< ರೋಮಾಪುರದವರಿಗೆ 12 >
1 ೧ ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.
Så förmanar jag nu eder, käre bröder, vid Guds barmhertighet, att I utgifven edor lekamen till ett offer, som är lefvande, heligt och Gudi behageligit, edra skäliga Gudstjenst.
2 ೨ ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ. (aiōn )
Och håller eder icke efter denna verldena; utan förvandler eder med edars sinnes förnyelse, att I mågen förfara hvad Guds gode, behaglige och fullkomlige vilje är. (aiōn )
3 ೩ ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವುದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು.
Ty jag säger, igenom den nåd som mig gifven är, hvarjom och enom af eder, att ingen hålle mer af sig, än honom bör hålla; utan hålle sig så, att der är måtta med, efter som Gud hafver utdelat hvarjom och enom trones mått.
4 ೪ ಯಾಕೆಂದರೆ ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸ ಇರುವುದಿಲ್ಲವೋ
Ty såsom vi uti en lekamen hafve många lemmar, men alle lemmar hafva icke allt samma ämbete;
5 ೫ ಹಾಗೆಯೇ ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬೊಬ್ಬರಾಗಿ ವಿವಿಧ ಅಂಗಗಳಾಗಿದ್ದೇವೆ.
Så äre vi nu månge en lekamen i Christo, men inbördes äre vi hvarsannars lemmar;
6 ೬ ದೇವರು ನಮಗೆ ಕೃಪೆಮಾಡಿದ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ಹೊಂದಿದ ವರವು ಪ್ರವಾದನೆ ರೂಪವಾಗಿದ್ದರೆ, ನಮ್ಮ ನಂಬಿಕೆಗೆ ತಕ್ಕ ಹಾಗೆ ಪ್ರವಾದನೆ ಹೇಳೋಣ.
Och hafve åtskilliga gåfvor, efter den nåd som oss gifven är. Hafver någor Prophetiam, så vare hon ens med trone.
7 ೭ ಅದು ಸಭಾಸೇವೆಯ ರೂಪವಾಗಿದ್ದರೆ ಪ್ರಾಮಾಣಿಕವಾಗಿ ಸಭಾಸೇವೆಯನ್ನು ಮಾಡುತ್ತಾ ಇರೋಣ.
Hafver någor ett ämbete, så akte han derpå; lärer någor, så akte han på lärona.
8 ೮ ಬೋಧಿಸುವವನು ಬೋಧಿಸುವುದರಲ್ಲಿಯೂ, ಬುದ್ಧಿಹೇಳುವವನು ಬುದ್ಧಿ ಹೇಳುವುದರಲ್ಲಿಯೂ ನಿರತನಾಗಿರಲಿ. ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. ದಾರಿ ತೋರಿಸುವವನು ಆಸಕ್ತಿಯಿಂದ ಅದನ್ನು ಮಾಡಲಿ. ಕಷ್ಟದಲ್ಲಿರುವವರಿಗೆ ಉಪಕಾರಮಾಡುವವನು ಸಂತೋಷವಾಗಿ ಮಾಡಲಿ.
Förmanar någor, så akte han på förmaningen; gifver någor, så gifve uti enfaldighet; regerar någor, så regere med omsorg; gör någor barmhertighet, så göre det med fröjd.
9 ೯ ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನವನ್ನು ತಿರಸ್ಕರಿಸಿರಿ, ಒಳ್ಳೆಯದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.
Kärleken vare utan skrymtan; hater det onda, blifvandes vid det godt är.
10 ೧೦ ಕ್ರೈಸ್ತ ಸಹೋದರರು ಅಣ್ಣ ತಮ್ಮಂದಿರೆಂದು ತಿಳಿದು ಒಬ್ಬರನ್ನೊಬ್ಬರು ಪ್ರೀತಿಸಿರಿ. ಗೌರವಮರ್ಯಾದೆಗಳನ್ನು ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.
Varer hvar med annan vänlige, uti broderlig kärlek; den ene förekomme den andra med inbördes heder.
11 ೧೧ ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರಿ.
Varer icke tröge uti det I hafven för händer; varer brinnande i Andanom; skicker eder efter tiden.
12 ೧೨ ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ.
Varer glade i hoppet; tålige i bedröfvelse; håller på bedja.
13 ೧೩ ದೇವಜನರಿಗೆ ಕೊರತೆ ಬಂದಾಗ ಸಹಾಯ ಮಾಡಿರಿ. ಅತಿಥಿಸತ್ಕಾರವನ್ನು ಆಚರಿಸಿರಿ.
Deler edart till de heligas nödtorft; herberger gerna.
14 ೧೪ ನಿಮ್ಮನ್ನು ಹಿಂಸಿಸುವವರಿಗೆ ಆಶೀರ್ವಾದ ಮಾಡಿರಿ; ಶಪಿಸದೆ ಆಶೀರ್ವದಿಸಿರಿ.
Taler väl om dem som gå efter edart argasta; taler väl, och önsker dem icke ondt.
15 ೧೫ ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.
Glädjens med dem som glade äro; och gråter med dem som gråta.
16 ೧೬ ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರಿ ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರನ್ನು ಸ್ವೀಕರಿಸಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.
Ens till sinnes med hvarannan; håller icke mycket af eder sjelfva; utan håller eder lika vid dem som ringa äro; håller eder icke sjelfva för kloka,
17 ೧೭ ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಗೌರವವಾದದ್ದೋ ಯುಕ್ತವಾದದ್ದೋ ಅದನ್ನೇ ಯೋಚಿಸಿ ಒಳ್ಳೆಯದನ್ನು ಮಾಡಿರಿ.
Görer ingom ondt för ondt; vinnlägger eder om det som ärligit är, inför hvar man.
18 ೧೮ ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನದಿಂದಿರಿ.
Om möjeligit är, så mycket som till eder står, så hafver frid med alla menniskor.
19 ೧೯ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ “‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ.
Hämnens eder icke sjelfve, käre vänner; utan låter ( Guds ) vrede hafva rum; ty det är skrifvet: Min är hämnden, jag skall vedergällat, säger Herren.
20 ೨೦ ಹಾಗಾದರೆ “ನಿನ್ನ ವೈರಿ ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವುದಕ್ಕೆ ಕೊಡು. ಹೀಗೆ ಮಾಡುವುದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವುದು”.
Om nu din ovän hungrar, så gif honom mat; törster han, så gif honom dricka; när du det gör, så församlar du glödande kol på hans hufvud.
21 ೨೧ ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೆತನದಿಂದ ಕೆಟ್ಟತನವನ್ನು ಸೋಲಿಸಿರಿ.
Låt dig icke öfvervunnen varda af det onda; utan öfvervinn det onda med det goda.