< ಪ್ರಕಟಣೆ 7 >
1 ೧ ಇದಾದ ನಂತರ ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಅಥವಾ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ಚತುರ್ದಿಕ್ಕುಗಳ ಗಾಳಿಗಳನ್ನು ತಡೆಹಿಡಿದಿರುವುದನ್ನು ಕಂಡೆನು.
Baada ya hayo nikawaona malaika wanne wamesimama katika pembe nne za dunia wakishika pepo nne za dunia ili upepo usivume hata kidogo: wala katika nchi, wala baharini, wala kwenye miti.
2 ೨ ಇದಲ್ಲದೆ ಮತ್ತೊಬ್ಬ ದೇವದೂತನು ಜೀವಸ್ವರೂಪನಾದ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಣದಿಕ್ಕಿನಿಂದ ಏರಿಬರುವುದನ್ನು ಕಂಡೆನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನುಂಟುಮಾಡಲು ಅನುಮತಿ ಹೊಂದಿದ ಆ ನಾಲ್ಕು ಮಂದಿ ದೇವದೂತರಿಗೆ,
Kisha nikamwona malaika mwingine akipanda juu kutoka mashariki akiwa na mhuri wa Mungu aliye hai. Akapaaza sauti na kuwaambia hao malaika wanne waliokabidhiwa jukumu la kuiharibu nchi na bahari,
3 ೩ “ನಾವು ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ಮುದ್ರೆ ಒತ್ತುವ ತನಕ ಭೂಮಿಯನ್ನಾಗಲಿ, ಸಮುದ್ರವನ್ನಾಗಲಿ, ಮರಗಳನ್ನಾಗಲಿ ನಾಶಮಾಡಬೇಡಿರಿ” ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.
“Msiharibu nchi, wala bahari, wala miti, mpaka tutakapokwisha wapiga mhuri watumishi wa Mungu wetu katika paji la uso.”
4 ೪ ಮುದ್ರೆ ಒತ್ತಿಸಿಕೊಂಡವರ ಸಂಖ್ಯೆಯು ಪ್ರಸಿದ್ಧವಾದಾಗ ಅದನ್ನು ನಾನು ಕೇಳಿಸಿಕೊಂಡೆನು. ಇಸ್ರಾಯೇಲ್ಯರ ಪ್ರತಿಯೊಂದು ಕುಲಕ್ಕೆ ಸೇರಿದವರು ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ.
Kisha nikasikia idadi ya hao waliopigwa mhuri: Watu mia moja arobaini na nne elfu wa makabila yote ya watu wa Israeli.
5 ೫ ಯೂದನ ಕುಲದವರಲ್ಲಿ ಮುದ್ರೆಹಾಕಿಸಿಕೊಂಡವರು ಹನ್ನೆರಡು ಸಾವಿರ, ರೂಬೇನನ ಕುಲದವರಲ್ಲಿ ಹನ್ನೆರಡು ಸಾವಿರ, ಗಾದ್ ಕುಲದವರಲ್ಲಿ ಹನ್ನೆರಡು ಸಾವಿರ,
Kabila la Yuda walikuwa watu kumi na mbili elfu; kabila la Reubeni, kumi na mbili elfu, kabila la Gadi, kumi na mbili elfu;
6 ೬ ಅಷೇರನ ಕುಲದವರಲ್ಲಿ ಹನ್ನೆರಡು ಸಾವಿರ, ನಫ್ತಾಲಿಯ ಕುಲದವರಲ್ಲಿ ಹನ್ನೆರಡು ಸಾವಿರ, ಮನಸ್ಸೆಯ ಕುಲದವರಲ್ಲಿ ಹನ್ನೆರಡು ಸಾವಿರ,
Kabila la Asheri, kumi na mbili elfu; kabila la Naftali, kumi na mbili elfu; kabila la Manase, kumi na mbili elfu;
7 ೭ ಸಿಮೆಯೋನನ ಕುಲದವರಲ್ಲಿ ಹನ್ನೆರಡು ಸಾವಿರ, ಲೇವಿಯ ಕುಲದವರಲ್ಲಿ ಹನ್ನೆರಡು ಸಾವಿರ, ಇಸ್ಸಕಾರನ ಕುಲದವರಲ್ಲಿ ಹನ್ನೆರಡು ಸಾವಿರ,
kabila la Simeoni, kumi na mbili elfu, kabila la Lawi, kumi na mbili elfu, kabila la Isakari, kumi na mbili elfu;
8 ೮ ಜೆಬುಲೋನನ ಕುಲದವರಲ್ಲಿ ಹನ್ನೆರಡು ಸಾವಿರ, ಯೋಸೇಫನ ಕುಲದವರಲ್ಲಿ ಹನ್ನೆರಡು ಸಾವಿರ, ಬೆನ್ಯಾಮೀನನ ಕುಲದವರಲ್ಲಿ ಮುದ್ರೆ ಹಾಕಿಸಿಕೊಂಡವರು ಹನ್ನೆರಡು ಸಾವಿರ ಮಂದಿ ಇದ್ದರು.
kabila la Zabuloni, kumi na mbili elfu; kabila la Yosefu, kumi na mbili elfu, na kabila la Benyamini, kumi na mbili elfu.
9 ೯ ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.
Kisha nikatazama, nikaona umati mkubwa wa watu wasiohesabika: watu wa kila taifa, ukoo, jamaa na lugha. Nao walikuwa wamesimama mbele ya kiti cha enzi na mbele ya Mwanakondoo, wakiwa wamevaa mavazi meupe na kushika matawi ya mitende mikononi mwao.
10 ೧೦ ಅವರು, “ರಕ್ಷಣೆಯೆಂಬುದು ಸಿಂಹಾಸನಾರೂಢನಾದ ನಮ್ಮ ದೇವರ ಮತ್ತು ಯಜ್ಞದ ಕುರಿಮರಿಯಾದಾತನಿಗೆ ಸೇರಿದ್ದು” ಎಂದು ಮಹಾಧ್ವನಿಯಿಂದ ಕೂಗಿದರು.
Wakapaaza sauti: “Ukombozi wetu watoka kwa Mungu wetu aketiye juu ya kiti cha enzi, na kutoka kwa Mwanakondoo!”
11 ೧೧ ಅಷ್ಟರಲ್ಲಿ ದೇವದೂತರೆಲ್ಲರೂ ಸಿಂಹಾಸನದ ಸುತ್ತಲು ನಿಂತಿದ್ದರು. ಹಿರಿಯರು ಮತ್ತು ನಾಲ್ಕು ಜೀವಿಗಳು ಇವುಗಳ ಸುತ್ತಲೂ ನಿಂತುಕೊಂಡಿದ್ದರು ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು,
Malaika wote wakasimama kukizunguka kiti cha enzi, wazee na vile viumbe hai vinne. Wakaanguka kifudifudi mbele ya kiti cha enzi, wakamwabudu Mungu,
12 ೧೨ “ಆಮೆನ್! ಸ್ತೋತ್ರವೂ, ಮಹಿಮೆಯು, ಜ್ಞಾನವೂ ಕೃತಜ್ಞತಾಸ್ತುತಿಯೂ, ಗೌರವವೂ, ಶಕ್ತಿಯೂ, ಪರಾಕ್ರಮವೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್!” ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು. (aiōn )
wakisema, “Amina! Sifa, utukufu, hekima, shukrani, heshima, uwezo na nguvu viwe kwa Mungu wetu, milele na milele! Amina!” (aiōn )
13 ೧೩ ಆಗ ಇದನ್ನು ನೋಡಿ ಹಿರಿಯರಲ್ಲಿ ಒಬ್ಬನು, “ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಎಲ್ಲಿಂದ ಬಂದರು” ಎಂದು ನನ್ನನ್ನು ಕೇಳಲು, “ಅಯ್ಯಾ ನೀನೇ ಬಲ್ಲೆ” ಎಂದೆನು.
Mmoja wa hao wazee akaniuliza, “Hawa waliovaa mavazi meupe ni watu gani? Na wametoka wapi?”
14 ೧೪ ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.
Nami nikamjibu, “Mheshimiwa, wewe wajua!” Naye akaniambia, “Hawa ni wale waliopita salama katika ule udhalimu mkuu. Waliyaosha mavazi yao katika damu ya Mwanakondoo, yakawa meupe kabisa.
15 ೧೫ ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳೂ ಆತನಿಗೆ ಆರಾಧನೆ ಮಾಡುತ್ತಾ ಇದ್ದಾರೆ. ಸಿಂಹಾಸನದ ಮೇಲೆ ಕುಳಿತಿರುವಾತನೇ ಅವರಿಗೆ ಬಿಡಾರವಾಗಿರುವನು.
Ndiyo maana wako mbele ya kiti cha enzi cha Mungu. Humtumikia Mungu mchana na usiku katika Hekalu lake; naye aketiye juu ya kiti cha enzi atatandaza hema lake juu yao kuwalinda.
16 ೧೬ ಇನ್ನೆಂದಿಗೂ ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಆಗುವುದಿಲ್ಲ, ಅವರಿಗೆ ಸೂರ್ಯನ ಬಿಸಿಲಾದರೂ, ಯಾವ ಝಳವಾದರೂ ತಟ್ಟುವುದಿಲ್ಲ.
Hawataona tena njaa wala kiu; jua wala joto kali halitawachoma tena,
17 ೧೭ ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.
kwa sababu Mwanakondoo aliye katikati ya kiti cha enzi atakuwa mchungaji wao, naye atawaongoza kwenye chemchemi za maji ya uzima. Naye Mungu atayafuta machozi yote machoni mwao.”