< ರೋಮಾಪುರದವರಿಗೆ 7 >
1 ೧ ಸಹೋದರರೇ, ಧರ್ಮಶಾಸ್ತ್ರವನ್ನು ತಿಳಿದವರೊಂದಿಗೆ ನಾನು ಮಾತನಾಡುತ್ತಿದ್ದೇನೆ, ಒಬ್ಬ ಮನುಷ್ಯನು ಜೀವದಿಂದಿರುವವರೆಗೆ ಮಾತ್ರ ಅವನ ಮೇಲೆ ಧರ್ಮಶಾಸ್ತ್ರವು ನಿಯಂತ್ರಣ ಸಾಧಿಸುತ್ತದೆಂಬುದು ನಿಮಗೆ ಗೊತ್ತಿಲ್ಲವೇ?
Или не знаете, братя, (защото говоря на човеци, които знаят що е закон), че законът владее над човека само, докогато той е жив?
2 ೨ ಇದಕ್ಕೆ ದೃಷ್ಟಾಂತ, ಗಂಡನು ಜೀವದಿಂದಿರುವ ತನಕ ಹೆಂಡತಿಯು ನ್ಯಾಯದ ಪ್ರಕಾರ ಅವನಿಗೆ ಬದ್ಧಳಾಗಿರುವಳು. ಗಂಡನು ಸತ್ತರೆ ಮದುವೆಯ ನಿಯಮದಿಂದ ಅವಳು ಬಿಡುಗಡೆಯಾಗುತ್ತಾಳೆ.
Защото омъжена жена е вързана чрез закона за мъжа, докогато е жив; но когато мъжът умре тя се освобождава от мъжовия закон.
3 ೩ ಹೀಗಿರಲಾಗಿ ಗಂಡನು ಜೀವದಿಂದಿರುವಾಗ ಆಕೆ ಬೇರೊಬ್ಬನನ್ನು ಸೇರಿದರೆ ವ್ಯಭಿಚಾರಿಣಿ ಎನಿಸಿಕೊಳ್ಳುವಳು. ಆದರೆ ಗಂಡನು ಸತ್ತ ಮೇಲೆ ಆಕೆ ಆ ನಿಯಮದಿಂದ ಬಿಡುಗಡೆಯಾದ್ದರಿಂದ, ಆಕೆ ಮತ್ತೊಬ್ಬ ಗಂಡನನ್ನು ಮದುವೆ ಮಾಡಿಕೊಂಡರೂ ವ್ಯಭಿಚಾರಿಣಿ ಎಂದೆನಿಸಿಕೊಳ್ಳುವುದಿಲ್ಲ.
И тъй, ако при живота на мъжа си тя се омъжи за друг мъж, става блудница; но ако умре мъжът й, свободна е от тоя закон, и не става блудница, ако се омъжи за друг мъж.
4 ೪ ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತಿದ್ದೀರಿ. ದೇವರಿಗೆ ಫಲಕೊಡುವುದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತು ಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿದ್ದೀರಿ.
И тъй, братя мои, и вие умряхте спрямо закона чрез Христовото тяло, за да се свържите с друг, сиреч, с възкресения от мъртвите, за да принасяме плод на Бога.
5 ೫ ನಾವು ಶರೀರಾಧೀನ ಸ್ವಭಾವವನ್ನು ಅನುಸರಿಸುತ್ತಿದ್ದಾಗ ಧರ್ಮಶಾಸ್ತ್ರದಿಂದಲೇ ಪ್ರೇರಿತವಾದ ಪಾಪಾದಾಶೆಗಳು ನಮ್ಮ ಅಂಗಗಳಲ್ಲಿ ಸಕ್ರಿಯವಾಗಿ ಮರಣಕ್ಕೆ ಫಲವನ್ನು ಹುಟ್ಟಿಸುತ್ತಿದ್ದವು.
Защото, когато бяхме плътски, греховните страсти, които се възбуждаха чрез закона, действуваха във вашите телесни части, за да принасяме плод който докарва смърт;
6 ೬ ಈಗಲಾದರೋ ನಮ್ಮನ್ನು ಬಂಧಿಸಿಟ್ಟಿದ್ದ ಧರ್ಮಶಾಸ್ತ್ರದ ಪಾಲಿಗೆ ನಾವು ಸತ್ತವರಾದ ಕಾರಣ ಆ ಧರ್ಮಶಾಸ್ತ್ರದಿಂದ ಬಿಡುಗಡೆಹೊಂದಿದ್ದೇವೆ. ಹೀಗಿರಲಾಗಿ ಬರಹರೂಪದ ಹಿಂದಿನ ಶಾಸ್ತ್ರದ ರೀತಿಯಲ್ಲಿ ನಾವು ದೇವರಿಗೆ ಸೇವೆ ಸಲ್ಲಿಸದೆ, ಪವಿತ್ರಾತ್ಮ ಪ್ರೇರಿತವಾದ ಹೊಸ ರೀತಿಯಲ್ಲಿ ಆತನ ಸೇವೆ ಮಾಡುವವರಾಗಿದ್ದೇವೆ.
но сега, като умряхме към това, което ни държеше, освободихме се от закона; тъй щото ние служим по нов дух, а не по старата буква.
7 ೭ ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರವು ಪಾಪಸ್ವರೂಪವೋ? ಎಂದಿಗೂ ಅಲ್ಲ. ಧರ್ಮಶಾಸ್ತ್ರವಿಲ್ಲದಿದ್ದರೆ ಪಾಪವೆಂದರೆ ಏನೆಂದು ನನಗೆ ಗೊತ್ತಾಗುತ್ತಿರಲಿಲ್ಲ. ದೃಷ್ಟಾಂತವಾಗಿ “ದುರಾಶೆ ಪಾಪವೆಂದು” ಎಂದು ಧರ್ಮಶಾಸ್ತ್ರವು ಹೇಳದಿದ್ದರೆ ದುರಾಶೆಯಂದರೆ ಏನೆಂದು ನನಗೆ ತಿಳಿಯುತ್ತಿರಲಿಲ್ಲ.
Тогава що? Да речем ли, че законът е грях? Да не бъде! Но напротив, не бих познал греха освен чрез закона, защото не бих познал, че пожеланието е грях, ако законът не беше казвал: "Не пожелавай".
8 ೮ ಆದರೆ ಪಾಪವು ಈ ಆಜ್ಞೆಯನ್ನು ಉಪಯೋಗಿಸಿಕೊಂಡು ಸಕಲ ವಿಧವಾದ ದುರಾಶೆಗಳನ್ನು ನನ್ನಲ್ಲಿ ಹುಟ್ಟಿಸಿತು. ಧರ್ಮಶಾಸ್ತ್ರವು ಇಲ್ಲದಿರುವಾಗ ಪಾಪವು ಸತ್ತಂತೆ.
Но грехът понеже взе повод чрез заповедта, произведе в мене всякакво пожелание; защото без закон грехът е мъртъв.
9 ೯ ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂದಿತು. ನಾನು ಸತ್ತೆನು.
И аз бях жив някога без закон, но когато дойде заповедта, грехът оживя, а пък аз умрях:
10 ೧೦ ಜೀವಿಸುವುದಕ್ಕಾಗಿ ಕೊಟ್ಟಿರುವ ಆಜ್ಞೆಯೇ ಮರಣಕ್ಕೆ ಕಾರಣವಾಯಿತೆಂದು ನನಗೆ ಕಂಡು ಬಂದಿತು.
намерих, че самата заповед, която бе назначена да докара живот, докара ми смърт.
11 ೧೧ ಹೇಗೆಂದರೆ, ಆಜ್ಞೆಯ ಮೂಲಕವೇ ಪಾಪವು ಸಮಯ ಸಾಧಿಸಿ ನನ್ನನ್ನು ವಂಚಿಸಿತು; ಆ ಕಟ್ಟಳೆಯ ಮೂಲಕವೇ ನನ್ನನ್ನು ಕೊಂದು ಹಾಕಿತು.
Защото грехът, като взе повод чрез заповедта, измами ме и ме умъртви чрез нея.
12 ೧೨ ಹೀಗಿರಲಾಗಿ ಧರ್ಮಶಾಸ್ತ್ರವು ಪರಿಶುದ್ಧವಾದದ್ದು. ಮತ್ತು ಆಜ್ಞೆಯು ಪರಿಶುದ್ಧವೂ, ನ್ಯಾಯವೂ ಮತ್ತು ಒಳ್ಳೆಯದೇ ಆಗಿದೆ.
Тъй щото законът е свят, и заповедта свята, праведна и добра
13 ೧೩ ಹಾಗಾದರೆ ಒಳ್ಳೆಯದೆ ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ. ಪಾಪವೇ ಮರಣಕ್ಕೆ ಕಾರಣವಾದದ್ದು. ಅದು ಹಿತವಾದದರ ಮೂಲಕ ನನಗೆ ಮರಣವನ್ನು ಉಂಟುಮಾಡಿದ್ದರಿಂದ ಪಾಪವೇ ಎಂದು ಕಾಣಿಸಿಕೊಂಡಿತು. ಮತ್ತು ಆಜ್ಞೆಯ ಮೂಲಕ ಪಾಪವು ಕೇವಲ ಪಾಪಸ್ವರೂಪವೇ ಎಂದು ಸ್ಪಷ್ಟವಾಯಿತು.
Тогава, това ли, което е добро, стана смърт за мене? Да не бъде! Но грехът ми причинява смърт чрез това добро нещо, за да се показва, че е грях, тъй щото чрез заповедта, грехът да стане много грешен.
14 ೧೪ ಧರ್ಮಶಾಸ್ತ್ರವು ಆತ್ಮೀಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ದೇಹಧರ್ಮಕ್ಕೆ ಒಳಗಾದವನೂ, ಪಾಪದ ಅಧೀನದಲ್ಲಿ ಗುಲಾಮನಾಗಿರುವುದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.
Защото знаем, че законът е духовен; а пък аз съм от плът, продаден под греха.
15 ೧೫ ಹೇಗೆಂದರೆ ನಾನು ಮಾಡುವುದು ನನಗೇ ತಿಳಿಯುತ್ತಿಲ್ಲ, ಯಾವುದನ್ನು ಮಾಡಬೇಕೆಂದು ನಾನು ಇಚ್ಚಿಸುತ್ತೇನೋ ಅದನ್ನು ಮಾಡದೇ ಅದಕ್ಕೆ ವಿರುದ್ಧವಾದದ್ದನ್ನು ಮಾಡುತ್ತೇನೆ.
Защото не зная какво правя: понеже не върша това, което искам; но онова което мразя, него върша.
16 ೧೬ ಆದರೆ ನಾನು ಮಾಡುವಂಥದಕ್ಕೆ ನನ್ನ ಮನಸ್ಸು ಒಪ್ಪದಿದ್ದರೆ ಧರ್ಮಶಾಸ್ತ್ರವು ಉತ್ತಮವಾದದ್ದೆಂದು ಒಪ್ಪಿಕೊಂಡ ಹಾಗಾಯಿತು.
Обаче, ако върша, това което не искам, съгласен съм със закона, че е добър.
17 ೧೭ ಹೀಗಿರಲಾಗಿ ಆ ಅಸಹ್ಯವಾದದ್ದನ್ನು ಮಾಡುವವನು ಇನ್ನು ನಾನಲ್ಲ, ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತದೆ.
Затова не аз сега върша това, но грехът, който живее в мене.
18 ೧೮ ನನ್ನಲ್ಲಿ ಅಂದರೆ ನನ್ನ ಶರೀರಾಧೀನಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದಿದೆ ಒಳ್ಳೆಯದನ್ನು ಮಾಡುವುದಕ್ಕೆ ನನಗೇನೋ ಮನಸ್ಸುಂಟು ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು.
Защото зная, че в мене, сиреч в плътта ми, не живее доброто; понеже желание за доброто имам; но злото, което не желая, него върша.
19 ೧೯ ನಾನು ಮೆಚ್ಚುವ ಒಳ್ಳೆಯ ಕಾರ್ಯವನ್ನು ಮಾಡದೆ ಮೆಚ್ಚದಿರುವ ಕೆಟ್ಟ ಕಾರ್ಯವನ್ನೇ ಮಾಡುವವನಾಗಿದ್ದೇನೆ.
Защото не върша доброто, което желая; но злото, което не желая, него върша.
20 ೨೦ ಮಾಡಬಾರದೆನ್ನುವ ಕೆಲಸವನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.
Но ако върша това, което не желая, то вече не го върша аз, а грехът, който живее в мене.
21 ೨೧ ಹೀಗಿರಲಾಗಿ ಯಾವುದು ಒಳ್ಳೆಯದೋ ಅದನ್ನು ಮಾಡಬೇಕೆಂದಿದ್ದೇನೆ ಆದರೆ ಕೆಟ್ಟದ್ದೇ ನನ್ನೊಳಗೆ ನೆಲೆಸಿದೆಯೆಂದು ನನಗೆ ಕಾಣಬರುತ್ತದೆ.
И тъй, намирам тоя закон, че при мене, който желая да върша доброто, злото е близу.
22 ೨೨ ಅಂತರಾತ್ಮದೊಳಗೆ ದೇವರ ನಿಯಮದಲ್ಲಿ ಆನಂದ ಪಡುವವನಾಗಿದ್ದೇನೆ. ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮ ಉಂಟೆಂದು ಕಾಣುತ್ತದೆ.
Защото, колкото за вътрешното ми естество, аз се наслаждавам в Божия закон;
23 ೨೩ ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರುದ್ಧವಾಗಿ ಕಾದಾಡಿ ನನ್ನನ್ನು ಸೆರೆಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ನನ್ನನ್ನು ಒಪ್ಪಿಸುವಂಥದ್ದಾಗಿದೆ.
но в телесните си части виждам различен закон, който воюва против закона на ума ми, и ме заробва под греховния закон, който е в частите ми.
24 ೨೪ ಅಯ್ಯೋ, ನಾನು ಎಂಥ ದುರವಸ್ಥೆಯಲ್ಲಿ ಬಿದ್ದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹದಿಂದ ನನ್ನನ್ನು ಬಿಡಿಸುವವನು ಯಾರು?
Окаян аз човек! кой ще ме избави от тялота на тая смърт?
25 ೨೫ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ. ಹೀಗಿರಲಾಗಿ, ನಾನು ಬುದ್ಧಿಯಿಂದ ದೇವರ ನಿಯಮಕ್ಕೆ ದಾಸನಾಗಿಯೂ, ಮತ್ತೊಂದು ಕಡೆ ಶರೀರದಿಂದ ಪಾಪದ ನಿಯಮಕ್ಕೆ ಆಳಾಗಿಯೂ ನಡೆದುಕೊಳ್ಳುವವನಾಗಿದ್ದೇನೆ.
Благодарение Богу! има избавление чрез Исуса Христа, нашия Господ. И тъй, сам аз с ума слугувам на Божия закон, а с плътта