< ರೋಮಾಪುರದವರಿಗೆ 1 >
1 ೧ ಯೇಸು ಕ್ರಿಸ್ತನ ದಾಸನೂ, ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟವನೂ, ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಿಸಲ್ಪಟ್ಟವನೂ ಆಗಿರುವ ಪೌಲನು,
īśvarō nijaputramadhi yaṁ susaṁvādaṁ bhaviṣyadvādibhi rdharmmagranthē pratiśrutavān taṁ susaṁvādaṁ pracārayituṁ pr̥thakkr̥ta āhūtaḥ prēritaśca prabhō ryīśukhrīṣṭasya sēvakō yaḥ paulaḥ
2 ೨ ರೋಮಾಪುರದಲ್ಲಿ ದೇವರಿಗೆ ಪ್ರಿಯರೂ ಹಾಗು ದೇವಜನರಾಗುವುದಕ್ಕೆ ಕರೆಯಲ್ಪಟ್ಟವರೂ ಆಗಿರುವವರೆಲ್ಲರಿಗೆ ಬರೆಯುವ ಪತ್ರ;
sa rōmānagarasthān īśvarapriyān āhūtāṁśca pavitralōkān prati patraṁ likhati|
3 ೩ ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ.
asmākaṁ sa prabhu ryīśuḥ khrīṣṭaḥ śārīrikasambandhēna dāyūdō vaṁśōdbhavaḥ
4 ೪ ದೇವರು ಮುಂಚಿತವಾಗಿ ಪವಿತ್ರ ಗ್ರಂಥಗಳಲ್ಲಿ ತನ್ನ ಪ್ರವಾದಿಗಳ ಮೂಲಕ ತಿಳಿಸಲ್ಪಟ್ಟ ವಾಗ್ದಾನ ಮಾಡಿದ ಈ ಸುವಾರ್ತೆಯು ದೇವರ ಮಗನೂ ನಮ್ಮ ಕರ್ತನೂ ಆಗಿರುವ ಯೇಸು ಕ್ರಿಸ್ತನ ಕುರಿತಾದದ್ದು.
pavitrasyātmanaḥ sambandhēna cēśvarasya prabhāvavān putra iti śmaśānāt tasyōtthānēna pratipannaṁ|
5 ೫ ಆತನು ವಂಶಕ್ರಮದಿಂದ ದಾವೀದನ ಸಂತಾನದಲ್ಲಿ ಹುಟ್ಟಿದವನೂ ಪವಿತ್ರವಾದ ಆತ್ಮನ ಶಕ್ತಿಗನುಸಾರವಾಗಿ ಸತ್ತಮೇಲೆ ಜೀವಿತನಾಗಿ ಎದ್ದು ಬಂದು ದೇವಕುಮಾರನೆಂದು ನಿರ್ಣಯಿಸಲ್ಪಟ್ಟವನೂ ಆಗಿದ್ದಾನೆ.
aparaṁ yēṣāṁ madhyē yīśunā khrīṣṭēna yūyamapyāhūtāstē 'nyadēśīyalōkāstasya nāmni viśvasya nidēśagrāhiṇō yathā bhavanti
6 ೬ ಯೇಸು ಕ್ರಿಸ್ತನಲ್ಲಿ ಸೇರುವುದಕ್ಕೆ ಕರೆಯಲ್ಪಟ್ಟ ನೀವೂ ಸಹ ಆ ಅನ್ಯಜನರೊಳಗಿನವರಾದ್ದರಿಂದ ನಿಮಗೆ,
tadabhiprāyēṇa vayaṁ tasmād anugrahaṁ prēritatvapadañca prāptāḥ|
7 ೭ ಆತನ ಹೆಸರಿನ ಪ್ರಸಿದ್ಧಿಗಾಗಿ ನಂಬಿಕೆಯೆಂಬ ವಿಧೇಯತ್ವವು ಉಂಟಾಗುವುದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಮತ್ತು ಅಪೊಸ್ತಲತನವನ್ನೂ ಹೊಂದಿದೆವು.
tātēnāsmākam īśvarēṇa prabhuṇā yīśukhrīṣṭēna ca yuṣmabhyam anugrahaḥ śāntiśca pradīyētāṁ|
8 ೮ ಮೊದಲು ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಮಾಡುತ್ತೇನೆ.
prathamataḥ sarvvasmin jagati yuṣmākaṁ viśvāsasya prakāśitatvād ahaṁ yuṣmākaṁ sarvvēṣāṁ nimittaṁ yīśukhrīṣṭasya nāma gr̥hlan īśvarasya dhanyavādaṁ karōmi|
9 ೯ ನಾನು ಪ್ರಾರ್ಥನೆ ಮಾಡುವಾಗೆಲ್ಲಾ ಎಡೆಬಿಡದೆ ನಿಮಗೋಸ್ಕರ ವಿಜ್ಞಾಪನೆ ಮಾಡುತ್ತೇನೆ. ದೇವರ ಮಗನ ಸುವಾರ್ತೆಯನ್ನು ಸಾರುತ್ತಾ ದೈವಸೇವೆಯನ್ನು ಮನಃಪೂರ್ವಕವಾಗಿ ಮಾಡಿಕೊಂಡು ಬರುತ್ತಿರುವ ದೇವರೇ ನನಗೆ ಸಾಕ್ಷಿ.
aparam īśvarasya prasādād bahukālāt paraṁ sāmprataṁ yuṣmākaṁ samīpaṁ yātuṁ kathamapi yat suyōgaṁ prāpnōmi, ētadarthaṁ nirantaraṁ nāmānyuccārayan nijāsu sarvvaprārthanāsu sarvvadā nivēdayāmi,
10 ೧೦ ದೈವಚಿತ್ತದಿಂದ ನಾನು ನಿಮ್ಮಲ್ಲಿಗೆ ಬರಲು ಈಗಲಾದರೂ ಅನುಕೂಲವಾಗಲೆಂದು ದೇವರಲ್ಲಿ ಬೇಡಿಕೊಳ್ಳುತ್ತೇನೆ.
ētasmin yamahaṁ tatputrīyasusaṁvādapracāraṇēna manasā paricarāmi sa īśvarō mama sākṣī vidyatē|
11 ೧೧ ನನ್ನ ಮುಖಾಂತರ ನಿಮಗೆ ಆತ್ಮೀಕ ವರವೇನಾದರೂ ದೊರಕಿ ನೀವು ದೃಢವಾಗುವುದಕ್ಕೋಸ್ಕರ ಅಂದರೆ ನಾನು ನಿಮ್ಮ ನಂಬಿಕೆಯಿಂದ ಮತ್ತು ನೀವು ನನ್ನ ನಂಬಿಕೆಯಿಂದ ಸಹಾಯ ಹೊಂದಿ ಈ ಪ್ರಕಾರ ನಿಮ್ಮೊಂದಿಗೆ ನಾನು ಧೈರ್ಯಗೊಳ್ಳುವುದಕ್ಕೋಸ್ಕರ ನಿಮ್ಮನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ.
yatō yuṣmākaṁ mama ca viśvāsēna vayam ubhayē yathā śāntiyuktā bhavāma iti kāraṇād
yuṣmākaṁ sthairyyakaraṇārthaṁ yuṣmabhyaṁ kiñcitparamārthadānadānāya yuṣmān sākṣāt karttuṁ madīyā vāñchā|
13 ೧೩ ಪ್ರಿಯರೇ, ನನ್ನ ಕೆಲಸವು ಇತರ ಅನ್ಯಜನಗಳಲ್ಲಿ ಸಫಲವಾದಂತೆ ನಿಮ್ಮಲ್ಲಿಯೂ ಸಫಲವಾದೀತೆಂದು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಾವರ್ತಿ ಮನಸ್ಸು ಮಾಡಿಕೊಂಡಿದ್ದಾಗ್ಯೂ ಇಂದಿನವರೆಗೂ ಅಡ್ಡಿಯಾಯಿತೆಂಬುದು ನೀವು ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ.
hē bhrātr̥gaṇa bhinnadēśīyalōkānāṁ madhyē yadvat tadvad yuṣmākaṁ madhyēpi yathā phalaṁ bhuñjē tadabhiprāyēṇa muhurmuhu ryuṣmākaṁ samīpaṁ gantum udyatō'haṁ kintu yāvad adya tasmin gamanē mama vighnō jāta iti yūyaṁ yad ajñātāstiṣṭhatha tadaham ucitaṁ na budhyē|
14 ೧೪ ಗ್ರೀಕರಿಗೂ ಇತರ ಜನಗಳಿಗೂ, ಜ್ಞಾನಿಗಳಿಗೂ, ಮೂಢರಿಗೂ ತೀರಿಸಬೇಕಾದ ಒಂದು ಋಣ ನನ್ನ ಮೇಲಿದೆ.
ahaṁ sabhyāsabhyānāṁ vidvadavidvatāñca sarvvēṣām r̥ṇī vidyē|
15 ೧೫ ಹೀಗಿರುವುದರಿಂದ ರೋಮಾಪುರದಲ್ಲಿರುವ ನಿಮಗೆ ಸಹ ಸುವಾರ್ತೆಯನ್ನು ಸಾರುವುದಕ್ಕೆ ನಾನಂತೂ ಸಿದ್ಧವಾಗಿದ್ದೇನೆ.
ataēva rōmānivāsināṁ yuṣmākaṁ samīpē'pi yathāśakti susaṁvādaṁ pracārayitum aham udyatōsmi|
16 ೧೬ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ.
yataḥ khrīṣṭasya susaṁvādō mama lajjāspadaṁ nahi sa īśvarasya śaktisvarūpaḥ san ā yihūdīyēbhyō 'nyajātīyān yāvat sarvvajātīyānāṁ madhyē yaḥ kaścid tatra viśvasiti tasyaiva trāṇaṁ janayati|
17 ೧೭ ಹೇಗೆಂದರೆ ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ತೋರಿಬರುತ್ತದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ” ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ವೃದ್ಧಿಪಡಿಸುವಂಥದಾಗಿದೆ.
yataḥ pratyayasya samaparimāṇam īśvaradattaṁ puṇyaṁ tatsusaṁvādē prakāśatē| tadadhi dharmmapustakēpi likhitamidaṁ "puṇyavān janō viśvāsēna jīviṣyati"|
18 ೧೮ ಅನೀತಿಯಿಂದ ಸತ್ಯವನ್ನು ಅಡ್ಡಿಮಾಡುವವರಾದ ದುಷ್ಟಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ, ದುಷ್ಟತನದ ಮೇಲೆಯೂ ದೇವರ ಕೋಪವು ಪರಲೋಕದಿಂದ ಇಳಿದುಬರುತ್ತದೆ,
ataēva yē mānavāḥ pāpakarmmaṇā satyatāṁ rundhanti tēṣāṁ sarvvasya durācaraṇasyādharmmasya ca viruddhaṁ svargād īśvarasya kōpaḥ prakāśatē|
19 ೧೯ ಯಾಕೆಂದರೆ ದೇವರ ವಿಷಯವಾಗಿ ತಿಳಿಯಬಹುದಾದದ್ದು ಅವರ ಮನಸ್ಸಿಗೆ ಸ್ಪಷ್ಟವಾಗಿ ತಿಳಿದಿದೆ. ಅದನ್ನು ಅವರಿಗೆ ದೇವರೇ ಸ್ಪಷ್ಟವಾಗಿ ತಿಳಿಸಿರುವನು.
yata īśvaramadhi yadyad jñēyaṁ tad īśvaraḥ svayaṁ tān prati prakāśitavān tasmāt tēṣām agōcaraṁ nahi|
20 ೨೦ ಹೇಗೆಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯ ಶಕ್ತಿಯೂ, ದೈವತ್ವವೂ, ಜಗದುತ್ಪತ್ತಿ ಮೊದಲುಗೊಂಡು ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತದೆ. ಹೀಗಿರುವುದರಿಂದ ಅವರು ನೆಪವನ್ನು ಹೇಳಲು ಆಗುವುದಿಲ್ಲ. (aïdios )
phalatastasyānantaśaktīśvaratvādīnyadr̥śyānyapi sr̥ṣṭikālam ārabhya karmmasu prakāśamānāni dr̥śyantē tasmāt tēṣāṁ dōṣaprakṣālanasya panthā nāsti| (aïdios )
21 ೨೧ ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ.
aparam īśvaraṁ jñātvāpi tē tam īśvarajñānēna nādriyanta kr̥tajñā vā na jātāḥ; tasmāt tēṣāṁ sarvvē tarkā viphalībhūtāḥ, aparañca tēṣāṁ vivēkaśūnyāni manāṁsi timirē magnāni|
22 ೨೨ ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು.
tē svān jñāninō jñātvā jñānahīnā abhavan
23 ೨೩ ಲಯವಿಲ್ಲದ ದೇವರ ಮಹಿಮೆಯನ್ನು ಅವರು ನಾಶವಾಗುವ ಮನುಷ್ಯ, ಪಶು, ಪಕ್ಷಿ, ಸರಿಸೃಪಗಳು ಇತ್ಯಾದಿಗಳ ರೂಪಗಳೊಂದಿಗೆ ಬದಲಿಸಿಕೊಂಡರು.
anaśvarasyēśvarasya gauravaṁ vihāya naśvaramanuṣyapaśupakṣyurōgāmiprabhr̥tērākr̥tiviśiṣṭapratimāstairāśritāḥ|
24 ೨೪ ಆದಕಾರಣ ಅವರು ಮನಸ್ಸಿನ ದುರಾಶೆಗಳಂತೆ ನಡೆದು ತಮ್ಮ ತಮ್ಮ ದೇಹಗಳನ್ನು ತಮ್ಮೊಳಗೆ ಮಾನಹೀನಮಾಡಿಕೊಳ್ಳಲಿ ಎಂದು ದೇವರು ಅವರನ್ನು ಹೊಲಸಾದ ಕೆಟ್ಟ ನಡತೆಗಳಿಗೆ ಒಪ್ಪಿಸಿಬಿಟ್ಟನು.
itthaṁ ta īśvarasya satyatāṁ vihāya mr̥ṣāmatam āśritavantaḥ saccidānandaṁ sr̥ṣṭikarttāraṁ tyaktvā sr̥ṣṭavastunaḥ pūjāṁ sēvāñca kr̥tavantaḥ; (aiōn )
25 ೨೫ ಅವರು ಸತ್ಯ ದೇವರನ್ನು ಬಿಟ್ಟು ಅಸತ್ಯವಾದದ್ದನ್ನು ಹಿಡಿದುಕೊಂಡು ಸೃಷ್ಟಿ ಕರ್ತನನ್ನು ಆರಾಧಿಸದೆ ಸೃಷ್ಟಿಯನ್ನೇ ಪೂಜಿಸಿ ಆರಾಧಿಸುವವರಾದರು. ಆದರೆ, ಆತನೇ ನಿರಂತರ ಸ್ತುತಿ ಹೊಂದತಕ್ಕವನು, ಆಮೆನ್. (aiōn )
iti hētōrīśvarastān kukriyāyāṁ samarpya nijanijakucintābhilāṣābhyāṁ svaṁ svaṁ śarīraṁ parasparam apamānitaṁ karttum adadāt|
26 ೨೬ ಅವರು ಇಂಥದ್ದನ್ನು ಮಾಡಿದ್ದರಿಂದ ದೇವರು ಅವರನ್ನು ಕೇವಲ ಲಜ್ಜಾಸ್ಪದವಾದ ಕಾಮಾಭಿಲಾಷೆಗಳಿಗೆ ಒಪ್ಪಿಸಿಬಿಟ್ಟನು. ಅವರ ಹೆಂಗಸರು ಸ್ವಾಭಾವಿಕವಾದ ಭೋಗವನ್ನು ತೊರೆದು ಸ್ವಭಾವಕ್ಕೆ ವಿರುದ್ಧವಾದ ಕಾಮಕೃತ್ಯಗಳನ್ನು ಮಾಡಿದರು.
īśvarēṇa tēṣu kvabhilāṣē samarpitēṣu tēṣāṁ yōṣitaḥ svābhāvikācaraṇam apahāya viparītakr̥tyē prāvarttanta;
27 ೨೭ ಅದರಂತೆ ಪುರುಷರು ಸಹ ಸ್ವಾಭಾವಿಕವಾದ ಸ್ತ್ರೀಸಂಗವನ್ನು ತೊರೆದು ತಮ್ಮತಮ್ಮಲಿಯೇ ಕಾಮೋದ್ರೇಕಗೊಂಡರು; ಸಲಿಂಗಕಾಮಿಗಳಾದರು; ಲಜ್ಜಾಹೀನರಾಗಿ ವರ್ತಿಸಿದರು; ತಮ್ಮ ದುರ್ನಡತೆಗೆ ತಕ್ಕ ಶಿಕ್ಷೆಯನ್ನು ತಮ್ಮ ಮೇಲೆ ಬರಮಾಡಿಕೊಂಡರು.
tathā puruṣā api svābhāvikayōṣitsaṅgamaṁ vihāya parasparaṁ kāmakr̥śānunā dagdhāḥ santaḥ pumāṁsaḥ puṁbhiḥ sākaṁ kukr̥tyē samāsajya nijanijabhrāntēḥ samucitaṁ phalam alabhanta|
28 ೨೮ ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.
tē svēṣāṁ manaḥsvīśvarāya sthānaṁ dātum anicchukāstatō hētōrīśvarastān prati duṣṭamanaskatvam avihitakriyatvañca dattavān|
29 ೨೯ ಹೇಗೆಂದರೆ ಅವರು ಸಕಲವಿಧವಾದ ಅನ್ಯಾಯ, ದುರ್ಮಾರ್ಗತನ, ಲೋಭ ದುಷ್ಟತ್ವಗಳಿಂದಲೂ ಹೊಟ್ಟೆಕಿಚ್ಚು, ಕೊಲೆ, ಜಗಳ, ಮೋಸ, ಹಗೆತನಗಳಿಂದ ತುಂಬಿದವರಾದರು.
ataēva tē sarvvē 'nyāyō vyabhicārō duṣṭatvaṁ lōbhō jighāṁsā īrṣyā vadhō vivādaścāturī kumatirityādibhi rduṣkarmmabhiḥ paripūrṇāḥ santaḥ
30 ೩೦ ಅವರು ಸುಳ್ಳುಸುದ್ದಿ ಹಬ್ಬಿಸುವವರೂ, ಚಾಡಿಹೇಳುವವರೂ, ದೇವರನ್ನು ದ್ವೇಷಿಸುವವರೂ, ಸೊಕ್ಕಿನವರೂ, ಅಹಂಕಾರಿಗಳೂ, ಬಡಾಯಿಕೊಚ್ಚುವವರೂ, ಕೇಡನ್ನು ಕಲ್ಪಿಸುವವರೂ,
karṇējapā apavādina īśvaradvēṣakā hiṁsakā ahaṅkāriṇa ātmaślāghinaḥ kukarmmōtpādakāḥ pitrōrājñālaṅghakā
31 ೩೧ ತಂದೆತಾಯಿಗಳ ಮಾತನ್ನು ಕೇಳದವರೂ ವಿವೇಕವಿಲ್ಲದವರೂ, ಮಾತಿಗೆ ತಪ್ಪುವವರೂ, ಮಮತೆಯಿಲ್ಲದವರೂ, ಕರುಣೆಯಿಲ್ಲದವರೂ ಆದರು.
avicārakā niyamalaṅghinaḥ snēharahitā atidvēṣiṇō nirdayāśca jātāḥ|
32 ೩೨ ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಮಾಡುವವರನ್ನೂ ಹೊಗಳುತ್ತಾ ಪ್ರೇರೇಪಿಸುತ್ತಾರೆ.
yē janā ētādr̥śaṁ karmma kurvvanti taēva mr̥tiyōgyā īśvarasya vicāramīdr̥śaṁ jñātvāpi ta ētādr̥śaṁ karmma svayaṁ kurvvanti kēvalamiti nahi kintu tādr̥śakarmmakāriṣu lōkēṣvapi prīyantē|