< ತೀತನಿಗೆ ಬರೆದ ಪತ್ರಿಕೆ 3 >

1 ಅಧಿಪತಿಗಳಿಗೂ, ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕಂತಲೂ, ಸಕಲಸತ್ಕಾರ್ಯಗಳನ್ನು ಮಾಡುವುದಕ್ಕೆ ಸಿದ್ಧರಾಗಿರಬೇಕೆಂತಲೂ,
第二項 外界に對する信徒の務 汝彼等を諭して、君主及び有権者に服し、言はるる事に從ひ、凡ての善業に己を備へ、
2 ಯಾರನ್ನೂ ದೂಷಿಸದೆ, ಕುತರ್ಕ ಮಾಡದೆ ಎಲ್ಲಾ ಜನರಿಗೂ ಪೂರ್ಣಸದ್ಗುಣವನ್ನು ತೋರಿಸುತ್ತಾ ಸಾತ್ವಿಕರಾಗಿರಬೇಕೆಂತಲೂ, ಅವರಿಗೆ ನೆನಪಿಸು.
誰をも罵らず、争を好まず、寛仁にして凡ての人に對して所有温和を顕す事を忘れざらしめよ。
3 ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.
蓋我等も、曾て無知不信心にして、迷ひて様々の慾望と快樂との奴隷と成り、惡と嫉妬との中に生活し、憎まるべくして相憎む者なりき。
4 ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ, ಪ್ರೀತಿಯೂ, ಮನುಷ್ಯರಿಗೆ ಪ್ರತ್ಯಕ್ಷವಾದಾಗ,
然れども我救主にて在す神の慈恵と仁愛との顕るるに及び、
5 ನಾವು ಮಾಡಿದ ಪುಣ್ಯಕಾರ್ಯಗಳ ನಿಮಿತ್ತದಿಂದಲ್ಲ ಪುನರ್ಜನ್ಮವನ್ನು ಸೂಚಿಸುವ ದೀಕ್ಷಾಸ್ನಾನದ ಮೂಲಕವಾಗಿಯೂ, ಪವಿತ್ರಾತ್ಮನ ನವೀಕರಣದ ಮೂಲಕವಾಗಿಯೂ ಆತನು ತನ್ನ ಕರುಣೆಯಿಂದಲೇ ನಮ್ಮನ್ನು ರಕ್ಷಿಸಿದನು.
我等が行ひし義の業によらず、御慈悲によりて聖霊の賜ふ再生と一新との水洗を以、我等を救給、
6 ನಾವು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಕೃಪೆಯಿಂದ ನೀತಿವಂತರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗೆ ಬಾಧ್ಯರಾಗುವಂತೆ ದೇವರು ಆತನ ಮೂಲಕ ಪವಿತ್ರಾತ್ಮನನ್ನು ನಮ್ಮ ಮೇಲೆ ಹೇರಳವಾಗಿ ಸುರಿಸಿದನು. (aiōnios g166)
我救主イエズス、キリストを以て、聖霊を豊に我等に濯ぎ給ひしは、
7
我等が其恩寵によりて義とせられ、永遠の生命の希望に於る世嗣と成らん為なり。 (aiōnios g166)
8 ಇದು ನಂಬತಕ್ಕ ಮಾತಾಗಿದೆ; ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಎಲ್ಲಾ ಮಾತುಗಳನ್ನು ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಅದು ಉತ್ತಮವೂ, ಮನುಷ್ಯರಿಗೆ ಪ್ರಯೋಜನಕಾರಿಯೂ ಆಗಿವೆ.
是眞實の談にして、我之に就きて汝の断言せん事を欲す、其は神を信じ奉る人々をして、励みて善業に從事せしめん為なり。斯る業こそは善良にして人に益ある事なれ。
9 ಆದರೆ ಬುದ್ಧಿಯಿಲ್ಲದ ತರ್ಕಗಳಿಂದಲೂ, ವಂಶಾವಳಿಗಳಿಂದಲೂ, ಜಗಳಗಳಿಂದಲೂ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವಾಗ್ವಾದಗಳಿಂದಲೂ ದೂರವಾಗಿರು; ಅವು ನಿಷ್ಪ್ರಯೋಜಕವೂ ವ್ಯರ್ಥವೂ ಆಗಿವೆ.
愚なる問題と系圖と、争論と律法上の争とを避けよ、其は無益にして、空しければなり。
10 ೧೦ ಸಭೆಯಲ್ಲಿ ಭಿನ್ನಭೇದಗಳನ್ನುಂಟುಮಾಡುವ ಮನುಷ್ಯನನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟು ಬಿಡು;
異説者を一度二度訓戒して後は之に遠ざかれ、
11 ೧೧ ಅಂಥವನು ಸನ್ಮಾರ್ಗದಿಂದ ದೂರವಾದವನೂ ಪಾಪಮಾಡುವವನೂ ಆಗಿದ್ದಾನೆ; ತಾನು ಶಿಕ್ಷೆಗೆ ಅರ್ಹನೆಂದು ಅವನ ಮನಸ್ಸೇ ನಿರ್ಣಯ ಮಾಡುತ್ತದೆ.
其は斯の如き人の罪せらるるは、自らの判断にもよることなれば、邪にして誤れる者なる事を知ればなり。
12 ೧೨ ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದು ನಿಶ್ಚಯಿಸಿಕೊಂಡಿದ್ದರಿಂದ ಅರ್ತೆಮನನ್ನಾಗಲಿ ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದ ಕೂಡಲೆ ಅಲ್ಲಿಗೆ ನನ್ನ ಹತ್ತಿರ ಬರುವುದಕ್ಕೆ ಪ್ರಯತ್ನಿಸು.
結末 我アルテマ或はチキコを汝に遣はしなば、急ぎてニコポリなる我許に來れ、我冬を彼處に過さんと決したればなり。
13 ೧೩ ನ್ಯಾಯಶಾಸ್ತ್ರಿಯಾದ ಜೇನನನ್ನೂ ಮತ್ತು ಅಪೊಲ್ಲೋಸನನ್ನೂ ಜಾಗ್ರತೆಯಾಗಿ ಕಳುಹಿಸಿಕೊಡು; ಅವರಿಗೇನೂ ಕೊರತೆಯಾಗಬಾರದು.
法律家なるゼナ及びアポルロを手厚く送りて、足らざる事なからしめよ。
14 ೧೪ ನಮ್ಮ ಜನರು ಸತ್ಕ್ರಿಯೆಹೀನರಾಗದಂತೆ ಬೋಧಿಸು. ತಮ್ಮ ಸಹಮಾನವರ ಕೊರತೆಗಳನ್ನು ಗುರುತಿಸಿ ನೆರವು ನೀಡಲಿ. ಪರೋಪಕಾರವನ್ನು ಕಲಿತುಕೊಂಡು ಸಾರ್ಥಕ ಜೀವನ ನಡೆಸಲಿ.
斯て我等の[兄弟等]も、果を結ばざる者と成らざらん為、[兄弟の]必要に應じて善業に從事する事を學ぶべし。
15 ೧೫ ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ಕ್ರಿಸ್ತನಲ್ಲಿ ನಂಬಿಕೆಯುಳ್ಳವರಾಗಿ ನಮ್ಮನ್ನು ಪ್ರೀತಿಸುವವರಿಗೆ ವಂದನೆಗಳನ್ನು ಸಲ್ಲಿಸು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ.
我と共に居る人々、皆汝に宜しくと言へり。信仰に於て我等を愛する人々に宜しく傳へよ。願はくは神の恩寵汝等一同と共に在らんことを、アメン。

< ತೀತನಿಗೆ ಬರೆದ ಪತ್ರಿಕೆ 3 >