< ತೀತನಿಗೆ ಬರೆದ ಪತ್ರಿಕೆ 3 >
1 ೧ ಅಧಿಪತಿಗಳಿಗೂ, ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕಂತಲೂ, ಸಕಲಸತ್ಕಾರ್ಯಗಳನ್ನು ಮಾಡುವುದಕ್ಕೆ ಸಿದ್ಧರಾಗಿರಬೇಕೆಂತಲೂ,
Lembre a todos para obedecerem ao que os seus governantes e as autoridades mandam. Eles devem estar sempre preparados para fazer o que é bom.
2 ೨ ಯಾರನ್ನೂ ದೂಷಿಸದೆ, ಕುತರ್ಕ ಮಾಡದೆ ಎಲ್ಲಾ ಜನರಿಗೂ ಪೂರ್ಣಸದ್ಗುಣವನ್ನು ತೋರಿಸುತ್ತಾ ಸಾತ್ವಿಕರಾಗಿರಬೇಕೆಂತಲೂ, ಅವರಿಗೆ ನೆನಪಿಸು.
Aconselhe as pessoas a não dizerem calúnias contra ninguém e a não serem questionadoras. Diga-lhes para serem gentis e boas com todos.
3 ೩ ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.
Pois houve um tempo em que todos nós éramos tolos e desobedientes. Nós estávamos enganados e nos tornamos escravos de vários desejos e prazeres. A inveja preenchia nossa vida, e odiávamos uns aos outros.
4 ೪ ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ, ಪ್ರೀತಿಯೂ, ಮನುಷ್ಯರಿಗೆ ಪ್ರತ್ಯಕ್ಷವಾದಾಗ,
Mas quando a bondade e o amor de Deus, nosso Salvador, foram revelados, ele nos salvou.
5 ೫ ನಾವು ಮಾಡಿದ ಪುಣ್ಯಕಾರ್ಯಗಳ ನಿಮಿತ್ತದಿಂದಲ್ಲ ಪುನರ್ಜನ್ಮವನ್ನು ಸೂಚಿಸುವ ದೀಕ್ಷಾಸ್ನಾನದ ಮೂಲಕವಾಗಿಯೂ, ಪವಿತ್ರಾತ್ಮನ ನವೀಕರಣದ ಮೂಲಕವಾಗಿಯೂ ಆತನು ತನ್ನ ಕರುಣೆಯಿಂದಲೇ ನಮ್ಮನ್ನು ರಕ್ಷಿಸಿದನು.
Ele fez isso não por causa de algo bom que tivéssemos feito, mas, sim, por causa de sua imensa misericórdia. Jesus fez isso ao nos purificar, mediante o poder regenerador do Espírito Santo.
6 ೬ ನಾವು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಕೃಪೆಯಿಂದ ನೀತಿವಂತರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗೆ ಬಾಧ್ಯರಾಗುವಂತೆ ದೇವರು ಆತನ ಮೂಲಕ ಪವಿತ್ರಾತ್ಮನನ್ನು ನಮ್ಮ ಮೇಲೆ ಹೇರಳವಾಗಿ ಸುರಿಸಿದನು. (aiōnios )
E foi por meio de Jesus Cristo, nosso Salvador, que o Espírito Santo foi generosamente derramado sobre nós.
Agora que nos tornamos justos por sua graça temos a esperança de herdar a vida eterna. (aiōnios )
8 ೮ ಇದು ನಂಬತಕ್ಕ ಮಾತಾಗಿದೆ; ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಎಲ್ಲಾ ಮಾತುಗಳನ್ನು ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಅದು ಉತ್ತಮವೂ, ಮನುಷ್ಯರಿಗೆ ಪ್ರಯೋಜನಕಾರಿಯೂ ಆಗಿವೆ.
Você pode acreditar no que estou dizendo. E quero que você insista nesses ensinamentos, para que aqueles que creem em Deus pensem seriamente a respeito disso e continuem a fazer o bem. São conselhos ótimos e úteis, que servem para todos.
9 ೯ ಆದರೆ ಬುದ್ಧಿಯಿಲ್ಲದ ತರ್ಕಗಳಿಂದಲೂ, ವಂಶಾವಳಿಗಳಿಂದಲೂ, ಜಗಳಗಳಿಂದಲೂ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವಾಗ್ವಾದಗಳಿಂದಲೂ ದೂರವಾಗಿರು; ಅವು ನಿಷ್ಪ್ರಯೋಜಕವೂ ವ್ಯರ್ಥವೂ ಆಗಿವೆ.
Evite discussões sem sentido e a preocupação com longas listas de nomes de antepassados. Não discuta e evite brigas em relação às leis dos judeus. Essas coisas são inúteis e não trazem benefício algum.
10 ೧೦ ಸಭೆಯಲ್ಲಿ ಭಿನ್ನಭೇದಗಳನ್ನುಂಟುಮಾಡುವ ಮನುಷ್ಯನನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟು ಬಿಡು;
Se alguém causar divisão entre aqueles que têm fé, aconselhe essa pessoa uma ou duas vezes, mas, depois, não dê mais qualquer atenção a ela.
11 ೧೧ ಅಂಥವನು ಸನ್ಮಾರ್ಗದಿಂದ ದೂರವಾದವನೂ ಪಾಪಮಾಡುವವನೂ ಆಗಿದ್ದಾನೆ; ತಾನು ಶಿಕ್ಷೆಗೆ ಅರ್ಹನೆಂದು ಅವನ ಮನಸ್ಸೇ ನಿರ್ಣಯ ಮಾಡುತ್ತದೆ.
Pois esse tipo de pessoa já se condenou, ao insistir na crueldade e no pecado.
12 ೧೨ ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದು ನಿಶ್ಚಯಿಸಿಕೊಂಡಿದ್ದರಿಂದ ಅರ್ತೆಮನನ್ನಾಗಲಿ ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದ ಕೂಡಲೆ ಅಲ್ಲಿಗೆ ನನ್ನ ಹತ್ತಿರ ಬರುವುದಕ್ಕೆ ಪ್ರಯತ್ನಿಸು.
Logo que eu enviar Ártemas ou Tíquico até você, tente vir me encontrar na cidade de Nicópolis, pois estou planejando passar o inverno lá.
13 ೧೩ ನ್ಯಾಯಶಾಸ್ತ್ರಿಯಾದ ಜೇನನನ್ನೂ ಮತ್ತು ಅಪೊಲ್ಲೋಸನನ್ನೂ ಜಾಗ್ರತೆಯಾಗಿ ಕಳುಹಿಸಿಕೊಡು; ಅವರಿಗೇನೂ ಕೊರತೆಯಾಗಬಾರದು.
Faça todo o possível para ajudar o advogado Zenas, e Apolo, para que eles tenham o que precisam para a viagem que farão.
14 ೧೪ ನಮ್ಮ ಜನರು ಸತ್ಕ್ರಿಯೆಹೀನರಾಗದಂತೆ ಬೋಧಿಸು. ತಮ್ಮ ಸಹಮಾನವರ ಕೊರತೆಗಳನ್ನು ಗುರುತಿಸಿ ನೆರವು ನೀಡಲಿ. ಪರೋಪಕಾರವನ್ನು ಕಲಿತುಕೊಂಡು ಸಾರ್ಥಕ ಜೀವನ ನಡೆಸಲಿ.
Que o nosso povo adquira o hábito de fazer o bem, ajudando os outros em suas necessidades diárias. Eles precisam ser produtivos!
15 ೧೫ ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ಕ್ರಿಸ್ತನಲ್ಲಿ ನಂಬಿಕೆಯುಳ್ಳವರಾಗಿ ನಮ್ಮನ್ನು ಪ್ರೀತಿಸುವವರಿಗೆ ವಂದನೆಗಳನ್ನು ಸಲ್ಲಿಸು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ.
Todos os que estão aqui comigo enviam saudações. Mande lembranças para aqueles que nos amam e creem em Deus. Que a graça esteja com todos vocês!