< ಪ್ರಕಟಣೆ 8 >

1 ಆತನು ಏಳನೆಯ ಮುದ್ರೆಯನ್ನು ಒಡೆದಾಗ ಸುಮಾರು ಅರ್ಧಗಂಟೆ ಕಾಲ ಪರಲೋಕದಲ್ಲಿ ನಿಶ್ಯಬ್ದವಾಯಿತು.
Коли [Агнець] відкрив сьому печатку, на небі десь на пів години настала тиша.
2 ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ದೇವದೂತರನ್ನು ಕಂಡೆನು. ಅವರಿಗೆ ಏಳು ತುತ್ತೂರಿಗಳು ಕೊಡಲ್ಪಟ್ಟವು.
І я побачив сім ангелів, що стоять перед Богом; і їм було дано сім сурм.
3 ಅನಂತರ ಮತ್ತೊಬ್ಬ ದೇವದೂತನು ಬಂದನು, ಅವನು ಚಿನ್ನದ ಧೂಪಾರತಿ ಹಿಡಿದುಕೊಂಡು ಯಜ್ಞವೇದಿಯ ಬಳಿಯಲ್ಲಿ ನಿಂತನು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳೊಂದಿಗೆ ಸಮರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವು ಕೊಡಲ್ಪಟ್ಟಿತು.
Інший ангел, який мав золоту кадильницю, прийшов і став біля жертовника. Йому було дано багато пахощів із молитвами святих на золотому жертовнику перед престолом.
4 ಆಗ ಧೂಪದ ಹೊಗೆಯು ದೇವದೂತನ ಕೈಯಿಂದ ಹೊರಟು ದೇವಜನರ ಪ್ರಾರ್ಥನೆಗಳೊಂದಿಗೆ ಸೇರಿ ದೇವರ ಸನ್ನಿಧಿಗೆ ಏರಿಹೋಯಿತು.
Дим ладану разом із молитвами святих піднімався до Бога з руки ангела.
5 ತರುವಾಯ ಆ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಯ ಮೇಲೆ ಎಸೆದನು. ಆಗ ಗರ್ಜಿಸುವ ಗುಡುಗು, ಮಹಾಶಬ್ದಗಳು, ಮಿಂಚು, ಭೂಕಂಪವು ಉಂಟಾದವು.
Тоді ангел узяв кадильницю, наповнив її вогнем із жертовника й кинув на землю; і пролунали громи та голоси, спалахнули блискавки й стався землетрус.
6 ಏಳು ತುತ್ತೂರಿಗಳನ್ನು ಹಿಡಿದಿರುವ ಏಳು ಮಂದಿ ದೇವದೂತರು ತುತ್ತೂರಿಗಳನ್ನು ಊದಲು ಸಿದ್ಧರಾದರು.
Тоді сім ангелів, які мали сім сурм, підготувалися сурмити.
7 ಮೊದಲನೆಯ ದೇವದೂತನು ತನ್ನ ತುತ್ತೂರಿಯನ್ನೂದಲು ರಕ್ತ ಮಿಶ್ರಿತವಾದ ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿಯಿತು. ಭೂಮಿಯ ಮೂರರಲ್ಲಿ ಒಂದು ಭಾಗವು ಸುಟ್ಟು ಹೋಯಿತು. ಮರಗಳಲ್ಲಿ ಮೂರರಲ್ಲೊಂದು ಭಾಗ ಸುಟ್ಟು ಹೋದವು. ಹಸಿರು ಹುಲ್ಲೆಲ್ಲಾ ಸುಟ್ಟು ಹೋಯಿತು.
[Коли] перший ангел засурмив, то з’явилися град та вогонь, змішані з кров’ю, і все це було кинуто на землю. І вигоріла третина землі, третина дерев і вся зелена трава.
8 ಎರಡನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಬೆಂಕಿಯಿಂದ ಉರಿಯುತ್ತಿರುವ ದೊಡ್ಡ ಬೆಟ್ಟವೋ ಎಂಬಂತಿರುವ ವಸ್ತುವನ್ನು ಸಮುದ್ರಕ್ಕೆ ಎಸೆಯಲಾಯಿತು. ಆಗ ಸಮುದ್ರದೊಳಗೆ ಮೂರರಲ್ಲಿ ಒಂದು ಭಾಗ ರಕ್ತವಾಯಿತು.
[Коли] другий ангел засурмив, щось схоже на величезну гору, охоплену вогнем, було кинуто в море. І третина моря перетворилася на кров,
9 ಸಮುದ್ರದ ಜೀವಿಗಳಲ್ಲಿ ಮೂರರಲ್ಲಿ ಒಂದು ಭಾಗವು ಸತ್ತವು ಮತ್ತು ಹಡಗುಗಳಲ್ಲಿ ಮೂರರಲ್ಲಿ ಒಂದು ಭಾಗವು ನಾಶವಾದವು.
третина живих істот у морі загинула й третина кораблів була знищена.
10 ೧೦ ಮೂರನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಪಂಜಿನಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶದಿಂದ ನದಿಗಳ ಹಾಗೂ ನೀರಿನ ಬುಗ್ಗೆಗಳ ಮೂರರಲ್ಲಿ ಒಂದು ಭಾಗದ ಮೇಲೆ ಬಿದ್ದಿತು.
[Коли] третій ангел засурмив, то велика зірка, палаючи, як смолоскип, упала з неба на третину річок і джерела води.
11 ೧೧ ಆ ನಕ್ಷತ್ರದ ಹೆಸರು ಮಾಚಿಪತ್ರೆ. ನೀರಿನ ಮೂರರಲ್ಲಿ ಒಂದು ಭಾಗ ಮಾಚಿಪತ್ರೆಯಂತೆ ವಿಷವಾಯಿತು ಮತ್ತು ಆ ನೀರು ಕಹಿಯಾದ್ದರಿಂದ ಅನೇಕರು ಸತ್ತುಹೋದರು.
Ім’я зірки – Полин. І третина вод стала як полин, і багато людей загинуло, бо вода стала гіркою.
12 ೧೨ ನಾಲ್ಕನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು, ಆಗ ಸೂರ್ಯನ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಯಿತು. ಅದೇ ಪ್ರಕಾರ ಚಂದ್ರನಲ್ಲಿ ಮತ್ತು ನಕ್ಷತ್ರಗಳಲ್ಲಿ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಗಿ ಹೋಯಿತು. ಇದರಿಂದ ಹಗಲಿನಲ್ಲಿ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಕತ್ತಲಾಗಿ, ರಾತ್ರಿಯ ಹಾಗೆಯೇ ಆಯಿತು.
[Коли] четвертий ангел засурмив, третина Сонця, третина Місяця й третина зірок потемніла. Третина дня була без світла, як і третина ночі.
13 ೧೩ ಆ ಮೇಲೆ ನಾನು ನೋಡಲಾಗಿ ಇಗೋ ಒಂದು ಹದ್ದು ಆಕಾಶದ ಮಧ್ಯದಲ್ಲಿ ಹಾರಾಡುತ್ತಿತ್ತು, ಅದರ ಕೂಗು ನನಗೆ ಕೇಳಿಸಿತು. ಅದು, “ಇನ್ನು ಉಳಿದ ಮೂವರು ದೇವದೂತರು ತುತ್ತೂರಿಯನ್ನು ಊದುವಾಗ ಭೂನಿವಾಸಿಗಳಿಗೆ ಕೇಡು, ಕೇಡು, ಕೇಡು” ಎಂದು ಮಹಾಶಬ್ದದಿಂದ ಕೂಗುವುದನ್ನು ಕೇಳಿಸಿಕೊಂಡೆನು.
І я побачив та почув, як орел, що летів посеред неба, гучно вигукнув: «Горе! Горе! Горе мешканцям землі від звуку сурм інших трьох ангелів, які мають засурмити!»

< ಪ್ರಕಟಣೆ 8 >