< ಪರಮಗೀತೆ 3 >
1 ೧ ರಾತ್ರಿಯಲ್ಲಿ ಹಾಸಿಗೆಯ ಮೇಲೆ ನನ್ನ ಪ್ರಾಣಪ್ರಿಯನನ್ನು ಹುಡುಕಿದೆನು, ಎಷ್ಟು ಹುಡುಕಿದರೂ ಸಿಕ್ಕಲಿಲ್ಲ.
[In lectulo meo, per noctes, quæsivi quem diligit anima mea: quæsivi illum, et non inveni.
2 ೨ ನಾನು, “ಎದ್ದು ಊರಿನಲ್ಲಿ ತಿರುಗುವೆನು, ಬೀದಿಗಳಲ್ಲಿಯೂ, ಚೌಕಗಳಲ್ಲಿಯೂ ನನ್ನ ಪ್ರಾಣಪ್ರಿಯನನ್ನು ಹುಡುಕುವೆನು” ಅಂದುಕೊಂಡೆನು, ಎಷ್ಟು ಹುಡುಕಿದರೂ ಸಿಕ್ಕಲಿಲ್ಲ.
Surgam, et circuibo civitatem: per vicos et plateas quæram quem diligit anima mea: quæsivi illum, et non inveni.
3 ೩ ಊರಿನಲ್ಲಿ ತಿರುಗುವ ಕಾವಲುಗಾರರ ಕೈಗೆ ಸಿಕ್ಕಿದೆನು, “ನನ್ನ ಪ್ರಾಣಪ್ರಿಯನನ್ನು ಕಂಡಿರಾ?” ಎಂದು ಅವರನ್ನು ವಿಚಾರಿಸಿದೆನು.
Invenerunt me vigiles qui custodiunt civitatem: Num quem diligit anima mea vidistis?
4 ೪ ಅವರನ್ನು ಬಿಟ್ಟ ತುಸು ಹೊತ್ತಿನೊಳಗೆ ನನ್ನ ಪ್ರಾಣಪ್ರಿಯನನ್ನು ಕಂಡುಕೊಂಡು ತಾಯಿಯ ಮನೆಗೆ, ನನ್ನನ್ನು ಹೆತ್ತವಳ ಕೋಣೆಗೆ ಸೇರುವ ತನಕ, ಬಿಡದೆ ಹಿಡಿದುಕೊಂಡೇ ಹೋದೆನು.
Paululum cum pertransissem eos, inveni quem diligit anima mea: tenui eum, nec dimittam, donec introducam illum in domum matris meæ, et in cubiculum genetricis meæ.
5 ೫ ಯೆರೂಸಲೇಮಿನ ಮಹಿಳೆಯರೇ, ಆತನು ತಾನಾಗಿ ಎಚ್ಚರಗೊಳ್ಳುವವರೆಗೆ ಯಾರೂ ನನ್ನ ಪ್ರಿಯನನ್ನು ಎಚ್ಚರಿಸದಿರಿ, ಆತನ ವಿಶ್ರಾಂತಿಗೆ ಯಾರೂ ಭಂಗ ಮಾಡದಿರಿ ಎಂದು ವನದ ಜಿಂಕೆ ಹರಿಣಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.
Sponsus Adjuro vos, filiæ Jerusalem, per capreas cervosque camporum, ne suscitetis, neque evigilare faciatis dilectam, donec ipsa velit.
6 ೬ ವರ್ತಕರು ಮಾರುವ ಸಕಲ ಸುಗಂಧತೈಲಗಳಿಂದ, ರಸಗಂಧ, ಸಾಂಬ್ರಾಣಿಧೂಪ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿಯಲ್ಲಿ ಹೊರಹೊಮ್ಮುತ್ತಿರುವ, ಅರಣ್ಯಮಾರ್ಗವಾಗಿ ಬರುತ್ತಿರುವ ಈ ಮೆರವಣಿಗೆ ಯಾರದು?
Chorus Quæ est ista quæ ascendit per desertum sicut virgula fumi ex aromatibus myrrhæ, et thuris, et universi pulveris pigmentarii?
7 ೭ ಅದೋ, ನೋಡು ಸೊಲೊಮೋನನ ಪಲ್ಲಕ್ಕಿ, ಇಸ್ರಾಯೇಲಿನ ಶೂರರಲ್ಲಿ ಅರುವತ್ತು ಜನರು ಅದರ ಸುತ್ತಲಿದ್ದಾರೆ.
En lectulum Salomonis sexaginta fortes ambiunt ex fortissimis Israël,
8 ೮ ಯುದ್ಧಪ್ರವೀಣರಾದ ಇವರೆಲ್ಲರೂ ಕೈಯಲ್ಲಿ ಕತ್ತಿಯನ್ನು ಹಿಡಿದಿದ್ದಾರೆ. ರಾತ್ರಿಯ ಅಪಾಯದ ನಿಮಿತ್ತ ಪ್ರತಿಯೊಬ್ಬನೂ ಸೊಂಟಕ್ಕೆ ಕತ್ತಿ ಕಟ್ಟಿಕೊಂಡಿದ್ದಾನೆ.
omnes tenentes gladios, et ad bella doctissimi: uniuscujusque ensis super femur suum propter timores nocturnos.
9 ೯ ಆ ಪಲ್ಲಕ್ಕಿಯನ್ನು ರಾಜನಾದ ಸೊಲೊಮೋನನು ಲೆಬನೋನಿನ ಮರದಿಂದ ಮಾಡಿಸಿದ್ದಾನೆ.
Ferculum fecit sibi rex Salomon de lignis Libani;
10 ೧೦ ಅದರ ಕಂಬಗಳನ್ನು ಬೆಳ್ಳಿಯಿಂದಲೂ, ಕುಳಿತು ಒರಗಿಕೊಳ್ಳುವ ಆಸನವನ್ನು ಬಂಗಾರದಿಂದಲೂ, ಆಸನವನ್ನು ಧೂಮ್ರವರ್ಣದ ವಸ್ತ್ರದಿಂದ ಮಾಡಿಸಿದನು. ಅದರ ಮಧ್ಯಭಾಗವನ್ನು ಯೆರೂಸಲೇಮಿನ ಪುತ್ರಿಯರು ತಮ್ಮ ಪ್ರೀತಿಗೆ ಗುರುತಾಗಿ ಕಸೂತಿಯಿಂದ ಅಲಂಕರಿಸಿದರು.
columnas ejus fecit argenteas, reclinatorium aureum, ascensum purpureum; media caritate constravit, propter filias Jerusalem.
11 ೧೧ ಚೀಯೋನಿನ ಮಹಿಳೆಯರೇ, ಹೊರಟು ಬನ್ನಿ ರಾಜನಾದ ಸೊಲೊಮೋನನನ್ನು ನೋಡ ಬನ್ನಿ. ಅವನು ವಿವಾಹ ದಿನದ ಉತ್ಸವದಂದು ಆತನ ತಾಯಿ ಆತನಿಗೆ ತೊಡಿಸಿದ ಕಿರೀಟವನ್ನು ಆತ ಧರಿಸಿರುವುದನ್ನು ನೋಡಬನ್ನಿ!
Egredimini et videte, filiæ Sion, regem Salomonem in diademate quo coronavit illum mater sua in die desponsationis illius, et in die lætitiæ cordis ejus.]