< ರೋಮಾಪುರದವರಿಗೆ 3 >

1 ಹಾಗಾದರೆ ಯೆಹೂದ್ಯರ ವೈಶಿಷ್ಟ್ಯವೇನು? ಸುನ್ನತಿ ಮಾಡಿಸಿಕೊಂಡದರಿಂದ ಲಾಭವೇನು?
What special privilege, then, has the Jew? Or what is the use of circumcision?
2 ಎಲ್ಲಾ ವಿಷಯಗಳನ್ನು ಕುರಿತು ಹೇಳಲು ಬಹಳ ಉಂಟು. ಮೊದಲನೇಯದಾಗಿ ದೈವೋಕ್ತಿಗಳು ಅವರ ವಶಕ್ಕೆ ಸಮರ್ಪಿಸಿ ಒಪ್ಪಿಸಲ್ಪಟ್ಟಿವೆ.
Much in every way. First of all, because to them were entrusted the oracles of God.
3 ಅವರಲ್ಲಿ ಕೆಲವರಿಗೆ ನಂಬಿಕೆ ಇರಲಿಲ್ಲವಾದರೂ? ಅವರ ಅಪನಂಬಿಕೆಯಿಂದ ದೇವರು ನಂಬಿಕೆಗೆ ತಪ್ಪುವವನಾದಾನೋ? ಎಂದಿಗೂ ಇಲ್ಲ.
Supposing some of them have proved faithless?
4 ಬದಲಾಗಿ, “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ.
By no means! Be sure that God is ever true, though all mankind prove false. As it is written, That thou mayest be found just in thine argument, And gain thy cause when thou contendest.
5 ಆದರೆ ನಮ್ಮ ಅನ್ಯಾಯದ ನಡವಳಿಕೆಯಿಂದ ದೇವರು ನೀತಿವಂತನೆಂದು ಪ್ರಸಿದ್ಧಿಗೆ ಬರುವುದಾದರೆ ನಾವು ಏನು ಹೇಳೋಣ? ಉಗ್ರದಂಡನೆಯನ್ನು ಮಾಡುವ ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ. ಈ ಮಾತನ್ನು ಮನುಷ್ಯನ ರೀತಿಯಲ್ಲಿ ಆಡುತ್ತಿದ್ದೇನೆ.
But if our unrighteousness thus brings out God’s righteousness, what shall we say? Is God unrighteous - I speak after the manner of men - when he inflicts his anger on us?
6 ದೇವರು ಅನ್ಯಾಯಗಾರನಾಗಿದ್ದರೆ ಲೋಕಕ್ಕೆ ನ್ಯಾಯ ತೀರ್ಪಾಗುವುದಾದರೂ ಹೇಗೆ?
Be it far from us; for in that case how could God judge the world?
7 ನನ್ನ ಸುಳ್ಳಿನಿಂದ ದೇವರ ಸತ್ಯವು ಪ್ರಸಿದ್ಧಿಗೆ ಬಂದು ಆತನ ಮಹಿಮೆ ಹೆಚ್ಚಾಗುವುದಾದರೆ ಇನ್ನು ನನ್ನನ್ನು ಪಾಪಿಯೆಂದು ಪರಿಗಣಿಸುವುದು ಯಾಕೆ?
But if by a falsehood of mine the truthfulness of God has been made to redound to his glory, why am I still tried as a sinner?
8 “ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು.
And why not say (as I myself am slanderously reported to say), "Let us do evil that good may come out of it"? Such arguments are rightly condemned.
9 ಹಾಗಾದರೆ ಏನು ಹೇಳಬೇಕು? ನಾವು ಅನ್ಯರಿಗಿಂತ ಶ್ರೇಷ್ಠರೋ? ಎಷ್ಟು ಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ ಗ್ರೀಕರೇ ಆಗಲಿ ಎಲ್ಲರೂ ಪಾಪಕ್ಕೆ ಒಳಗಾಗಿ ಅಪರಾಧಿಗಳಾಗಿದ್ದಾರೆಂದು ಮೊದಲೇ ತೋರಿಸಿಕೊಟ್ಟಿದ್ದೇವಲ್ಲಾ.
What then? Are we Jews in a better position? Not at all, for I have already charged all, both Jews and Gentiles, with being under sin.
10 ೧೦ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ, “ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ;
As it is written. There is none righteous, no, not one;
11 ೧೧ ತಿಳಿವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನು ಇಲ್ಲ.
There is none that understands, none that seeks for God!
12 ೧೨ ಎಲ್ಲರೂ ದಾರಿತಪ್ಪಿ ನಡೆಯುತ್ತಾ, ಕೆಟ್ಟುಹೋಗಿದ್ದಾರೆ. ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ.
All have swerved from the right path; Every one of them has become corrupt. There is none that practises good, no, not one.
13 ೧೩ ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ನಾಲಿಗೆಯಿಂದ ವಂಚನೆಯ ಮಾತುಗಳನ್ನಾಡುತ್ತಾರೆ. ಅವರ ತುಟಿಯ ಹಿಂದೆ ಹಾವಿನ ವಿಷವಿದೆ.
Their throat is an open grave; With their tongues they have used deceit. The venom of asps is under their lips.
14 ೧೪ ಅವರ ಬಾಯಿ ಶಾಪದಿಂದಲೂ ಕ್ರೋಧದ ಮಾತುಗಳಿಂದಲೂ, ತುಂಬಿದೆ.
Their mouth is full of cursing and bitterness.
15 ೧೫ ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರಪಡುತ್ತವೆ.
Their feet are swift to shed blood.
16 ೧೬ ಅವರು ಹೋದ ದಾರಿಗಳಲ್ಲಿ ನಾಶಸಂಕಟಗಳು ಪೀಡೆಗಳು ಉಂಟಾಗುತ್ತವೆ.
Destruction and ruin are in their paths;
17 ೧೭ ಸಮಾಧಾನದ ಮಾರ್ಗವನ್ನೇ ಅರಿಯರು.
And the path of peace they have not known.
18 ೧೮ ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ” ಎಂದು ಹೀಗೆ ಬರೆದಿದೆಯಲ್ಲಾ.
Reverence for God is not before their eyes.
19 ೧೯ ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.
Now we know that whatever the Law says, it speaks to those who are under the Law; so that every mouth may be shut, and all the world may be brought under the judgment of God.
20 ೨೦ ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ.
For no man will be justified in God’s sight by works of the Law; for through the Law comes the consciousness of sin.
21 ೨೧ ಈಗಲಾದರೋ ದೇವರಿಂದ ದೊರಕುವ ನೀತಿಯು ನಂಬುವವರೆಲ್ಲರಿಗೆ ಧರ್ಮಶಾಸ್ತ್ರ ನಿಯಮಗಳಿಲ್ಲದೆ ಪ್ರಕಟವಾಗಿದೆ. ಅದು ಮೋಶೆಯ ಧರ್ಮಶಾಸ್ತ್ರದಿಂದಲೂ ಪ್ರವಾದಿಗಳ ನುಡಿಗಳಿಂದಲೂ ಸಾಕ್ಷಿಗೊಂಡಿರುತ್ತವೆ.
But now, quite apart from any law, a righteousness coming from God has been fully brought to light, continually witnessed to by the Law and the Prophets.
22 ೨೨ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.
I mean a righteousness coming from God through faith in Jesus Christ, for all who believe. For there is no distinction between Jew and Gentile,
23 ೨೩ ಎಲ್ಲರೂ ಪಾಪ ಮಾಡಿ ದೇವರ ಮಹಿಮೆಯನ್ನು ಹೊಂದದೇ ಹೋಗಿದ್ದಾರೆ.
since all have sinned and lack the glory which comes from God;
24 ೨೪ ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಅದು ಕ್ರಿಸ್ತ ಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವುದು.
but they are now being justified by his free grace through the deliverance that is in Christ Jesus.
25 ೨೫ ಪೂರ್ವ ಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ನಂಬಿಕೆಯುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತನನ್ನು ರಕ್ತಧಾರೆ ಎರೆಯುವಂತೆ ಮಾಡಿದನು.
For God openly set him forth for himself as an offering of atonement through faith, by means of his blood, in order to show forth his righteousness - since in his forbearance he had passed over the sins previously committed - to show forth his righteousness,
26 ೨೬ ಯೇಸುಕ್ರಿಸ್ತನಲ್ಲಿ ನಂಬಿಕೆ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯು ತಾನು ಸತ್ಯಸ್ವರೂಪನೂ, ನೀತಿವಂತನೂ ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಹೀಗೆ ಮಾಡಿದರು.
I say, at this present time; that he himself might be just, and yet the justifier of him who has faith in Jesus.
27 ೨೭ ಹಾಗಾದರೆ ನಮ್ಮನ್ನು ನಾವು ಹೊಗಳಿಕೊಳ್ಳುವುದಕ್ಕೆ ಅವಕಾಶವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಆಧಾರದಿಂದ? ಕರ್ಮಮಾರ್ಗವನ್ನು ಅನುಸರಿಸುವುದರಿಂದಲೋ? ಅಲ್ಲ. ನಂಬಿಕೆಮಾರ್ಗವನ್ನು ಅನುಸರಿಸುವುದರಿಂದಲೇ.
Then what becomes of boasting? It is shut out. What sort of law forbids it? A law of works? No, but a law of faith.
28 ೨೮ ಧರ್ಮಶಾಸ್ತ್ರ ಸಂಬಂಧವಾದ ಕರ್ಮಗಳಿಲ್ಲದೆ ನಂಬಿಕೆಯಿಂದಲೇ ಮನುಷ್ಯರು ನೀತಿವಂತರೆಂದು ನಿರ್ಣಯಿಸಲ್ಪಡುವರೆಂಬುದಾಗಿ ನಿಶ್ಚಯಮಾಡಿಕೊಂಡಿದ್ದೇವಲ್ಲಾ
For I conclude that a man is justified by faith, altogether apart from the deeds of the Law.
29 ೨೯ ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿದ್ದಾನೋ? ಹೌದು ದೇವರು ಒಬ್ಬನೇ ಹೀಗಿರಲಾಗಿ ಆತನು ಅನ್ಯಜನರಿಗೂ ಸಹ ದೇವರಾಗಿದ್ದಾನೆ.
Is God then the God of the Jews alone, and not of the Gentiles also? He is God of the Gentiles also,
30 ೩೦ ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಅವರ ನಂಬಿಕೆಯೇ ಆಧಾರ. ಹಾಗೆಯೇ ಸುನ್ನತಿಯಿಲ್ಲದವರನ್ನು ನಿರ್ಣಯಿಸುವುದಕ್ಕೂ ನಂಬಿಕೆಯೇ ಕಾರಣ.
since there is one God who will justify the circumcised through faith, and by their faith will he justify the uncircumcised.
31 ೩೧ ಹಾಗಾದರೆ ನಂಬಿಕೆಯಿಂದ ಧರ್ಮಶಾಸ್ತ್ರವನ್ನು ತೆಗೆದು ಹಾಕುತ್ತೇವೋ? ಎಂದಿಗೂ ಇಲ್ಲ. ಧರ್ಮಶಾಸ್ತ್ರವನ್ನು ಸ್ಥಿರಪಡಿಸುತ್ತೇವಷ್ಟೇ.
Do we then render law invalid through faith? Certainly not; on the contrary we make it stand.

< ರೋಮಾಪುರದವರಿಗೆ 3 >