< ಪರಮಗೀತೆ 8 >

1 ನೀನು ನನ್ನ ತಾಯಿಯ ಹಾಲನ್ನು ಕುಡಿದ ನನ್ನ ಅಣ್ಣನ ಹಾಗಿದ್ದರೆ ಎಷ್ಟೋ ಚೆನ್ನಾಗಿತ್ತು! ನಾನು ನಿನ್ನನ್ನು ಹೊರಗೆ ಕಂಡೊಡನೆ ಮುದ್ದಿಟ್ಟರೂ ಯಾರೂ ಹೀನೈಸುತ್ತಿರಲಿಲ್ಲ.
Дано ми беше ти като брат, Който е сукал от гърдите на майка ми! Когато те намерих вън щях да те целуна, Да! и никой не щеше да ме презре.
2 ನಿನ್ನನ್ನು ನನ್ನ ತಾಯಿಯ ಮನೆಗೆ ಕರೆದುಕೊಂಡು ಹೋಗುತ್ತಿದ್ದೆನು, ಅಲ್ಲಿ ಆಕೆಯು ನಿನಗೆ ಉಪದೇಶ ಮಾಡಬಹುದಾಗಿತ್ತು; ದ್ರಾಕ್ಷಿಯ ಮಿಶ್ರಪಾನವನ್ನು ಕೊಡುತ್ತಿದ್ದೆ, ನನ್ನ ದಾಳಿಂಬೆಯ ಸವಿರಸವನ್ನು ನಿನಗೆ ಕುಡಿಸುತ್ತಿದ್ದೆನು.
Взел бих те и завела В къщата на майка си, за да ме научиш; Напоила бих те с подправено вино И със сок от наровете си.
3 ಆಗ ನಿನ್ನ ಎಡಗೈ ನನಗೆ ತಲೆದಿಂಬಾಗಿ ಬಲಗೈ ನನ್ನನ್ನು ತಬ್ಬುತ್ತಿತ್ತು.
Левицата му би била под главата ми, И десницата му би ме прегръщала.
4 ಯೆರೂಸಲೇಮಿನ ಮಹಿಳೆಯರೇ, ಆತನು ತಾನಾಗಿ ಎಚ್ಚರಗೊಳ್ಳುವವರೆಗೆ ಯಾರೂ ನನ್ನ ಪ್ರಿಯನನ್ನು ಎಚ್ಚರಿಸದಿರಿ, ಆತನ ವಿಶ್ರಾಂತಿಗೆ ಯಾರೂ ಭಂಗ ಮಾಡದಿರಿ ಎಂದು ವನದ ಜಿಂಕೆ ಹರಿಣಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.
Заклевам ви, ерусалимски дъщери, Да не възбудите нито да събудите любовта ми, Преди да пожелае.
5 ನಲ್ಲನನ್ನು ಒರಗಿಕೊಂಡು ಅಡವಿಯಿಂದ ಬರುವ ಇವಳು ಯಾರು? ಎಬ್ಬಿಸಿದೆನಲ್ಲಾ ನಿನ್ನನ್ನು ಆ ಸೇಬಿನ ಮರದಡಿಯಲ್ಲಿ ಇಗೋ, ಅಲ್ಲಿ ನಿನ್ನ ತಾಯಿ ನಿನ್ನನ್ನು ಗರ್ಭಧರಿಸಿದ್ದು, ಅಲ್ಲೇ ನಿನ್ನನ್ನು ಪ್ರಸವವೇದನೆಯಿಂದ ಹೆತ್ತಳು.
Коя е тая, която идва от пустинята Опираща се на възлюбения си? Аз те събудих под ябълката; Там те роди майка ти, Там те роди родителката ти.
6 ನಿನ್ನ ಕೈಯಲ್ಲಿನ ಮುದ್ರೆಯ ಹಾಗೆ ನಿನ್ನ ಹೃದಯದ ಮೇಲೆ ನನ್ನನ್ನು ಧರಿಸಿಕೋ. ಪ್ರೀತಿ ಮೃತ್ಯುವಿನಷ್ಟು ಶಕ್ತಿಶಾಲಿ, ಪ್ರೀತಿದ್ರೋಹದಿಂದ ಹುಟ್ಟುವ ಮತ್ಸರವು ಪಾತಾಳದಷ್ಟು ಕ್ರೂರ, ಅದರ ಜ್ವಾಲೆಯು ಬೆಂಕಿಯ ಉರಿ, ಧಗಧಗಿಸುವ ಕೋಪಾಗ್ನಿ. (Sheol h7585)
Положи ме като печат на сърцето си, Като печат на мишцата си; Защото любовта е силна като смъртта. Ревността е остра като преизподнята, Чието святкане е святкане огнено, пламък най-буен. (Sheol h7585)
7 ನಂದಿಸಲಾರವು ಪ್ರೀತಿಯನ್ನು ಜಲರಾಶಿಗಳು, ಮುಣುಗಿಸಲಾರವು ಅದನ್ನು ಪ್ರವಾಹಗಳು. ಪ್ರೀತಿಯನ್ನು ಗಳಿಸಲು ಮನೆಮಾರುಗಳನ್ನು ಮಾರಿದರೂ ಸಿಗುವುದು ಅವನಿಗೆ ತಿರಸ್ಕಾರ.
Много води не могат угаси любовта, Нито реките могат я потопи; Ако би дал някой целия имот на дома си за любовта, Съвсем биха го презрели.
8 ಸ್ತನಬಾರದ ತಂಗಿಯು ನಮಗುಂಟು; ಅವಳನ್ನು ವರಿಸಲು ಯಾರಾದರು ಬಂದರೆ ಅವಳ ಹಿತಕ್ಕೆ ಏನು ಮಾಡೋಣ?
Ние имаме малка сестра, и тя няма гърди. Що да направим със сестра си в деня, когато стане дума за нея?
9 ಅವಳು ಕೋಟೆಯಾದರೆ ಅದರ ಮೇಲೆ ಬೆಳ್ಳಿಯ ಬುರುಜನ್ನು ಕಟ್ಟುವೆವು, ಬಾಗಿಲಾದರೆ ದೇವದಾರು ಹಲಗೆಗಳಿಂದ ಭದ್ರಪಡಿಸುವೆವು.
Ако бъде стена ще съградим на нея сребърни укрепления; И ако бъде врата, ще я оградим с кедрови дъски.
10 ೧೦ ನಾನು ಕೋಟೆ; ನನ್ನ ಸ್ತನಗಳು ಅದರ ಬುರುಜುಗಳು, ಹೀಗಿದ್ದು ಅವನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತ್ತು.
Аз съм стена, и гърдите ми са като стълбовете й; Тогава бях пред очите му като една, която е намерила благоволение.
11 ೧೧ ಸೊಲೊಮೋನನು ಬಾಲ್ಹಾಮೋನಿನಲ್ಲಿ ಇದ್ದ ತನ್ನ ದ್ರಾಕ್ಷಿ ತೋಟವನ್ನು ಗುತ್ತಿಗೆಗೆ ಕೊಟ್ಟನು, ಪ್ರತಿಯೊಬ್ಬ ಗುತ್ತಿಗೆದಾರ ತೆರಬೇಕಾಗಿತ್ತು ಸಾವಿರ ಬೆಳ್ಳಿ ನಾಣ್ಯಗಳನ್ನು.
Соломон имаше лоза във Ваалхамон; Даде лозето на наематели; За плода му всеки трябваше да донесе хиляда сребърника.
12 ೧೨ ಸೊಲೊಮೋನನೇ, ಆ ಸಾವಿರ ಬೆಳ್ಳಿ ನಾಣ್ಯ ನಿನಗಿರಲಿ, ಅದರ ಮೇಲ್ವಿಚಾರಕರಿಗೆ ಇನ್ನೂರು ನಾಣ್ಯ ಸೇರಲಿ; ನನ್ನದೇ ಆಗಿರುವ ನನ್ನ ತೋಟವು ನನ್ನ ವಶದಲ್ಲಿಯೇ ಇದೆ.
Моето лозе, собствеността ми, е под моята власт; Хилядата нека са на тебе Соломоне, И двете на ония, които пазят плода му.
13 ೧೩ ಉದ್ಯಾನದಲ್ಲಿ ವಾಸಿಸುವವಳೇ ಗೆಳೆಯರು ನಿನ್ನ ಧ್ವನಿ ಕೇಳಬೇಕೆಂದಿದ್ದಾರೆ, ನನಗೂ ಆ ಧ್ವನಿ ಕೇಳಿಸಲಿ.
О ти, която седиш в градините, Другарите внимават на гласа ти; Дай ми и аз да го чуя.
14 ೧೪ ಸುಗಂಧಸಸ್ಯದ ಪರ್ವತಗಳಲ್ಲಿ ಜಿಂಕೆಯಂತೆಯೂ, ಪ್ರಾಯದ ಹರಿಣದಂತೆಯೂ ತ್ವರೆಮಾಡಿ ಬಾ ನನ್ನಿನಿಯನೇ.
Бързай, възлюбени мои, И бъди като сърне или еленче Върху планините на ароматите.

< ಪರಮಗೀತೆ 8 >