< ರೋಮಾಪುರದವರಿಗೆ 9 >

1 ನಾನು ಕ್ರಿಸ್ತನಲ್ಲಿದುಕೊಂಡು ಸುಳ್ಳಾಡದೆ, ಸತ್ಯವಾಗಿ ಹೇಳುತ್ತೇನೆ. ಪವಿತ್ರಾತ್ಮನಿಂದ ನೆಲೆಗೊಂಡಿರುವ ನನ್ನ ಮನಸ್ಸಾಕ್ಷಿಯೇ ಇದಕ್ಕೆ ಸಾಕ್ಷಿ.
Es patiesību saku iekš Kristus, es nemeloju, jo mana sirdsapziņa man liecību dod iekš Svēta Gara,
2 ನನಗೆ ಹೆಚ್ಚಾದ ದುಃಖವೂ, ನನ್ನ ಹೃದಯದಲ್ಲಿ ಎಡೆಬಿಡದೆ ವೇದನೆಯೂ ಉಂಟು.
Ka man ir lielas skumjas un nemitīgas sāpes manā sirdī.
3 ನನ್ನ ಸ್ವಜನರೂ ರಕ್ತಸಂಬಂಧಿಕರೂ ಆದ ನನ್ನ ಪ್ರಿಯರಿಗೋಸ್ಕರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕ್ರಿತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ.
Jo es būtu vēlējies pats būt nolādēts no Kristus par maniem brāļiem, kas ir mani radi pēc miesas;
4 ಅವರು ಇಸ್ರಾಯೇಲಿನ ವಂಶದವರು. ದೇವರು ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡನು; ಇವರಿಗೆ ತನ್ನ ಮಹಿಮೆಯನ್ನು ವ್ಯಕ್ತಪಡಿಸಿದನು; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡಿದ್ದಾನೆ ಅವರಿಗೆ ಧರ್ಮಶಾಸ್ತ್ರವು, ದೇವಾಲಯದಲ್ಲಿ ನಡೆಯುವ ಆರಾಧನೆಯೂ, ವಾಗ್ದಾನಗಳೂ ಕೊಡಲ್ಪಟ್ಟವು.
Tie ir Israēlieši, tiem pieder tā bērnība un tā godība un tās derības un tā bauslība un Tā Dieva kalpošana un tās apsolīšanas,
5 ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್. (aiōn g165)
Tiem tie tēvi, no kuriem arī Kristus pēc miesas; tas ir Dievs pār visiem, augsti teicams mūžīgi. Āmen. (aiōn g165)
6 ದೇವರ ವಾಕ್ಯವು ವ್ಯರ್ಥವಾಯಿತೆಂದು ನಾವು ಭಾವಿಸಬಾರದು. ಯಾಕೆಂದರೆ ಇಸ್ರಾಯೇಲ ವಂಶದಲ್ಲಿ ಹುಟ್ಟಿದವರೆಲ್ಲರೂ ಇಸ್ರಾಯೇಲ್ಯರಲ್ಲ.
Tomēr ne tā, tā kā Dieva vārds būtu pakritis; jo ne visi, kas no Israēla, ir Israēls,
7 ಹಾಗೆಯೇ ಅಬ್ರಹಾಮನ ವಂಶದಲ್ಲಿ ಹುಟ್ಟಿದ ಮಾತ್ರಕ್ಕೆ ಅವರೆಲ್ಲರೂ ಮಕ್ಕಳೆಂದು ಎಣಿಸಲ್ಪಡುವುದಿಲ್ಲ. ಆದರೆ “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು.” ಎಂದು ದೇವರು ಹೇಳಿದನು.
Nedz tie visi tādēļ bērni, ka tie ir Ābrahāma dzimums, bet: “Iekš Īzaka tev dzimums taps dēvēts.”
8 ಆ ಮಾತಿನ ಅರ್ಥವೇನಂದರೆ ಶರೀರಸಂಬಂಧವಾಗಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ. ವಾಗ್ದಾನ ಸಂಬಂಧವಾಗಿ ಹುಟ್ಟಿದವರೇ ಅಬ್ರಹಾಮನ ಸಂತತಿಯವರೆಂದು ಎಣಿಸಲ್ಪಡುವರು ಎಂಬುದು.
Tas ir: ne tie miesas bērni ir Dieva bērni, bet tie apsolīšanas bērni top turēti par dzimumu.
9 “ಮುಂದಿನ ವರ್ಷದಲ್ಲಿ ಇದೇ ಕಾಲದಲ್ಲಿ ನಾನು ಬರುವೆನು ಆಗ ಸಾರಳಿಗೆ ಮಗನು ಇರುವನು” ಎಂಬ ವಾಗ್ದಾನವಾಗಿದೆ.
Jo tas apsolīšanas vārds ir šis: ap šo pašu laiku Es nākšu, tad Sārai būs dēls.
10 ೧೦ ಇದು ಮಾತ್ರವಲ್ಲದೆ ರೆಬೆಕ್ಕಳು ಸಹ ನಮ್ಮ ಮೂಲಪಿತೃವಾದ ಇಸಾಕನಿಂದ ಅವಳಿ ಜವಳಿ ಮಕ್ಕಳಿಗೆ ಬಸುರಾದಾಗ ಅದರಂತೆಯೇ ಆಯಿತು.
Un ne vien šī, bet arī Rebeka, kad bija grūta no viena, no Īzaka, mūsu tēva -
11 ೧೧ ಆ ಮಕ್ಕಳು ಒಬ್ಬ ತಂದೆಯ ಮಕ್ಕಳಾಗಿದ್ದರೂ ಅವರು ಇನ್ನು ಹುಟ್ಟದೆಯೂ, ಒಳ್ಳೆದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡುವ ಮೊದಲೇ “ಹಿರಿಯನು ಕಿರಿಯನಿಗೆ ಸೇವೆಮಾಡುವನೆಂಬುದಾಗಿ” ಆಕೆಗೆ ಹೇಳಲ್ಪಟ್ಟಿತು. ಇದರಿಂದ ದೇವರು ತನಗೆ ಮನಸ್ಸಿದ್ದವರನ್ನು ಆರಿಸಿಕೊಳ್ಳುತ್ತಾನೆಂಬ ಸಂಕಲ್ಪವು ಒಳ್ಳೆಯ ಕಾರ್ಯಗಳ ಮೇಲೆ ಆಧಾರಗೊಳ್ಳದೆ ಕರೆಯುವಾತನ ಚಿತ್ತದ ಮೇಲೆಯೇ ಆಧಾರಗೊಂಡಿದೆ.
Jo kad tie bērni vēl nebija dzimuši, nedz darījuši ne laba ne ļauna, lai Dieva nodoms, kā Viņš izredzējis, pastāvētu, ne pēc darbiem, bet pēc Tā aicinātāja;
12 ೧೨
Tad viņai kļuva sacīts: lielākais kalpos mazākajam;
13 ೧೩ ಇದಕ್ಕನುಸಾರವಾಗಿ “ಯಾಕೋಬನನ್ನು ಪ್ರೀತಿಸಿದೆನು ಹಾಗೂ ಏಸಾವನನ್ನು ದ್ವೇಷಿಸಿದನು” ಎಂದು ಬರೆದದೆ.
Tā kā ir rakstīts: Es Jēkabu esmu mīlējis un Ēsavu ienīdējis.
14 ೧೪ ಹಾಗಾದರೆ ಏನು ಹೇಳೋಣ? ದೇವರಲ್ಲಿ ಅನ್ಯಾಯ ಉಂಟೋ? ಎಂದಿಗೂ ಇಲ್ಲ.
Ko nu lai sakām? Vai netaisnība ir pie Dieva? Nebūt ne!
15 ೧೫ “ಯಾವನ ಮೇಲೆ ನನಗೆ ಕರುಣೆ ಉಂಟೋ ಅವನನ್ನು ಕರುಣಿಸುವೆನು, ಯಾವನ ಮೇಲೆ ನನ್ನ ಕನಿಕರವಿದೆಯೋ ಅವನಿಗೆ ಕನಿಕರ ತೋರಿಸುವೆನು” ಎಂದು ದೇವರು ಮೋಶೆಗೆ ಹೇಳಿರುತ್ತಾನೆ.
Jo uz Mozu Viņš saka: Es žēlošu, ko žēloju, un apžēlošos, par ko apžēlojos.
16 ೧೬ ಆದ್ದರಿಂದ ದೇವರ ದಯೆಯು ಮನುಷ್ಯರಿಗೆ ಅಪೇಕ್ಷಿಸುವುದರಿಂದಾಗಲಿ, ಪ್ರಯತ್ನಿಸುವುದರಿಂದಾಗಲಿ ದೊರೆಯದೆ ದೇವರು ಕರುಣಿಸುವುದರಿಂದಲೇ ದೊರೆಯುತ್ತದೆ.
Tad nu tas nav ne no cilvēka gribēšanas, ne no cilvēka skriešanas, bet no Dieva apžēlošanās.
17 ೧೭ ದೇವರು ಫರೋಹನನನ್ನು ಕುರಿತು “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತ ಸ್ಥಾನಕ್ಕೆ ತಂದಿದ್ದೇನೆಂದು ಹೇಳಿದನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆಯಲ್ಪಟ್ಟಿದೆ.
Jo tas raksts saka uz Faraonu: itin tāpēc Es tevi esmu cēlis, ka Es pie tevis parādītu Savu spēku, un ka Mans Vārds taptu pasludināts visā pasaulē.
18 ೧೮ ದೇವರು ಯಾರನ್ನು ಕರುಣಿಸಿದರೋ, ಯಾರನ್ನು ಕಠಿಣಪಡಿಸಿದರೋ ಅದೆಲ್ಲವೂ ಆತನ ಇಷ್ಟಾನುಸಾರವಾಗಿಯೇ ಇದೆ ಎಂಬುದು ಇದರಿಂದ ತೋರಿಬರುತ್ತದೆ.
Tad nu Viņš apžēlojās, par ko Tas grib, un apcietina, ko Tas grib.
19 ೧೯ “ದೇವರ ಚಿತ್ತವನ್ನು ಎದುರಿಸುವವರು ಇಲ್ಲದಿರುವಾಗ ಆತನು ತಪ್ಪು ಹುಡುಕುವುದು ಹೇಗೆ” ಎಂದು ನೀನು ನನ್ನನ್ನು ಕೇಳುವಿ.
Tu nu gan uz mani sacīsi: ko tad Viņš vēl rāj? Jo kas Viņa prātam var pretī turēties?
20 ೨೦ ಎಲೋ ಮನುಷ್ಯನೇ ಹಾಗೆನ್ನಬೇಡ ದೇವರಿಗೆ ವಿರುದ್ಧವಾಗಿ ಮಾತನಾಡುವುದಕ್ಕೆ ನೀನು ಎಷ್ಟರವನು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ, “ಏಕೆ ನನ್ನನ್ನು ಹೀಗೆ ರೂಪಿಸಿದೆ”, ಎಂದು ಕೇಳುವುದುಂಟೇ?
Bet, ak cilvēciņ! Kas tu tāds esi, ka tu gribi ar Dievu tiesāties? Vai kāds darbs uz savu meistaru saka: kam tu mani tādu esi taisījis?
21 ೨೧ ಉತ್ತಮವಾದ ಬಳಕೆಗೆ ಒಂದು ಪಾತ್ರೆಯನ್ನೂ, ಹೀನವಾದ ಬಳಕೆಗೆ ಮತ್ತೊಂದು ಪಾತ್ರೆಯನ್ನೂ ಒಂದೇ ಮಣ್ಣಿನ ಮುದ್ದೆಯಿಂದ ಮಾಡುವುದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?
Vai tad podniekam nav vara pār mālu, no tās pašas pītes taisīt citu trauku godam un citu negodam?
22 ೨೨ ಆದರೆ ದೇವರು ತನ್ನ ಕೋಪವನ್ನು ತೋರಿಸಿ ತನ್ನ ಶಕ್ತಿಯನ್ನು ಪ್ರಸಿದ್ಧಿಪಡಿಸಬೇಕೆಂದಿದ್ದರೂ ಹಾಗೆ ಮಾಡದೆ ತನ್ನ ಕೋಪಕ್ಕೆ ಗುರಿಯಾದ ನಾಶನಪಾತ್ರರನ್ನು ಬಹು ತಾಳ್ಮೆಯಿಂದ ಸಹಿಸಿಕೊಂಡಿದ್ದಾನೆ.
Bet nu Dievs, gribēdams dusmību parādīt un Savu spēku zināmu darīt, ar lielu lēnprātību ir panesis tos dusmības traukus, sataisītus uz pazušanu,
23 ೨೩ ಮತ್ತು ಮಹಿಮೆ ಹೊಂದುವುದಕ್ಕೆ ತಾನು ಮೊದಲೇ ಸಿದ್ಧಪಡಿಸಿರುವ ಕರುಣಾಪಾತ್ರರಲ್ಲಿ ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.
Un ka Tas Savas godības bagātību parādītu pie tiem žēlastības traukiem, ko Viņš iepriekš ir sataisījis uz godību.
24 ೨೪ ಆತನು ಕರುಣಿಸಿದ ನಮ್ಮನ್ನು ಯೆಹೂದ್ಯರೊಳಗಿಂದ ಮಾತ್ರ ಕರೆಯದೆ ಹೋಶೇಯನ ಗ್ರಂಥದ ವಚನದಲ್ಲಿ ತಾನು ಸೂಚಿಸಿರುವಂತೆ ಅನ್ಯಜನರೊಳಗಿಂದ ಸಹ ಕರೆದನು.
Tādus Viņš arī mūs ir aicinājis, ne vien no Jūdiem, bet arī no pagāniem.
25 ೨೫ ಆ ವಚನವೇನಂದರೆ, “ನನ್ನ ಜನವಲ್ಲದವರನ್ನು ನನ್ನ ಜನರೆಂದು ನನಗೆ ಅಪ್ರಿಯವಾದವಳನ್ನು ಪ್ರಿಯಳೆಂದೂ ಹೇಳುವೆನು.
Tā kā Viņš arī pie Hozejas saka: Es tos saukšu par Saviem ļaudīm, kas Mani ļaudis nebija, un par Savu mīļo, kas Man mīļa nebija;
26 ೨೬ ಮತ್ತು ಯಾವ ಸ್ಥಳದಲ್ಲಿ ‘ನೀವು ನನ್ನ ಜನರಲ್ಲವೆಂದು’ ಅವರಿಗೆ ಹೇಳಲ್ಪಟ್ಟಿತೋ ಆ ಸ್ಥಳದಲ್ಲಿಯೇ ಅವರು ‘ಜೀವವುಳ್ಳ ದೇವರ ಮಕ್ಕಳು ಎನಿಸಿಕೊಳ್ಳುವರು’” ಎಂಬುದೇ.
Un notiks tanī vietā, kur uz tiem tika sacīts: Jūs neesat Mani ļaudis! Tur tie taps saukti Tā dzīvā Dieva bērni.
27 ೨೭ ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ ಹೀಗೆಂದು ಘೋಷಿಸಿದ್ದಾನೆ: “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಿಸಲ್ಪಡುವರು” “ಕರ್ತನು ಭೂಮಿಯಲ್ಲಿ ತನ್ನ ವಚನವನ್ನು ಕ್ಷಣದಲ್ಲಿ ನೆರವೆರಿಸಿಮುಗಿಸುವನು” ಎಂದು ಕೂಗಿ ಹೇಳುತ್ತಾನೆ.
Un Jesaja izsauc pār Israēli: ja Israēla bērnu skaits būtu kā jūras smiltis, tomēr tikai atlikums taps izglābts.
28 ೨೮ ಅದೇ ಅಭಿಪ್ರಾಯದಿಂದ ಯೆಶಾಯನು ಮತ್ತೊಂದು ವಚನದಲ್ಲಿ,
Jo Viņš to vārdu piepilda un pasteidz iekš taisnības; jo drīz Tas Kungs to vārdu izdarīs virs zemes.
29 ೨೯ “ಸೇನಾಧೀಶ್ವರನಾದ ಕರ್ತನು ನಮಗೆ ಒಂದು ಸಂತಾನವನ್ನು ಉಳಿಸದೆ ಹೋಗಿದ್ದರೆ “ಸೊದೋಮಿನ ಗತಿಯೇ ನಮಗಾಗುತ್ತಿತ್ತು ಗೊಮೋರದ ದುರ್ದೆಸೆಯೇ ಸಂಭವಿಸುತ್ತಿತ್ತು” ಎಂದು ಮೊದಲೇ ತಿಳಿದುಕೊಂಡು ಹೇಳಿದ್ದಾರೆ.
Un itin kā Jesaja ir papriekš sacījis: ja Tas Kungs Cebaot mums nebūtu atlicinājis kādu sēklu, tad mēs būtu palikuši tā kā Sodoma un līdzīgi Gomorai.
30 ೩೦ ಹಾಗಾದರೆ ಏನು ಹೇಳೋಣ? ನೀತಿಯನ್ನು ಅನುಸರಿಸದ ಅನ್ಯಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾದ ನೀತಿಯು ದೊರಕಿತು.
Ko nu lai sakām? Ka pagāni, kas pēc taisnības nedzinās, taisnību dabūjuši, proti to taisnību no ticības;
31 ೩೧ ಆದರೆ ನೀತಿಯನ್ನು ಹಿಂಬಾಲಿಸಿದ್ದ ಇಸ್ರಾಯೇಲ್ಯರು ನೀತಿಯನ್ನು ದೊರಕಿಸುವ ಧರ್ಮವನ್ನು ಹಿಡಿಯಲಾರದೆ ಹೋದರೆಂದು ಹೇಳಬೇಕು.
Bet Israēls, pēc taisnības bauslības dzīdamies, to taisnības bauslību nav panācis.
32 ೩೨ ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಅನುಸರಿಸದೆ ನೇಮನಿಷ್ಠೆಗಳನ್ನು ಹಿಂಬಾಲಿಸಿದ್ದರಿಂದ,
Kādēļ? Tādēļ ka ne no ticības bet tā kā no bauslības darbiem (to meklēja); jo tie ir piedauzījušies pie tā piedauzīšanas akmens,
33 ೩೩ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು. ಧರ್ಮಶಾಸ್ತ್ರದಲ್ಲಿ ಹೀಗೆ ಬರೆಯಲ್ಪಟ್ಟಿದೆ, “ಇಗೋ ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನಲ್ಲಿ ನಂಬಿಕೆಯಿಡುವವನು ಆಶಾಭಂಗಪಡುವುದಿಲ್ಲ” ಎಂಬುದೇ.
Itin kā ir rakstīts: redzi, Es lieku Ciānā piedauzīšanas akmeni un apgrēcības klinti, un kas uz Viņu tic nepaliks kaunā.

< ರೋಮಾಪುರದವರಿಗೆ 9 >