< ರೂತಳು 4 >
1 ೧ ಬೋವಜನು ಊರಬಾಗಿಲಿನ ಬಳಿಗೆ ಹೋಗಿ ಅಲ್ಲಿ ಕುಳಿತುಕೊಂಡನು. ತಾನು ಹೇಳಿದ್ದ ಸಮೀಪಬಂಧುವು ಆ ಮಾರ್ಗವಾಗಿ ಹೋಗುತ್ತಿದ್ದುದನ್ನು ಕಂಡು, ಬೋವಜನು ಅವನಿಗೆ “ಬಾರಪ್ಪಾ, ಇಲ್ಲಿ ಬಂದು ಕುಳಿತುಕೋ” ಎಂದು ಕರೆಯಲು ಅವನು ಬಂದು ಕುಳಿತುಕೊಂಡನು.
Bóáz pedig fölment a kapuba s leült ott; s íme arra ment a rokon, kiről beszélt Bóáz. S mondta: Térj be, ülj itt le, ez meg ez! Betért és leült.
2 ೨ ಇದಲ್ಲದೆ ಅವನು ಊರಿನ ಹಿರಿಯರಲ್ಲಿ ಹತ್ತು ಮಂದಿಯನ್ನು ಕರೆದಾಗ ಅವರೂ ಬಂದು ಕುಳಿತುಕೊಂಡರು.
Erre vett tíz embert a város vénei közül s mondta: Üljetek le itt! S leültek.
3 ೩ ಆಗ ಅವನು ಆ ಸಮೀಪಬಂಧುವಿಗೆ, “ಮೋವಾಬ್ ದೇಶದಿಂದ ಹಿಂದಿರುಗಿ ಬಂದಿರುವ ನವೊಮಿಯು ನಮ್ಮ ಸಹೋದರನಾದ ಎಲೀಮೆಲೆಕನ ಪಾಲಿಗೆ ಬಂದ ಹೊಲವನ್ನು ಮಾರಬೇಕೆಂದಿದ್ದಾಳೆ.
S mondta a rokonnak: Azon mezőtelket, mely testvérünké Elímélekhé volt, eladta Noémi, aki visszajött Móáb mezőségéről.
4 ೪ ನಾನು ನಿನಗೆ ಹೇಳಬೇಕೆಂದಿರುವುದೇನಂದರೆ ‘ನಿನಗೆ ಅದನ್ನು ಕೊಂಡುಕೊಳ್ಳುವ ಮನಸ್ಸಿದ್ದರೆ ಇಲ್ಲಿ ಕುಳಿತಿರುವ ಊರಿನ ಹಿರಿಯರ ಮುಂದೆಯೇ ಕೊಂಡುಕೋ.’ ಇಲ್ಲದಿದ್ದರೆ ನನಗೆ ತಿಳಿಸು; ಇದು ನನಗೆ ಗೊತ್ತಾಗಬೇಕು. ನೀನೂ, ನಿನ್ನ ತರುವಾಯ ನಾನೂ ಅಲ್ಲದೆ ಅದನ್ನು ಕೊಂಡುಕೊಳ್ಳತಕ್ಕ ಬಾಧ್ಯರು ಬೇರೆ ಯಾರೂ ಇಲ್ಲ” ಎಂದು ಹೇಳಲು ಅವನು “ನಾನೇ ಕೊಂಡುಕೊಳ್ಳುತ್ತೇನೆ” ಅಂದನು.
Én pedig azt mondtam, kinyilvánítom előtted, mondván: vedd meg az itt ülők előtt és népem vénei előtt; ha meg akarod váltani, váltsd meg, s ha nem váltod meg, add tudtomra, hogy tudjam, mert nincs rajtad kívül, aki megváltaná, én pedig utánad következem. Mondta: Én megváltom.
5 ೫ ಆಗ ಬೋವಜನು “ನೀನು ನವೊಮಿಯಿಂದ ಆ ಹೊಲವನ್ನು ತೆಗೆದುಕೊಳ್ಳುವ ದಿನದಲ್ಲಿ, ಹೊಲದ ಖಾತೆಯೂ ಆಕೆಯ ಸತ್ತುಹೋದ ಮಗನ ಹೆಸರಿನಲ್ಲೇ ಉಳಿಯುದಿರುವಂತೆ, ಅವನ ಹೆಂಡತಿ ಮೋವಾಬ್ಯಳಾದ ರೂತಳನ್ನೂ ತೆಗೆದುಕೊಳ್ಳಬೇಕು” ಎಂದು ತಿಳಿಸಿದನು.
S mondta Bóáz: amely napon megveszed a mezőt Noémi kezéből, a móabita Rúthtól, az elhaltnak feleségétől is megvetted, hogy fentartsad az elhaltnak nevét az ő birtokán.
6 ೬ ಅದಕ್ಕೆ ಆ ಸಮೀಪಬಂಧುವು “ಹಾಗಾದರೆ ಅದನ್ನು ಕೊಂಡುಕೊಂಡು ನನ್ನ ಆಸ್ತಿಯನ್ನು ನಷ್ಟಪಡಿಸಿಕೊಳ್ಳಲಾರೆನು; ಆ ಬಾಧ್ಯತೆಯನ್ನು ನೀನೇ ವಹಿಸಿಕೋ; ನನ್ನಿಂದಾಗದು” ಅಂದನು.
Erre mondta a rokon: Nem válthatom meg magamnak, nehogy megrontsam birtokomat; váltsd meg te magadnak az általam megváltandót, mert én nem válthatom meg.
7 ೭ ಯಾವುದಾದರೊಂದು ವಸ್ತುವನ್ನು ಬಿಡಿಸಿಕೊಳ್ಳುವಾಗಲೂ, ತೆಗೆದುಕೊಳ್ಳುವಾಗಲೂ, ಕೊಡುವಾಗಲೂ ಮಾತನ್ನು ದೃಢಪಡಿಸುವುದಕ್ಕೋಸ್ಕರ ಇಸ್ರಾಯೇಲರಲ್ಲಿ ಪೂರ್ವಕಾಲದಿಂದ ಇದ್ದ ಪದ್ಧತಿ ಯಾವುದಂದರೆ, ಕೊಡುವವನು ತೆಗೆದುಕೊಳ್ಳುವವನಿಗೆ ತನ್ನ ಪಾದರಕ್ಷೆಯನ್ನು ಬಿಚ್ಚಿ ಕೊಡಬೇಕು; ಇದರಿಂದ ಮಾತು ದೃಢವಾಯಿತೆಂದು ಇಸ್ರಾಯೇಲ್ಯರು ತಿಳಿದುಕೊಳ್ಳುವರು.
Ez volt pedig azelőtt a szokás Izraélben a megváltásnál s a cserénél, bármily dolog megerősítésére: lehúzta egyik a saruját és odaadta a másikának; az volt a bizonyság Izraélben.
8 ೮ ಹಾಗೆಯೇ ಆ ಸಮೀಪಬಂಧುವು ಬೋವಜನಿಗೆ “ನೀನೇ ತೆಗೆದುಕೋ” ಎಂದು ಹೇಳಿ ತನ್ನ ಪಾದರಕ್ಷೆಯನ್ನು ತೆಗೆದುಕೊಟ್ಟನು.
S mondta a rokon Bóáznak: Vedd meg magadnak. És lehúzta saruját.
9 ೯ ಆಗ ಬೋವಜನು ಹಿರಿಯರಿಗೂ, ಎಲ್ಲಾ ಜನರಿಗೂ “ನಾನು ಎಲೀಮೆಲೆಕ್, ಕಿಲ್ಯೋನ್, ಮಹ್ಲೋನ್ ಎಂಬುವರಿಗಿದ್ದದ್ದನ್ನೆಲ್ಲಾ ನವೊಮಿಯಿಂದ ತೆಗೆದುಕೊಂಡಿದ್ದೇನೆ;
Ekkor mondta Bóáz a véneknek és az egész népnek: Tanúk vagytok ma, hogy megvettem mindazt, ami Elíméleké volt s mindazt, ami Kiljóné és Machlóné volt, Noémi kezéből;
10 ೧೦ ಇದಲ್ಲದೆ ಹೊಲದ ಖಾತೆಯು ಸತ್ತುಹೋದ ಮಹ್ಲೋನನ ಹೆಸರಿನಲ್ಲೇ ಉಳಿದು, ಅವನ ಬಂಧುಗಳಲ್ಲಿಯೂ ಊರಲ್ಲಿಯೂ ಅವನ ಸಂತಾನವು ಉಳಿಯುವಂತೆ ಅವನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿದ್ದೇನೆ ಇದಕ್ಕೆ ನೀವೇ ಸಾಕ್ಷಿಗಳು” ಎಂದು ಹೇಳಿದನು.
s a móabita Rúthot is, Machlón feleségét, megvettem magamnak feleségül, hogy fentartsam az elhaltnak nevét az ő birtokán, nehogy kiirtassék az elhaltnak neve a testvérei közül és helységének kapujából: tanúk vagytok ma!
11 ೧೧ ಅದಕ್ಕೆ ಊರ ಬಾಗಿಲಲ್ಲಿ ಕೂಡಿ ಬಂದಿದ್ದ ಹಿರಿಯರೂ, ಎಲ್ಲಾ ಜನರೂ “ಹೌದು, ನಾವೇ ಸಾಕ್ಷಿಗಳು; ಯೆಹೋವನು ಇಸ್ರಾಯೇಲನ ಮನೆಯನ್ನು ಕಟ್ಟಿದ. ರಾಹೇಲ್, ಲೇಯಾ ಎಂಬ ಸ್ತ್ರೀಯರನ್ನು ಹೇಗೋ ಹಾಗೆಯೇ ನಿನ್ನ ಮನೆಗೆ ಬರುವ ಈ ಸ್ತ್ರೀಯನ್ನೂ ಅಭಿವೃದ್ಧಿಪಡಿಸಲಿ. ಎಫ್ರಾತದಲ್ಲಿ ಅಭಿವೃದ್ಧಿ ಹೊಂದು, ಬೇತ್ಲೆಹೇಮಿನಲ್ಲಿ ಪ್ರಸಿದ್ಧನಾಗು.
És mondta az egész nép, mely a kapuban volt meg a vének: Tanúk! Tegye az Örökkévaló az asszonyt, aki bemegy a házadba olyanná, mint Ráchel és Léa, akik fölépítették ketten Izraél házát; s végezz derekasat Efrátban, s adj nevet Bét-Léchemben!
12 ೧೨ ಯೆಹೋವನು ಈ ಸ್ತ್ರೀಯ ಮೂಲಕ ನಿನಗೆ ಅನುಗ್ರಹಿಸುವ ಸಂತಾನದಿಂದ ನಿನ್ನ ಮನೆಯು ಯೆಹೂದನಿಗೆ ತಾಮಾರಳಿಂದ ಹುಟ್ಟಿದ ಪೆರೆಚನ ಮನೆಗೆ ಸಮಾನವಾಗಲಿ” ಅಂದರು.
S legyen házad olyan, mint Pérecz háza, akit Támár szült Jehúdának, azon magzatból, melyet ad majd neked az Örökkévaló e leánytól.
13 ೧೩ ಬೋವಜನು ರೂತಳನ್ನು ಹೆಂಡತಿಯನ್ನಾಗಿ ಪರಿಗ್ರಹಿಸಿದ್ದರಿಂದ ಆಕೆಯು ಯೆಹೋವನ ಅನುಗ್ರಹದಿಂದ ಗರ್ಭಿಣಿಯಾಗಿ ಮಗನನ್ನು ಹೆತ್ತಳು.
És elvette Bóáz Rúthot, lett neki feleségül, s bement hozzá; és adott neki az Örökkévaló terhességet és fiut szült.
14 ೧೪ ಆಗ ಹೆಂಗಸರು ನವೊಮಿಗೆ “ಈ ಹೊತ್ತು ನಿನಗೆ ಬಾಧ್ಯಸ್ಥನನ್ನು ದಯಪಾಲಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಈ ಮಗನು ಇಸ್ರಾಯೇಲ್ಯರಲ್ಲಿ ಪ್ರಖಾತ್ಯನಾಗಲಿ.
És szóltak az asszonyok Noémihoz: Áldva legyen az Örökkévaló, aki ma nem engedett téged maradnod vérrokon nélkül, s legyen neki neve Izraélben;
15 ೧೫ ಇವನು ನಿನಗೆ ನವಚೈತನ್ಯ ನೀಡಿ ಪುನರ್ಜನ್ಮ ಹೊಂದುವಂತೆ ಮಾಡುವನು, ವೃದ್ಧಾಪ್ಯದಲ್ಲಿ ನಿನಗೆ ಸಂರಕ್ಷಕನಾಗಿರುವನು. ನಿನ್ನನ್ನು ಬಹಳವಾಗಿ ಪ್ರೀತಿಸುತ್ತಾ ಏಳು ಮಂದಿ ಮಕ್ಕಳಿಗಿಂತ ಹೆಚ್ಚಾಗಿ ನಿನ್ನನ್ನು ಪ್ರೀತಿಸಿ ಗೌರವಿಸುವ ನಿನ್ನ ಸೊಸೆಯು ಇವನನ್ನು ಹೆತ್ತಳಲ್ಲಾ” ಎಂದು ಹೇಳಿದರು.
s legyen számodra léleküdítőnek és hogy táplálja vénségedet, mert menyed, ki szeret téged, szülte őt, az, aki jobb neked hét fiunál.
16 ೧೬ ನವೊಮಿಯೇ ಆ ಮಗುವನ್ನು ಮಡಿಲಲ್ಲಿಟ್ಟುಕೊಂಡು ಸಾಕುತ್ತಿದ್ದಳು.
És vette Noémi a gyermeket, ölébe tette és lett neki nevelőanyjává.
17 ೧೭ ನೆರೆಹೊರೆಯ ಹೆಂಗಸರು ನವೊಮಿಗೆ “ಒಬ್ಬ ಮಗನು ಹುಟ್ಟಿದ್ದಾನೆಂದು” ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ಇಷಯನಿಗೆ ತಂದೆಯೂ, ದಾವೀದನಿಗೆ ಅಜ್ಜನೂ ಆದನು.
És adtak neki a szomszédnők nevet, mondván: fiu született Noéminak; és így nevezték őt: Óbéd. Az Jísájnak, Dávid atyjának az atyja.
18 ೧೮ ಪೆರೆಚನ ವಂಶಾವಳಿ: ಪೆರೆಚನು ಹೆಚ್ರೋನನನ್ನು ಪಡೆದನು;
És ezek Pérecz nemzetségei: Pérecz nemzette Checzrónt;
19 ೧೯ ಹೆಚ್ರೋನನು ರಾಮನನ್ನು ಪಡೆದನು; ರಾಮನು ಅಮ್ಮೀನಾದಾಬನನ್ನು ಪಡೆದನು;
s Checzrón nemzette Rámot, és Rám nemzette Ammínádábot;
20 ೨೦ ಅಮ್ಮೀನಾದಾಬನು ನಹಶೋನನನ್ನು ಪಡೆದನು; ನಹಶೋನನು ಸಲ್ಮೋನನನ್ನು ಪಡೆದನು;
s Amminádáb nemzette Nachsónt, és Nachsón nemzette Szalmónt;
21 ೨೧ ಸಲ್ಮೋನನು ಬೋವಜನನ್ನು ಪಡೆದನು; ಬೋವಜನು ಓಬೇದನನ್ನು ಪಡೆದನು;
s Szalmón nemzette Bóázt, és Boáz nemzette Óbédot;
22 ೨೨ ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು.
s Óbéd nemzette Jísájt, Jisáj pedig nemzette Dávidot.