< ಜೆಕರ್ಯನು 12 >

1 ಇಸ್ರಾಯೇಲಿನ ವಿಷಯವಾಗಿ ಯೆಹೋವನು ನುಡಿದ ದೈವೋಕ್ತಿ. ಆಕಾಶ ಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿವಾರವನ್ನು ಹಾಕಿ, ಮನುಷ್ಯರೊಳಗೆ ಜೀವಾತ್ಮವನ್ನು ಸೃಷ್ಟಿಸುವ ಯೆಹೋವನು ಇಂತೆನ್ನುತ್ತಾನೆ,
משא דבר יהוה על ישראל נאם יהוה נטה שמים ויסד ארץ ויצר רוח אדם בקרבו
2 “ಆಹಾ! ನಾನು ಯೆರೂಸಲೇಮನ್ನು ಸುತ್ತಣ ಸಕಲ ಜನಾಂಗಗಳಿಗೆ ಅಮಲೇರಿಸಿ ಓಲಾಡಿಸುವ ಬೋಗುಣಿಯನ್ನಾಗಿ ಮಾಡುವೆನು; ಯೆರೂಸಲೇಮಿಗೆ ಮುತ್ತಿಗೆಹಾಕುವಾಗ ಯೆಹೂದಕ್ಕೂ ಇಕ್ಕಟ್ಟಾಗುವುದು.
הנה אנכי שם את ירושלם סף רעל לכל העמים--סביב וגם על יהודה יהיה במצור על ירושלם
3 ಆ ದಿನದಲ್ಲಿ ನಾನು ಯೆರೂಸಲೇಮನ್ನು ಸಮಸ್ತ ಜನಗಳಿಗೂ, ಭಾರೀ ಬಂಡೆಯನ್ನಾಗಿ ಮಾಡುವೆನು; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಲೋಕದ ಸಕಲ ರಾಜ್ಯಗಳು ಅದನ್ನೆತ್ತಿ ಹಾಕಲು ಕೂಡಿಬರುವವು.”
והיה ביום ההוא אשים את ירושלם אבן מעמסה לכל העמים--כל עמסיה שרוט ישרטו ונאספו עליה כל גויי הארץ
4 ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ಎಲ್ಲಾ ಕುದುರೆಗಳು ಭಯದಿಂದ ತಬ್ಬಿಬ್ಬಾಗುವಂತೆ ಮಾಡುವೆನು, ಸವಾರರನ್ನು ಭ್ರಮೆಗೊಳಿಸುವೆನು; ಯೆಹೂದ ವಂಶವನ್ನು ಕಟಾಕ್ಷಿಸಿ ಜನಾಂಗಗಳ ಅಶ್ವಗಳನ್ನೆಲ್ಲಾ ಕುರುಡು ಮಾಡುವೆನು.
ביום ההוא נאם יהוה אכה כל סוס בתמהון ורכבו בשגעון ועל בית יהודה אפקח את עיני וכל סוס העמים אכה בעורון
5 ಆಗ ಯೆಹೂದದ ಕುಲಪತಿಗಳು ತಮ್ಮ ಮನಸ್ಸಿನೊಳಗೆ, ‘ಯೆರೂಸಲೇಮಿನವರು ತಮ್ಮ ದೇವರಾದ ಸೇನಾಧೀಶ್ವರ ಯೆಹೋವನಲ್ಲಿ ಬಲಗೊಂಡು ನಮಗೆ ತ್ರಾಣವಾಗಿದ್ದಾರೆ’ ಅಂದುಕೊಳ್ಳುವರು.
ואמרו אלפי יהודה בלבם אמצה לי ישבי ירושלם ביהוה צבאות אלהיהם
6 “ಆ ದಿನದಲ್ಲಿ ನಾನು ಯೆಹೂದದ ಕುಲಪತಿಗಳನ್ನು ಸೌದೆಯ ಮಧ್ಯದಲ್ಲಿನ ಅಗ್ಗಿಷ್ಟಿಕೆಯನ್ನಾಗಿಯೂ, ಸಿವುಡುಗಳ ನಡುವಣ ಪಂಜನ್ನಾಗಿಯೂ ಮಾಡುವೆನು; ಅವರು ಸುತ್ತಣ ಜನಾಂಗಗಳನ್ನೆಲ್ಲಾ ಎಡಬಲಗಳಲ್ಲಿ ನುಂಗಿಬಿಡುವರು; ಯೆರೂಸಲೇಮಿನವರು ತಮ್ಮ ಸ್ಥಳವಾದ ಯೆರೂಸಲೇಮಿನಲ್ಲೇ ಇನ್ನು ವಾಸಿಸುವರು;
ביום ההוא אשים את אלפי יהודה ככיור אש בעצים וכלפיד אש בעמיר ואכלו על ימין ועל שמאול את כל העמים סביב וישבה ירושלם עוד תחתיה בירושלם
7 ದಾವೀದ ವಂಶದವರ ಮಹಿಮೆಯೂ, ಯೆರೂಸಲೇಮಿನವರ ಮಹಿಮೆಯೂ, ಯೆಹೂದದ ಮಹಿಮೆಯನ್ನು ಮೀರದಂತೆ ಯೆಹೋವನು ಯೆಹೂದದ ಪಾಳೆಯಗಳಿಗೆ ಮೊದಲು ಜಯವನ್ನುಂಟುಮಾಡುವನು;
והושע יהוה את אהלי יהודה בראשנה למען לא תגדל תפארת בית דויד ותפארת ישב ירושלם--על יהודה
8 ಆ ದಿನದಲ್ಲಿ ಯೆಹೋವನು ಯೆರೂಸಲೇಮಿನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವುದು.
ביום ההוא יגן יהוה בעד יושב ירושלם והיה הנכשל בהם ביום ההוא כדויד ובית דויד כאלהים כמלאך יהוה לפניהם
9 ಯೆರೂಸಲೇಮಿನ ಮೇಲೆ ಬೀಳುವ ಎಲ್ಲಾ ಜನಾಂಗಗಳ ಧ್ವಂಸಕ್ಕೆ ಆ ದಿನದಲ್ಲಿ ಕೈಹಾಕುವೆನು.”
והיה ביום ההוא אבקש להשמיד את כל הגוים הבאים על ירושלם
10 ೧೦ ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.
ושפכתי על בית דויד ועל יושב ירושלם רוח חן ותחנונים והביטו אלי את אשר דקרו וספדו עליו כמספד על היחיד והמר עליו כהמר על הבכור
11 ೧೧ ಮೆಗಿದ್ದೋವಿನ ತಗ್ಗಿನೊಳಗೆ ಹದದ್ ರಿಮ್ಮೋನಿನಲ್ಲಿ ಗೋಳಾಟವಾಗುವಂತೆ ಯೆರೂಸಲೇಮಿನಲ್ಲಿ ಆ ದಿನ ದೊಡ್ಡ ಗೋಳಾಟವಾಗುವುದು.
ביום ההוא יגדל המספד בירושלם כמספד הדדרמון בבקעת מגדון
12 ೧೨ ದೇಶವೆಲ್ಲಾ ಗೋಳಾಡುವುದು, ಒಂದೊಂದು ಕುಟುಂಬವು ಬೇರೆ ಬೇರೆಯಾಗಿ ಗೋಳಾಡುವುದು; ದಾವೀದ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ; ನಾತಾನ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು ಗಂಡಸರು ಬೇರೆ ಬೇರೆ;
וספדה הארץ משפחות משפחות לבד משפחת בית דויד לבד ונשיהם לבד--משפחת בית נתן לבד ונשיהם לבד
13 ೧೩ ಲೇವಿ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ; ಶಿಮ್ಮಿಯ ಸಂತಾನದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ,
משפחת בית לוי לבד ונשיהם לבד משפחת השמעי לבד ונשיהם לבד
14 ೧೪ ಉಳಿದ ಕುಟುಂಬಗಳೆಲ್ಲಾ ಬೇರೆ ಬೇರೆ, ಒಂದೊಂದರಲ್ಲಿಯೂ ಹೆಂಗಸರು, ಗಂಡಸರು ಬೇರೆ ಬೇರೆ, ಹೀಗೆ ಬೇರೆ ಬೇರೆಯಾಗಿಯೇ ಗೋಳಾಡುವರು.
כל המשפחות הנשארות--משפחת משפחת לבד ונשיהם לבד

< ಜೆಕರ್ಯನು 12 >