< ರೂತಳು 3 >
1 ೧ ನವೊಮಿಯು ಸೊಸೆಗೆ, “ನನ್ನ ಮಗಳೇ, ನಿನಗೆ ಒಳ್ಳೆಯದಾಗುವುದಕ್ಕಾಗಿ, ನೀನು ಗೃಹಿಣಿಯಾಗಿ ಸುಖದಿಂದಿರುವುದಕ್ಕೋಸ್ಕರ ನಾನು ಪ್ರಯತ್ನಿಸಬೇಕಲ್ಲವೇ?
路得的婆婆拿俄米對她說:「女兒啊,我不當為你找個安身之處,使你享福嗎?
2 ೨ ಈಗ ನೀನು ಯಾರ ಹೆಣ್ಣಾಳುಗಳ ಜೊತೆಯಲ್ಲಿರುತ್ತೀಯೋ ಆ ಬೋವಜನು ನಮ್ಮ ಸಂಬಂಧಿಕನಲ್ಲವೇ? ಅವನು ಈ ರಾತ್ರಿ ಕಣದಲ್ಲಿ ಜವೆಗೋದಿಯನ್ನು ತೂರುವನು.
你與波阿斯的使女常在一處,波阿斯不是我們的親族嗎?他今夜在場上簸大麥;
3 ೩ ನೀನು ಸ್ನಾನಮಾಡಿ, ಸುಗಂಧತೈಲವನ್ನು ಹಚ್ಚಿಕೊಂಡು, ಶ್ರೇಷ್ಠವಸ್ತ್ರಗಳನ್ನು ಧರಿಸಿಕೊಂಡು ಅಲ್ಲಿಗೆ ಹೋಗು; ಅವನು ಅನ್ನಪಾನಗಳನ್ನು ತೆಗೆದುಕೊಳ್ಳುವವರೆಗೂ ಮರೆಯಾಗಿದ್ದು.
你要沐浴抹膏,換上衣服,下到場上,卻不要使那人認出你來。你等他吃喝完了,
4 ೪ ಅವನು ಮಲಗಿದ ಸ್ಥಳವನ್ನು ತಿಳಿದುಕೊಂಡು ಹೋಗಿ ಅವನ ಕಾಲುಗಳ ಮೇಲಣ ಹೊದಿಕೆಯನ್ನು ತೆಗೆದು ಬಿಟ್ಟು ಅಲ್ಲೇ ಮಲಗಿಕೋ; ಆ ಮೇಲೆ ಮಾಡತಕ್ಕದ್ದನ್ನು ಅವನು ನಿನಗೆ ತಿಳಿಸುವನು” ಅಂದಳು.
到他睡的時候,你看準他睡的地方,就進去掀開他腳上的被,躺臥在那裏,他必告訴你所當做的事。」
5 ೫ ಅದಕ್ಕೆ ರೂತಳು “ನೀನು ಹೇಳಿದ ಹಾಗೆಯೇ ಮಾಡುವೆನು” ಎಂದು ಹೇಳಿದಳು.
路得說:「凡你所吩咐的,我必遵行。」
6 ೬ ಅತ್ತೆಯ ಆಜ್ಞೆಯಂತೆಯೇ ಕಣಕ್ಕೆ ಹೋಗಿ,
路得就下到場上,照她婆婆所吩咐她的而行。
7 ೭ ಬೋವಜನು ಅನ್ನಪಾನಗಳನ್ನು ತೆಗೆದುಕೊಂಡು ಸಂತುಷ್ಟನಾಗಿ ರಾಶಿಯ ಬಳಿಯಲ್ಲಿ ಮಲಗಿದ ಮೇಲೆ ರಹಸ್ಯವಾಗಿ ಬಂದು ಅವನ ಕಾಲುಗಳ ಮೇಲಣ ಹೊದಿಕೆಯನ್ನು ತೆಗೆದುಬಿಟ್ಟು, ಕಾಲ್ಬದಿಯಲ್ಲಿ ಮಲಗಿದಳು.
波阿斯吃喝完了,心裏歡暢,就去睡在麥堆旁邊。路得便悄悄地來掀開他腳上的被,躺臥在那裏。
8 ೮ ಮಧ್ಯರಾತ್ರಿಯಲ್ಲಿ ಎಚ್ಚರವಾದಾಗ ಬೋವಜನು ತನ್ನ ಕಾಲುಗಳ ಬಳಿಯಲ್ಲಿ ಮಲಗಿರುವ ಹೆಂಗಸನ್ನು ಕಂಡು,
到了夜半,那人忽然驚醒,翻過身來,不料有女子躺在他的腳下。
9 ೯ ಹೆದರಿ ಆಕೆಯನ್ನು “ನೀನು ಯಾರು?” ಎಂದು ಕೇಳಲು ಆಕೆಯು “ನಾನು ನಿನ್ನ ದಾಸಿಯಾದ ರೂತಳು, ನೀನು ಸಮೀಪಬಂಧುವಾಗಿರುವುದರಿಂದ ನಿನ್ನ ಹೊದಿಕೆಯ ಅಂಚನ್ನು ನನ್ನ ಮೇಲೆ ಹಾಕು” ಅಂದಳು.
他就說:「你是誰?」回答說:「我是你的婢女路得。求你用你的衣襟遮蓋我,因為你是我一個至近的親屬。」
10 ೧೦ ಆಗ ಅವನು “ಮಗಳೇ, ಯೆಹೋವನಿಂದ ನಿನಗೆ ಆಶೀರ್ವಾದವಾಗಲಿ; ನೀನು ಬಡವರೂ ಅಥವಾ ಐಶ್ವರ್ಯವಂತರೂ ಆದ ಯೌವನಸ್ಥರ ಹಿಂದೆ ಹೋಗಲಿಲ್ಲ. ಈಗ ನಿನ್ನ ಪತಿಭಕ್ತಿಯು ಮೊದಲಗಿಂತ ವಿಶೇಷವಾಗಿ ಪ್ರತ್ಯಕ್ಷವಾಯಿತು.
波阿斯說:「女兒啊,願你蒙耶和華賜福。你末後的恩比先前更大;因為少年人無論貧富,你都沒有跟從。
11 ೧೧ ನನ್ನ ಮಗಳೇ, ಈಗ ಭಯಪಡಬೇಡ. ನೀನು ಗುಣವಂತೆಯೆಂಬುದು ಊರಿನವರಿಗೆಲ್ಲಾ ತಿಳಿದಿದೆ; ಆದ್ದರಿಂದ ನೀನು ಹೇಳಿದ್ದನ್ನೆಲ್ಲಾ ಮಾಡುವೆನು.
女兒啊,現在不要懼怕,凡你所說的,我必照着行;我本城的人都知道你是個賢德的女子。
12 ೧೨ ನಾನು ಸಮೀಪಬಂಧುವೆಂಬುದು ನಿಜ; ಆದರೂ ನನಗಿಂತ ಸಮೀಪ ಬಂಧು ಒಬ್ಬನಿದ್ದಾನೆ.
我實在是你一個至近的親屬,只是還有一個人比我更近。
13 ೧೩ ಈ ರಾತ್ರಿ ಇಲ್ಲೇ ಇರು; ನಾಳೆ ಅವನು ಮೈದುನಧರ್ಮವನ್ನು ನೆರವೇರಿಸಿದರೆ ಸರಿ; ಇಲ್ಲವಾದರೆ ಯೆಹೋವನಾಣೆ, ನಾನೇ ಅದನ್ನು ನೆರವೇರಿಸುವೆನು. ಬೆಳಗಾಗುವ ತನಕ ಇಲ್ಲೇ ಮಲಗಿಕೋ” ಎಂದು ಹೇಳಿದನು.
你今夜在這裏住宿,明早他若肯為你盡親屬的本分,就由他吧!倘若不肯,我指着永生的耶和華起誓,我必為你盡了本分,你只管躺到天亮。」
14 ೧೪ ಆಕೆಯು ಆ ವರೆಗೂ ಅವನ ಕಾಲುಗಳ ಬಳಿಯಲ್ಲೇ ಮಲಗಿಕೊಂಡಿದ್ದಳು. ಒಬ್ಬ ಹೆಂಗಸು ಕಣಕ್ಕೆ ಬಂದಿದ್ದಳೆಂಬುವುದು ಯಾರಿಗೂ ಗೊತ್ತಾಗಬಾರದೆಂದು ಅವನು ಹೇಳಿದ್ದರಿಂದ ಗುರುತು ಹಿಡಿಯಲಾರದಷ್ಟು ಕತ್ತಲಿರುವಾಗಲೇ ಆಕೆಯು ಎದ್ದಳು.
路得便在他腳下躺到天快亮,人彼此不能辨認的時候就起來了。波阿斯說:「不可使人知道有女子到場上來」;
15 ೧೫ ಆಗ ಅವನು ಆಕೆಗೆ “ನಿನ್ನ ಮೇಲ್ಹೊದಿಕೆಯನ್ನು ಹಾಸು” ಎಂದು ಹೇಳಿದನು, ಆಕೆ ಹಾಸಲು ಅದರಲ್ಲಿ ಆರು ಪಡಿ ಜವೆಗೋದಿಯನ್ನು ಹಾಕಿ ಹೊರಿಸಿ ಕಳುಹಿಸಿದನು. ಆಕೆಯು ಊರೊಳಕ್ಕೆ ಹೋದಳು.
又對路得說:「打開你所披的外衣。」她打開了,波阿斯就撮了六簸箕大麥,幫她扛在肩上,她便進城去了。
16 ೧೬ ಅತ್ತೆಯ ಬಳಿಗೆ ಬಂದಾಗ, ಅತ್ತೆಯು “ನನ್ನ ಮಗಳೇ, ನೀನು ಹೋಗಿದ್ದ ಕಾರ್ಯವೇನಾಯಿತು?” ಎಂದು ಕೇಳಲು ಆಕೆಯು ಆ ಮನುಷ್ಯನು ಮಾಡಿದ್ದೆಲ್ಲವನ್ನೂ ತಿಳಿಸಿ,
路得回到婆婆那裏,婆婆說:「女兒啊,怎麼樣了?」路得就將那人向她所行的述說了一遍,
17 ೧೭ “‘ನೀನು ಬರಿಗೈಯಿಂದ ಅತ್ತೆಯ ಬಳಿಗೆ ಹೋಗಬಾರದೆಂದು’ ಹೇಳಿ ಈ ಆರು ಪಡಿ ಜವೆಗೋದಿಯನ್ನು ಕೊಟ್ಟನು” ಅಂದಳು.
又說:「那人給了我六簸箕大麥,對我說:『你不可空手回去見你的婆婆。』」
18 ೧೮ ಅತ್ತೆಯು “ನನ್ನ ಮಗಳೇ, ಈ ಕಾರ್ಯವು ಏನಾಗುವುದೆಂದು ಗೊತ್ತಾಗುವವರೆಗೂ ಸುಮ್ಮನಿರು; ಈ ವಿಷಯವನ್ನು ಇತ್ಯರ್ಥ ಮಾಡುವವರೆಗೂ ಅವನಿಗೆ ಸಮಾಧಾನವಿರಲಾರದು” ಎಂದು ಹೇಳಿದಳು.
婆婆說:「女兒啊,你只管安坐等候,看這事怎樣成就,因為那人今日不辦成這事必不休息。」