< ಪರಮಗೀತೆ 5 >
1 ೧ ಪ್ರಿಯಳೇ, ವಧುವೇ, ಇಗೋ ನಾ ಬಂದಿರುವೆ ನನ್ನ ತೋಟದೊಳಗೆ, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ, ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ, ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ. ಪ್ರಿಯರೇ ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.
Nimekuja kwenye bustani yangu, dada yangu, bibi arusi wangu; nimekusanya manemane yangu pamoja na kikolezo changu. Nimekula sega langu la asali na asali yangu; nimekunywa divai yangu na maziwa yangu. Marafiki Kuleni, enyi marafiki, mnywe; kunyweni ya kutosha, ee wapenzi.
2 ೨ ನಾನು ನಿದ್ರೆಗೊಂಡಿದ್ದರೂ ನನ್ನ ಹೃದಯವು ಎಚ್ಚರಗೊಂಡಿತ್ತು. ಇಗೋ, ಎನ್ನಿನಿಯನು ಕದ ತಟ್ಟಿ, “ಪ್ರಿಯಳೇ, ಕಾಂತಳೇ, ಪಾರಿವಾಳವೇ, ನಿರ್ಮಲೆಯೇ, ಬಾಗಿಲು ತೆಗೆ! ನನ್ನ ತಲೆಯ ಮೇಲೆಲ್ಲಾ ಇಬ್ಬನಿಯು ಬಿದ್ದಿದೆ, ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತುಂಬಿದೆ” ಅಂದನು.
Nililala lakini moyo wangu ulikuwa macho. Sikiliza! Mpenzi wangu anabisha: “Nifungulie, dada yangu, mpenzi wangu, hua wangu, asiye na hitilafu. Kichwa changu kimeloa umande, na nywele zangu manyunyu ya usiku.”
3 ೩ “ನನ್ನ ಒಳಂಗಿಯನ್ನು ತೆಗೆದೆನಲ್ಲಾ, ಅದನ್ನು ಹೇಗೆ ಹಾಕಿಕೊಂಡೇನು? ಪಾದಗಳನ್ನು ತೊಳೆದುಕೊಂಡೆನಲ್ಲಾ, ಅವುಗಳನ್ನು ಹೇಗೆ ಕೊಳೆಮಾಡಿಕೊಳ್ಳಲಿ?” ಎಂದು ನಾನು ಅಂದುಕೊಂಡಾಗ,
Nimevua joho langu: je, ni lazima nivae tena? Nimenawa miguu yangu: je, ni lazima niichafue tena?
4 ೪ ನನ್ನ ಕಾಂತನು ಬಾಗಿಲ ರಂಧ್ರದಲ್ಲಿ ಕೈ ನೀಡಿದನು, ಅವನಿಗಾಗಿ ನನ್ನ ಮನ ಮಿಡಿಯಿತು.
Mpenzi wangu aliweka mkono wake kwenye tundu la komeo; moyo wangu ulianza kugonga kwa ajili yake.
5 ೫ ನಾನೆದ್ದು ನನ್ನ ನಲ್ಲನಿಗೆ ಬಾಗಿಲು ತೆರೆಯಲು ಅಗುಳಿಯ ಮೇಲೆ ಕೈಯಿಟ್ಟೆನು, ನನ್ನ ಕೈಗಳಿಂದ ರಕ್ತಬೋಳವು, ನನ್ನ ಬೆರಳುಗಳಿಂದ ಅಚ್ಚರಕ್ತಬೋಳವು ತೊಟ್ಟಿಕ್ಕಿತು.
Niliinuka kumfungulia mpenzi wangu, mikono yangu ikidondosha manemane, vidole vyangu vikitiririka manemane, penye vipini vya komeo.
6 ೬ ನನ್ನ ಇನಿಯನಿಗೆ ಕದ ತೆಗೆದೆನು, ಅಷ್ಟರಲ್ಲಿ ಅವನು ಹಿಂದಿರುಗಿ ಹೋಗಿದ್ದನು. ನನ್ನೆದೆಯ ಬಡಿತವೇ ನಿಂತಂತಾಯಿತು ಅವನ ದನಿಗೆ. ಎಷ್ಟು ಹುಡುಕಿದರೂ ಸಿಕ್ಕಲಿಲ್ಲ ಅವನು, ಎಷ್ಟು ಕೂಗಿದರೂ ಉತ್ತರವಿಲ್ಲ.
Nilimfungulia mpenzi wangu, lakini mpenzi wangu alishaondoka; alikuwa amekwenda zake. Moyo wangu ulishuka kwa kuondoka kwake. Nilimtafuta lakini sikumpata. Nilimwita lakini hakunijibu.
7 ೭ ಊರಲ್ಲಿ ಸುತ್ತುತ್ತಿರುವ ಕಾವಲುಗಾರರು ನನ್ನನ್ನು ಕಂಡುಹಿಡಿದು, ಹೊಡೆದು ಗಾಯಪಡಿಸಿದರು, ಪೌಳಿಯ ಕಾವಲುಗಾರರು ಮೇಲೊದಿಕೆಯನ್ನು ನನ್ನಿಂದ ಕಿತ್ತುಕೊಂಡರು.
Walinzi walinikuta walipokuwa wakifanya zamu za ulinzi mjini. Walinipiga, wakanijeruhi, wakaninyangʼanya joho langu, hao walinzi wa kuta!
8 ೮ ಯೆರೂಸಲೇಮಿನ ಮಹಿಳೆಯರೇ, ನೀವು ನನ್ನ ಕಾಂತನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆ ಎಂಬುವುದನ್ನು ಅವನಿಗೆ ತಿಳಿಸಬೇಕೆಂದು ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.
Enyi binti za Yerusalemu, ninawaagiza: kama mkimpata mpenzi wangu, mtamwambia nini? Mwambieni ninazimia kwa mapenzi.
9 ೯ ಸ್ತ್ರೀರತ್ನವೇ, ಇತರರ ಕಾಂತರಿಗಿಂತ ನಿನ್ನ ಕಾಂತನ ವಿಶೇಷತೆಯೇನು? ನಮ್ಮಿಂದ ನೀನು ಹೀಗೆ ಪ್ರಮಾಣಮಾಡಿಸುವುದಕ್ಕೆ ಇತರರ ಕಾಂತರಿಗಿಂತ ನಿನ್ನ ಕಾಂತನ ಅತಿಶಯವೇನು?
Je, mpendwa wako ni bora kuliko wengine namna gani, wewe uliye mzuri kupita wanawake wote? Je, mpendwa wako ni mzuri kuliko wengine, namna gani, hata unatuagiza hivyo?
10 ೧೦ ನನ್ನ ನಲ್ಲನು ತೇಜೋಮಯವಾದ ಕೆಂಪು ಬಣ್ಣವುಳ್ಳವನು; ಅವನು ಹತ್ತು ಸಾವಿರ ಜನರಲ್ಲಿ ಧ್ವಜಪ್ರಾಯನು.
Mpenzi wangu anangʼaa, tena ni mwekundu, wa kuvutia miongoni mwa wanaume kumi elfu.
11 ೧೧ ಅವನ ತಲೆಯು ಚೊಕ್ಕ ಬಂಗಾರದಂತಿದೆ, ಗುಂಗುರು ಗುಂಗುರಾಗಿರುವ ಅವನ ಕೂದಲು ಕಾಗೆಯಂತೆ ಕಪ್ಪಾಗಿದೆ.
Kichwa chake ni dhahabu safi kuliko zote, nywele zake ni za mawimbi na ni nyeusi kama kunguru.
12 ೧೨ ಅವನ ಕಣ್ಣುಗಳೋ ತುಂಬಿತುಳುಕುವ ತೊರೆಗಳ ಹತ್ತಿರ ತಂಗುವ, ಕ್ಷೀರದಲ್ಲಿ ಸ್ನಾನಮಾಡುವ ಪಾರಿವಾಳಗಳಂತಿವೆ.
Macho yake ni kama ya hua kandokando ya vijito vya maji, aliyeogeshwa kwenye maziwa, yaliyopangwa kama vito vya thamani.
13 ೧೩ ಅವನ ಕೆನ್ನೆಗಳು ಕರ್ಣಕುಂಡಲ ಗಿಡಗಳ ಪಾತಿಗಳಂತೆಯೂ ಸುಗಂಧಸಸ್ಯಗಳು ಬೆಳೆಯುವ ದಿಬ್ಬಗಳಂತೆಯೂ ಇವೆ; ಅಚ್ಚರಕ್ತಬೋಳವನ್ನು ಸುರಿಸುವ ಅವನ ತುಟಿಗಳು ಕೆಂದಾವರೆಗಳೇ.
Mashavu yake ni kama matuta ya vikolezo yakitoa manukato. Midomo yake ni kama yungiyungi inayodondosha manemane.
14 ೧೪ ಅವನ ಕೈಗಳು ಪೀತರತ್ನ ಖಚಿತವಾದ ಬಂಗಾರದ ಸಲಾಕಿಗಳೋಪಾದಿಯಲ್ಲಿವೆ, ಅವನ ಮೈ ಇಂದ್ರನೀಲಮಯವಾದ ದಂತಫಲಕದ ಹಾಗಿದೆ.
Mikono yake ni fimbo za dhahabu iliyopambwa kwa krisolitho. Mwili wake ni kama pembe ya ndovu iliyongʼarishwa iliyopambwa na yakuti samawi.
15 ೧೫ ಅವನ ಕಾಲುಗಳು ಅಪರಂಜಿಯ ಸುಣ್ಣಪಾದಗಳ ಮೇಲಿಟ್ಟ ಚಂದ್ರಕಾಂತ ಸ್ತಂಭಗಳು; ದೇವದಾರುಗಳಷ್ಟು ರಮಣೀಯವಾದ ಅವನ ಗಾಂಭೀರ್ಯವು ಲೆಬನೋನಿಗೆ ಸಮಾನ.
Miguu yake ni nguzo za marmar zilizosimikwa katika vitako vya dhahabu safi. Sura yake ni kama Lebanoni, bora kama miti yake ya mierezi.
16 ೧೬ ಅವನ ನುಡಿ ಮಧುರ, ಅವನು ಸರ್ವಾಂಗ ಸುಂದರ. ಯೆರೂಸಲೇಮಿನ ಸ್ತ್ರೀಯರುಗಳಿರಾ, ಇವನೇ ಎನ್ನಿನಿಯನು; ಇವನೇ ನನ್ನ ಪ್ರಿಯನು.
Kinywa chake chenyewe ni utamu, kwa ujumla yeye ni wa kupendeza. Huyu ndiye mpenzi wangu, huyu ndiye rafiki yangu, ee binti za Yerusalemu.