< ಜೆಕರ್ಯನು 10 >
1 ೧ ಮಳೆಯಾಗುವಂತೆ ಹಿಂಗಾರಿನಲ್ಲಿ ಯೆಹೋವನನ್ನು ಬೇಡಿಕೊಳ್ಳಿರಿ; ಯೆಹೋವನೇ ಮಿಂಚುಗಳನ್ನು ಉಂಟುಮಾಡುತ್ತಾನೆ, ಮನುಷ್ಯರಿಗೆ ಸಮೃದ್ಧಿಯಾದ ಮಳೆಯನ್ನು ದಯಪಾಲಿಸುತ್ತಾನೆ, ಎಲ್ಲರಿಗೂ ಹೊಲದ ಪೈರನ್ನು ಅನುಗ್ರಹಿಸುತ್ತಾನೆ.
Pedid a Yahvé la lluvia en el tiempo de las lluvias tardías: pues es Yahvé quien hace los relámpagos; Él os dará lluvia abundante, y a cada uno la verdura del campo.
2 ೨ ವಿಗ್ರಹಗಳು ನುಡಿಯುವುದು ಸುಳ್ಳು; ಕಣಿಹೇಳುವವರು ದರ್ಶನವನ್ನು ಕಾಣುವುದು ಸುಳ್ಳು, ತಿಳಿಸುವ ಕನಸುಗಳು ಮೋಸವಾದವುಗಳು, ಹೇಳುವ ಸಮಾಧಾನವು ವ್ಯರ್ಥ. ಆದುದರಿಂದ ನನ್ನ ಜನರು ದಿಕ್ಕಾಪಾಲಾಗಿದ್ದಾರೆ; ಕುರುಬನು ಇಲ್ಲದ ಕಾರಣ ಬಾಧೆಗೆ ಒಳಗಾಗಿದ್ದಾರೆ.
Porque los terafim hablan vanidad, y las visiones de los adivinos son mentirosas; cuentan sueños falaces, dan consuelos vacíos, por eso andan errantes como ovejas; están afligidos, porque no tienen pastor.
3 ೩ ನನ್ನ ಕೋಪವು ಕುರುಬರ ಮೇಲೆ ಧಗಧಗಿಸುತ್ತದೆ. ನಾನು ಹೋತಗಳನ್ನು ದಂಡಿಸುವೆನು; ಸೇನಾಧೀಶ್ವರ ಯೆಹೋವನು ತನ್ನ ಮಂದೆಯಾದ ಯೆಹೂದ ವಂಶವನ್ನು ಪರಾಂಬರಿಸಿ ಘನವಾದ ಯುದ್ಧಾಶ್ವವನ್ನಾಗಿ ಮಾಡಿಕೊಳ್ಳುವನು.
Por lo cual contra los pastores se ha encendido mi ira, y castigaré a los machos cabríos; pues Yahvé de los ejércitos visita su rebaño, la casa de Judá, y hará de él su mejor caballo en la batalla.
4 ೪ ಆ ವಂಶದಿಂದ ಮೂಲೆಗಲ್ಲು, ಆ ವಂಶದಿಂದ ಮೊಳೆ, ಆ ವಂಶದಿಂದ ಯುದ್ಧದ ಬಿಲ್ಲು, ಅಂತು ಆ ವಂಶದೊಳಗಿಂದ ಸಕಲ ಅಧಿಕಾರಿಗಳು ಉಂಟಾಗುವರು.
De él vendrá la piedra, de él la estaca, de él el arco de guerra; de él saldrán todos los jefes juntos.
5 ೫ ಇವರು ವೀರರಾಗಿ ರಣರಂಗದೊಳಗೆ ಶತ್ರುಗಳನ್ನು ಬೀದಿಗಳ ಕೆಸರಿನಲ್ಲಿ ತುಳಿದುಬಿಡುವರು; ಯೆಹೋವನು ನಮ್ಮ ಸಂಗಡ ಇದ್ದಾನೆಂದು ಯುದ್ಧಮಾಡುವರು; ಎದುರಿಸುವ ಸವಾರರು ಭಂಗಪಡುವರು.
Y serán como héroes que huellan en el combate (a los enemigos) como si fuesen barro de las calles. Pelearán porque Yahvé está con ellos; y quedarán confundidos los que montan en caballos.
6 ೬ ನಾನು ಯೆಹೂದ ವಂಶವನ್ನು ಬಲಗೊಳಿಸಿ ಯೋಸೇಫನ ವಂಶವನ್ನು ಉದ್ಧರಿಸುವೆನು; ನನ್ನ ಕನಿಕರವು ಅವರ ಮೇಲೆ ಇರುವುದರಿಂದ ಅವರನ್ನು ಹಿಂದಕ್ಕೆ ಬರಮಾಡುವೆನು; ಆಗ ನಾನು ಅವರನ್ನು ತಳ್ಳಿಬಿಟ್ಟಿದ್ದು ಇಲ್ಲದಂತಾಗುವುದು; ನಾನು ಅವರ ದೇವರಾದ ಯೆಹೋವನಾಗಿದ್ದೇನಲ್ಲಾ, ಅವರ ಮೊರೆಯನ್ನು ಲಾಲಿಸಿ ಸದುತ್ತರವನ್ನು ನೀಡುವೆನು.
Yo confortaré la casa de Judá, y salvaré la casa de José; los restableceré porque tengo compasión de ellos; y serán cual si no los hubiese desechado; pues soy Yahvé, su Dios, y los escucharé.
7 ೭ ಎಫ್ರಾಯೀಮ್ಯರು ಶೂರರಂತಿರುವರು, ದ್ರಾಕ್ಷಾರಸ ಕುಡಿದಂತೆ ಅವರ ಮನಸ್ಸು ಉತ್ಸಾಹಗೊಳ್ಳುವುದು; ಅವರ ಸಂತಾನದವರು ಇದನ್ನು ನೋಡಿ ಸಂತೋಷಪಡುವರು, ಅವರ ಹೃದಯವು ಯೆಹೋವನಲ್ಲಿ ಆನಂದಿಸುವುದು.
Los de Efraím serán como héroes, y estará alegre su corazón como de vino; al verlo sus hijos se regocijarán, y se gozará su corazón en Yahvé.
8 ೮ ನಾನು ಅವರನ್ನು ಸಿಳ್ಳುಹಾಕಿ ಕರೆದು ಕೂಡಿಸುವೆನು. ಅವರನ್ನು ವಿಮೋಚಿಸಿದೆನಲ್ಲಾ; ಅವರು ಹಿಂದೆ ವೃದ್ಧಿಯಾದಂತೆ ಮುಂದೆಯೂ ವೃದ್ಧಿಯಾಗುವರು.
Los llamaré con un silbido, y los congregaré; porque los he rescatado, y se multiplicarán como antes se multiplicaron.
9 ೯ ನಾನು ಅವರನ್ನು ಜನಾಂಗಗಳೊಳಗೆ ಚೆಲ್ಲಿದರೂ ಅವರು ದೂರದೇಶಗಳಲ್ಲಿ ನನ್ನನ್ನು ಸ್ಮರಿಸಿಕೊಂಡು ಸಂತಾನಸಮೇತವಾಗಿ ಬದುಕಿ ಬಾಳಿ ಹಿಂದಿರುಗಿ ಬರುವರು.
Los he dispersado, sí, entre los pueblos, pero aun en (países) lejanos se acordarán de Mí; y vivirán juntamente con sus hijos, y volverán.
10 ೧೦ ನಾನು ಅವರನ್ನು ಐಗುಪ್ತ ದೇಶದೊಳಗಿಂದ ಹಿಂದಕ್ಕೆ ಕರೆದುತರುವೆನು; ಅಶ್ಶೂರದಿಂದ ಕೂಡಿಸುವೆನು; ಗಿಲ್ಯಾದ್, ಲೆಬನೋನುಗಳ ಪ್ರಾಂತ್ಯಕ್ಕೆ ಬರಮಾಡುವೆನು; ಅವರಿಗೆ ಸಾಕಾಗುವಷ್ಟು ಸ್ಥಳ ಸಿಕ್ಕದು.
Los traeré de la tierra de Egipto, y de Asiria los recogeré; los conduciré a la tierra de Galaad, y al Líbano; pues no se hallará lugar para ellos.
11 ೧೧ ಅವರು ಕಷ್ಟವೆಂಬ ಕಡಲನ್ನು ದಾಟಿ ಬರುವರು, ಅಲ್ಲಕಲ್ಲೋಲವಾದ ಸಮುದ್ರವನ್ನು ಭೇದಿಸಿಬಿಡುವರು, ನೈಲ್ ನದಿಯೆಲ್ಲಾ ತಳದ ತನಕ ಒಣಗುವುದು. ಅಶ್ಶೂರದ ಗರ್ವವು ತಗ್ಗಿಸಲ್ಪಡುವುದು, ಐಗುಪ್ತದ ರಾಜದಂಡವು ತಪ್ಪಿಹೋಗುವುದು.
Pasarán por un mar de angustia; mas (Dios) herirá las olas del mar, se secarán todas las profundidades del río; será abatida la soberbia de Asiria, la vara de Egipto desaparecerá.
12 ೧೨ ಅವರು ಯೆಹೋವನಲ್ಲಿ ಬಲಗೊಳ್ಳುವರು, ಆತನ ಹೆಸರಿನಲ್ಲಿ ನಡೆದುಕೊಳ್ಳುವರು; ಇದು ಯೆಹೋವನ ನುಡಿ.
Yo los fortaleceré en Yahvé; y en su nombre seguirán adelante, dice Yahvé.