< ರೋಮಾಪುರದವರಿಗೆ 12 >

1 ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.
Therefore I urge you, brothers, by the mercies of God, to present your bodies a living sacrifice, holy, acceptable to God, which is your reasonable service.
2 ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ. (aiōn g165)
And do not be conformed to this world, but be transformed by the renewing of your mind, so that you may prove what is the good, well-pleasing, and perfect will of God. (aiōn g165)
3 ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವುದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು.
For I say, through the grace that was given me, to everyone among you, not to think of himself more highly than he ought to think, but to think with sober judgment, as God has apportioned to each person a measure of faith.
4 ಯಾಕೆಂದರೆ ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸ ಇರುವುದಿಲ್ಲವೋ
For even as we have many members in one body, and all the members do not have the same function,
5 ಹಾಗೆಯೇ ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬೊಬ್ಬರಾಗಿ ವಿವಿಧ ಅಂಗಗಳಾಗಿದ್ದೇವೆ.
so we, who are many, are one body in Christ, and individually members one of another.
6 ದೇವರು ನಮಗೆ ಕೃಪೆಮಾಡಿದ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ಹೊಂದಿದ ವರವು ಪ್ರವಾದನೆ ರೂಪವಾಗಿದ್ದರೆ, ನಮ್ಮ ನಂಬಿಕೆಗೆ ತಕ್ಕ ಹಾಗೆ ಪ್ರವಾದನೆ ಹೇಳೋಣ.
And we have different gifts according to the grace that was given to us. If prophecy, according to the proportion of the faith;
7 ಅದು ಸಭಾಸೇವೆಯ ರೂಪವಾಗಿದ್ದರೆ ಪ್ರಾಮಾಣಿಕವಾಗಿ ಸಭಾಸೇವೆಯನ್ನು ಮಾಡುತ್ತಾ ಇರೋಣ.
if service, in the service; if teaching, in the teaching;
8 ಬೋಧಿಸುವವನು ಬೋಧಿಸುವುದರಲ್ಲಿಯೂ, ಬುದ್ಧಿಹೇಳುವವನು ಬುದ್ಧಿ ಹೇಳುವುದರಲ್ಲಿಯೂ ನಿರತನಾಗಿರಲಿ. ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. ದಾರಿ ತೋರಿಸುವವನು ಆಸಕ್ತಿಯಿಂದ ಅದನ್ನು ಮಾಡಲಿ. ಕಷ್ಟದಲ್ಲಿರುವವರಿಗೆ ಉಪಕಾರಮಾಡುವವನು ಸಂತೋಷವಾಗಿ ಮಾಡಲಿ.
if exhorting, in exhortation; giving, in generosity; leading, in diligence; showing mercy, in cheerfulness.
9 ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನವನ್ನು ತಿರಸ್ಕರಿಸಿರಿ, ಒಳ್ಳೆಯದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.
Let love be without hypocrisy. Abhor that which is evil. Cling to that which is good.
10 ೧೦ ಕ್ರೈಸ್ತ ಸಹೋದರರು ಅಣ್ಣ ತಮ್ಮಂದಿರೆಂದು ತಿಳಿದು ಒಬ್ಬರನ್ನೊಬ್ಬರು ಪ್ರೀತಿಸಿರಿ. ಗೌರವಮರ್ಯಾದೆಗಳನ್ನು ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.
In love of the brothers be tenderly affectionate one to another; outdo one another in showing honor;
11 ೧೧ ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರಿ.
not lagging in diligence; fervent in spirit; serving the Lord;
12 ೧೨ ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ.
rejoicing in hope; enduring in troubles; continuing steadfastly in prayer;
13 ೧೩ ದೇವಜನರಿಗೆ ಕೊರತೆ ಬಂದಾಗ ಸಹಾಯ ಮಾಡಿರಿ. ಅತಿಥಿಸತ್ಕಾರವನ್ನು ಆಚರಿಸಿರಿ.
contributing to the needs of the saints; given to hospitality.
14 ೧೪ ನಿಮ್ಮನ್ನು ಹಿಂಸಿಸುವವರಿಗೆ ಆಶೀರ್ವಾದ ಮಾಡಿರಿ; ಶಪಿಸದೆ ಆಶೀರ್ವದಿಸಿರಿ.
Bless those who persecute you; bless, and do not curse.
15 ೧೫ ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.
Rejoice with those who rejoice. Weep with those who weep.
16 ೧೬ ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರಿ ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರನ್ನು ಸ್ವೀಕರಿಸಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.
Live in harmony with one another. Do not be arrogant, but associate with the humble. Do not be conceited.
17 ೧೭ ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಗೌರವವಾದದ್ದೋ ಯುಕ್ತವಾದದ್ದೋ ಅದನ್ನೇ ಯೋಚಿಸಿ ಒಳ್ಳೆಯದನ್ನು ಮಾಡಿರಿ.
Repay no one evil for evil. Respect what is honorable in the sight of all people.
18 ೧೮ ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನದಿಂದಿರಿ.
If it is possible, as much as it is up to you, be at peace with all people.
19 ೧೯ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ “‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ.
Do not seek revenge yourselves, beloved, but leave room for the wrath. For it is written, "Vengeance belongs to me; I will repay, says the Lord."
20 ೨೦ ಹಾಗಾದರೆ “ನಿನ್ನ ವೈರಿ ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವುದಕ್ಕೆ ಕೊಡು. ಹೀಗೆ ಮಾಡುವುದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವುದು”.
Therefore "If your enemy is hungry, feed him. If he is thirsty, give him a drink; for by doing this you will heap coals of fire on his head."
21 ೨೧ ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೆತನದಿಂದ ಕೆಟ್ಟತನವನ್ನು ಸೋಲಿಸಿರಿ.
Do not be overcome by evil, but overcome evil with good.

< ರೋಮಾಪುರದವರಿಗೆ 12 >