< ರೂತಳು 2 >
1 ೧ ನವೊಮಿಯ ಗಂಡನಾದ ಎಲೀಮೆಲೆಕನ ಗೋತ್ರದಲ್ಲಿ ಬೋವಜನೆಂಬ ಬಹು ಧನವಂತನಾದ ಒಬ್ಬ ಸಂಬಂಧಿಕನಿದ್ದನು.
Basi Naomi alikuwa na jamaa wa upande wa mume wake, kutoka ukoo wa Elimeleki, mtu maarufu ambaye aliitwa Boazi.
2 ೨ ಮೋವಾಬ್ಯಳಾದ ರೂತಳು ನವೊಮಿಗೆ, “ನಾನು ಹೋಗಿ, ಹಕ್ಕಲ ತೆನೆಗಳನ್ನು ಆಯ್ದುಕೊಳ್ಳಲು ಅವಕಾಶ ಮಾಡಿಕೊಡುವವರ ಹೊಲದಿಂದ ತೆನೆಗಳನ್ನು ಸಂಗ್ರಹಿಸಿಕೊಂಡು ಬರುತ್ತೇನೆ” ಅಂದಳು. ಅದಕ್ಕೆ ನವೊಮಿ “ಹೋಗಿ ಬಾ ಮಗಳೆ” ಅಂದಳು.
Ruthu, Mmoabu, akamwambia Naomi, “Nitakwenda mashambani nikaokote mabaki ya nafaka nyuma ya yule nitakayepata kibali machoni pake.” Naomi akamwambia, “Nenda, binti yangu.”
3 ೩ ಆಕೆಯು ದೈವಯೋಗದಿಂದ ಎಲೀಮೆಲೆಕನ ಗೋತ್ರದವನಾದ ಬೋವಜನ ಸ್ವತ್ತಾಗಿದ್ದ ಹೊಲಕ್ಕೆ ಹೋಗಿ ತೆನೆ ಕೊಯ್ಯುವವರ ಹಿಂದಿನಿಂದ ಹಕ್ಕಲಾಯುತ್ತಾ ಇದ್ದಳು.
Basi akaenda, akaokota mabaki ya nafaka mashambani nyuma ya wavunaji. Ikatokea kwamba alijikuta anafanya kazi kwenye shamba lililokuwa mali ya Boazi, ambaye alitoka kwenye ukoo wa Elimeleki.
4 ೪ ಆಗ ಬೋವಜನು ಬೇತ್ಲೆಹೇಮಿನಿಂದ ಹೊಲಕ್ಕೆ ಬಂದು ಕೊಯ್ಯುವವರಿಗೆ, “ಯೆಹೋವನು ನಿಮ್ಮ ಸಂಗಡ ಇರಲಿ” ಅಂದನು. ಅವರು, “ಯೆಹೋವನು ನಿನ್ನನ್ನು ಆಶೀರ್ವದಿಸಲಿ” ಎಂದು ಹರಸಿದರು.
Papo hapo Boazi akarudi kutoka Bethlehemu, akawasalimu wavunaji, akasema, “Bwana awe nanyi!” Nao wakamjibu, “Bwana akubariki.”
5 ೫ ತೆನೆ ಕೊಯ್ಯುವವರ ಜೊತೆಯಲ್ಲಿ ರೂತಳನ್ನು ನೋಡಿ ಬೋವಜನು ತೆನೆ ಕೊಯ್ಯುವವರನ್ನು ನಿರ್ವಹಿಸಲು ನೇಮಿಸಿದ್ದ ತನ್ನ ಸೇವಕನನ್ನು, “ಈ ಹೆಂಗಸು ಯಾರು?” ಎಂದು ಕೇಳಿದ್ದಕ್ಕೆ
Boazi akamuuliza msimamizi wa wavunaji, “Je, yule mwanamwali ni wa nani?”
6 ೬ ಅವನು “ಈಕೆಯು ಮೋವಾಬ್ ಸೀಮೆಯಿಂದ ನವೊಮಿಯ ಸಂಗಡ ಬಂದ ಮೋವಾಬ್ ಸ್ತ್ರೀ.” ಎಂದನು.
Msimamizi akamjibu, “Ni yule Mmoabu aliyerudi kutoka nchi ya Moabu pamoja na Naomi.
7 ೭ ಇವಳು ತೆನೆ “ಕೊಯ್ಯುವವರೊಂದಿಗೆ ಸಿವುಡುಗಳ ಮಧ್ಯದಲ್ಲಿ ಹಕ್ಕಲಾಯ್ದುಕೊಳ್ಳುವ ಹಾಗೆ ಅಪ್ಪಣೆ ನೀಡಬೇಕೆಂದು ಕೇಳಿಕೊಂಡಳು. ಬೆಳಿಗ್ಗೆ ಬಂದವಳು ಇನ್ನೂ ಇಲ್ಲಿಯೇ ಇದ್ದಾಳೆ. ಸದ್ಯಕ್ಕೆ ಮನೆಯಲ್ಲಿ ವಿಶ್ರಮಿಸಿಕೊಳ್ಳುತ್ತಿದ್ದಾಳೆ” ಅಂದನು.
Yeye aliomba, ‘Tafadhali niruhusu niokote na kukusanya miongoni mwa miganda nyuma ya wavunaji.’ Naye ameshinda shambani tangu asubuhi pasipo kupumzika, isipokuwa kwa muda mfupi kivulini.”
8 ೮ ಆಗ ಬೋವಜನು ರೂತಳಿಗೆ, “ನನ್ನ ಮಗಳೇ, ಕೇಳು; ನನ್ನ ಹೊಲವನ್ನು ಬಿಟ್ಟು ಬೇರೆಯವರ ಹೊಲಕ್ಕೆ ಹೋಗಬೇಡ; ನನ್ನ ಹೆಣ್ಣಾಳುಗಳ ಜೊತೆಯಲ್ಲೇ ಇರು.
Kisha Boazi akamwambia Ruthu, “Binti yangu, nisikilize. Usiende kuokota mabaki ya mavuno katika shamba lingine, na usiondoke hapa. Kaa hapa na hawa watumishi wangu wa kike.
9 ೯ ನನ್ನ ಆಳುಗಳು ತೆನೆ ಕೊಯ್ಯುವುದಕ್ಕೋಸ್ಕರ ಯಾವ ಹೊಲಕ್ಕೆ ಹೋಗುತ್ತಾರೋ ಆ ಹೊಲಕ್ಕೆ ನೀನೂ ಹೋಗು. ನಿನ್ನನ್ನು ಯಾರೂ ಮುಟ್ಟಬಾರದೆಂದು ನನ್ನ ಸೇವಕರಿಗೆ ಅಪ್ಪಣೆಕೊಟ್ಟಿದ್ದೇನೆ. ನಿನಗೆ ಬಾಯಾರಿಕೆಯಾದರೆ ಹೋಗಿ ನನ್ನ ಸೇವಕರೇ ತುಂಬಿಸಿದ ನೀರಿನ ಪಾತ್ರೆಗಳಿಂದ ನೀರು ಕುಡಿಯಬಹುದು” ಎಂದು ಹೇಳಿದನು.
Angalia shamba wanaume wanamovuna, ufuate nyuma yao. Nimewaamuru wanaume hawa wasikuguse. Wakati wowote ukiona kiu, nenda kwenye mitungi ukanywe maji waliyoyateka wanaume hawa.”
10 ೧೦ ರೂತಳು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಿ “ಪರದೇಶಿಯಾದ ನನ್ನ ಮೇಲೆ ಇಷ್ಟು ಕಟಾಕ್ಷವಿಟ್ಟು ದಯೆ ತೋರಿಸಲು ಕಾರಣವೇನು?” ಎಂದು ಕೇಳಿದಳು.
Kwa ajili ya hili, akasujudu mpaka nchi, akamwambia, “Jinsi gani nimepata kibali machoni pako, hata ukanijali mimi mgeni?”
11 ೧೧ ಅದಕ್ಕೆ ಬೋವಜನು, “ನಿನ್ನ ಗಂಡನು ಮರಣ ಹೊಂದಿದ ದಿನದಿಂದ ನಿನ್ನ ಅತ್ತೆಗಾಗಿ ನೀನು ಮಾಡಿದ್ದೆಲ್ಲವೂ, ನನಗೆ ತಿಳಿದಿದೆ. ಹಾಗೂ ನಿನ್ನ ತಂದೆತಾಯಿಗಳನ್ನೂ, ಸ್ವದೇಶವನ್ನೂ ಬಿಟ್ಟು, ನಿನಗೆ ಅರಿಯದ ಜನರ ಬಳಿಗೆ ಬಂದಿರುವಿಯೆಂಬುದು ನನಗೆ ಚೆನ್ನಾಗಿ ಗೊತ್ತಿದೆ.
Boazi akamjibu, “Nimeambiwa yote uliyomtendea mama mkwe wako tangu mume wako alipofariki, na jinsi ulivyomwacha baba yako na mama yako na nchi yako ulimozaliwa, ukaja kuishi na watu ambao hukuwafahamu awali.
12 ೧೨ ನೀನು ಮಾಡಿದ್ದ ಎಲ್ಲಾ ಒಳ್ಳೆಯಕಾರ್ಯದ ಪ್ರತಿಫಲವಾಗಿ ಯೆಹೋವನು ನಿನಗೆ ಒಳ್ಳೆಯ ಫಲವನ್ನು ಕೊಡಲಿ; ನೀನು ಯಾವ ದೇವರ ಕೃಪಾಶಿರ್ವಾದದ ಆಶ್ರಯ ಹೊಂದಲು ಬಂದಿರುವೆಯೋ ಆ ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಉತ್ತಮವಾದ ಆಶ್ರಯವನ್ನು ಪ್ರತಿಫಲವನ್ನು ಅನುಗ್ರಹಿಸಲಿ” ಎಂದು ಉತ್ತರ ಕೊಟ್ಟನು.
Bwana na akulipe kwa yale uliyoyatenda. Ubarikiwe kwa wingi na Bwana, Mungu wa Israeli, ambaye umekimbilia mabawani mwake.”
13 ೧೩ ಆಗ ಆಕೆಯು, “ಸ್ವಾಮೀ, ತಾವು ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದೀರಿ; ನಾನು ತಮ್ಮ ದಾಸಿಯೆನಿಸಿಕೊಳ್ಳುವುದಕ್ಕೆ ಯೋಗ್ಯಳಲ್ಲದಿದ್ದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತನಾಡಿಸಿದಿರಿ” ಅಂದಳು.
Kisha Ruthu akasema, “Naomba niendelee kupata kibali machoni pako, bwana wangu. Kwa maana umenifariji na umezungumza kwa ukarimu na mjakazi wako, hata ingawa mimi si bora kama mmoja wa watumishi wako wa kike.”
14 ೧೪ ಊಟದ ವೇಳೆಯಲ್ಲಿ ಬೋವಜನು “ಇಲ್ಲಿ ಬಾ; ರೊಟ್ಟಿಯನ್ನು ತೆಗೆದುಕೊಂಡು ಮುರಿದು ಹುಳಿರಸದಲ್ಲಿ ಅದ್ದಿ ತಿನ್ನು” ಎಂದು ಕರೆಯಲು ಆಕೆಯು ಹೋಗಿ ತೆನೆ ಕೊಯ್ಯುವವರ ಬಳಿಯಲ್ಲಿ ಕುಳಿತುಕೊಂಡಳು. ಇದಲ್ಲದೆ ಅವನು ಆಕೆಗೆ ಸುಟ್ಟ ತೆನೆಗಳನ್ನು ಕೊಟ್ಟನು. ಆಕೆಯು ತಿಂದು ತೃಪ್ತಳಾಗಿ ಇನ್ನೂ ಉಳಿಸಿಕೊಂಡಳು.
Wakati wa chakula, Boazi akamwambia Ruthu, “Karibia hapa. Kula mkate na uchovye ndani ya siki.” Alipoketi pamoja na wavunaji, akampa nafaka zilizookwa. Akala kiasi alichotaka na kusaza.
15 ೧೫ ತರುವಾಯ ತಿರುಗಿ ಹಕ್ಕಲಾಯುವುದಕ್ಕೆ ಏಳಲು ಬೋವಜನು ತನ್ನ ಸೇವಕರಿಗೆ, “ಈಕೆಯು ಸಿವುಡುಗಳ ಮಧ್ಯದಲ್ಲಿ ಹಕ್ಕಲಾಯ್ದುಕೊಳ್ಳಲಿ, ಅಡ್ಡಿ ಮಾಡಬೇಡಿರಿ;
Alipoinuka ili kuokota mabaki ya nafaka, Boazi akawaagiza watu wake, “Hata kama atakusanya kati ya miganda, msimzuie.
16 ೧೬ ಸಿವುಡುಗಳಿಂದ ತೆನೆಗಳನ್ನು ಕಿತ್ತುಹಾಕಿರಿ; ಈಕೆಯು ಕೂಡಿಸಿಕೊಳ್ಳಲಿ, ಗದರಿಸಬೇಡಿರಿ” ಎಂದು ಆಜ್ಞಾಪಿಸಿದನು.
Badala yake, toeni masuke katika miganda, mwachieni ayaokote, na msimkemee.”
17 ೧೭ ರೂತಳು ಸಾಯಂಕಾಲದ ವರೆಗೂ ಹಕ್ಕಲಾಯ್ದು ಕೂಡಿಸಿದ್ದನ್ನು ಬಡಿದಾಗ ಸುಮಾರು ಮೂವತ್ತು ಸೇರು ಜವೆಗೋದಿ ಸಿಕ್ಕಿತು.
Basi Ruthu akaokota masazo shambani hata jioni. Akatwanga ile shayiri aliyokusanya, ikajaa efa moja.
18 ೧೮ ಆಕೆಯು ಅದನ್ನು ಹೊತ್ತುಕೊಂಡು ಊರಿಗೆ ಬಂದು, ಆಕೆ ಹಕ್ಕಲಾಯ್ದದು ಸಂಗ್ರಹಿಸಿದ್ದನ್ನು ತನ್ನ ಅತ್ತೆಗೆ ತೋರಿಸಿದಳು. ತಾನು ಉಳಿಸಿಟ್ಟಿದ್ದ ಸುಟ್ಟ ತೆನೆಯನ್ನು ರೂತಳು ತನ್ನ ಅತ್ತೆಗೆ ಕೊಟ್ಟಳು.
Akaibeba na kuelekea mjini, naye mama mkwe wake akaona jinsi alivyoweza kuokota nafaka nyingi. Pia Ruthu akachukua kile alichobakiza baada ya kula na kushiba, akampa.
19 ೧೯ ಅತ್ತೆಯು “ನೀನು ಈ ಹೊತ್ತು ಯಾರ ಹೊಲದಲ್ಲಿ ಹಕ್ಕಲಾಯ್ದಿ? ಎಲ್ಲಿ ಕೆಲಸಮಾಡಿದಿ? ನಿನ್ನನ್ನು ಕಟಾಕ್ಷಿಸಿದವನಿಗೆ ಶುಭವಾಗಲಿ” ಎನ್ನಲು ರೂತಳು ನಾನು ಹಕ್ಕಲಾಯ್ದ ಹೊಲದ ಯಜಮಾನನ ಹೆಸರು, ಬೋವಜನೆಂದು ತಿಳಿಸಿದಳು.
Basi mkwewe akamuuliza, “Je, umeokota wapi leo? Umefanya kazi wapi? Abarikiwe mtu yule aliyekujali.” Ndipo Ruthu akamwambia mama mkwe wake juu ya yule ambaye yeye alikuwa amefanyia kazi katika shamba lake. Akasema, “Yule mtu niliyefanyia kazi kwake leo, anaitwa Boazi.”
20 ೨೦ ಆಗ ನವೊಮಿಯು “ಸತ್ತವರಿಗೂ, ಬದುಕುವವರಿಗೂ ಮಾಡಿದ ವಾಗ್ದಾನಗಳನ್ನು ನೆರವೇರಿಸುವ ಯೆಹೋವನು ಆತನನ್ನು ಆಶೀರ್ವದಿಸಲಿ” ಎಂದು ಹರಸಿ, “ಆ ಮನುಷ್ಯನು ನಮಗೆ ಹತ್ತಿರದ ನೆಂಟ, ಪೋಷಿಸಬೇಕಾದವನು” ಎಂದು ರೂತಳಿಗೆ ತಿಳಿಸಿದಳು.
Naye Naomi akamwambia mkwewe, “Bwana ambariki! Hakuacha kuonyesha fadhili zake kwa walio hai na kwa waliokufa.” Pia akamwambia, “Huyo mtu ni mmoja wa jamaa yetu wa karibu anayestahili kutukomboa.”
21 ೨೧ ಆಗ ಮೋವಾಬ್ಯಳಾದ ರೂತಳು “ಇದಲ್ಲದೆ ಆ ಮನುಷ್ಯನು ನನಗೆ, ‘ಸುಗ್ಗಿ ಮುಗಿಯುವವರೆಗೂ ನನ್ನ ಆಳುಗಳ ಜೊತೆಯಲ್ಲೇ ಇರು ಎಂದು ಹೇಳಿದ್ದಾನೆ’” ಎಂದಳು.
Kisha Ruthu, Mmoabu, akasema, “Hata aliniambia, ‘Kaa pamoja na watumishi wangu mpaka watakapomaliza kuvuna nafaka yangu yote.’”
22 ೨೨ ನವೊಮಿಯು ತನ್ನ ಸೊಸೆಯಾದ ರೂತಳಿಗೆ “ನನ್ನ ಮಗಳೇ, ನೀನು ಅವನ ಹೆಣ್ಣಾಳುಗಳ ಸಂಗಡಲೇ ಹೊರಟುಹೋಗುವುದು ಒಳ್ಳೆಯದು; ಬೇರೆ ಹೊಲದಲ್ಲಿ ನಿನಗೆ ತೊಂದರೆಯಾದೀತು” ಎಂದು ಹೇಳಿದಳು.
Kisha Naomi akamwambia Ruthu mkwewe, “Binti yangu, itakuwa vyema wewe ufuatane na wasichana wake, kwa sababu katika shamba la mtu mwingine wanaweza kukudhuru.”
23 ೨೩ ಅದರಂತೆಯೇ ರೂತಳು ಅತ್ತೆಯ ಜೊತೆಯಲ್ಲಿದ್ದುಕೊಂಡು ಜವೆಗೋದಿಯ ಮತ್ತು ಗೋದಿಯ ಸುಗ್ಗಿ ಮುಗಿಯುವ ವರೆಗೆ ಬೋವಜನ ಹೆಣ್ಣಾಳುಗಳ ಸಂಗಡಲೇ ಹೋಗಿ ಹಕ್ಕಲಾಯುತ್ತಿದ್ದಳು.
Kwa hivyo Ruthu akafuatana na watumishi wa kike wa Boazi, akaokota mpaka mwisho wa mavuno ya shayiri na ya ngano. Naye aliishi na mama mkwe wake.