< ರೂತಳು 1 >

1 ನ್ಯಾಯಸ್ಥಾಪಕರು ಆಳುತ್ತಿದ್ದ ಕಾಲದಲ್ಲಿ ಒಮ್ಮೆ ದೇಶದಲ್ಲಿ ಬರ ಬಂದಿದ್ದರಿಂದ ಯೆಹೂದ ಪ್ರಾಂತ್ಯದ ಬೇತ್ಲೆಹೇಮಿನವನೊಬ್ಬನು ತನ್ನ ಹೆಂಡತಿ, ಇಬ್ಬರು ಪುತ್ರರ ಸಹಿತವಾಗಿ ಮೋವಾಬ್‍ ದೇಶದಲ್ಲಿ ವಾಸಮಾಡುವುದಕ್ಕಾಗಿ ಹೊರಟುಹೋದನು.
I сталось за ча́су, коли судді судили, то був голод у Краю́. І пішов був чоловік з Юдиного Віфлеєму мешкати в моавських поля́х, він і жінка та двоє синів його.
2 ಆ ಮನುಷ್ಯನ ಹೆಸರು ಎಲೀಮೆಲೆಕ, ಅವನ ಹೆಂಡತಿ ನವೊಮಿ. ಅವನ ಇಬ್ಬರು ಮಕ್ಕಳ ಹೆಸರು ಮಹ್ಲೋನ್ ಮತ್ತು ಕಿಲ್ಯೋನ್. ಯೆಹೂದ ದೇಶಕ್ಕೆ ಸೇರಿದ ಎಫ್ರಾತದಲ್ಲಿರುವ ಬೇತ್ಲೆಹೇಮಿನವರಾದ ಇವರು ಮೋವಾಬ್ ದೇಶದಲ್ಲಿ ಬಂದು ವಾಸವಾಗಿದ್ದಾಗ
А ім'я́ тому чоловікові Елімеле́х, а ім'я́ жінці його Ноомі́; і ім'я́ двох синів його — Махлон і Кілйон, ефратяни з Віфлеєму Юдиного. І прийшли вони на моавські поля́, та й залишилися.
3 ನವೊಮಿಯ ಗಂಡನಾದ ಎಲೀಮೆಲೆಕನು ಮರಣ ಹೊಂದಿದನು. ಆಕೆಯು ಇಬ್ಬರು ಮಕ್ಕಳೊಡನೆ ಅಲ್ಲಿಯೇ ಉಳಿದಳು.
І помер Елімелех, муж Ноомі́, і зоста́лася вона та два їхні си́ни.
4 ಈ ಮಕ್ಕಳು ಒರ್ಫಾ, ರೂತ್ ಎಂಬ ಹೆಸರಿನ ಮೋವಾಬ್ ಸ್ತ್ರೀಯರನ್ನು ಮದುವೆಮಾಡಿಕೊಂಡು ಸುಮಾರು ಹತ್ತು ವರ್ಷಗಳ ಕಾಲ ಅಲ್ಲಿ ವಾಸವಾಗಿದ್ದರು.
І взяли вони собі за жіно́к моаві́тянок, — ім'я́ одній Орпа́, а ім'я другій Рут. І сиділи вони там близько десяти літ.
5 ಅವರು ಅಲ್ಲಿದ್ದಾಗ ನವೊಮಿಯ ಮಕ್ಕಳಾದ ಮಹ್ಲೋನ್ ಮತ್ತು ಕಿಲ್ಯೋನ್ ಇಬ್ಬರೂ ತೀರಿಹೋದರು. ಹೀಗೆ ನವೊಮಿ ಗಂಡನನ್ನೂ, ಇಬ್ಬರು ಮಕ್ಕಳನ್ನೂ ಕಳೆದುಕೊಂಡು ಸೊಸೆಯರೊಂದಿಗೆ ಅಲ್ಲೇ ಉಳಿದಳು.
І повмирали й вони обоє, Махлон та Кілйон. І позосталася та жінка по двох ді́тях своїх та по чоловікові своєму.
6 ಯೆಹೋವನು ತನ್ನ ಜನರನ್ನು ಸಂದರ್ಶಿಸಿ ಅವರಿಗೆ ಆಹಾರವನ್ನು ಅನುಗ್ರಹಿಸಿದ್ದಾನೆಂಬ ವರ್ತಮಾನವನ್ನು ಕೇಳಿದ ನವೊಮಿಯು ತನ್ನ ಸೊಸೆಯರೊಡನೆ ಮೋವಾಬ್ ದೇಶದಿಂದ ಯೆಹೂದ ದೇಶಕ್ಕೆ ಹೋಗಬೇಕೆಂದು ನಿರ್ಧರಿಸಿದಳು.
І встала вона та невістки її, і вернулися з моавських піль, бо почула на моавському полі, що Госпо́дь згадав про наро́д Свій, даючи їм хліба.
7 ಆಕೆಯು ಇಬ್ಬರು ಸೊಸೆಯರೊಡನೆ ತಾನಿದ್ದ ಸ್ಥಳದಿಂದ ಯೆಹೂದ ದೇಶಕ್ಕೆ ಹೋಗುವ ದಾರಿಯಲ್ಲಿ ಹೋಗುತ್ತಿರುವಾಗ
І вийшла вона з того місця, де була́ там, та оби́дві невістки з нею, та й пішли дорогою, щоб вернутися до Юдиного кра́ю.
8 ಅವರಿಗೆ, “ನೀವು ತಿರುಗಿ ನಿಮ್ಮ ನಿಮ್ಮ ತವರುಮನೆಗಳಿಗೆ ಹೋಗಿರಿ, ನೀವು ನನ್ನನ್ನೂ, ಮರಣಹೊಂದಿದ ನನ್ನ ಮಕ್ಕಳನ್ನು ಪ್ರೀತಿಸಿದಂತೆ ಯೆಹೋವನು ನಿಮ್ಮನ್ನು ಪ್ರೀತಿಸಿ ನಿಮಗೆ ಕೃಪೆತೋರಿಸಲಿ.
І сказала Ноомі́ до двох своїх невісток: „Ідіть, верніться кожна до дому своєї матері. І нехай Господь зробить із вами милість, як ви зробили з померлими та зо мною.
9 ನೀವಿಬ್ಬರೂ ಮದುವೆಯಾಗಿ ಗಂಡನ ಮನೆಯಲ್ಲಿ ಸುಖವಾಗಿರುವಂತೆ ಯೆಹೋವನು ಅನುಗ್ರಹಿಸಲಿ” ಎಂದು ಹೇಳಿ ಅವರಿಗೆ ಮುದ್ದಿಟ್ಟಳು.
Нехай Господь дасть вам, — і ви зна́йдете відпочинок кожна в домі свого мужа!“І вона поцілувала їх, а вони підняли́ свій голос та плакали.
10 ೧೦ ಆಗ ಅವರು ಬಹಳ ದುಃಖದಿಂದ ಗಟ್ಟಿಯಾಗಿ ಅತ್ತು ನಾವೂ ನಿನ್ನ ಜೊತೆಯಲ್ಲೇ ನಿನ್ನ ಸ್ವಜನರ ಬಳಿಗೆ ಬರುತ್ತೇವೆ ಅನ್ನಲು,
І вони сказали до неї: „ Ні, — з тобою ми ве́рнемось до народу твого!“
11 ೧೧ ಆಕೆಯು, “ನನ್ನ ಮಕ್ಕಳೇ, ನೀವು ನನ್ನೊಡನೆ ಬರುವುದೇಕೆ? ಹಿಂದಿರುಗಿ ಹೋಗಿರಿ. ನಿಮಗೆ ಗಂಡಂದಿರನ್ನು ಕೊಡುವುದಕ್ಕೆ ನನ್ನ ಗರ್ಭದಲ್ಲಿ ಬೇರೆ ಮಕ್ಕಳಿಲ್ಲವಲ್ಲಾ.
А Ноомі́ сказала: „Вертайтеся, до́чки мої, — чого ви пі́дете зо мною? Чи я маю ще в утро́бі своїй синів, а вони стануть вам за чоловіків?
12 ೧೨ ನಾನು ಮತ್ತೊಬ್ಬನನ್ನು ಪುನಃ ಮದುವೆಮಾಡಿಕೊಳ್ಳುವ ಪ್ರಾಯವೂ ನನಗೆ ದಾಟಿಹೋಗಿದೆ. ಆದುದರಿಂದ ನನ್ನ ಮಕ್ಕಳೇ, ನೀವು ಹಿಂದಿರುಗಿ ಹೋಗಿರಿ. ಒಂದು ವೇಳೆ ಆ ನಿರೀಕ್ಷೆಯಿಂದ ಈ ಹೊತ್ತೇ ನಾನು ಪುನಃ ಮದುವೆಯಾಗಿ ಮಕ್ಕಳನ್ನು ಹೆತ್ತರೂ,
Верніться, до́чки мої, ідіть, бо я занадто стара́, щоб бути для мужа. А коли б я й сказала: Маю надію, і коли б цієї ночі була з мужем, і також породила синів, —
13 ೧೩ ಅವರು ದೊಡ್ಡವರಾಗುವ ತನಕ ನೀವು ಕಾದಿರುವಿರೋ? ಅಲ್ಲಿಯ ವರೆಗೂ ಗಂಡಂದಿರಿಲ್ಲದೆ ಇರುವಿರೋ? ನನ್ನ ಮಕ್ಕಳೇ, ಹಾಗೆ ಮಾಡಬೇಡಿರಿ; ಯೆಹೋವನ ಹಸ್ತವು ನನ್ನಿಂದ ದೂರವಾಗಿರುವುದರಿಂದ ನಾನು ನಿಮಗಿಂತ ಹೆಚ್ಚಾಗಿ ದುಃಖಪಡುತ್ತೇನೆ” ಅಂದಳು.
чи ж ви чекали б їх, аж поки повироста́ють? Чи ж ви зв'язалися б з ними, щоб не бути замужем? Ні, до́чки мої, бо мені значно гірше, як вам, — бо Господня рука знайшла мене“.
14 ೧೪ ಆಗ ಅವರು ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಅತ್ತರು. ಒರ್ಫಳು ಅತ್ತೆಯನ್ನು ಮುದ್ದಿಟ್ಟು ಹೊರಟು ತನ್ನ ತವರಿಗೆ ಹೋದಳು; ರೂತಳಾದರೋ ಅತ್ತೆಯನ್ನು ತೊರೆದುಹೋಗದೆ ಅವಳೊಂದಿಗೆ ಇದ್ದಳು.
І підняли́ вони голос свій, і заплакали ще. І поцілувала Орпа свою свекру́ху, а Рут пригорну́лася до неї.
15 ೧೫ ನವೊಮಿಯು ರೂತಳಿಗೆ, ಇಗೋ, ನಿನ್ನ ಓರಗಿತ್ತಿಯು ತಿರುಗಿ ತನ್ನ ಜನರ ಬಳಿಗೂ, ತನ್ನ ಕುಲ ದೇವರುಗಳ ಬಳಿಗೂ ಹೋಗಿದ್ದಾಳೆ. ನೀನೂ ಆಕೆಯಂತೆ ನಿನ್ನ ಜನರ ಬಳಿಗೆ ಹೋಗು ಅಂದಾಗ,
І сказала Ноомі: „Ось зови́ця твоя вернулася до наро́ду свого та до богів своїх, — вернися й ти за зови́цею своєю!“
16 ೧೬ ಆಕೆಯು, “ನಿನ್ನನ್ನು ಬಿಟ್ಟು ಹಿಂದಿರುಗಿ ಹೋಗಬೇಕೆಂದು ನನ್ನನ್ನು ಒತ್ತಾಯಪಡಿಸಬೇಡ. ನೀನು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುವೆನು; ನೀನು ವಾಸಿಸುವಲ್ಲೇ ನಾನೂ ವಾಸಿಸುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು.
А Рут відказала: „Не силуй мене, щоб я покинула тебе, щоб я вернулася від тебе, бо куди пі́деш ти, туди піду́ й я, а де житимеш ти, там житиму й я. Наро́д твій буде мій народ, а Бог твій — мій Бог.
17 ೧೭ ನೀನು ಸಾಯುವಲ್ಲೇ ನಾನೂ ಸಾಯುವೆನು; ಅಲ್ಲೇ ನನಗೆ ಸಮಾಧಿಯಾಗಬೇಕು. ಮರಣದಿಂದಲ್ಲದೆ ನಾನು ನಿನ್ನನ್ನು ಅಗಲಿದರೆ ಯೆಹೋವನು ನನ್ನನ್ನು ಹೆಚ್ಚಾಗಿ ಶಿಕ್ಷಿಸಲಿ” ಎಂದಳು.
Де помреш ти, там помру й я, і там буду похована. Нехай Господь зробить мені так, і так нехай додасть, і тільки смерть розлучить мене з тобою“.
18 ೧೮ ಆಕೆಯು ತನ್ನ ಜೊತೆಯಲ್ಲಿ ಬರುವುದಕ್ಕೆ ನಿರ್ಧರಿಸಿದ್ದಾಳೆಂದು ನವೊಮಿಯು ತಿಳಿದು ಸುಮ್ಮನಾದಳು.
І побачила Ноомі́, що вона настоює йти за нею, і перестала вговорювати її.
19 ೧೯ ಹಾಗೆಯೇ ಪ್ರಯಾಣಮಾಡಿಕೊಂಡು ಅವರಿಬ್ಬರೂ ಬೇತ್ಲೆಹೇಮಿಗೆ ಬಂದು ಊರೊಳಕ್ಕೆ ಹೋದಾಗ ಅಲ್ಲಿಯ ಜನರಲ್ಲಿ ಕುತೂಹಲ ಮೂಡಿತು. ಸ್ತ್ರೀಯರು, “ಈಕೆಯು ನವೊಮಿಯಲ್ಲವೇ?” ಎಂದು ವಿಚಾರಿಸಲು
І пішли вони вдвох, аж прийшли до Віфлеєму. І сталося, коли вони вхо́дили до Віфлеєму, то зашуміло все місто про них, і говорили: „Чи це Ноомі́?“
20 ೨೦ ಆಕೆಯು ಅವರಿಗೆ, “ನನ್ನನ್ನು ನವೊಮಿಯೆಂದು ಕರೆಯಬೇಡಿರಿ; ನನ್ನನ್ನು ‘ಮಾರಾ’ (ಕಹಿ) ಎಂದು ಕರೆಯಿರಿ. ಏಕೆಂದರೆ, ಸರ್ವಶಕ್ತನಾದ ದೇವರು ಬಹಳ ತೀಕ್ಷ್ಣವಾಗಿ ನನ್ನ ಜೀವಿತವನ್ನು ಮಾರ್ಪಡಿಸಿದ್ದಾನೆ.
А вона сказала їм: „Не кличте мене: Ноомі́, — кличте мене: Мара́, бо велику гірко́ту зробив мені Всемогу́тній.
21 ೨೧ ಸಿರಿವಂತಳಾಗಿ ಹೋದೆನು; ಯೆಹೋವನು ನನ್ನನ್ನು ಗತಿಹೀನಳನ್ನಾಗಿ ಹಿಂತಿರುಗುವಂತೆ ಮಾಡಿದನು. ಯೆಹೋವನು ನನಗೆ ವಿರೋಧವಾಗಿದ್ದಾನೆ, ಸರ್ವಶಕ್ತನು ನನ್ನನ್ನು ಬಾಧಿಸಿದ್ದಾನೆ. ಹೀಗಿರುವಾಗ ನೀವು ನನ್ನನ್ನು ನವೊಮಿಯೆಂದು ಕರೆಯುವುದು ಸರಿಯೇ” ಅಂದಳು.
Я замо́жною пішла була, та порожньою вернув мене Господь. Чого кличете мене: Ноомі́, коли Господь свідчив проти мене, а Всемогутній послав мені горе?“
22 ೨೨ ಹೀಗೆ, ನವೊಮಿಯು ಮೋವಾಬ್ಯಳಾದ ತನ್ನ ಸೊಸೆ ರೂತಳೊಡನೆ ಬೇತ್ಲೆಹೇಮಿಗೆ ಬಂದಳು. ಆಗ ಜವೆಗೋದಿಯ ಸುಗ್ಗಿಯು ಪ್ರಾರಂಭವಾಗಿತ್ತು.
І вернулася Ноомі́ та з нею моавітянка Рут, невістка її, що верталася з моавських піль. І прийшли вони до Віфлеєму на початку жнив ячме́ню.

< ರೂತಳು 1 >