< ರೋಮಾಪುರದವರಿಗೆ 16 >
1 ೧ ನಾನು ನಿಮ್ಮ ಬಳಿಗೆ ಕಳುಹಿಸುವ ನಮ್ಮ ಸಹೋದರಿಯಾದ ಪೊಯಿಬೆಯನ್ನು ಪ್ರೀತಿಯಿಂದ ಅಂಗೀಕರಿಸಿರಿ. ಆಕೆಯು ಕೆಂಖ್ರೆಯ ಪಟ್ಟಣದಲ್ಲಿರುವ ಸಭೆಯ ಸೇವಕಿಯಾಗಿದ್ದಾಳೆ;
Kenxreyadakı cəmiyyətin xidmətçisi olan bacımız Fibi barədə sizə zəmanət verirəm.
2 ೨ ನೀವು ಆಕೆಯನ್ನು ದೇವಜನರಿಗೆ ತಕ್ಕ ಹಾಗೆ ಕರ್ತನ ಶಿಷ್ಯಳೆಂದು ಸೇರಿಸಿಕೊಂಡು, ಆಕೆಗೆ ಯಾವ ವಿಷಯದಲ್ಲಿ ಅಗತ್ಯವಿದೆಯೋ ಅದರಲ್ಲಿ ಸಹಾಯವನ್ನು ಮಾಡಿರಿ. ಆಕೆಯು ನನಗೂ ಮತ್ತು ಅನೇಕರಿಗೂ ಸಹಾಯಮಾಡಿದವಳು.
Onu Rəbdə olduğu üçün müqəddəslərə layiq tərzdə qəbul edin, nə ehtiyacı varsa, siz ona kömək edin. Çünki o, çoxlarına və şəxsən mənə də hamilik edib.
3 ೩ ಕ್ರಿಸ್ತ ಯೇಸುವಿನ ಸೇವೆಯಲ್ಲಿ ನನ್ನ ಜೊತೆಕೆಲಸದವರಾದ ಪ್ರಿಸ್ಕಿಲ್ಲಳಿಗೂ ಮತ್ತು ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ.
Məsih İsada həmkarlarım olan Priskila və Akilaya salam söyləyin.
4 ೪ ಅವರು ನನ್ನ ಪ್ರಾಣದ ಸಂರಕ್ಷಣೆಗಾಗಿ ತಮ್ಮ ಪ್ರಾಣಗಳನ್ನು ಅಪಾಯಕ್ಕೆ ಗುರಿಮಾಡಿಕೊಂಡಿದ್ದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರ ಉಪಕಾರವನ್ನು ಸ್ಮರಿಸುತ್ತಾರೆ.
Onlar mənim həyatım üçün öz canlarını təhlükəyə saldılar. Onlara yalnız mən yox, başqa millətlərin bütün cəmiyyətləri də təşəkkür edir.
5 ೫ ಅವರ ಮನೆಯಲ್ಲಿ ಸೇರಿಬರುವ ಸಭೆಗೆ ಸಹ ನನ್ನ ವಂದನೆಯನ್ನು ತಿಳಿಸಿರಿ. ಆಸ್ಯ ಸೀಮೆಯಲ್ಲಿ ಕ್ರಿಸ್ತನಿಗೆ ಪ್ರಥಮಫಲವಾಗಿರುವ ನನ್ನ ಪ್ರಿಯನಾದ ಎಫೈನೆತನಿಗೆ ವಂದನೆ.
Onların evində toplanan cəmiyyətə də salam söyləyin. Asiya vilayətindən Məsih üçün ilk məhsul olan sevimli qardaşım Epenetə salam çatdırın.
6 ೬ ನಿಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆ.
Sizin üçün xeyli zəhmət çəkmiş Məryəmə salam söyləyin.
7 ೭ ನನ್ನ ಸ್ವಜನರೂ ಹಾಗೂ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ, ಯೂನ್ಯನಿಗೂ ವಂದನೆ; ಅವರು ಅಪೊಸ್ತಲರಲ್ಲಿ ಪ್ರಸಿದ್ಧರಾಗಿದ್ದಾರಲ್ಲದೆ, ನನಗಿಂತ ಮೊದಲೇ ಕ್ರಿಸ್ತನನ್ನು ನಂಬಿದವರೂ ಆಗಿದ್ದರು.
Həvarilər arasında şöhrət qazanmış, məndən əvvəl Məsihdə olmuş soydaşlarım və zindan yoldaşlarım Andronikosa və Yuniyaya salam çatdırın.
8 ೮ ಕರ್ತನಲ್ಲಿ ನನ್ನ ಪ್ರಿಯನಾದ ಅಂಪ್ಲಿಯಾತನಿಗೆ ವಂದನೆ.
Rəbdə mənə sevimli olan Ampliyata salam söyləyin.
9 ೯ ಕ್ರಿಸ್ತನ ಸೇವೆಯಲ್ಲಿ ನಮ್ಮ ಜೊತೆ ಕೆಲಸದವನಾದ ಉರ್ಬಾನನಿಗೂ, ನನ್ನ ಪ್ರಿಯನಾದ ಸ್ತಾಖುನಿಗೂ ವಂದನೆಗಳು.
Məsihdə həmkarımız olan Urbana və mənə sevimli olan Staxisə salam çatdırın.
10 ೧೦ ಕ್ರಿಸ್ತನ ಸೇವೆಯಲ್ಲಿ ಮೆಚ್ಚಿಕೆಗೆಪಾತ್ರನಾದ ಅಪೆಲ್ಲನಿಗೆ ವಂದನೆ. ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು.
Məsihdə sədaqəti sübut edilmiş Apellisə salam söyləyin. Aristobulun ailəsindən olanlara salam çatdırın.
11 ೧೧ ನನ್ನ ಸಂಬಂಧಿಕನಾದ ಹೆರೂಡಿಯೋನನಿಗೆ ವಂದನೆ. ನಾರ್ಕಿಸ್ಸನ ಮನೆಯವರೊಳಗೆ ಕ್ರಿಸ್ತನನ್ನು ನಂಬಿದವರಿಗೆ ವಂದನೆಗಳು.
Soydaşım Hirodiona salam söyləyin. Narkisin ailəsindən Rəbdə olanlara salam çatdırın.
12 ೧೨ ಕರ್ತನ ಸೇವೆಯಲ್ಲಿ ಪ್ರಯಾಸಪಟ್ಟವರಾದ ತ್ರುಫೈನಳಿಗೂ, ತ್ರುಫೋಸಳಗೂ ವಂದನೆಗಳು. ಕರ್ತನ ಸೇವೆಯಲ್ಲಿ ಬಹಳವಾಗಿ ಪ್ರಯಾಸಪಟ್ಟಿರುವ ಪ್ರಿಯ ಪೆರ್ಸೀಸಳಿಗೆ ವಂದನೆ.
Rəbbin xidmətində zəhmət çəkmiş Trifena ilə Trifosaya salam söyləyin. Rəbbin xidmətində xeyli zəhmət çəkmiş sevimli Persisə salam çatdırın.
13 ೧೩ ಕರ್ತನಲ್ಲಿ ಆರಿಸಿಕೊಳ್ಳಲ್ಪಟ್ಟವನಾದ ರೂಫನಿಗೂ, ನನಗೆ ತಾಯಿಯಂತಿರುವ ಅವನ ತಾಯಿಗೂ ವಂದನೆಗಳು.
Rəbdə seçmə insan olan Rufusa və mənə də analıq edən anasına salam söyləyin.
14 ೧೪ ಅಸುಂಕ್ರಿತನಿಗೂ, ಪ್ಲೆಗೋನನಿಗೂ, ಹೆರ್ಮೇಯನಿಗೂ, ಪತ್ರೋಬನಿಗೂ, ಹೆರ್ಮಾನನಿಗೂ, ಅವರೊಂದಿಗಿರುವ ಸಹೋದರರಿಗೂ ವಂದನೆಗಳು.
Asinkritə, Fleqona, Hermesə, Patrobaya, Hermaya və onlarla birlikdə olan bacı-qardaşlara salam çatdırın.
15 ೧೫ ಫಿಲೊಲೊಗನಿಗೂ, ಯೂಲ್ಯಳಿಗೂ, ನೇರ್ಯನಿಗೂ, ಅವನ ತಂಗಿಗೂ, ಒಲುಂಪನಿಗೂ, ಇವರೊಂದಿಗಿರುವ ದೇವಜನರೆಲ್ಲರಿಗೂ ವಂದನೆಗಳು.
Filoloqa, Yuliyaya, Nereyə və onun bacısına, Olimpaya və onlarla birlikdə olan bütün müqəddəslərə salam söyləyin.
16 ೧೬ ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳಲ್ಲಿರುವವರೆಲ್ಲರೂ ನಿಮ್ಮನ್ನು ವಂದಿಸುತ್ತಿದ್ದಾರೆ.
Bir-birinizi müqəddəs öpüşlə salamlayın. Məsihin bütün cəmiyyətləri sizə salam göndərir.
17 ೧೭ ಪ್ರಿಯರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ, ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಸಿ ಅವರನ್ನು ಬಿಟ್ಟು ದೂರ ಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
Qardaşlar, sizə yalvarıram ki, öyrəndiyiniz təlimin əleyhinə çıxaraq ayrılıq salan və büdrəməyə səbəb olan adamlara nəzarət edin və onlardan uzaq durun.
18 ೧೮ ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
Çünki belə adamlar Rəbbimiz Məsihə deyil, öz qarınlarına qulluq edirlər; onlar yağlı və yaltaq nitqləri ilə sadəlövh adamların ürəklərini tovlayırlar.
19 ೧೯ ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾದದ್ದರಿಂದ ನಿಮ್ಮ ವಿಷಯದಲ್ಲಿ ಆನಂದಪಡುತ್ತೇನೆ. ನೀವು ಒಳ್ಳೆಯದನ್ನು ಮಾಡುವುದರಲ್ಲಿ ಜಾಣರೂ ಮತ್ತು ಕೆಟ್ಟತನದ ವಿಷಯದಲ್ಲಿ ಮೂರ್ಖರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.
Sizin itaətiniz hamıya bəllidir. Buna görə də sizin üçün sevinirəm. Amma istəyirəm ki, yaxşı işlərdə müdrik, pis işlərdə məsum olasınız.
20 ೨೦ ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ತುಳಿದು ಜಜ್ಜಿಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.
Sülh qaynağı olan Allah Şeytanı tezliklə ayaqlarınızın altında əzəcək. Rəbbimiz İsanın lütfü sizə yar olsun!
21 ೨೧ ನನ್ನ ಜೊತೆಕೆಲಸದವನಾದ ತಿಮೊಥೆಯನೂ, ನನ್ನ ಸಂಬಂಧಿಕರಾದ ಲೂಕ್ಯನೂ, ಯಾಸೋನನೂ ಮತ್ತು ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ
Həmkarım Timotey, soydaşlarım Luki, Yason və Sosipater sizə salam göndərir.
22 ೨೨ ಈ ಪತ್ರಿಕೆಯನ್ನು ಬರೆದ ತೆರ್ತ್ಯನೆಂಬ ನಾನು ನಿಮ್ಮನ್ನು ಕರ್ತನಲ್ಲಿ ವಂದಿಸುತ್ತೇನೆ.
Bu məktubu yazıya alan mən Terti də Rəbbin ismi ilə sizə salam söyləyirəm.
23 ೨೩ ನನಗೂ ಮತ್ತು ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕನಾಗಿರುವ ಎರಸ್ತನೂ, ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
Məni və bütün cəmiyyəti qonaq saxlayan Qayın sizə salamı var. Şəhərin xəzinədarı olan Erast və Kvart qardaş da sizə salam göndərir.
24 ೨೪ ನಮ್ಮ ಕರ್ತನಾದ ಯೇಸುಕ್ರಿಸ್ತನ ಕೃಪೆಯ ನಿಮ್ಮೊಂದಿಗಿರಲಿ. ಆಮೆನ್.
25 ೨೫ ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ, (aiōnios )
Allah mənim elan etdiyim Müjdəyə və İsa Məsih barədə vəzə görə, əzəldən bəri gizli saxlanmış sirri aydınlaşdıran vəhyə uyğun olaraq, sizi qüvvətləndirməyə qadirdir; (aiōnios )
bu həmin sirdir ki, indi aşkar olmuş və əbədi Allahın əmrinə əsasən peyğəmbərlərin Yazıları vasitəsilə bütün millətlərin iman gətirib itaət etməsi üçün bəyan edilmişdir; (aiōnios )
27 ೨೭ ಜ್ಞಾನನಿಧಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಯುಗಯುಗಾಂತರಗಳಲ್ಲಿಯೂ ಸ್ತೋತ್ರವಾಗಲಿ. ಆಮೆನ್. (aiōn )
o yeganə və müdrik Allaha İsa Məsih vasitəsilə əbədi izzət olsun! Amin. (aiōn )