< ರೋಮಾಪುರದವರಿಗೆ 10 >
1 ೧ ಸಹೋದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬುದೇ ನನ್ನ ಮನೋಭಿಲಾಷೆಯೂ ಮತ್ತು ದೇವರಿಗೆ ನಾನು ಮಾಡುವ ವಿಜ್ಞಾಪನೆಯೂ ಆಗಿದೆ.
Ka hmaunawnghanaw Isarelnaw ni rungngang lah ao thai nahanelah ka ngaikhai poung dawkvah Cathut koe pou ka ratoum.
2 ೨ ದೇವರ ಬಗ್ಗೆ ಆಸಕ್ತಿಯುಳ್ಳವರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿ ಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದುದಲ್ಲ.
Ahnimouh ni Cathut hanelah puenghoi a lungthao awh e hah kai ni ka kampangkhai. Hatei, ahnimae a lungthaonae teh panuenae katang lah awmhoeh.
3 ೩ ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವಂತ ನೀತಿಯನ್ನೇ; ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದುದ್ದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
Ahnimouh ni Cathut e lannae a lamthung panuek a hoeh. Amamae lannae caksak hanelah a tawng awh dawkvah, Cathut e lannae dawk kâen thai a hoeh.
4 ೪ ನಂಬುವವರೆಲ್ಲರಿಗೆ ನೀತಿಯನ್ನು ದೊರಕಿಸಿಕೊಡುವುದಕ್ಕಾಗಿ ಕ್ರಿಸ್ತನೇ ಧರ್ಮಶಾಸ್ತ್ರವನ್ನು ಕೊನೆಗೊಳಿಸಿದನು.
Kayueme tami pueng ni lannae koe pha thai awh nahanlah Khrih teh kâlawk poutnae doeh.
5 ೫ ಧರ್ಮಶಾಸ್ತ್ರದ ನೀತಿಯನುಸಾರ, “ಅದನ್ನು ಅನುಸರಿಸಿದವನು ಅದರಿಂದಲೇ ಜೀವಿಸುವನೆಂದು” ಮೋಶೆಯು ಬರೆಯುತ್ತಾನೆ.
Mosi ni kâlawk lahoi kâkuen e lannae kong dawk a thut e teh, apihai hote kâlawk ka tarawi e pueng teh hotnaw lahoi a hring han, a ti.
6 ೬ ಆದರೆ ನಂಬಿಕೆಯಿಂದುಂಟಾಗುವ ನೀತಿಯು ಈ ರೀತಿಯಾಗಿ ಹೇಳುತ್ತದೆ. “‘ಕ್ರಿಸ್ತನನ್ನು ಭೂಮಿಗಿಳಿಸಿಕೊಂಡು ಬರುವುದಕ್ಕಾಗಿ ಮೇಲಣ ಲೋಕಕ್ಕೆ ಏರಿಹೋದವರಾರು?’
Yuemnae lahoi coe e lannae teh, nange na lungthung vah kalvan lah apimaw ka luen han tet hanh. A deingainae teh Khrih hah kum khai han ti ngainae doeh.
7 ೭ ಎಂದಾಗಲಿ ‘ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿಕೊಂಡು ಬರುವುದಕ್ಕಾಗಿ ಯಾರು ಪಾತಾಳಲೋಕಕ್ಕೆ ಇಳಿದುಹೋದರು? ಎಂದಾಗಲಿ ನಿನ್ನ ಮನಸ್ಸಿನಲ್ಲಿ ಅಂದುಕೊಳ್ಳಬಾರದು.’” ಆದರೆ ಅದು ಏನನ್ನು ಹೇಳುತ್ತದೆ. (Abyssos )
Nahoeh pawiteh, adungpoungnae koe apimaw ka kum han telah hai tet hanh. A dei ngainae teh Khrih hah duenae koehoi tâcokhai han tinae doeh. (Abyssos )
8 ೮ “ದೇವರ ವಾಕ್ಯವು ನಿನ್ನ ಸಮೀಪದಲ್ಲಿಯೇ ಇದೆ; ಅದು ನಿನ್ನ ಬಾಯಲ್ಲಿಯೂ, ನಿನ್ನ ಹೃದಯದಲ್ಲಿಯೂ ಇದೆ.” ಆ ವಾಕ್ಯವು ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.
Bout a dei e teh phung lawk teh na teng vah ao. Na pahni dawk hai, na lungthung hai ao ati. Het hateh kaimouh ni ka pâpho awh e yuemnae lawk hah doeh.
9 ೯ ಅದೇನೆಂದರೆ ನೀನು ಯೇಸುವನ್ನೇ ಕರ್ತನೆಂದು ಬಾಯಿಂದ ಅರಿಕೆಮಾಡಿಕೊಂಡು ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನೆಂದು ಹೃದಯದಿಂದ ನಂಬಿದರೆ ನಿನಗೆ ರಕ್ಷಣೆಯಾಗುವುದು ಎಂಬುದೇ.
Jisuh teh Bawipa doeh telah na pahni hoi na dei teh, na lungthung hoi Cathut ni ahni teh duenae koehoi a thaw sak toe telah na yuem pawiteh rungngang lah na o han.
10 ೧೦ ಹೃದಯದಿಂದ ನಂಬುವುದರ ಮೂಲಕ ನೀತಿಯು ದೊರಕುತ್ತದೆ. ಬಾಯಿಂದ ಅರಿಕೆಮಾಡುವುದರ ಮೂಲಕ ರಕ್ಷಣೆಯಾಗುತ್ತದೆ.
Lannae koe pha hanelah lungthin hoi yuem han, rungngangnae koe pha hanelah pahni hoi pâpho han.
11 ೧೧ “ಆತನ ಮೇಲೆ ನಂಬಿಕೆಯಿಡುವ ಒಬ್ಬನಾದರೂ ಆಶಾಭಂಗಪಡುವುದಿಲ್ಲವೆಂದು” ಧರ್ಮಶಾಸ್ತ್ರವು ಹೇಳುತ್ತದೆ.
Bangkongtetpawiteh, Cakathoung ni, hote talung ka yuem e pueng teh kayak mahoeh a ti.
12 ೧೨ ಈ ವಿಷಯದಲ್ಲಿ ಯೆಹೂದ್ಯರಿಗೂ ಅಥವಾ ಗ್ರೀಕನಿಗೂ ಹೆಚ್ಚು ಕಡಿಮೆ ಏನೂ ಇಲ್ಲ. ಎಲ್ಲರಿಗೂ ಒಬ್ಬನೇ ಕರ್ತನು; ಆತನು ತನ್ನ ನಾಮವನ್ನು ಹೇಳಿಕೊಳ್ಳುವವರಿಗೆ ಹೇರಳವಾಗಿ ಕೊಡುವುದಕ್ಕೆ ಶಕ್ತನಾಗಿದ್ದಾನೆ.
Het dawkvah Judahnaw hoi Griknaw rahak kapeknae awmhoeh. Bangkongtetpawiteh tami pueng ka uk e Bawipa buet touh dueng ao teh Ama ka kaw e pueng teh yawhawinae kakhoutlah a poe.
13 ೧೩ ಆದ್ದರಿಂದ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೂ ರಕ್ಷಣೆಯಾಗುವುದೆಂದು ಬರೆದಿದೆ.
Bangkongtetpawiteh Bawipa min ka kaw e pueng rungngang lah ao han.
14 ೧೪ ಆದರೆ ಅವರು ನಂಬದೆ ಇರುವುದರಿಂದ ಆತನ ನಾಮವನ್ನು ಹೇಳಿಕೊಳ್ಳುವುದಾದರೂ ಹೇಗೆ? ಮತ್ತು ಆತನ ಸುದ್ದಿಯನ್ನು ಕೇಳದಿರುವಲ್ಲಿ ಆತನನ್ನು ನಂಬುವುದಾದರೂ ಹೇಗೆ? ಪ್ರಚಾರಪಡಿಸುವವನಿಲ್ಲದೆ ಕೇಳುವುದಾದರೂ ಹೇಗೆ? ಸುವಾರ್ತೆಸಾರುವವರನ್ನು ಕಳುಹಿಸದೆ ಸಾರುವುದು ಹೇಗೆ?
Hateiteh ma ni yuem hoeh e Bawipa hah bangtelamaw kaw thai han vaw. Na thai boihoeh e Bawipa hah bangtelamaw na yuem thai han vaw. Kapâphokung awm laipalah bangtelamaw thai thai han vaw.
15 ೧೫ ಇದಕ್ಕೆ ಸರಿಯಾಗಿ “ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಮನೋಹರವಾಗಿವೆ” ಎಂದು ಬರೆದಿದೆ.
A tami patoun laipalah bangtelamaw pâpho thai han vaw. Hot patetlah Cakathoung dawk thut e patetlah, roumnae kamthang kahawi ka pâpho e, lunghawinae kamthang kadeikungnaw e khok teh a meihawipoung.
16 ೧೬ ಆದರೂ ಆ ಶುಭವರ್ತಮಾನಕ್ಕೆ ಎಲ್ಲರೂ ಕಿವಿಗೊಡಲಿಲ್ಲ. ಈ ವಿಷಯದಲ್ಲಿ ಯೆಶಾಯನು, “ಕರ್ತನೇ, ನಾವು ಸಾರಿದ ಸುವಾರ್ತೆಯನ್ನು ಯಾರು ನಂಬಿದರು?” ಎಂದು ನುಡಿಯುತ್ತಾನೆ.
Hateiteh, tami pueng ni lunghawinae kamthang thai ngai awh hoeh. Profet Isaiah ni a dei e teh, Oe! Cathut kaimae kamthang kahawi apinimaw a yuem han, a ti.
17 ೧೭ ಆದಕಾರಣ ಸಾರಿದ ಸುವಾರ್ತೆಯನ್ನು ಕೇಳುವುದರಿಂದ ನಂಬಿಕೆಯು ಹುಟ್ಟುತ್ತದೆ, ಕೇಳಿಸಿಕೊಳ್ಳುವುದು ಕ್ರಿಸ್ತನ ವಾಕ್ಯವಾಗಿದೆ.
Hatdawkvah yuemnae teh thainae koehoi a tho teh, thainae teh Khrih e a lawk lahoi doeh a tho.
18 ೧೮ ಆದರೂ “ಅವರಿಗೆ ಕೇಳಿಸಲಿಲ್ಲವೇನೋ?” ಎಂದು ಹೇಳುತ್ತೇನೆ. ಹೌದು ನಿಶ್ಚಯವಾಗಿ ಕೇಳಿಸಿಕೊಂಡಿದ್ದರು. “ಸಾರುವವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.”
Hatei, pacei han ka ngai e teh, ahnimouh ni thai awh hoeh maw. A thai toung te., Ahnimae hramnae lawk teh talai van pueng a kamthang teh ahnimae a lawk teh talaivan a pout totouh a pha, telah a dei.
19 ೧೯ ಆದರೆ “ಇಸ್ರಾಯೇಲ್ಯರು ಆ ವಾರ್ತೆಯನ್ನು ತಿಳಿದುಕೊಳ್ಳಲಿಲ್ಲವೇನು” ಎಂದು ಹೇಳುತ್ತೇನೆ. ಈ ವಿಷಯದಲ್ಲಿ, “ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಅಸೂಯೆ ಹುಟ್ಟುವಂತೆ ಪ್ರೆರೇಪಿಸುತ್ತೇನೆ; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ರೊಚ್ಚಿಗೆಬ್ಬಿಸುವೆನು” ಎಂದು ಮೊದಲು ಮೋಶೆಯು ಹೇಳುತ್ತಾನೆ.
Bout na pacei ngai e teh Isarelnaw ni panuek awh hoeh maw. Ahmaloe vah Mosi ni nâyittouh hoeh e miphun lahoi nangmouh koe utnae lungthin ka tâco sak teh, panuenae ka tawn hoeh e miphun lahoi yah, na khang thai hoeh hane totouh ka tâco sak han a ti.
20 ೨೦ ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ, “ನನ್ನನ್ನು ಹುಡುಕದವರಿಗೂ ನಾನು ಸಿಕ್ಕಿದೆನು, ನನ್ನನ್ನು ಕೇಳದವರಿಗೆ ನಾನು ಪ್ರತ್ಯಕ್ಷನಾದೆನು,” ಎಂದು ಹೇಳುತ್ತಾನೆ.
Profet Isaiah nihai, kai ka tawng hoeh e naw ni kai hah na hmu awh. Kaie kong ka pacei hoeh e naw koe kamahoima kamphawng pouh han telah taranhawi laihoi a ti.
21 ೨೧ ಆದರೆ ಅವನು ಇಸ್ರಾಯೇಲ್ಯರನ್ನು ಕುರಿತು, “ನನ್ನ ಮಾತಿಗೆ ಅವಿಧೇಯರಾಗಿ ಎದುರುಮಾತನಾಡುವ ಜನರನ್ನು ನಾನು ದಿನವೆಲ್ಲಾ ಎಡೆಬಿಡದೆ ಕೈ ಚಾಚಿ ಕರೆದೆನೆಂದು” ಆತನು ಹೇಳುತ್ತಾನೆ.
Hatei, Isarelnaw hoi kâkuen lah, lawk ka ngâi hoeh e, ka taran lah kaawm e naw koe kai ni kanîruirui kut ka na sin toe atipouh.