< ಪರಮಗೀತೆ 1 >
1 ೧ ಸೊಲೊಮೋನನು ರಚಿಸಿದ ಪರಮಗೀತೆ.
Kantik A Kantik Yo, ki ekri pa Salomon.
2 ೨ ನಿನ್ನ ಬಾಯ ಮುದ್ದುಗಳಿಂದ ನನಗೆ ಮುದ್ದಿಡು ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮ.
Kite l bo m ak bo bouch li! Paske lanmou ou bon pase diven.
3 ೩ ನಿನ್ನ ತೈಲವು ಸುಗಂಧ; ನಿನ್ನ ಹೆಸರು ಸುರಿದ ತೈಲದ ಸುಗಂಧದಂತೆ ವ್ಯಾಪಿಸಿರುವುದರಿಂದ, ತರುಣಿಯರು ನಿನ್ನನ್ನು ಪ್ರೀತಿಸುವರು.
Lwil pafen ou yo santi bon. Non ou menm se tankou lwil kap vide; se pou sa ke tout vyèj yo renmen ou konsa.
4 ೪ ನನ್ನನ್ನು ನಿನ್ನಡೆಗೆ ಸೆಳೆದುಕೋ; ನಿನ್ನ ಹಿಂದೆ ಓಡಿ ಬರುವೆನು; ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ; ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು, ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮವಾದುದು; ಸ್ತ್ರೀಯರು ನಿನ್ನನ್ನು ಯಥಾರ್ಥವಾಗಿ ಪ್ರೀತಿಸುವರು.
Rale m dèyè ou e annou kouri ansanm! Wa a mennen m nan chanm li yo. Lòt Yo “Nou va rejwi nan ou e fè kè kontan; nou va leve lanmou ou wo plis pase diven. Jenn Fi a Ak bon rezon, yo renmen ou konsa.”
5 ೫ ಯೆರೂಸಲೇಮಿನ ಮಹಿಳೆಯರೇ, ನಾನು ಕೇದಾರಿನ ಗುಡಾರಗಳಂತೆ ಕಪ್ಪಾಗಿದ್ದರೂ, ಸೊಲೊಮೋನನ ಪರದೆಗಳಂತೆ ಚೆಲುವಾಗಿದ್ದೇನೆ.
Mwen menm, mwen nwa; men mwen byen bèl, O fi a Jérusalem yo, tankou tant Kédar yo, tankou rido a Salomon yo.
6 ೬ ನಾನು ಕಪ್ಪಾಗಿದ್ದೇನೆ ಎಂದು ನನ್ನನ್ನು ದಿಟ್ಟಿಸಿ ನೋಡಬೇಡಿರಿ. ನಾನು ಕಪ್ಪಾಗಿರುವುದು ಸೂರ್ಯನ ತಾಪದಿಂದ. ನನ್ನ ಸಹೋದರರು ನನ್ನ ಮೇಲೆ ಕೋಪಗೊಂಡು ದ್ರಾಕ್ಷಿತೋಟಗಳನ್ನು ಕಾಯುವುದಕ್ಕೆ ಇಟ್ಟರು; ಆದುದರಿಂದ ನನ್ನ ಸ್ವಂತ ದ್ರಾಕ್ಷಿ ತೋಟವನ್ನೂ ನಾನು ಕಾಯ್ದುಕೊಳ್ಳಲಾಗಲಿಲ್ಲ.
Pa gade mwen konsa akoz mwen nwa; solèy la brile m konsa. Fis a manman m yo te byen fache avè m; Yo te fè m gadyen chan rezen yo. Men pwòp jaden pa m nan vin neglije.
7 ೭ ನನ್ನ ಪ್ರಾಣಪ್ರಿಯನೇ, ನಿನ್ನ ಮಂದೆಯನ್ನು ಎಲ್ಲಿ ಮೇಯಿಸುವೆ? ನಡುಹಗಲಲ್ಲಿ ನಿನ್ನ ಮಂದೆಯು ಎಲ್ಲಿ ವಿಶ್ರಮಿಸುತ್ತಾರೆ? ಹೇಳು. ನಾನೇಕೆ ಅಲೆಮಾರಿಗಳಂತೆ ನಿನ್ನ ಗೆಳೆಯರ ಮಂದೆಗಳ ಹತ್ತಿರ ಅಲೆಯಬೇಕು?
Pale mwen, ou menm nan ke nanm mwen tèlman renmen; ki kote ou fè patiraj twoupo ou a? Ki kote ou konn fè l kouche a midi? Paske poukisa mwen ta tankou yon moun ki vwale figi li nan kote twoupo zanmi ou yo?
8 ೮ ಸ್ತ್ರೀಯರಲ್ಲಿ ಅತಿ ಸುಂದರವಾದ ಹೆಣ್ಣು ನೀನು, ನಿನಗಿದು ಗೊತ್ತಿಲ್ಲವಾದರೆ ಹಿಂಡಿನ ಹೆಜ್ಜೆಯ ಜಾಡನ್ನು ಹಿಡಿದು ಹೋಗಿ, ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಮರಿಗಳನ್ನು ಮೇಯಿಸು.
Si ou menm, ou pa konnen, O pi bèl pami tout fanm yo; janbe swiv wout twoupo a, e fè patiraj pou jenn kabrit ou yo akote tant bèje ou yo.
9 ೯ ಪ್ರಿಯಳೇ, ನಿನ್ನನ್ನು ಫರೋಹನ ರಥವನ್ನೆಳೆವ ಹೆಣ್ಣು ಕುದುರೆಗೆ ಹೋಲಿಸಿದ್ದೇನೆ.
Pou mwen, cheri mwen an, ou tankou pi bèl poulich pami sa kap rale cha Farawon an.
10 ೧೦ ನಿನ್ನ ಕೆನ್ನೆಗಳು ಆಭರಣಗಳಿಂದಲೂ, ನಿನ್ನ ಕಂಠವು ಹಾರಗಳಿಂದಲೂ ಎಷ್ಟೋ ಅಂದವಾಗಿವೆ!
Bò figi ou byen bèl ak zanno, kou ou ak bèl kolye.
11 ೧೧ ನಾನು ನಿನಗಾಗಿ ಬಂಗಾರದ ಅಂಚಿನಿಂದ ಕೂಡಿರುವ, ಬೆಳ್ಳಿಯ ಕುಚ್ಚಗಳನ್ನು ಮಾಡಿಸುವೆನು.
Nou va fè pou ou dekorasyon an lò anbeli ak pwent an ajan tou won.
12 ೧೨ ರಾಜನು ಔತಣದಲ್ಲಿದ್ದಾಗ ಇತ್ತ ನನ್ನ ಸುಗಂಧತೈಲವು ಪರಿಮಳವನ್ನು ಬೀರುತ್ತಿತ್ತು.
Pandan wa a te sou tab li, pafen mwen te rive kote l ak bèl odè.
13 ೧೩ ಎನ್ನಿನಿಯನು ನನ್ನ ಸ್ತನಗಳ ಮಧ್ಯದಲ್ಲಿನ ರಕ್ತಬೋಳದ ಚೀಲ;
Sila ke m renmen an se yon pòch pafen; fèy bazilik ki pase tout nwit lan antre tete mwen.
14 ೧೪ ನನ್ನ ಪಾಲಿಗೆ ನನ್ನ ನಲ್ಲನು ಏನ್ಗೆದಿಯ ದ್ರಾಕ್ಷಿ ತೋಟಗಳ ಗೋರಂಟೆಯ ಹೂಗೊಂಚಲು.
Cheri mwen an se yon grap flè jasmen byen plase nan chan rezen En-Guédi yo.
15 ೧೫ ಆಹಾ, ನನ್ನ ಪ್ರಿಯಳೇ, ನೀನು ಎಷ್ಟು ಚೆಲುವೆ, ಆಹಾ, ನೀನು ಎಷ್ಟು ಸುಂದರಿ! ನಿನ್ನ ನೇತ್ರಗಳು ಪಾರಿವಾಳಗಳಂತಿವೆ.
“Tèlman ou bèl, cheri mwen an; tèlman ou bèl! Zye ou tankou toutrèl yo.”
16 ೧೬ ಆಹಾ, ಎನ್ನಿನಿಯನೇ, ನೀನೆಷ್ಟು ಸುಂದರ, ನೀನೆಷ್ಟು ಮನೋಹರ! ಹಚ್ಚ ಹಸಿರು ಚಿಗುರುಗಳು ನಮ್ಮ ಮಂಚ,
Gade jan ou bèl e byen agreyab, cheri mwen an; anverite, se zèb vèt kap fè kabann nou.
17 ೧೭ ನಮ್ಮ ಮನೆಯ ಛಾವಣಿ ತುರಾಯಿ ಮರಗಳೇ; ತೊಲೆಗಳು ದೇವದಾರು ವೃಕ್ಷಗಳೇ.
Pilye kay nou se bwa sèd e travès yo se bwa pen.