< ಜೆಕರ್ಯನು 12 >
1 ೧ ಇಸ್ರಾಯೇಲಿನ ವಿಷಯವಾಗಿ ಯೆಹೋವನು ನುಡಿದ ದೈವೋಕ್ತಿ. ಆಕಾಶ ಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿವಾರವನ್ನು ಹಾಕಿ, ಮನುಷ್ಯರೊಳಗೆ ಜೀವಾತ್ಮವನ್ನು ಸೃಷ್ಟಿಸುವ ಯೆಹೋವನು ಇಂತೆನ್ನುತ್ತಾನೆ,
神諭:上主論以色列的話:展開蒼天,奠定大地,在人體內造化人靈的上主的斷語:
2 ೨ “ಆಹಾ! ನಾನು ಯೆರೂಸಲೇಮನ್ನು ಸುತ್ತಣ ಸಕಲ ಜನಾಂಗಗಳಿಗೆ ಅಮಲೇರಿಸಿ ಓಲಾಡಿಸುವ ಬೋಗುಣಿಯನ್ನಾಗಿ ಮಾಡುವೆನು; ಯೆರೂಸಲೇಮಿಗೆ ಮುತ್ತಿಗೆಹಾಕುವಾಗ ಯೆಹೂದಕ್ಕೂ ಇಕ್ಕಟ್ಟಾಗುವುದು.
看,我要使耶路撒冷成為四周萬民的醉杯;在耶路撒冷城被圍困寺時,猶大也必如此。
3 ೩ ಆ ದಿನದಲ್ಲಿ ನಾನು ಯೆರೂಸಲೇಮನ್ನು ಸಮಸ್ತ ಜನಗಳಿಗೂ, ಭಾರೀ ಬಂಡೆಯನ್ನಾಗಿ ಮಾಡುವೆನು; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಲೋಕದ ಸಕಲ ರಾಜ್ಯಗಳು ಅದನ್ನೆತ್ತಿ ಹಾಕಲು ಕೂಡಿಬರುವವು.”
在那一天,我必使耶路撒冷成為一切民族的舉重石;凡欲舉起它的,必受重傷。地上的民族,都要聚集起來攻擊它。
4 ೪ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ಎಲ್ಲಾ ಕುದುರೆಗಳು ಭಯದಿಂದ ತಬ್ಬಿಬ್ಬಾಗುವಂತೆ ಮಾಡುವೆನು, ಸವಾರರನ್ನು ಭ್ರಮೆಗೊಳಿಸುವೆನು; ಯೆಹೂದ ವಂಶವನ್ನು ಕಟಾಕ್ಷಿಸಿ ಜನಾಂಗಗಳ ಅಶ್ವಗಳನ್ನೆಲ್ಲಾ ಕುರುಡು ಮಾಡುವೆನು.
在那一天,──上主的斷語──我要以驚慌打搫一切戰馬,以瘋狂打搫騎兵;但對猶大家,我卻要睜開我的雙眼;我要以盲目打搫的戰馬。
5 ೫ ಆಗ ಯೆಹೂದದ ಕುಲಪತಿಗಳು ತಮ್ಮ ಮನಸ್ಸಿನೊಳಗೆ, ‘ಯೆರೂಸಲೇಮಿನವರು ತಮ್ಮ ದೇವರಾದ ಸೇನಾಧೀಶ್ವರ ಯೆಹೋವನಲ್ಲಿ ಬಲಗೊಂಡು ನಮಗೆ ತ್ರಾಣವಾಗಿದ್ದಾರೆ’ ಅಂದುಕೊಳ್ಳುವರು.
那時,猶大的族長心裏必要說:耶路撒冷咕民的力量在乎萬軍的上主,他們的土天主。
6 ೬ “ಆ ದಿನದಲ್ಲಿ ನಾನು ಯೆಹೂದದ ಕುಲಪತಿಗಳನ್ನು ಸೌದೆಯ ಮಧ್ಯದಲ್ಲಿನ ಅಗ್ಗಿಷ್ಟಿಕೆಯನ್ನಾಗಿಯೂ, ಸಿವುಡುಗಳ ನಡುವಣ ಪಂಜನ್ನಾಗಿಯೂ ಮಾಡುವೆನು; ಅವರು ಸುತ್ತಣ ಜನಾಂಗಗಳನ್ನೆಲ್ಲಾ ಎಡಬಲಗಳಲ್ಲಿ ನುಂಗಿಬಿಡುವರು; ಯೆರೂಸಲೇಮಿನವರು ತಮ್ಮ ಸ್ಥಳವಾದ ಯೆರೂಸಲೇಮಿನಲ್ಲೇ ಇನ್ನು ವಾಸಿಸುವರು;
在那一天,我必要使猶大的族長好像木柴中的火盆,有如草堆中的火把;他們必左右吞滅四周所有的民族;但耶路撒冷必仍安居在自己的原處。
7 ೭ ದಾವೀದ ವಂಶದವರ ಮಹಿಮೆಯೂ, ಯೆರೂಸಲೇಮಿನವರ ಮಹಿಮೆಯೂ, ಯೆಹೂದದ ಮಹಿಮೆಯನ್ನು ಮೀರದಂತೆ ಯೆಹೋವನು ಯೆಹೂದದ ಪಾಳೆಯಗಳಿಗೆ ಮೊದಲು ಜಯವನ್ನುಂಟುಮಾಡುವನು;
上主首先要使猶大的家族勝利,免得達味家的光榮和耶路撒冷居民的光榮超過猶大。
8 ೮ ಆ ದಿನದಲ್ಲಿ ಯೆಹೋವನು ಯೆರೂಸಲೇಮಿನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವುದು.
在那一天,上主必要保衛耶路撒冷的居民,使他們中的衰弱者,在那一天有如達味,而達味家在他們眼前有如神,有如上主的使者。
9 ೯ ಯೆರೂಸಲೇಮಿನ ಮೇಲೆ ಬೀಳುವ ಎಲ್ಲಾ ಜನಾಂಗಗಳ ಧ್ವಂಸಕ್ಕೆ ಆ ದಿನದಲ್ಲಿ ಕೈಹಾಕುವೆನು.”
在那一天,我必設法消滅一切來攻打耶路撒冷的異民。
10 ೧೦ ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.
我要對達味和耶路撒冷的居民傾注憐憫和哀禱的神,他們要瞻望他們所刺透的那一位:哀悼他如哀悼獨生子,痛哭他像痛哭長子。
11 ೧೧ ಮೆಗಿದ್ದೋವಿನ ತಗ್ಗಿನೊಳಗೆ ಹದದ್ ರಿಮ್ಮೋನಿನಲ್ಲಿ ಗೋಳಾಟವಾಗುವಂತೆ ಯೆರೂಸಲೇಮಿನಲ್ಲಿ ಆ ದಿನ ದೊಡ್ಡ ಗೋಳಾಟವಾಗುವುದು.
在那一天,在耶路撒冷必要大舉哀悼合有如在默基多平原中的哈達得黎孟的哀悼。
12 ೧೨ ದೇಶವೆಲ್ಲಾ ಗೋಳಾಡುವುದು, ಒಂದೊಂದು ಕುಟುಂಬವು ಬೇರೆ ಬೇರೆಯಾಗಿ ಗೋಳಾಡುವುದು; ದಾವೀದ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ; ನಾತಾನ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು ಗಂಡಸರು ಬೇರೆ ಬೇರೆ;
全國將要哀悼,各家各族,成一夥,他們的女人一夥;納堂家一夥,
13 ೧೩ ಲೇವಿ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ; ಶಿಮ್ಮಿಯ ಸಂತಾನದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ,
肋未家的家族一夥,他們的女人一夥;史米家族一夥,他們的女人一夥;
14 ೧೪ ಉಳಿದ ಕುಟುಂಬಗಳೆಲ್ಲಾ ಬೇರೆ ಬೇರೆ, ಒಂದೊಂದರಲ್ಲಿಯೂ ಹೆಂಗಸರು, ಗಂಡಸರು ಬೇರೆ ಬೇರೆ, ಹೀಗೆ ಬೇರೆ ಬೇರೆಯಾಗಿಯೇ ಗೋಳಾಡುವರು.
其餘所有的家族,各家各族合成一夥,他們的女人一夥。