< ಪರಮಗೀತೆ 4 >
1 ೧ ಆಹಾ, ನನ್ನ ಪ್ರಿಯಳೇ, ನೀನು ಎಷ್ಟು ಚೆಲುವೆ! ಆಹಾ, ನೀನು ಎಷ್ಟು ಸುಂದರಿ! ಮುಸುಕಿನೊಳಗಿನ ನಿನ್ನ ನೇತ್ರಗಳು ಪಾರಿವಾಳಗಳು, ನಿನ್ನ ಕೂದಲು ಗಿಲ್ಯಾದ್ ಬೆಟ್ಟದಿಂದ ಇಳಿದು ಹೋಗುವ ಆಡಿನ ಮಂದೆ.
१हे मेरी प्रिय तू सुन्दर है, तू सुन्दर है! तेरी आँखें तेरी लटों के बीच में कबूतरों के समान दिखाई देती है। तेरे बाल उन बकरियों के झुण्ड के समान हैं जो गिलाद पहाड़ के ढाल पर लेटी हुई हों।
2 ೨ ಉಣ್ಣೆ ಕತ್ತರಿಸಿ ಸ್ನಾನಮಾಡಿಸಿದ ಕುರಿಮಂದೆಯ ಬಿಳುಪಿನಂತಿವೆ ನಿನ್ನ ಹಲ್ಲುಗಳು, ಯಾವುದೂ ಒಂಟಿಯಾಗಿರದೆ ಎಲ್ಲವೂ ಒಟ್ಟಾಗಿ ಜೋಡಿಯಾಗಿವೆ.
२तेरे दाँत उन ऊन कतरी हुई भेड़ों के झुण्ड के समान हैं, जो नहाकर ऊपर आई हों, उनमें हर एक के दो-दो जुड़वा बच्चे होते हैं। और उनमें से किसी का साथी नहीं मरा।
3 ೩ ನಿನ್ನ ತುಟಿಗಳು ಕೆಂಪು ದಾರದಂತಿವೆ. ನಿನ್ನ ಬಾಯಿ ರಮ್ಯ. ಮುಸುಕಿನೊಳಗಿನ ನಿನ್ನ ಕೆನ್ನೆಯು ಹೋಳು ಮಾಡಿದ ದಾಳಿಂಬೆಯ ತಿರುಳಿನಂತಿದೆ.
३तेरे होंठ लाल रंग की डोरी के समान हैं, और तेरा मुँह मनोहर है, तेरे कपोल तेरी लटों के नीचे अनार की फाँक से देख पड़ते हैं।
4 ೪ ನಿನ್ನ ಕೊರಳು ದಾವೀದನು ಕಟ್ಟಿಸಿದ ನುಣುಪಾದ ಗೋಪುರದಂತಿದೆ, ನಿನ್ನ ಕತ್ತಿನ ಹಾರ ಸಾವಿರ ಶೂರರ ಗುರಾಣಿಗಳನ್ನು ನೇತುಹಾಕಿರುವ ದಾವೀದನ ಬುರುಜಿನ ಹಾಗಿದೆ.
४तेरा गला दाऊद की मीनार के समान है, जो अस्त्र-शस्त्र के लिये बना हो, और जिस पर हजार ढालें टँगी हुई हों, वे सब ढालें शूरवीरों की हैं।
5 ೫ ನಿನ್ನ ಎರಡು ಸ್ತನಗಳು ನೆಲದಾವರೆಗಳ ಮಧ್ಯದಲ್ಲಿ ಮೇಯುತ್ತಿರುವ ಅವಳಿ ಜಿಂಕೆಮರಿಗಳಂತಿವೆ.
५तेरी दोनों छातियाँ मृग के दो जुड़वे बच्चों के तुल्य हैं, जो सोसन फूलों के बीच में चरते हों।
6 ೬ ಕತ್ತಲು ಕಳೆಯುವ ತನಕ, ಹೊತ್ತು ಮೂಡುವವರೆಗೆ ರಕ್ತಬೋಳದ ಬೆಟ್ಟಕ್ಕೂ, ಧೂಪದ ಗುಡ್ಡಕ್ಕೂ ತೆರಳಿ ಸಂಚರಿಸುವೆ ನಾನು.
६जब तक दिन ठंडा न हो, और छाया लम्बी होते-होते मिट न जाए, तब तक मैं शीघ्रता से गन्धरस के पहाड़ और लोबान की पहाड़ी पर चला जाऊँगा।
7 ೭ ನನ್ನ ಪ್ರಿಯಳೇ, ನೀನು ಸರ್ವಾಂಗಸುಂದರಿ, ನಿನ್ನಲ್ಲಿ ಯಾವ ಕೊರತೆಯೂ ಇಲ್ಲ.
७हे मेरी प्रिय तू सर्वांग सुन्दरी है; तुझ में कोई दोष नहीं।
8 ೮ ಬಾ ವಧುವೇ, ಎನ್ನೊಂದಿಗೆ ಲೆಬನೋನಿನಿಂದ. ಬಾ ನನ್ನೊಂದಿಗೆ, ಲೆಬನೋನಿನಿಂದ, ಇಳಿದು ಬಾ ಅಮಾನದ ತುದಿಯಿಂದ, ಶೆನೀರ್ ಮತ್ತು ಹೆರ್ಮೋನ್ ಶಿಖರಗಳಿಂದ. ಹೊರಟು ಬಾ, ಸಿಂಹಗಳ ಗುಹೆಗಳಿಂದ ಚಿರತೆಗಳ ಗುಡ್ಡಗಳಿಂದ.
८हे मेरी दुल्हन, तू मेरे संग लबानोन से, मेरे संग लबानोन से चली आ। तू अमाना की चोटी पर से, सनीर और हेर्मोन की चोटी पर से, सिंहों की गुफाओं से, चीतों के पहाड़ों पर से दृष्टि कर।
9 ೯ ಪ್ರಿಯಳೇ, ವಧುವೇ, ನನ್ನ ಹೃದಯವನ್ನು ಅಪಹರಿಸಿರುವೆ ನಿನ್ನ ಒಂದು ಕುಡಿನೋಟದಿಂದ; ನನ್ನ ಹೃದಯವನ್ನು ವಶಮಾಡಿಕೊಂಡಿರುವೆ ನಿನ್ನ ಕಂಠಹಾರದ ಒಂದು ರತ್ನದಿಂದ.
९हे मेरी बहन, हे मेरी दुल्हन, तूने मेरा मन मोह लिया है, तूने अपनी आँखों की एक ही चितवन से, और अपने गले के एक ही हीरे से मेरा हृदय मोह लिया है।
10 ೧೦ ಪ್ರಿಯಳೇ, ವಧುವೇ, ನಿನ್ನ ಪ್ರೀತಿ ಅದೆಷ್ಟೋ ರಮ್ಯ! ನಿನ್ನ ಪ್ರೇಮ ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ನಿನ್ನ ತೈಲದ ಪರಿಮಳ ಸಕಲಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ!
१०हे मेरी बहन, हे मेरी दुल्हन, तेरा प्रेम क्या ही मनोहर है! तेरा प्रेम दाखमधु से क्या ही उत्तम है, और तेरे इत्रों का सुगन्ध सब प्रकार के मसालों के सुगन्ध से!
11 ೧೧ ವಧುವೇ, ನಿನ್ನ ತುಟಿಗಳು ಜೇನುಗರೆಯುತ್ತವೆ; ಜೇನೂ ಮತ್ತು ಹಾಲೂ ನಿನ್ನ ನಾಲಿಗೆಯ ಅಡಿಯಲ್ಲಿವೆ, ನಿನ್ನ ಉಡುಪುಗಳು ಲೆಬನೋನಿನ ಸುಗಂಧ ಸೂಸುತ್ತಿದೆ.
११हे मेरी दुल्हन, तेरे होठों से मधु टपकता है; तेरी जीभ के नीचे मधु और दूध रहता है; तेरे वस्त्रों का सुगन्ध लबानोन के समान है।
12 ೧೨ ನನ್ನ ಪ್ರಿಯಳು, ನನ್ನ ಮದಲಗಿತ್ತಿಯು, ಸುಭದ್ರವಾದ ಉದ್ಯಾನ, ಬೇಲಿಯೊಳಗೆ ಮುಚ್ಚಿ ಮುದ್ರಿಸಿದ ಚಿಲುಮೆ.
१२मेरी बहन, मेरी दुल्हन, किवाड़ लगाई हुई बारी के समान, किवाड़ बन्द किया हुआ सोता, और छाप लगाया हुआ झरना है।
13 ೧೩ ನಿನ್ನ ಉದ್ಯಾನದಲ್ಲಿವೆ ದಾಳಿಂಬೆಯಂತಹ ಉತ್ತಮ ವೃಕ್ಷಗಳು, ಜಟಮಾಂಸಿ ಮತ್ತು ಗೋರಂಟೆಗಳು,
१३तेरे अंकुर उत्तम फलवाली अनार की बारी के तुल्य हैं, जिसमें मेंहदी और जटामासी,
14 ೧೪ ಜಟಮಾಂಸಿ, ಕುಂಕುಮ, ಬಜೆ, ಲವಂಗಚಕ್ಕೆ, ಸಮಸ್ತ ವಿಧವಾದ ಸಾಂಬ್ರಾಣಿ ಗಿಡಗಳು, ರಕ್ತಬೋಳ, ಅಗುರು, ಸಕಲ ಮುಖ್ಯ ಸುಗಂಧದ್ರವ್ಯ ಇವುಗಳೇ ಚಿಗುರುತ್ತವೆ.
१४जटामासी और केसर, लोबान के सब भाँति के पेड़, मुश्क और दालचीनी, गन्धरस, अगर, आदि सब मुख्य-मुख्य सुगन्ध-द्रव्य होते हैं।
15 ೧೫ ಉದ್ಯಾನಗಳಿಗೆ ಹಾದು ಹೋಗುವ ಬುಗ್ಗೆ, ಉಕ್ಕುತ್ತಿರುವ ಬಾವಿ, ಲೆಬನೋನಿನಿಂದ ಹರಿಯುವ ಕಾಲುವೆ ನಿನ್ನಲ್ಲಿವೆ.
१५तू बारियों का सोता है, फूटते हुए जल का कुआँ, और लबानोन से बहती हुई धाराएँ हैं। वधू
16 ೧೬ ಉತ್ತರದ ಗಾಳಿಯೇ ಏಳು, ದಕ್ಷಿಣದ ಗಾಳಿಯೇ ಬೀಸು! ನನ್ನ ತೋಟದ ಸುಗಂಧಗಳು ಹರಡುವ ಹಾಗೆ ಅದರ ಮೇಲೆ ಸುಳಿದಾಡು. ಎನ್ನಿನಿಯನು ತನ್ನ ತೋಟದೊಳಗೆ ಸೇರಿ ತನ್ನ ಉತ್ತಮ ಫಲಗಳನ್ನು ತಾನೇ ಭುಜಿಸಲಿ.
१६हे उत्तर वायु जाग, और हे दक्षिण वायु चली आ! मेरी बारी पर बह, जिससे उसका सुगन्ध फैले। मेरा प्रेमी अपनी बारी में आए, और उसके उत्तम-उत्तम फल खाए।