< ರೋಮಾಪುರದವರಿಗೆ 8 >
1 ೧ ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಯಾವ ಅಪರಾಧ ನಿರ್ಣಯವೂ ಇಲ್ಲ,
nihil ergo nunc damnationis est his qui sunt in Christo Iesu qui non secundum carnem ambulant
2 ೨ ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ವಿಮುಕ್ತಿಗೊಳಿಸಿತು.
lex enim Spiritus vitae in Christo Iesu liberavit me a lege peccati et mortis
3 ೩ ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.
nam quod inpossibile erat legis in quo infirmabatur per carnem Deus Filium suum mittens in similitudinem carnis peccati et de peccato damnavit peccatum in carne
4 ೪ ಹೀಗಿರಲು ಶರೀರಭಾವಕ್ಕೆ ಅನುಸಾರವಾಗಿ ನಡೆಯದೆ ಪವಿತ್ರಾತ್ಮನಿಗನುಸಾರವಾಗಿ ನಡೆಯುವವರಾದ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮವು ನೆರವೇರುವುದಕ್ಕಾಗಿ ಹಾಗೆ ಮಾಡಿದನು.
ut iustificatio legis impleretur in nobis qui non secundum carnem ambulamus sed secundum Spiritum
5 ೫ ಶರೀರಭಾವವನ್ನು ಅನುಸರಿಸುವವರು ಅದಕ್ಕೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ, ಪವಿತ್ರಾತ್ಮನನ್ನುಸರಿಸುವವರು ಪವಿತ್ರಾತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.
qui enim secundum carnem sunt quae carnis sunt sapiunt qui vero secundum Spiritum quae sunt Spiritus sentiunt
6 ೬ ಶರೀರಭಾವದ ವಿಷಯಗಳ ಮೇಲೆ ಮನಸ್ಸಿಡುವುದು ಮರಣ; ಪವಿತ್ರಾತ್ಮನ ವಿಷಯಗಳ ಮೇಲೆ ಮನಸ್ಸಿಡುವುದು ನಿತ್ಯಜೀವವೂ ಮತ್ತು ಮನಶಾಂತಿಯೂ ಆಗಿದೆ.
nam prudentia carnis mors prudentia autem Spiritus vita et pax
7 ೭ ಯಾಕೆಂದರೆ ಶರೀರಭಾವಗಳ ಮೇಲೆ ಮನಸ್ಸಿಡುವುದು ದೇವರಿಗೆ ವಿರುದ್ಧವಾಗಿದೆ; ಅಂಥ ಮನಸ್ಸು ಧರ್ಮನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ.
quoniam sapientia carnis inimicitia est in Deum legi enim Dei non subicitur nec enim potest
8 ೮ ಶರೀರಭಾವಾಧೀನವಾಗಿರುವವರು ದೇವರನ್ನು ಮೆಚ್ಚಿಸಲಾರರು.
qui autem in carne sunt Deo placere non possunt
9 ೯ ಆದಾಗ್ಯೂ, ನೀವೂ ದೇವರ ಆತ್ಮನ ಸ್ವಭಾವದ ಮೇಲೆ ಆತುಕೊಂಡು ಜೀವಿಸುವವರೇ ಹೊರತು ದೇಹಸ್ವಭಾವದವರಲ್ಲಾ. ನಿಮ್ಮಲ್ಲಿ ದೇವರ ಆತ್ಮನು ವಾಸವಾಗಿರುವುದಾದರೆ ನೀವು ಶರೀರ ಭಾವಾಧೀನರಲ್ಲ, ದೇವರಾತ್ಮನಿಗೆ ಅಧೀನರಾಗಿದ್ದೀರಿ. ಯಾರಲ್ಲಿ ಕ್ರಿಸ್ತನ ಆತ್ಮನು ಇಲ್ಲವೋ ಅವನು ಕ್ರಿಸ್ತನವನಲ್ಲ.
vos autem in carne non estis sed in Spiritu si tamen Spiritus Dei habitat in vobis si quis autem Spiritum Christi non habet hic non est eius
10 ೧೦ ಆದರೆ ಕ್ರಿಸ್ತನು ನಿಮ್ಮಲ್ಲಿರುವುದಾದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ, ಆತ್ಮವು ನೀತಿಯ ದೆಸೆಯಿಂದ ಜೀವಸ್ವರೂಪವಾಗಿರುತ್ತದೆ.
si autem Christus in vobis est corpus quidem mortuum est propter peccatum spiritus vero vita propter iustificationem
11 ೧೧ ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು.
quod si Spiritus eius qui suscitavit Iesum a mortuis habitat in vobis qui suscitavit Iesum Christum a mortuis vivificabit et mortalia corpora vestra propter inhabitantem Spiritum eius in vobis
12 ೧೨ ಹೀಗಿರಲಾಗಿ ಸಹೋದರರೇ, ನಾವು ಹಂಗಿನಲ್ಲಿದ್ದೇವೆ; ಆದರೆ ಪವಿತ್ರಾತ್ಮನ್ನನುಸರಿಸಿ ನಡೆಯುವ ಹಂಗಿನಲ್ಲಿದ್ದೇವೆಯೇ ಹೊರತು ಶರೀರಭಾವವನ್ನು ಅನುಸರಿಸಿ ಬದುಕಬೇಕೆಂಬ ಹಂಗಿನಲಿಲ್ಲ.
ergo fratres debitores sumus non carni ut secundum carnem vivamus
13 ೧೩ ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವುದು ನಿಶ್ಚಯ; ನೀವು ಪವಿತ್ರಾತ್ಮನಿಂದ ದೇಹದ ದುರಭ್ಯಾಸಗಳನ್ನು ನಾಶ ಮಾಡುವುದಾದರೆ ಜೀವಿಸುವಿರಿ.
si enim secundum carnem vixeritis moriemini si autem Spiritu facta carnis mortificatis vivetis
14 ೧೪ ಯಾರು ದೇವರ ಆತ್ಮಾನುಸಾರವಾಗಿ ನಡೆದುಕೊಳ್ಳುತ್ತಾರೋ, ಅವರು ದೇವರ ಮಕ್ಕಳಾಗಿದ್ದಾರೆ.
quicumque enim Spiritu Dei aguntur hii filii sunt Dei
15 ೧೫ ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ.
non enim accepistis spiritum servitutis iterum in timore sed accepistis Spiritum adoptionis filiorum in quo clamamus Abba Pater
16 ೧೬ ನಾವು ದೇವರ ಮಕ್ಕಳಾಗಿದ್ದೇವೆಂಬುದಕ್ಕೆ ಪವಿತ್ರಾತ್ಮನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.
ipse Spiritus testimonium reddit spiritui nostro quod sumus filii Dei
17 ೧೭ ಮಕ್ಕಳಾಗಿದ್ದರೆ ಬಾಧ್ಯಸ್ಥರೂ ಆಗಿದ್ದೇವೆ; ದೇವರಿಗೆ ಬಾಧ್ಯಸ್ಥರೂ ಹಾಗೂ ಕ್ರಿಸ್ತನೊಂದಿಗೆ ಸಹಾ ಬಾಧ್ಯರು ಆಗಿದ್ದೇವೆ. ಹೇಗೆಂದರೆ ಕ್ರಿಸ್ತನ ಕಷ್ಟಗಳಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.
si autem filii et heredes heredes quidem Dei coheredes autem Christi si tamen conpatimur ut et conglorificemur
18 ೧೮ ನಮಗೋಸ್ಕರ ಮುಂದಿನ ಕಾಲದಲ್ಲಿ ಪ್ರತ್ಯಕ್ಷವಾಗುವ ಮಹಿಮಾಪದವಿಯನ್ನು ಆಲೋಚಿಸಿದರೆ ಈಗಿನ ಕಾಲದ ಕಷ್ಟಗಳು ಅಲ್ಪವೇ ಸರಿ ಎಂದು ಎಣಿಸುತ್ತೇನೆ.
existimo enim quod non sunt condignae passiones huius temporis ad futuram gloriam quae revelabitur in nobis
19 ೧೯ ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಸೃಷ್ಟಿಯು ಬಹು ಕಾತುರದಿಂದ ಎದುರು ನೋಡುತ್ತಿದೆ.
nam expectatio creaturae revelationem filiorum Dei expectat
20 ೨೦ ಸೃಷ್ಟಿ ನಿರರ್ಥಕತೆಗೆ ಒಳಗಾಯಿತು; ಹೀಗೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದವನ ಸಂಕಲ್ಪದಿಂದಲೇ,
vanitati enim creatura subiecta est non volens sed propter eum qui subiecit in spem
21 ೨೧ ಆದರೂ ಅದಕ್ಕೊಂದು ನಿರೀಕ್ಷೆಯುಂಟು; ಏನೆಂದರೆ ಆ ಸೃಷ್ಟಿಯೂ ಕೂಡ ನಾಶದ ವಶದಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮೆಯುಳ್ಳ ವಿಮೋಚನೆಯಲ್ಲಿ ಪಾಲುಹೊಂದುತ್ತವೆಂಬುದೇ.
quia et ipsa creatura liberabitur a servitute corruptionis in libertatem gloriae filiorum Dei
22 ೨೨ ಸೃಷ್ಟಿಯೆಲ್ಲಾ ಇಂದಿನವರೆಗೂ ನರಳುತ್ತಾ, ಪ್ರಸವ ವೇದನೆಪಡುತ್ತಾ ಇದೆಯೆಂದು ನಾವು ಬಲ್ಲೆವು. ಇದು ಮಾತ್ರವಲ್ಲದೆ
scimus enim quod omnis creatura ingemescit et parturit usque adhuc
23 ೨೩ ಪ್ರಥಮ ಫಲವಾಗಿರುವ ಹಾಗೂ ಪವಿತ್ರಾತ್ಮವರವನ್ನು ಹೊಂದಿದ ನಾವೂ ಸಹ ದೇವರ ಮಕ್ಕಳ ಪದವಿಯನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತಿದ್ದೇ.
non solum autem illa sed et nos ipsi primitias Spiritus habentes et ipsi intra nos gemimus adoptionem filiorum expectantes redemptionem corporis nostri
24 ೨೪ ಆ ನಿರೀಕ್ಷೆಯಿಂದಲೇ ನಾವು ರಕ್ಷಣೆಯನ್ನು ಹೊಂದಿದವರಾಗಿದ್ದೇವೆ. ನಾವು ನಿರೀಕ್ಷಿಸುವುದು ಪ್ರತ್ಯಕ್ಷವಾಗಿದ್ದರೆ ಅದನ್ನು ನಿರೀಕ್ಷೆ ಎನ್ನುವುದಿಲ್ಲ; ಪ್ರತ್ಯಕ್ಷವಾಗಿರುವುದನ್ನು ಯಾರಾದರೂ ನಿರೀಕ್ಷಿಸುವುದುಂಟೇ?
spe enim salvi facti sumus spes autem quae videtur non est spes nam quod videt quis quid sperat
25 ೨೫ ಆದರೆ ಕಾಣದಿರುವುದನ್ನು ನಾವು ಎದುರುನೋಡುವವರಾಗಿರುವುದರಿಂದ ತಾಳ್ಮೆಯಿಂದ ಕಾದುಕೊಂಡಿದ್ದೇವೆ.
si autem quod non videmus speramus per patientiam expectamus
26 ೨೬ ಹಾಗೆ ಪವಿತ್ರಾತ್ಮನು ಸಹ ನಮ್ಮ ಬಲಹೀನತೆಯನ್ನು ನೋಡಿ ನಮಗೆ ಸಹಾಯಮಾಡುತ್ತಾನೆ. ಹೇಗೆಂದರೆ ನಾವು ಯಾವಾಗ ಏನು ಬೇಡಿಕೊಳ್ಳಬೇಕೋ ಎನ್ನುವುದು ನಮಗೆ ತಿಳಿದಿಲ್ಲದ್ದರಿಂದ ಪವಿತ್ರಾತ್ಮನು ತಾನೇ ಮಾತಿಲ್ಲದ ನರಳಾಟದಿಂದ ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಾನೆ.
similiter autem et Spiritus adiuvat infirmitatem nostram nam quid oremus sicut oportet nescimus sed ipse Spiritus postulat pro nobis gemitibus inenarrabilibus
27 ೨೭ ಆದರೆ ಹೃದಯಗಳನ್ನು ಪರಿಶೋಧಿಸಿ ನೋಡುವಾತನಿಗೆ ಪವಿತ್ರಾತ್ಮನ ಮನೋಭಾವವು ಏನೆಂದು ತಿಳಿದಿದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ದೇವಜನರಿಗೋಸ್ಕರ ಬೇಡಿಕೊಳ್ಳುವನೆಂದು ಆತನು ಬಲ್ಲನು.
qui autem scrutatur corda scit quid desideret Spiritus quia secundum Deum postulat pro sanctis
28 ೨೮ ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.
scimus autem quoniam diligentibus Deum omnia cooperantur in bonum his qui secundum propositum vocati sunt sancti
29 ೨೯ ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು.
nam quos praescivit et praedestinavit conformes fieri imaginis Filii eius ut sit ipse primogenitus in multis fratribus
30 ೩೦ ಮತ್ತು ಯಾರನ್ನು ಮೊದಲು ನೇಮಿಸಿದನೋ ಅವರನ್ನು ಕರೆದನು. ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು. ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಾಪದವಿಗೆ ಸೇರಿಸಿದನು.
quos autem praedestinavit hos et vocavit et quos vocavit hos et iustificavit quos autem iustificavit illos et glorificavit
31 ೩೧ ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
quid ergo dicemus ad haec si Deus pro nobis quis contra nos
32 ೩೨ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ, ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ?
qui etiam Filio suo non pepercit sed pro nobis omnibus tradidit illum quomodo non etiam cum illo omnia nobis donabit
33 ೩೩ ದೇವರು ಆದುಕೊಂಡವರ ಮೇಲೆ ಯಾರು ತಪ್ಪು ಹೊರಿಸುವವರು ಯಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವಾತನಾಗಿದ್ದಾನೆ.
quis accusabit adversus electos Dei Deus qui iustificat
34 ೩೪ ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ?
quis est qui condemnet Christus Iesus qui mortuus est immo qui resurrexit qui et est ad dexteram Dei qui etiam interpellat pro nobis
35 ೩೫ ಈ ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ? ಸಂಕಟವೋ? ಹಿಂಸೆಯೋ? ಹಸಿವೋ? ವಸ್ತ್ರವಿಲ್ಲದಿರುವುದೋ? ಗಂಡಾಂತರವೋ? ಖಡ್ಗವೋ?
quis nos separabit a caritate Christi tribulatio an angustia an persecutio an fames an nuditas an periculum an gladius
36 ೩೬ “ದೇವರೇ ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗುತ್ತಿದ್ದೇವೆ. ವಧ್ಯಸ್ಥಾನಕ್ಕೆ ಒಯ್ದ ಕುರಿಗಳಂತೆ ಎಣಿಸಿದರು.” ಎಂಬುದಾಗಿ ಬರೆದಿರುವಂತೆ ಆಗುತ್ತದಲ್ಲಾ.
sicut scriptum est quia propter te mortificamur tota die aestimati sumus ut oves occisionis
37 ೩೭ ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಎಲ್ಲಾ ವಿಷಯಗಳಲ್ಲಿಯೂ ಪೂರ್ಣ ಜಯಶಾಲಿಗಳಾಗಿದ್ದೇವೆ.
sed in his omnibus superamus propter eum qui dilexit nos
38 ೩೮ ಹೇಗೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ಈಗಿನ ಸಂಗತಿಗಳಾಗಲಿ, ಮುಂದಣ ಸಂಗತಿಗಳಾಗಲಿ,
certus sum enim quia neque mors neque vita neque angeli neque principatus neque instantia neque futura neque fortitudines
39 ೩೯ ಮಹತ್ವಗಳಾಗಲಿ, ಮೇಲಣ ಲೋಕವಾಗಲಿ, ಕೆಳಗಣ ಲೋಕವಾಗಲಿ, ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ಅಗಲಿಸಲು ಸಾಧ್ಯವಿಲ್ಲವೆಂದು ನಾವು ಬಲ್ಲವರಾಗಿದ್ದೇವೆ.
neque altitudo neque profundum neque creatura alia poterit nos separare a caritate Dei quae est in Christo Iesu Domino nostro