< ತೀತನಿಗೆ ಬರೆದ ಪತ್ರಿಕೆ 1 >

1 ದೇವರ ಸೇವಕನೂ, ಯೇಸು ಕ್ರಿಸ್ತನ ಅಪೊಸ್ತಲನೂ ಆಗಿರುವ ಪೌಲನು, ನಮ್ಮೆಲ್ಲರಿಗೆ ಹುದುವಾದ ನಂಬಿಕೆಯಲ್ಲಿ ನಿಜಕುಮಾರನಾಗಿರುವ ತೀತನಿಗೆ ಬರೆಯುವ ಪತ್ರ.
天主的僕人,作耶穌基督宗徒的保祿──為引天主所選的人,去信從並認識合乎虔敬的真理,
2 ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ.
這虔敬是本於永生的希望,又是那不能說謊的天主,在久遠的時代以所預前許的, (aiōnios g166)
3 ಸುಳ್ಳಾಡದ ದೇವರು, ಅನಾದಿಕಾಲದಲ್ಲಿಯೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು, ತಾನು ಆರಿಸಿಕೊಂಡವರ ನಂಬಿಕೆಯನ್ನು ಮತ್ತು ದೈವ ಭಕ್ತಿಯನ್ನು ಸತ್ಯದ ಜ್ಞಾನಕ್ಕನುಸಾರವಾಗಿ ದೃಢಪಡಿಸಲು ನಾನು ಕಾರ್ಯ ನಿರ್ವಹಿಸುತ್ತೇನೆ. (aiōnios g166)
衪到了適當的時期,就藉著宣講顯示了衪的聖道;我就是照我們救主天主的命令,受乎委托盡這宣講的職務。──
4 ಹಾಗು, ಆ ಸಂದೇಶವನ್ನು ಸಾರುವ ಜವಾಬ್ದಾರಿಯು ನಮ್ಮ ರಕ್ಷಕನಾದ ದೇವರ ಆಜ್ಞೆಯ ಅನುಸಾರವಾಗಿ ನನಗೆ ಒಪ್ಪಿಸಲ್ಪಟ್ಟಿದೆ ಹಾಗು ಸೂಕ್ತ ಕಾಲದಲ್ಲಿ ಸಂದೇಶವನ್ನು ಸಾರುವುದರ ಮೂಲಕ ತನ್ನ ವಾಕ್ಯವನ್ನು ನನಗೆ ಪ್ರಕಟಪಡಿಸಿದ್ದಾನೆ.
我保祿致書給在共同信仰內作我真子的弟鐸:願恩寵與平安由天主父及我們的救主基督耶穌賜與你。
5 ಕ್ರೇತ್ ದ್ವೀಪದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ, ಪಟ್ಟಣ ಪಟ್ಟಣಗಳಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಾನು ನಿನಗೆ ಅಪ್ಪಣೆಕೊಟ್ಟು ನಿನ್ನನ್ನು ಅಲ್ಲಿ ಬಿಟ್ಟು ಬಂದೆ.
我留你在克里特,是要你整頓那些尚未完成的事,並照我所吩咐你的,在各城設立長老:
6 ಸಭೆಯ ಹಿರಿಯನು ದೋಷರಹಿತನೂ, ಏಕಪತ್ನಿಯುಳ್ಳವನೂ ಆಗಿರಬೇಕು; ಆತನ ಮಕ್ಕಳು ಕರ್ತನನ್ನು ನಂಬಿದವರಾಗಿರಬೇಕು; ಅವರ ಮಕ್ಕಳು ದುರ್ಮಾರ್ಗಿಗಳೂ ಮತ್ತು ಅವಿಧೇಯತೆಯ ಆರೋಪವಿಲ್ಲದವರು ಆಗಿರಬೇಕು.
長老應是無可指摘的,只做過一個妻子的丈夫,所有的子女都是信徒,又沒有被控告為放蕩不羈的,
7 ಏಕೆಂದರೆ, ಸಭಾಧ್ಯಕ್ಷನು ದೇವರ ಮೇಲ್ವಿಚಾರಕನಾಗಿರುವುದರಿಂದ ದೋಷರಹಿತನಾಗಿರಬೇಕು; ಅವನು ಸ್ವೇಚ್ಛೆಯಾಗಿ ನಡೆಯುವವನೂ, ಮುಂಗೋಪಿಯೂ, ಕುಡುಕನೂ, ಜಗಳಗಂಟನೂ, ಅತಿಲಾಭವನ್ನು ಅಪೇಕ್ಷಿಸುವವನೂ ಆಗಿರದೆ,
因為做監督的,既是天主的管家,就該是可指摘的、不自負、不發怒、不嗜酒、不暴戾、不貪污;
8 ಅತಿಥಿಸತ್ಕಾರಮಾಡುವವನೂ, ಒಳ್ಳೆಯದನ್ನು ಪ್ರೀತಿಸುವವನೂ, ವಿವೇಕಿಯು, ನೀತಿವಂತನೂ, ದೈವಭಕ್ತನು, ಜಿತೇಂದ್ರಿಯನೂ ಆಗಿದ್ದು,
但該好客、樂善、慎重、公正、熱心、有節,
9 ತಾನು ಸ್ವಸ್ಥಬೋಧನೆಯಿಂದ ಜನರನ್ನು ಎಚ್ಚರಿಸುವುದಕ್ಕೂ, ಸುವಾರ್ತಾ ವಿರೋಧಿಗಳ ಬಾಯಿ ಕಟ್ಟುವುದಕ್ಕೂ ಶಕ್ತನಾಗಿರುವಂತೆ, ಕ್ರಿಸ್ತನ ಉಪದೇಶಕ್ಕೆ ಅನುಸಾರವಾಗಿ ನಂಬತಕ್ಕ ವಚನಗಳನ್ನು, ದೃಢವಾಗಿ ಅವಲಂಬಿಸಿದವನಾಗಿರಬೇಕು.
堅持那合乎真理的真道,好能以健全的道理勸戒並駁斥抗辯的人。
10 ೧೦ ಅನೇಕರು, ಪ್ರಮುಖವಾಗಿ ಸುನ್ನತಿಹೊಂದಿದವರು, ಬರೀ ಮಾತುಗಾರರೂ, ಮೋಸಗಾರರೂ, ಅಧಿಕಾರಕ್ಕೆ ಒಳಪಡದವರು ಆಗಿದ್ದಾರೆ.
實在許多倘不服從,好空談,欺騙人,尤其是那些受過割損的人;
11 ೧೧ ಅವರು ಅತಿಲಾಭವನ್ನು ಪಡೆದುಕೊಳ್ಳುವುದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಕುಟುಂಬ ಕುಟುಂಬಗಳನ್ನೇ ಹಾಳುಮಾಡುತ್ತಾರಾದ್ದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ.
應杜塞這些人的口,因為他們為了可恥的利潤,竟教導那些不教導的事,破壞人的整個家庭。
12 ೧೨ “ಕ್ರೇತ್ ದ್ವೀಪದವರು ಯಾವಾಗಲೂ ಸುಳ್ಳುಗಾರರೂ, ದುಷ್ಟಮೃಗಗಳೂ, ಸೋಮಾರಿಗಳಾದ ಹೊಟ್ಟೆಬಾಕರೂ” ಆಗಿದ್ದಾರೆಂದು ಅವರ ಸ್ವಂತ ಪ್ರವಾದಿಗಳಲ್ಲಿಯೇ ಒಬ್ಬ ಪ್ರವಾದಿಯು ಹೇಳಿದ್ದಾನೆ.
克里特人中一個人,他們自己的一位先知曾這樣說:「克里特人常是些說謊者,是些可惡的野獸,貪口腹的懶惰漢。」
13 ೧೩ ಈ ಸಾಕ್ಷಿಯು ನಿಜವೇ ಆಗಿದೆ; ಆದಕಾರಣ ಅವರು ಯೆಹೂದ್ಯರ ಕಟ್ಟುಕಥೆಗಳಿಗೂ, ಸತ್ಯಭ್ರಷ್ಟರಾದ ಮನುಷ್ಯರ ವಿಧಿಗಳಿಗೂ ಲಕ್ಷ್ಯಕೊಡದೆ,
這話說得很對。為此你們該嚴厲規勸他們,好叫他們在信德上健全無瑕;
14 ೧೪ ನಂಬಿಕೆಯಲ್ಲಿ ಸ್ವಸ್ಥಚಿತ್ತರಾಗಿರುವಂತೆ ಅವರನ್ನು ಕಠಿಣವಾಗಿ ಖಂಡಿಸಿ ತಿಳಿಸು.
不要聽信猶太人的無稽傳說,和背棄真理之人的規定。
15 ೧೫ ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಅಶುದ್ಧರಿಗೂ, ನಂಬಿಕೆಯಿಲ್ಲದವರಿಗೂ ಯಾವುದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಎರಡೂ ಅಶುದ್ಧವಾಗಿವೆ.
為潔淨人一切都是潔淨的,但為敗壞的人和無信仰的人,沒有一樣是潔淨的,就連他們的理性和良心都是污穢的。
16 ೧೬ ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಅವರು ಅಸಹ್ಯ ಕೃತ್ಯಗಳಲ್ಲಿ ಭಾಗವಹಿಸುವವರೂ, ದೇವರಿಗೆ ಅವಿಧೇಯರೂ ಆಗಿರುವುದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುತ್ತಾರೆ ಹಾಗು ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆಂದು ಸಾಬಿತುಪಡಿಸುತ್ತಾರೆ.
這樣人自稱認識天主,但在行為上卻否認天主,他們是可憎惡的,悖逆的,在一切善事上是無用的。

< ತೀತನಿಗೆ ಬರೆದ ಪತ್ರಿಕೆ 1 >