< ಪ್ರಕಟಣೆ 1 >
1 ೧ ಯೇಸು ಕ್ರಿಸ್ತನ ಪ್ರಕಟನೆಯು, ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟಣೆಯನ್ನು ಹೊಂದಿದನು. ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ತಿಳಿಸಿದನು.
Об’явлення Ісуса Христа, яке дав Йому Бог, щоб показати Своїм рабам, що незабаром має відбутися. Він показав це [об’явлення], відправивши Свого ангела до Свого раба Івана,
2 ೨ ಯೋಹಾನನು ದೇವರ ವಾಕ್ಯದ ಕುರಿತಾಗಿಯೂ ಯೇಸು ಕ್ರಿಸ್ತನು ಹೇಳಿದ ಸಾಕ್ಷಿಯ ವಿಷಯವಾಗಿಯೂ ತಾನು ಕಂಡದ್ದನ್ನೆಲ್ಲಾ ತಿಳಿಸುವವನಾಗಿ ಸಾಕ್ಷಿಕೊಟ್ಟನು.
який засвідчив усе, що бачив про Слово Боже й про Ісуса Христа.
3 ೩ ಈ ಪ್ರವಾದನಾ ವಾಕ್ಯಗಳನ್ನು ಓದುವವನೂ, ಕೇಳುವವರೂ ಮತ್ತು ಇದರಲ್ಲಿ ಬರೆದಿರುವುದನ್ನು ಕೈಕೊಂಡು ನಡೆಯುವವರೂ ಧನ್ಯರು. ಏಕೆಂದರೆ ಅವು ನೆರವೇರುವ ಕಾಲವು ಸಮೀಪವಾಗಿದೆ.
Блаженний той, хто читає, і ті, хто слухає слова цього пророцтва та дотримується написаного, бо час уже наблизився.
4 ೪ ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನಂದರೆ; ಇರುವಾತನೂ, ಇದ್ದಾತನೂ, ಬರುವಾತನೂ ಆಗಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ
Іван. Семи церквам Азії. Благодать вам і мир від Того, Хто є, Хто був і Хто має прийти, і від семи духів, що перед Його престолом,
5 ೫ ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,
і від Ісуса Христа, вірного Свідка, Первістка з мертвих і Правителя земних царів. Він нас любить і Своєю кров’ю звільнив нас від наших гріхів,
6 ೬ ನಮ್ಮನ್ನು ದೇವರ ರಾಜ್ಯವನ್ನಾಗಿಯೂ ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು ಬಲವು ಉಂಟಾಗಲಿ. ಆಮೆನ್. (aiōn )
зробив нас Царством та священниками Богові й Отцю Своєму. Йому слава і сила навіки-віків! Амінь. (aiōn )
7 ೭ ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್.
Ось Він іде з хмарами, і кожне око Його побачить, навіть ті, хто Його проколов, і всі народи на землі ридатимуть перед Ним.
8 ೮ “ನಾನೇ ಆದಿಯೂ ಅಂತ್ಯವೂ, ಇರುವಾತನೂ, ಇದ್ದಾತನೂ, ಬರುವಾತನೂ, ಸರ್ವಶಕ್ತನೂ” ಎಂದು ದೇವರಾದ ಕರ್ತನು ಹೇಳುತ್ತಾನೆ.
«Я – Альфа і Омега, – говорить Господь Бог, – Той, Хто є, Хто був і Хто має прийти, Вседержитель!»
9 ೯ ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಹಿಂಸೆಯಲ್ಲಿ, ರಾಜ್ಯದಲ್ಲಿ, ತಾಳ್ಮೆಯಲ್ಲಿ, ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರ ಯೇಸುವಿನ ವಿಷಯವಾಗಿ ಸಾಕ್ಷಿ ನೀಡಲು ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.
Я, Іван, ваш брат і співучасник у стражданнях, Царстві та терпінні в Ісусі, був на острові, що зветься Патмос, за Слово Боже та свідчення про Ісуса.
10 ೧೦ ನಾನು ಕರ್ತನ ದಿನದಲ್ಲಿ ದೇವರಾತ್ಮವಶನಾಗಿರಲು, ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತ್ತೂರಿಯ ನಾದದಂತಿತ್ತು.
У день Господній я був у Дусі й почув за собою гучний голос, немов [голос] сурми,
11 ೧೧ ಅದು, “ನೀನು ನೋಡುವುದನ್ನು ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ, ಎಂಬೀ ಏಳು ಸಭೆಗಳಿಗೆ ಕಳುಹಿಸಬೇಕು” ಎಂದು ನುಡಿಯಿತು.
який казав: «Те, що бачиш, запиши в книгу й надішли до семи церков: у Ефес, Смирну, Пергам, Тіятиру, Сарди, Філадельфію та Лаодикію».
12 ೧೨ ನನ್ನ ಸಂಗಡ ಮಾತನಾಡುತ್ತಿದ್ದ ಶಬ್ದವು ಯಾರದೆಂದು ನೋಡುವುದಕ್ಕೆ ನಾನು ಹಿಂದಕ್ಕೆ ತಿರುಗಿದೆನು. ತಿರುಗಿದಾಗ ಏಳು ಚಿನ್ನದ ದೀಪಸ್ತಂಭಗಳನ್ನೂ
Я повернувся, щоб подивитися, чий голос говорив до мене. І, повернувшись, побачив сім золотих світильників,
13 ೧೩ ಆ ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತೆ ಇರುವವನನ್ನೂ ಕಂಡೆನು. ಆತನು ನಿಲುವಂಗಿಯನ್ನು ಧರಿಸಿ ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.
а серед світильників був хтось, схожий на Сина Людського, одягненого в довгу одежу, підперезаного попід груди золотим поясом.
14 ೧೪ ಆತನ ತಲೆಯ ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು. ಆತನ ಕಣ್ಣುಗಳು ಬೆಂಕಿಯ ಜ್ವಾಲೆಯಂತೆಯೂ,
Його голова та волосся були білі, як біла вовна, як сніг, а очі – як полум’я вогню.
15 ೧೫ ಆತನ ಪಾದಗಳು ಕುಲುಮೆಯಲ್ಲಿ ಕಾಯಿಸಿದ ತಾಮ್ರದಂತೆಯೂ, ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.
Його ноги були як бронза, розпалена в печі, а голос – як шум великої води.
16 ೧೬ ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು, ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಆತನ ಮುಖವು ಪ್ರಬಲವಾಗಿ ಪ್ರಕಾಶಿಸುವ ಸೂರ್ಯನಂತಿತ್ತು.
У правій руці Він тримав сім зірок, а з Його вуст виходив обосічний меч. Його обличчя було як сонце, яке світить у [всій] своїй силі.
17 ೧೭ ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ, ನಾನು ಮೊದಲನೆಯವನೂ, ಕಡೆಯವನೂ,
Коли я побачив Його, то впав до Його ніг, наче мертвий. Він поклав на мене праву руку й сказав: «Не бійся! Я Перший і Останній.
18 ೧೮ ಸದಾ ಜೀವಿಸುವವನೂ ಆಗಿದ್ದೇನೆ. ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ. (aiōn , Hadēs )
Я Живий. Я був мертвий, а ось тепер Я живий навіки-віків! І Я маю ключі від смерті й від царства мертвих. (aiōn , Hadēs )
19 ೧೯ ಆದ್ದರಿಂದನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವುಗಳನ್ನೂ ಮುಂದೆ ಆಗಬೇಕಾದವುಗಳನ್ನೂ ಬರೆ.
Тож напиши те, що ти бачив, що є зараз і що має статися після цього.
20 ೨೦ ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ. ಆ ಏಳು ನಕ್ಷತ್ರಗಳು ಅಂದರೆ ಏಳು ಸಭೆಗಳದೂತರು, ಆ ಏಳು ದೀಪಸ್ತಂಭಗಳು ಅಂದರೆಆ ಏಳು ಸಭೆಗಳು.”
Таємниця семи зірок, які ти бачив у Мене в правій руці, і семи золотих світильників [така]: сім зірок – це ангели семи церков, а сім світильників – це сім церков».