< ಪ್ರಕಟಣೆ 9 >
1 ೧ ಐದನೆಯ ದೇವದೂತನು ತುತ್ತೂರಿಯನ್ನೂದಿದಾಗ ಆಕಾಶದಿಂದ ಭೂಮಿಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ಅಧೋಲೋಕಕ್ಕೆ ಹೋಗುವ ಕೂಪದ ಬೀಗದ ಕೈ ಕೊಡಲ್ಪಟ್ಟಿತು. (Abyssos )
Și al cincilea înger a trâmbițat și am văzut că o stea a căzut din cer pe pământ; și lui i-a fost dată cheia gropii fără fund. (Abyssos )
2 ೨ ಅವನು ಅಧೋಲೋಕದ ಕೂಪವನ್ನು ತೆರೆಯಲು ಕೂಪದಿಂದ ಬಂದ ಹೊಗೆ ದೊಡ್ಡ ಕುಲುಮೆಯ ಹೊಗೆಯಂತೆ ಏರಿತು. ಕೂಪದ ಹೊಗೆಯಿಂದ ಸೂರ್ಯನೂ ಆಕಾಶವೂ ಕಪ್ಪಾಗಿ ಹೋದವು. (Abyssos )
Și a deschis groapa fără fund; și a urcat un fum din groapă ca fumul unui mare cuptor; și soarele și văzduhul au fost întunecate din cauza fumului gropii. (Abyssos )
3 ೩ ಹೊಗೆಯೊಳಗಿಂದ ಮಿಡತೆಗಳು ಭೂಮಿಯ ಮೇಲೆ ಹೊರಟುಬಂದವು. ಭೂಮಿಯಲ್ಲಿರುವ ಚೇಳುಗಳಿಗಿರುವಂಥ ಶಕ್ತಿಯನ್ನು ಅವುಗಳಿಗೆ ಕೊಡಲಾಯಿತು.
Și din fum au ieșit lăcuste pe pământ; și le-a fost dată putere așa cum au putere scorpionii pământului.
4 ೪ ಭೂಮಿಯ ಮೇಲಿರುವ ಹುಲ್ಲನ್ನಾಗಲಿ ಯಾವ ಹಣ್ಣು ತರಕಾರಿಗಳನ್ನಾಗಲಿ, ಮರವನ್ನಾಗಲಿ ನಾಶಮಾಡದೆ, ಹಣೆಯ ಮೇಲೆ ದೇವರ ಮುದ್ರೆಯಿಲ್ಲದವರಾದ ಮನುಷ್ಯರನ್ನು ಮಾತ್ರ ನಾಶಮಾಡಬಹುದೆಂದು ಅವುಗಳಿಗೆ ಅಪ್ಪಣೆಯಾಯಿತು.
Și li s-a poruncit să nu vatăme iarba pământului, nici vreo verdeață, nici vreun copac, decât numai pe acei oameni care nu au sigiliul lui Dumnezeu pe frunțile lor.
5 ೫ ಅವರನ್ನು ಕೊಲ್ಲದೆ ಐದು ತಿಂಗಳುಗಳವರೆಗೂ ಹಿಂಸಿಸುವುದಕ್ಕೆ ಅಧಿಕಾರವು ದೊರೆಯಿತು. ಅವರಿಗುಂಟಾದ ಯಾತನೆಯು ಮನುಷ್ಯನಿಗೆ ಚೇಳು ಕಡಿತದಿಂದುಂಟಾಗುವ ಯಾತನೆಗೆ ಸಮಾನವಾಗಿತ್ತು.
Și le-a fost dat să nu îi ucidă, ci să fie chinuiți cinci luni; și chinul lor era ca și chinul scorpionului când înțeapă un om.
6 ೬ ಆ ಕಾಲದಲ್ಲಿ ಮನುಷ್ಯರು ಮರಣವನ್ನು ಬಯಸುವರು, ಆದರೆ ಅದು ಪ್ರಾಪ್ತವಾಗುವುದಿಲ್ಲ. ಸಾಯಬೇಕೆಂದು ಕೋರುವರು, ಆದರೆ ಮೃತ್ಯುವು ಅವರನ್ನು ಬಿಟ್ಟು ಓಡಿಹೋಗುವುದು.
Și în acele zile oamenii vor căuta moartea și nu o vor găsi; și vor dori să moară și moartea va fugi de la ei.
7 ೭ ಆ ಮಿಡತೆಗಳ ರೂಪವು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ರೂಪದಂತೆ ಇತ್ತು. ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳಂತೆಯೂ, ಅವುಗಳ ಮುಖಗಳು ಮನುಷ್ಯರ ಮುಖಗಳಂತೆಯೂ ಇದ್ದವು.
Și înfățișarea lăcustelor era asemănătoare cailor pregătiți pentru bătălie; și pe capetele lor erau ca niște coroane asemănătoare aurului și fețele lor erau ca fețele oamenilor.
8 ೮ ಅವುಗಳ ಕೂದಲು ಸ್ತ್ರೀಯರ ಕೂದಲಿನಂತೆಯೂ ಹಲ್ಲುಗಳು ಸಿಂಹದ ಹಲ್ಲುಗಳಂತೆಯೂ ಇದ್ದವು.
Și aveau păr ca părul femeilor și dinții lor erau ca dinții leilor.
9 ೯ ಅವುಗಳಿಗೆ ಉಕ್ಕಿನ ಕವಚಗಳಂತಿದ್ದ ಕವಚಗಳು ಇದ್ದವು. ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ರಥಾಶ್ವಗಳ ಶಬ್ದದಂತೆ ಇತ್ತು.
Și aveau platoșe ca platoșele de fier; și sunetul aripilor lor era ca sunetul carelor cu mulți cai, alergând spre luptă.
10 ೧೦ ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ, ಕೊಂಡಿಗಳೂ ಇದ್ದವು. ಮನುಷ್ಯರನ್ನು ಐದು ತಿಂಗಳುಗಳವರೆಗೂ ಪೀಡಿಸುವ ಸಾಮರ್ಥ್ಯವು ಅವುಗಳ ಬಾಲಗಳಲ್ಲಿಯೇ ಇರುವುದು.
Și aveau cozi asemănătoare scorpionilor și erau ace în cozile lor; și puterea lor era să vatăme oamenii cinci luni.
11 ೧೧ ಅಧೋಲೋಕದ ಅಧಿಕಾರಿಯಾದ ದೂತನೇ ಅವುಗಳನ್ನಾಳುವ ಅರಸನು. ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ, ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರುಂಟು. (Abyssos )
Și aveau peste ele un împărat, care este îngerul gropii fără fund, al cărui nume în evreiește este Abadon, iar în greacă are numele Apolion. (Abyssos )
12 ೧೨ ಮೊದಲನೆಯ ವಿಪತ್ತು ಕಳೆದು ಹೋಯಿತು. ಇಗೋ, ಇನ್ನೂ ಎರಡು ವಿಪತ್ತುಗಳು ಅದರ ಬೆನ್ನಹಿಂದೆಯೇ ಬಂದವು.
Un vai a trecut; iată, vin încă două vaiete după acestea.
13 ೧೩ ಆರನೆಯ ದೇವದೂತನು ತುತ್ತೂರಿಯನ್ನೂದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ಯಜ್ಞವೇದಿಯ ಕೊಂಬುಗಳಿಂದ ಹೊರಟ ಒಂದು ಧ್ವನಿಯನ್ನು ಕೇಳಿದೆನು.
Și al șaselea înger a trâmbițat și am auzit o voce din cele patru coarne ale altarului de aur care este înaintea lui Dumnezeu,
14 ೧೪ ಅದು ತುತ್ತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ, “ಯೂಫ್ರೆಟಿಸ್ ಎಂಬ ಮಹಾ ನದಿಯ ಬಳಿಯಲ್ಲಿ ಕಟ್ಟಿಹಾಕಿರುವ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು” ಎಂದು ಹೇಳಿತು.
Spunând celui de al șaselea înger care avea trâmbița: Dezleagă pe cei patru îngeri care sunt legați la râul cel mare, Eufrat.
15 ೧೫ ಆಗ ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರಮಾಡುವುದಕ್ಕಾಗಿ ಗಂಟೆ, ದಿನ, ತಿಂಗಳು, ವರ್ಷ ಎಲ್ಲವನ್ನೂ ನಿಗದಿಮಾಡಲಾಗಿತ್ತು. ಅದಕ್ಕೆ ಸಿದ್ಧರಿದ್ದ ಆ ನಾಲ್ಕು ಮಂದಿ ದೇವದೂತರನ್ನು ಬಿಡುಗಡೆ ಮಾಡಲಾಯಿತು.
Și au fost dezlegați cei patru îngeri, care erau pregătiți pentru o oră și o zi și o lună și un an, să ucidă a treia parte din oameni.
16 ೧೬ ಕುದುರೆ ದಂಡಿನವರ ಸಂಖ್ಯೆಯು ಇಪ್ಪತ್ತು ಕೋಟಿ ಎಂದು ನನಗೆ ಕೇಳಿಸಿತು.
Și numărul armatei călăreților era de două sute de mii de mii; și am auzit numărul lor.
17 ೧೭ ನಾನು ದರ್ಶನದಲ್ಲಿ ಕಂಡ ಕುದುರೆಗಳ ಮತ್ತು ಸವಾರರ ವಿವರಣೆ ಹೇಗಿತ್ತೆಂದರೆ, ಸವಾರರ ಕವಚಗಳ ಬಣ್ಣವು ಬೆಂಕಿ, ಹೊಗೆ, ಗಂಧಕ ಇವುಗಳ ಬಣ್ಣದ ಹಾಗಿತ್ತು ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು.
Și astfel am văzut în viziune caii și pe cei ce ședeau pe ei, având platoșe de foc și de hiacint și de pucioasă; și capetele cailor erau precum capetele leilor; și din gurile lor ieșea foc și fum și pucioasă.
18 ೧೮ ಅವುಗಳ ಬಾಯಿಂದ ಹೊರಟ ಆ ಬೆಂಕಿ, ಹೊಗೆ, ಗಂಧಕ ಎಂಬ ಮೂರು ಉಪದ್ರವಗಳಿಂದ ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗವು ಹತವಾಯಿತು.
Prin acestea trei a fost ucisă a treia parte a oamenilor, prin focul și prin fumul și prin pucioasa care ieșea din gurile lor.
19 ೧೯ ಆ ಕುದುರೆಗಳ ಸಾಮರ್ಥ್ಯವು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇದ್ದವು. ಅವುಗಳ ಬಾಲಗಳು ತಲೆಗಳುಳ್ಳವುಗಳಾಗಿ ಸರ್ಪಗಳ ಹಾಗೆ ಇದ್ದವು. ಅವುಗಳಿಂದಲೇ ಕೇಡನ್ನುಂಟುಮಾಡುವುದು.
Fiindcă puterea lor este în gurile lor și în cozile lor; deoarece cozile lor erau asemănătoare șerpilor și aveau capete și cu acestea vătămau.
20 ೨೦ ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ. ಅವರು ಭೂತ, ಪ್ರೇತಗಳ ಪೂಜೆಯನ್ನೂ ಬಂಗಾರ, ಬೆಳ್ಳಿ, ತಾಮ್ರ, ಕಲ್ಲು, ಮರ ಮೊದಲಾದವುಗಳಿಂದ ಮಾಡಲ್ಪಟ್ಟ ನೋಡಲಾರದೆ, ಕೇಳಲಾರದೆ, ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.
Și ceilalți oameni, care nu au fost uciși prin aceste plăgi, totuși nu s-au pocăit de faptele mâinilor lor, ca să nu se mai închine dracilor și idolilor de aur și de argint și de aramă și de piatră și de lemn, care nu pot nici vedea, nici auzi, nici umbla;
21 ೨೧ ಇದಲ್ಲದೆ ತಾವು ನಡೆಸುತ್ತಿದ್ದ ಕೊಲೆ, ಮಾಟ, ಜಾರತ್ವ, ಕಳ್ಳತನ ಇವುಗಳೊಳಗೆ ಒಂದನ್ನೂ ಬಿಡದೆ ಮಾನಸಾಂತರಪಡಲಿಲ್ಲ.
Și nu s-au pocăit nici de uciderile lor, nici de vrăjitoriile lor, nici de curvia lor, nici de furturile lor.