಡುವುದಕ್ಕೆ ಅಧಿಕಾರ ಕೊಡಲ್ಪಟ್ಟಿತು, ಇದರಿಂದ ಜನರು ಒಬ್ಬರನ್ನೊಬ್ಬರು ಕೊಲ್ಲುವವರಾದರು. ಅವನಿಗೆ ದೊಡ್ಡದೊಂದು ಖಡ್ಗವೂ ಕೊಡಲ್ಪಟ್ಟಿತು.
Taciang in siphu dang a san khat pusuak a: tua siphu tung a to pa sia leitung pan in kilemna la tu in, vangletna le namsau lianpi pia ahikom, khat le khat ki that uh hi.
5 ಆತನು ಮೂರನೆಯ ಮುದ್ರೆಯನ್ನು ಒಡೆದಾಗ ಮೂರನೆಯ ಜೀವಿಯು “ಬಾ”! ಎಂದು ಹೇಳುವುದನ್ನು ಕೇಳಿದೆನು. ಆಗ, ನಾನು ನೋಡಲು ಇಗೋ, ನನಗೆ ಕಪ್ಪು ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಕೈಯಲ್ಲಿ ತಕ್ಕಡಿ ಇತ್ತು.
Ceptena thum na a hon zawkciang in, nganhing thum na in, hongpai tan a en in, hong ci ka za hi. Ka et ciang in siphu vom ka mu a; a tung a to pa in a khut ah toaikhai khat nei hi.
6 ಆ ಮೇಲೆ ನಾಲ್ಕು ಜೀವಿಗಳ ಮಧ್ಯದಿಂದ ಒಬ್ಬನ ಧ್ವನಿಯು ಹೊರಟ ಹಾಗೆ ಕೇಳಿದೆನು. ಒಂದು “ದೀನಾರಿಗೆ ಒಂದು ಸೇರು ಗೋದಿ ಮತ್ತು ಒಂದು ದೀನಾರಿಗೆ ಮೂರು ಸೇರು ಜವೆಗೋದಿ, ಆದರೆ ಎಣ್ಣೆಯನ್ನು ಮತ್ತು ದ್ರಾಕ್ಷಾರಸವನ್ನು ಕೆಡಿಸಬೇಡ” ಎಂದು ಹೇಳಿತು.
Taciang nganhing li te sung pan in a pau na aw sia, zungtang hai khat sia denari khat, tangpi hai thum ciang in denari khat in ki lei thei hi; sathau le sapittui zong sutha heak in, a ci ka za hi.
7 ಆತನು ನಾಲ್ಕನೆಯ ಮುದ್ರೆಯನ್ನು ಒಡೆದಾಗ ನಾಲ್ಕನೆಯ ಜೀವಿಯು “ಬಾ”! ಎನ್ನುವ ಶಬ್ದವನ್ನು ಕೇಳಿದೆನು.
Ceptena li na a hon zawkciang in, nganhing a li na in, hongpai tan a en in, hong ci na aw ka za hi.
8 ಆಗ ನಾನು ನೋಡಲು ಇಗೋ, ನಸು ಹಸಿರು ಬಣ್ಣದ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಹೆಸರು ಮೃತ್ಯು ಎಂದು. ಮೃತ್ಯುಲೋಕ ಅವನನ್ನು ಹಿಂಬಾಲಿಸುತ್ತಿತ್ತು. ಅವನಿಗೆ ಭೂಮಿಯ ನಾಲ್ಕನೇ ಒಂದು ಭಾಗವನ್ನು ಕತ್ತಿಯಿಂದಲೂ, ಕ್ಷಾಮದಿಂದಲೂ, ಅಂಟುರೋಗದಿಂದಲೂ, ಭೂಮಿಯ ಕಾಡುಮೃಗಗಳಿಂದಲೂ ಕೊಂದುಹಾಕುವುದಕ್ಕೆ ಅಧಿಕಾರ ಕೊಡಲಾಗಿತ್ತು. (Hadēs g86)
Ka et ciang in siphu puang khat ka mu hi: taciang a tung a to pa min sia thina hi a, Hell in zui hi. Amate tung ah leitung khen li sua khen khat te sia namsau, ngilkialna, thina le leitung nganhing te taw that tu in vangletna pia hi. (Hadēs g86)
9 ಆತನು ಐದನೆಯ ಮುದ್ರೆಯನ್ನು ಒಡೆದಾಗ, ದೇವರ ವಾಕ್ಯದ ನಿಮಿತ್ತವಾಗಿಯೂ, ತಮಗಿದ್ದ ದೃಢವಾದ ಸಾಕ್ಷಿಯ ನಿಮಿತ್ತವಾಗಿಯೂ, ಹತರಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವುದನ್ನು ಕಂಡೆನು.
Ceptena nga na a hon zawkciang in, Pathian thu le tetti panna atu in thalup a thuak te i thaa te sia biaktau nuai ah ka mu hi:
10 ೧೦ ಅವರು, “ಸರ್ವಶಕ್ತನಾದ ಕರ್ತನೇ, ಪರಿಶುದ್ಧನೂ, ಸತ್ಯವಂತನೂ, ಆಗಿರುವಾತನೇ, ನಮ್ಮ ರಕ್ತವನ್ನು ಸುರಿಸಿದ ಭೂಲೋಕ ನಿವಾಸಿಗಳಿಗೆ ನೀನು ಇನ್ನೆಷ್ಟು ಸಮಯ ನ್ಯಾಯತೀರಿಸದೆಯೂ, ಪ್ರತಿದಂಡನೆ ಮಾಡದೆಯೂ ಇರುವಿ?” ಎಂದು ಮಹಾಶಬ್ದದಿಂದ ಕೂಗಿದರು.
Amate sia a ngingtak in au uh a, maw a thiangtho le a maan Topa awng, leitung a om te sia ka thisan atu thukhen ngawl le thukkik ngawl in bangtanvei ngei lai tu ni ziam? ci hi.
11 ೧೧ ಆಗ ಅವರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ಬಿಳೀ ನಿಲುವಂಗಿಯು ಕೊಡಲ್ಪಟ್ಟಿತು ಇನ್ನೂ ಸ್ವಲ್ಪ ಸಮಯ ವಿಶ್ರಮಿಸಿಕೊಂಡಿರಬೇಕು. ನಿಮ್ಮ ಹಾಗೆ ವಧಿಸಲ್ಪಡಬೇಕಾಗಿರುವ ನಿಮ್ಮ ಸಹೋದರರ ಮತ್ತು ನಿಮ್ಮ ಜೊತೆ ಸೇವಕರ ಸಂಖ್ಯೆ ಪೂರ್ಣವಾಗುವ ತನಕ ಕಾದಿರಬೇಕೆಂದು ಅವರಿಗೆ ಅಪ್ಪಣೆಯಾಯಿತು.
Amate sia puanpak a tual pia tek a; naseppui le suapui dang thalup a thuak lai tu te a cin mateng, hun tomno sung tawlnga hi tu in son hi.
12 ೧೨ ಆತನು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ಮಹಾಭೂಕಂಪ ಉಂಟಾಯಿತು. ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು ಮತ್ತು ಪೂರ್ಣಚಂದ್ರನು ರಕ್ತದಂತಾದನು.
Ceptena a luk na a hon ciang in ka en a, nasiatak in zinling hi; taciang ni zong sam taw a kitak khau ip bang in vomcip a, tha zong thisan bang suak hi;
13 ೧೩ ಅಂಜೂರದ ಮರವು ಬಿರುಗಾಳಿಯಿಂದ ಬಡಿಯಲ್ಪಟ್ಟು ತನ್ನ ಕಾಯಿಗಳನ್ನು ಉದುರಿಸುವ ಹಾಗೆ ಆಕಾಶದಿಂದ ನಕ್ಷತ್ರಗಳು ಭೂಮಿಗೆ ಉದುರಿ ಬಿದ್ದವು.
Vantung aksi te zong leitung ah theikung pan in a zun te khuapi hui in a thin bang in taksuk vaphung hi.
14 ೧೪ ಆಕಾಶವು ಸುರುಳಿಯಂತೆ ಸುತ್ತಲ್ಪಟ್ಟು ಮರೆಯಾಯಿತು. ಎಲ್ಲಾ ಬೆಟ್ಟಗಳು ಮತ್ತು ದ್ವೀಪಗಳು ತಮ್ಮತಮ್ಮ ಸ್ಥಳಗಳಿಂದ ಕದಲಿದವು.
Van sia laidal zial bang in len a; mual le tuikul te zong amate om mun tek pan in ki khin siat hi.
15 ೧೫ ಆಗ ಭೂರಾಜರುಗಳೂ, ಮಹಾಪುರುಷರೂ, ಸಹಸ್ರಾಧಿಪತಿಗಳೂ, ಐಶ್ವರ್ಯವಂತರೂ, ಪರಾಕ್ರಮಶಾಲಿಗಳೂ, ಎಲ್ಲಾ ದಾಸರೂ ಮತ್ತು ಸ್ವತಂತ್ರರೂ ಬೆಟ್ಟಗಳ ಗವಿಗಳಿಗೂ ಮತ್ತು ಬಂಡೆಗಳ ಸಂದುಗಳಿಗೂ ಓಡಿಹೋಗಿ ತಮ್ಮನ್ನು ಮರೆಮಾಡಿಕೊಂಡರು.
Taciang in leitung ah kumpi te, mi thupi te, mihau te, ngalkap mang lianbel te, a thahat te, sila le a suakta te kibangtek in kuahawng le mualtung lianglak theampo ah bu siat uh a;
16 ೧೬ ಬೆಟ್ಟಗಳಿಗೂ ಬಂಡೆಗಳಿಗೂ, “ನಮ್ಮ ಮೇಲೆ ಬೀಳಿರಿ!, ಸಿಂಹಾಸನದ ಮೇಲೆ ಕುಳಿತಿರುವಾತನ ಮುಖವನ್ನು ನೋಡದ ಹಾಗೆಯೂ ಕುರಿಮರಿಯ ಕೋಪಾಗ್ನಿಯು ತಟ್ಟದ ಹಾಗೆಯೂ ನಮ್ಮನ್ನು ಮರೆಮಾಡಿರಿ.
Mual te le suangpi te awng hong del tavun a, kumpi tokhum tung a topa mai le Tuuno thin-ukna pan in hong seal tavun:
17 ೧೭ ಏಕೆಂದರೆ ಅವರ ಕೋಪಾಗ್ನಿಯು ಕಾಣಿಸುವ ಮಹಾ ದಿನವು ಬಂದಿದೆ, ಅದರ ಮುಂದೆ ನಿಲ್ಲುವುದಕ್ಕೆ ಯಾರಿಂದಾದೀತು?” ಎಂದು ಹೇಳಿದರು.
Banghangziam cile Ama thin-ukna ni lianpi hong theng zo hi; akua in thuakzo tu ziam? ci uh hi.

< ಪ್ರಕಟಣೆ 6 >