< ಪರಮಗೀತೆ 2 >
1 ೧ ನಾನು ಶಾರೋನಿನ ನೆಲಸಂಪಿಗೆ, ತಗ್ಗಿನ ತಾವರೆ.
मैं शारून की नर्गिस, और वादियों की सोसन हूँ।
2 ೨ ಸ್ತ್ರೀಯರಲ್ಲಿ ಶ್ರೇಷ್ಠಳು ನೀನು, ನನ್ನ ಪ್ರಿಯಳು ಮುಳ್ಳುಗಳ ಮಧ್ಯದಲ್ಲಿರುವ ತಾವರೆಯಂತಿರುವಳು.
जैसी सोसन झाड़ियों में, वैसी ही मेरी महबूबा कुँवारियों में है।
3 ೩ ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನ ವೃಕ್ಷದಂತಿಹನು. ಅದರ ಫಲವು ನನ್ನ ನಾಲಿಗೆಗೆ ಸುಮಧುರ ನಾನು ಆತನ ನೆರಳಿನಲ್ಲಿ ಕುಳಿತು ಪರಮಾನಂದಗೊಂಡೆನು.
जैसा सेब का दरख़्त जंगल के दरख़्तों में, वैसा ही मेरा महबूब नौजवानों में है। मैं निहायत शादमानी से उसके साये में बैठी, और उसका फल मेरे मुँह में मीठा लगा।
4 ೪ ಬರಮಾಡಿಕೊಂಡನು ನನ್ನನ್ನು ಔತಣಶಾಲೆಗೆ, ನನ್ನ ಮೇಲೆತ್ತಿದನು ಪ್ರೀತಿ ಎಂಬ ಪತಾಕೆ.
वह मुझे मयख़ाने के अंदर लाया, और उसकी मुहब्बत का झंडा मेरे ऊपर था।
5 ೫ ಅಸ್ವಸ್ಥಳಾಗಿರುವೆನು ಅನುರಾಗದಿಂದ, ದೀಪದ್ರಾಕ್ಷೆಯಿಂದ ನನ್ನನ್ನು ಉಪಚರಿಸಿರಿ, ಸೇಬು ಹಣ್ಣುಗಳಿಂದ ನನ್ನನ್ನು ಚೈತನ್ಯಗೊಳಿಸಿರಿ.
किशमिश से मुझे क़रार दो, सेबों से मुझे ताज़ादम करो, क्यूँकि मैं इश्क की बीमार हूँ।
6 ೬ ಆತನ ಎಡಗೈ ನನಗೆ ತಲೆದಿಂಬಾಗಿದ್ದರೆ, ಆತನ ಬಲಗೈ ನನ್ನನ್ನು ಆಲಂಗಿಸಿದರೆ ನನಗೆ ಪರಮಾನಂದ!
उसका बायाँ हाथ मेरे सिर के नीचे है, और उसका दहना हाथ मुझे गले से लगाता है।
7 ೭ ಯೆರೂಸಲೇಮಿನ ಮಹಿಳೆಯರೇ, ಆತನು ತಾನಾಗಿ ಎಚ್ಚರಗೊಳ್ಳುವವರೆಗೆ ಯಾರೂ ನನ್ನ ಪ್ರಿಯನನ್ನು ಎಚ್ಚರಿಸದಿರಿ, ಆತನ ವಿಶ್ರಾಂತಿಗೆ ಯಾರೂ ಭಂಗ ಮಾಡದಿರಿ ಎಂದು ವನದ ಜಿಂಕೆ ಹರಿಣಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.
ऐ येरूशलेम की बेटियो, मैं तुम को ग़ज़ालों और मैदान की हिरनीयों की क़सम देती हूँ तुम मेरे प्यारे को न जगाओ न उठाओ, जब तक कि वह उठना न चाहे।
8 ೮ ಅಗೋ ನನ್ನ ಕಾಂತನ ಸಪ್ಪಳ! ಅವನು ಬೆಟ್ಟಗಳ ಮೇಲೆ ಹಾರುತ್ತಾ, ಗುಡ್ಡಗಳಲ್ಲಿ ಜಿಗಿಯುತ್ತಾ ಬರುತ್ತಿದ್ದಾನೆ;
मेरे महबूब की आवाज़! देख, वह आ रहा है। पहाड़ों पर से कूदता और टीलों पर से फाँदता हुआ चला आता है।
9 ೯ ನನ್ನ ಪ್ರಿಯನು ಜಿಂಕೆಯಂತೆಯೂ ಪ್ರಾಯದ ಹರಿಣದಂತೆಯೂ ಇದ್ದಾನೆ. ಆಹಾ, ಇಗೋ ನಮ್ಮ ಗೋಡೆಯ ಆಚೆ ನಿಂತು, ಕಿಟಕಿಗಳ ಮೂಲಕ ನೋಡುತ್ತಾನೆ, ಜಾಲಾಂದ್ರಗಳ ಮೂಲಕ ಇಣಿಕುಹಾಕುತ್ತಾನೆ!
मेरा महबूब आहू या जवान ग़ज़ाल की तरह है। देख, वह हमारी दीवार के पीछे खड़ा है, वह खिड़कियों से झाँकता है, वह झाड़ियों से ताकता है।
10 ೧೦ ನನ್ನ ನಲ್ಲನು ನನಗೆ ಹೀಗೆಂದನು, “ನನ್ನ ಪ್ರಿಯತಮೇ, ಎನ್ನ ಸುಂದರಿಯೇ, ಎದ್ದು ನನ್ನೊಂದಿಗೆ ಬಾ!
“मेरे महबूब ने मुझ से बातें कीं और कहा, उठ मेरी प्यारी, मेरी नाज़नीन चली आ!
11 ೧೧ ಇಗೋ, ಚಳಿಗಾಲ ಕಳೆಯಿತು, ಮಳೆಗಾಲ ಮುಗಿಯಿತು;
क्यूँकि देख जाड़ा गुज़र गया, मेंह बरस चुका और निकल गया।
12 ೧೨ ಭೂಮಿಯಲ್ಲೆಲ್ಲಾ ಹೂವುಗಳು ಕಾಣುತ್ತವೆ, ಕುಡಿ ಸವರುವ ಕಾಲ ಬಂತು, ಬೆಳವಕ್ಕಿಯ ಕೂಗು ದೇಶದಲ್ಲಿ ಕೇಳಿಸುತ್ತದೆ;
ज़मीन पर फूलों की बहार है, परिन्दों के चहचहाने का वक़्त आ पहुँचा, और हमारी सरज़मीन में कुमरियों की आवाज़ सुनाई देने लगी।
13 ೧೩ ಅಂಜೂರದ ಕಾಯಿಗಳು ಹಣ್ಣಾಗಿವೆ, ದ್ರಾಕ್ಷಿಯ ಬಳ್ಳಿಗಳು ಹೂಬಿಟ್ಟಿವೆ, ಅದರ ಪರಿಮಳವನ್ನು ಬೀರುತ್ತಿದೆ. ನನ್ನ ಪ್ರಿಯಳೇ, ಎನ್ನ ಸುಂದರಿಯೇ, ಎದ್ದು ನನ್ನೊಂದಿಗೆ ಬಾ!
अंजीर के दरख़्तों में हरे अंजीर पकने लगे, और ताकें फूलने लगीं; उनकी महक फैल रही है। इसलिए उठ मेरी प्यारी, मेरी जमीला, चली आ।
14 ೧೪ ಬಂಡೆಯ ಬಿರುಕುಗಳಲ್ಲಿಯೂ, ಸಂದುಗಳ ಮರೆಯಲ್ಲಿಯೂ ಇರುವ ನನ್ನ ಪಾರಿವಾಳವೇ! ನಿನ್ನ ರೂಪವನ್ನು ನನಗೆ ತೋರಿಸು, ನಿನ್ನ ಧ್ವನಿಯನ್ನು ಕೇಳಿಸು; ಯಾಕೆಂದರೆ ನಿನ್ನ ಸ್ವರ ಎಷ್ಟೋ ಇಂಪು, ನಿನ್ನ ರೂಪವು ಎಷ್ಟೋ ಅಂದ.”
ऐ मेरी कबूतरी, जो चट्टानों की दरारों में और कड़ाड़ों की आड़ में छिपी है; मुझे अपना चेहरा दिखा, मुझे अपनी आवाज़ सुना, क्यूँकि तू माहजबीन और तेरी आवाज़ मीठी है।
15 ೧೫ ತೋಟಗಳನ್ನು ಹಾಳುಮಾಡುವ ನರಿಗಳನ್ನು, ನರಿಮರಿಗಳನ್ನು ಹಿಡಿಯಿರಿ; ಹೂಬಿಟ್ಟಿರುವ ನಮ್ಮ ದ್ರಾಕ್ಷಿ ತೋಟಗಳು ಹಾಳು.
हमारे लिए लोमड़ियों को पकड़ो, उन लोमड़ी बच्चों को जो खजूर के बाग़ को ख़राब करते हैं; क्यूँकि हमारी ताकों में फूल लगे हैं।”
16 ೧೬ ಎನ್ನಿನಿಯನು ನನ್ನವನೇ, ನಾನು ಅವನವಳೇ, ನೆಲದಾವರೆಗಳ ಮಧ್ಯದಲ್ಲಿ ಮಂದೆಯನ್ನು ಮೇಯಿಸುವವನಾಗಿದ್ದಾನೆ.
मेरा महबूब मेरा है और मैं उसकी हूँ, वह सोसनों के बीच चराता है।
17 ೧೭ ಕತ್ತಲು ಕಳೆಯುವ ಮೊದಲು, ಹೊತ್ತು ಮೂಡುವ ಮೊದಲು ಹೊರಟು ಬಾ ನನ್ನ ಪ್ರಿಯನೇ, ಬೇತೆರ್ ಪರ್ವತದಲ್ಲಿ ಜಿಂಕೆಯಂತೆಯೂ ಪ್ರಾಯದ ಹರಿಣದಂತೆಯೂ ಇರು.
जब तक दिन ढले और साया बढ़े, तू फिर आ ऐ मेरे महबूब। तू ग़ज़ाल या जवान हिरन की तरह होकर आ, जो बातर के पहाड़ों पर है।