< ತೀತನಿಗೆ ಬರೆದ ಪತ್ರಿಕೆ 2 >
1 ೧ ನೀನಾದರೋ ಸ್ವಸ್ಥ ಬೋಧನೆಗೆ ಅನುಗುಣವಾಗಿ ಉಪದೇಶಮಾಡು.
Ahihang nang na hile, hilna maan taw a kisi thu te hil in:
2 ೨ ವೃದ್ಧರು ಮದ್ಯಾಸಕ್ತಿಯಿಲ್ಲದವರೂ, ಗೌರವವುಳ್ಳವರೂ, ಜಿತೇಂದ್ರಿಯರೂ, ನಂಬಿಕೆ, ಪ್ರೀತಿ, ತಾಳ್ಮೆಯಲ್ಲಿ ಸ್ವಸ್ಥರು ಆಗಿರಬೇಕೆಂದು ಬೋಧಿಸು.
Tabang in pasal khangham te sia pilvang, zatak huai, ki tek na nei, upna maan, itna le thuakzawkna nei te hi tahen.
3 ೩ ಹಾಗೆಯೇ, ವೃದ್ಧ ಸ್ತ್ರೀಯರು ಚಾಡಿಹೇಳುವವರೂ ಮದ್ಯಕ್ಕೆ ಅಧೀನರು ಆಗಿರದೆ ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ, ಸದ್ಬೋಧಕಿಯರು ಆಗಿರಬೇಕು.
Tasia bangma in, nupi khangham te zong, thianthona taw a kisi ngamtatna taw nungta tahen, a maan ngawl ngual mawsiat te le sapittui tampi a zang te hi heak tahen, na pha hil te hi tahen;
4 ೪ ಇದಲ್ಲದೆ, ವೃದ್ಧ ಸ್ತ್ರೀಯರು ಪ್ರಾಯದ ಸ್ತ್ರೀಯರಿಗೆ ಮಾದರಿಯಾಗಿ, ತಮ್ಮ ಮೂಲಕ ದೇವರ ವಾಕ್ಯಕ್ಕೆ ದೂಷಣೆಯಾಗದಂತೆ ನಡೆದುಕೊಳ್ಳುವಂತೆ ತಿಳಿಸು. ಪ್ರಾಯದಸ್ತ್ರಿಯರು ಗಂಡಂದಿರನ್ನೂ, ಮಕ್ಕಳನ್ನೂ ಪ್ರೀತಿಸುವವರೂ, ವಿವೇಕವುಳ್ಳವರೂ, ಕ್ಷಮಾಶಿಲರೂ, ಪತಿವ್ರತೆಯರೂ
Tabang in nupi khangmoi te pilvang tu, a pasal te le a tate it tu,
5 ೫ ಸ್ವಂತಮನೆಗಾಗಿ ಕೆಲಸಮಾಡುವವರೂ, ಸುಶೀಲೆಯರೂ ಆಗಿ ತಮ್ಮ ಗಂಡಂದಿರಿಗೆ ವಿಧೇಯರಾಗಿರಬೇಕೆಂದು ಬುದ್ಧಿಹೇಳಬೇಕೆಂದು ನೀನು ವೃದ್ಧ ಸ್ತ್ರೀಯರಿಗೆ ಬೋಧಿಸು.
Thinsung thupi, thinsung thiangtho, innkuan keamcing te, mi pha, pasal te thu ni te hi tu in hil tu a, tabang in Pathian thu sia sonsiat hi ngawl tu hi.
6 ೬ ಹಾಗೆಯೇ ಯೌವನಸ್ಥರನ್ನು ಎಲ್ಲಾ ಸಂಗತಿಗಳಲ್ಲಿಯೂ ಸ್ವಸ್ಥ ಚಿತ್ತರಾಗಿರಬೇಕೆಂದು ಎಚ್ಚರಿಸು.
Tabangma in a khangmoi pasal te zong pilvang tu in hanthawn in.
7 ೭ ಸತ್ಕಾರ್ಯ ಮಾಡುವುದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ ಸತ್ಯವೂ ಗೌರವವೂ ಆಕ್ಷೇಪಣೆಗೆ ಅವಕಾಶವಿಲ್ಲದಂಥ ಸುಬುದ್ಧಿಯೂ ಇರಬೇಕು;
Na theampo ah a ettetak in nasep pha te nangma tatak in lak in: hilna taw kisai ki hilna pha ngawl kihel ngawl, zatak huai le deisakna te kilangsak in,
8 ೮ ಆಗ ನಮಗೆ ಎದುರಾಳಿಗಳಾಗಿರುವವರು ನಮ್ಮ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವುದಕ್ಕೆ ಆಸ್ಪದವಿಲ್ಲದೆ ನಾಚಿಕೊಳ್ಳುವರು.
Ngual i hong mawsiat thei ngawl natu in na kampau nate maan tahen; tabang in na thu a pha ngawl in a son tu uh nei ngawl in, hong langpan te a maizum tu uh hi.
9 ೯ ಸೇವಕರು ತಮ್ಮ ಯಜಮಾನರಿಗೆ ವಿಧೇಯರಾಗಿದ್ದು ಅವರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಪಡುತ್ತಾ ಎದುರುತ್ತರಕೊಡದೆ,
Sila te sia amate i to te thu ni tu, na theampo ah lungkimsak mama tu le zo kik ngawl tu in;
10 ೧೦ ಯಾವುದನ್ನೂ ಕದ್ದಿಟ್ಟುಕೊಳ್ಳದೆ ಒಳ್ಳೆಯ ನಂಬಿಗಸ್ತರೆಂದು ಹೆಸರನ್ನು ಹೊಂದಲು, ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯಗಳಲ್ಲಿ ಗೌರವ ತರುವಂತೆ ವರ್ತಿಸಬೇಕೆಂದು ಅವರಿಗೆ ಉಪದೇಶಿಸು.
Na ngu ku ngawl tu, muantak a hi na theampo taw eite nuntakna hong ngum Pathian i hilna sia kilangsak tu in hanthawn in.
11 ೧೧ ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು;
Banghangziam cile ngupna hong paipui Pathian i thuthiamna sia mi theampo tung ah kilang zo hi,
12 ೧೨ ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು, (aiōn )
Tua Pathian i thuthiamna in Pathian nei ngawl nuntakzia le cilesa deina nial tu a, a pilvang, a thutang, Pathianmi hina taw tu hun sung ah a nungta tu in hong hil hi; (aiōn )
13 ೧೩ ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.
A lian Pathian le eite hong ngum Jesus Christ vangliantak in a kilang natu a thupha lametna masuan tu hi;
14 ೧೪ ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.
Eite atu in Ama le Ama a kipiakna sia, phat ngawlna theampo pan hong tan tu a, Ama kung ah a tuanngen minam a hi tu le nasep pha te atu in a thalawp te a hi tu in hong thiangthosak hi.
15 ೧೫ ಈ ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ, ಎಚ್ಚರಿಸುತ್ತಾ, ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ.
Hi thu theampo sia thuneina theampo taw hanthawn in a, tei in. Kuama in hong thusimngawl heak tahen.