< ಪರಮಗೀತೆ 7 >

1 ರಾಜಪುತ್ರಿಯೇ, ಪಾದರಕ್ಷೆಗಳಲ್ಲಿನ ನಿನ್ನ ಪಾದಗಳು ಎಷ್ಟೋ ಅಂದ! ದುಂಡಾದ ನಿನ್ನ ತೊಡೆಗಳು ಕುಶಲ ಶಿಲ್ಪಿಯು ಮಾಡಿದ ಆಭರಣಗಳಂತಿವೆ.
How beautiful, are thy feet in sandals, O daughter of a noble, —The curvings of thy hips, are like ornaments wrought by the hands of a skilled workman:
2 ನಿನ್ನ ಹೊಕ್ಕಳು ಮಿಶ್ರಪಾನ ತುಂಬಿದ ಗುಂಡು ಬಟ್ಟಲು, ನಿನ್ನ ಹೊಟ್ಟೆ ನೆಲದಾವರೆಗಳಿಂದ ಅಲಂಕೃತವಾದ ಗೋದಿಯ ರಾಶಿ.
Thy navel, is a round bowl, may it not lack spiced wine! Thy body, a heap of wheat fenced about with lilies;
3 ನಿನ್ನ ಸ್ತನಗಳೆರಡೂ ಜಿಂಕೆಯ ಅವಳಿಮರಿಗಳಂತಿವೆ.
Thy two breasts, are like two young roes, the twins of a gazelle:
4 ನಿನ್ನ ಕೊರಳು ದಂತದ ಗೋಪುರ, ನಿನ್ನ ನೇತ್ರಗಳು ಹೆಷ್ಬೋನಿನಲ್ಲಿನ ಬತ್ ರಬ್ಬೀಮ್ ಬಾಗಿಲ ಬಳಿಯ ಕೊಳಗಳಂತಿವೆ. ನಿನ್ನ ಮೂಗು ದಮಸ್ಕದ ಕಡೆಗಿರುವ ಲೆಬನೋನಿನ ಬುರುಜಿನಂತಿದೆ.
Thy neck, is like a tower of ivory, —Thine eyes, are pools in Heshbon, by the gate of Bath-rabbim, Thy nose, is like the tower of Lebanon, which looketh towards Damascus:
5 ಕರ್ಮೆಲ್ ಬೆಟ್ಟದಂತೆ ಗಂಭೀರವಾಗಿದೆ ನಿನ್ನ ಶಿರಸ್ಸು, ನಿನ್ನ ತಲೆಗೂದಲಿಗಿದೆ ಥಳಥಳಿಸುವ ನುಣುಪುಹೊಳಪಿನ ಬಣ್ಣ, ಅದರಲ್ಲಿದೆ ಅರಸನನ್ನೇ ಸೆರೆಹಿಡಿಯುವಂಥ ಆಕರ್ಷಣೆ.
Thy head upon thee, is like Carmel, And, the hair of thy head, is like purple, —The king, is held captive by the ringlets!
6 ಪ್ರೇಯಸಿಯೇ, ಸಕಲ ಸೌಂದರ್ಯ ಸೊಬಗಿನಿಂದ ನೀನೆಷ್ಟು ಸುಂದರ, ನೀನೆಷ್ಟು ಮನೋಹರ!
[HE] How beautiful, and how delightful, O dear love, for delights:
7 ನೀಳವಾದ ನಿನ್ನ ಆಕಾರವು ಖರ್ಜೂರದ ಮರ, ನಿನ್ನ ಸ್ತನಗಳೇ ಅದರ ಗೊಂಚಲುಗಳು.
This thy stature, is like to a palm-tree, and, thy breasts, are like clusters:
8 ನಾನು ಆ ಮರವನ್ನು ಹತ್ತಿ, ರೆಂಬೆಗಳನ್ನು ಹಿಡಿಯುವೆನು ಅಂದುಕೊಂಡೆನು. ನಿನ್ನ ಸ್ತನಗಳು ನನಗೆ ದ್ರಾಕ್ಷಿಯ ಗೊಂಚಲುಗಳಂತಿರಲಿ, ಸೇಬುಹಣ್ಣಿನ ಪರಿಮಳದಂತೆ ನಿನ್ನ ಉಸಿರು.
I said, I will ascend the palm-tree, I will lay hold of its fruit stalks—Oh then, let thy breasts, I pray thee, be like vine-clusters, And, the fragrance of thy nose, like apples;
9 ನಿನ್ನ ಚುಂಬನ ಉತ್ತಮ ದ್ರಾಕ್ಷಾರಸದ ಹಾಗಿರಲಿ, ನಿದ್ರಿಸುವವರ ತುಟಿಗಳಲ್ಲಿ ನಯವಾಗಿ ಹರಿಯುವ ಈ ರಸವು ನನ್ನ ನಲ್ಲೆಯಾದ ನಿನ್ನಲ್ಲಿಯೂ ಮೆಲ್ಲನೆ ಇಳಿದು ಬರುವುದು.
And, thy mouth, like good wine—[SHE] Flowing to my beloved smoothly, gliding over the lips of the sleeping.
10 ೧೦ ನಾನು ನನ್ನ ನಲ್ಲನ ನಲ್ಲೆ, ಅವನ ಆಶೆಯು ನನ್ನ ಮೇಲೆ.
I, am my beloved’s, and, unto me, is his longing.
11 ೧೧ ಎನ್ನಿನಿಯನೇ, ವನಕ್ಕೆ ಹೋಗೋಣ ಬಾ, ಹಳ್ಳಿಗಳ ಮಧ್ಯದಲ್ಲಿ ವಾಸಮಾಡುವ!
Come, my beloved, Let us go forth into the country, Let us stay the night in the villages:
12 ೧೨ ತೋಟಗಳಿಗೆ ಹೊತ್ತಾರೆ ಹೊರಟು ದ್ರಾಕ್ಷಿಯು ಚಿಗುರಿದೆಯೋ, ಅದರ ಹೂವು ಅರಳಿದೆಯೋ, ದಾಳಿಂಬೆ ಹೂ ಬಿಟ್ಟಿದೆಯೋ ನೋಡೋಣ ಬಾ, ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ಸಲ್ಲಿಸುವೆನು.
Let us get up early to the vineyards, Let us see whether the vine, hath burst forth, the blossom, hath opened, the pomegranates, have bloomed, —There, will I give my caresses to thee.
13 ೧೩ ಕಾಮಜನಕ ವೃಕ್ಷಗಳು ಪರಿಮಳ ಬೀರುತ್ತಿವೆ, ನನ್ನ ಕಾಂತನೇ, ನಾನು ನಿನಗಾಗಿ ಇಟ್ಟುಕೊಂಡ ಒಳ್ಳೊಳ್ಳೆಯ, ಬಗೆಬಗೆಯ ಹಳೆಯ ಮತ್ತು ಹೊಸ ಹಣ್ಣುಗಳು ನಮ್ಮ ಬಾಗಿಲುಗಳ ಬಳಿ ಸಿದ್ಧವಾಗಿವೆ.
The love-apples, have given fragrance, and, at our openings, are all precious things, new and yet old, —O my beloved! I have treasured them up for thee.

< ಪರಮಗೀತೆ 7 >