< ಪರಮಗೀತೆ 6 >

1 ಮಹಿಳಾಮಣಿಯೇ, ನಿನ್ನಿನಿಯನು ಹೋದುದೆಲ್ಲಿಗೆ? ನಿನ್ನೊಂದಿಗೆ ಸೇರಿ ನಾವು ಅವನನ್ನು ಹುಡುಕೋಣವೇ? ಹೇಳು, ನಿನ್ನ ನಲ್ಲನು ಹೋದುದೆಲ್ಲಿಗೆ?
स्त्रियों में परम सुंदरी, कहां चला गया है तुम्हारा प्रेमी? किस मोड़ पर बढ़ गया है वह, हमें बताओ कि हम भी तुम्हारे साथ उसे खोजें?
2 ನನ್ನ ಕಾಂತನು ಉದ್ಯಾನವನಗಳಲ್ಲಿ ಮಂದೆಯನ್ನು ಮೇಯಿಸುತ್ತಾ, ನೆಲದಾವರೆಗಳನ್ನು ಕೊಯ್ಯಬೇಕೆಂದು ಸುಗಂಧಸಸ್ಯದ ಪಾತಿಗಳಿರುವ ತನ್ನ ತೋಟಕ್ಕೆ ಹೋಗಿದ್ದಾನೆ.
मेरा प्रेमी अपनी वाटिका में है, जहां बलसान की क्यारियां हैं. कि वह वहां अपनी भेड़-बकरियों को चराए, कि वहां वह सोसन के फूल इकट्ठा करे.
3 ಎನ್ನಿನಿಯನು ನನ್ನವನೇ, ನಾನು ಅವನವಳೇ, ಅವನು ನೆಲದಾವರೆಗಳ ಮಧ್ಯದಲ್ಲಿ ಮಂದೆಯನ್ನು ಮೇಯಿಸುವವನಾಗಿದ್ದಾನೆ.
मैं अपने प्रेमी की हो चुकी हूं तथा वह मेरा; वही, जो अपनी भेड़-बकरियों को सोसन के फूलों के बीच में चरा रहा है.
4 ನನ್ನ ಪ್ರಿಯಳೇ, ನೀನು ತಿರ್ಚದಂತೆ ಸುಂದರಿ, ಯೆರೂಸಲೇಮಿನ ಹಾಗೆ ಮನೋಹರಿ, ಧ್ವಜಗಳ್ಳುಳ್ಳ ಸೈನ್ಯದ ಹಾಗೆ ಭಯಂಕರಿ!
मेरी प्रियतमा, तुम तो वैसी ही सुंदर हो, जैसी तिरज़ाह, वैसी ही रूपवान, जैसी येरूशलेम, वैसी ही प्रभावशाली, जैसी झंडा फहराती हुई सेना.
5 ನಿನ್ನ ಕಣ್ಣುಗಳನ್ನು ನನ್ನ ಕಡೆಯಿಂದ ತಿರುಗಿಸು, ಅವು ನನ್ನನ್ನು ಹೆದರಿಸುತ್ತವೆ. ನಿನ್ನ ಕೂದಲು ಗಿಲ್ಯಾದ್ ಬೆಟ್ಟದ ಪಾರ್ಶ್ವದಲ್ಲಿ ಮಲಗಿರುವ ಆಡುಮಂದೆಯಂತಿದೆ.
हटा लो मुझसे अपनी आंखें; क्योंकि उन्होंने मुझे व्याकुल कर दिया है. तुम्हारे बाल वैसे ही हैं, जैसे बकरियों का झुण्ड़, जो गिलआद से उतरा हुआ है.
6 ಉಣ್ಣೆ ಕತ್ತರಿಸಿ ಸ್ನಾನಮಾಡಿಸಿದ ಕುರಿಮಂದೆಯ ಬಿಳುಪಿನಂತಿವೆ ನಿನ್ನ ಹಲ್ಲುಗಳು, ಯಾವುದೂ ಒಂಟಿಯಾಗಿರದೆ ಎಲ್ಲವೂ ಒಟ್ಟಾಗಿ ಜೋಡಿಯಾಗಿವೆ.
तुम्हारे दांत अभी-अभी ऊन कतरे हुए भेड़ों के समान हैं, उन सभी के जुड़वां बच्‍चे होते हैं, तथा जिनमें से एक भी अकेला नहीं है.
7 ಮುಸುಕಿನೊಳಗಿನ ನಿನ್ನ ಕೆನ್ನೆಯು ಹೋಳು ಮಾಡಿದ ದಾಳಿಂಬೆಯ ತಿರುಳಿನಂತಿದೆ.
तुम्हारे गाल ओढ़नी से ढंके हुए अनार की दो फांक के समान हैं.
8 ಅರಸನಿಗೆ ರಾಣಿಯರು ಅರುವತ್ತು ಮಂದಿ, ಉಪಪತ್ನಿಯರು ಎಂಬತ್ತು ಮಂದಿ, ಯುವತಿಯರು ಲೆಕ್ಕವಿಲ್ಲದಷ್ಟು.
वहां रानियों की संख्या साठ है तथा उपपत्नियों की अस्सी, दासियां अनगिनत हैं,
9 ನನ್ನ ಪಾರಿವಾಳವು, ನನ್ನ ನಿರ್ಮಲೆಯು ಒಬ್ಬಳೇ, ಇವಳು ಏಕಮಾತ್ರ ಪುತ್ರಿ ತಾಯಿಗೆ, ಮುದ್ದುಮಗಳು ಹೆತ್ತವಳಿಗೆ. ಧನ್ಯಳೆಂದು ಹೊಗಳಿದರು ಯುವತಿಯರು ನೋಡಿ, ರಾಣಿಯರೂ, ಉಪಪತ್ನಿಯರೂ ಕೊಂಡಾಡಿದರು ಈ ರೀತಿ.
किंतु मेरी कबूतरी, मेरी निर्मल सुंदरी, अनोखी है, अपनी माता की एकलौती संतान, अपनी जननी की दुलारी. जैसे ही दासियों ने उसे देखा, उसे धन्य कहा; रानियों तथा उपपत्नियों ने उसकी प्रशंसा की, उन्होंने कहा:
10 ೧೦ ಅರುಣೋದಯದಂತೆ ಉದಯಿಸುವಂತಿರುವಳು, ಚಂದ್ರನಂತೆ ಸೌಮ್ಯ ಸುಂದರಿಯಿವಳು, ಸೂರ್ಯನಂತೆ ಶುಭ್ರಳು, ಧ್ವಜಗಳುಳ್ಳ ಸೈನ್ಯದ ಹಾಗೆ ಭಯಂಕರಳು ಆಗಿರುವ ಇವಳಾರು?
कौन है यह, जो भोर के समान उद्भूत हो रही है, पूरे चांद के समान सुंदर, सूर्य के समान निर्मल, वैसी ही प्रभावशाली, जैसे झंडा फहराती हुई सेना?
11 ೧೧ ದ್ರಾಕ್ಷಿಯು ಚಿಗುರಿದೆಯೋ, ದಾಳಿಂಬೆ ಗಿಡಗಳು ಹೂಬಿಟ್ಟಿವೆಯೋ ಎಂದು ತಗ್ಗಿನಲ್ಲಿ ಬೆಳೆದ ಸಸ್ಯಗಳನ್ನು ನೋಡಲು ಬಾದಾಮಿಯ ತೋಟಕ್ಕೆ ನಾನು ಹೋಗಿದ್ದೆ.
मैं अखरोट के बगीचे में गयी कि घाटी में खिले फूलों को देखूं, कि यह पता करूं कि दाखलता में कलियां लगी हैं या नहीं. अनार के पेड़ों में फूल आए हैं या नहीं.
12 ೧೨ ಇದ್ದಕ್ಕಿದ್ದ ಹಾಗೆ ನಾಯಕನಾಗಿ ನಾನು ಬಯಸಿದಂತೆ ದೇಶ ಪ್ರಧಾನರ ರಥಗಳ ನಡುವೆ ನಾನಿರುವುದನ್ನು ಅರಿತೆನು.
इसके पहले कि मैं कुछ समझ पाती, मेरी इच्छाओं ने मुझे मेरे राजकुमार के रथों पर पहुंचा दिया.
13 ೧೩ ಶೂಲಮ್ ಊರಿನವಳೇ, ತಿರುಗು, ಹಿಂತಿರುಗು, ನಾನು ನಿನ್ನನ್ನು ನೋಡಬೇಕು; ತಿರುಗು, ಇತ್ತ ತಿರುಗು. ಎರಡು ಸಾಲಿನಲ್ಲಿ ನರ್ತಿಸುವ ನರ್ತಕಿಯರ ನಡುವೆ ನರ್ತಿಸುವವಳನ್ನು ನೋಡುವಂತೆ ಶೂಲಮ್ ಊರಿನವಳಾದ ನನ್ನನ್ನು ನೀನು ನೋಡುವುದೇಕೆ?
लौट आओ, शुलामी, लौट आओ; लौट आओ, लौट आओ, कि हम तुम्हें देख सकें! नायक तुम लोग शुलामी को क्यों देखोगे, मानो यह कोई दो समूहों का नृत्य है?

< ಪರಮಗೀತೆ 6 >