< ಜೆಕರ್ಯನು 13 >
1 ೧ ಆ ದಿನದಲ್ಲಿ ಪಾಪವನ್ನೂ, ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ, ಯೆರೂಸಲೇಮಿನವರಿಗೂ ತೆರೆದಿರುವುದು.
På hin Dag skal en Kilde vælde frem for Davids Hus og Jerusalems Indbyggere mod Synd og Urenhed.
2 ೨ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬರುವುದಿಲ್ಲ; ಅಲ್ಲದೆ ಸುಳ್ಳು ಪ್ರವಾದಿಗಳನ್ನೂ, ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು.
Og på hin bag, lyder det fra Hærskarers HERRE, udrydder jeg Afgudernes Navne af Landet, så de ikke mer skal ihukommes; også Profeterne og Urenhedens Ånd driver jeg ud af Landet.
3 ೩ ಆಗ ಯಾವನಾದರೂ ಮತ್ತೆ ಪ್ರವಾದನೆಮಾಡಿದರೆ ಅವನ ಹೆತ್ತ ತಾಯಿತಂದೆಗಳು ಅವನಿಗೆ, ‘ನೀನು ಉಳಿಯಬೇಡ; ಯೆಹೋವನ ಹೆಸರೆತ್ತಿ ಸುಳ್ಳಾಡುತ್ತಿ’ ಎಂದು ಹೇಳಿ ಆ ಹೆತ್ತ ತಾಯಿತಂದೆಗಳೇ ಅವನ ಪ್ರವಾದನೆಯ ನಿಮಿತ್ತ ಅವನನ್ನು ಇರಿದುಬಿಡುವರು.
Når nogen da atter profeterer, skal hans egne Forældre, hans Fader og Moder, sige til ham: Du har forbrudt dit Liv, thi du har talt Løgn i HERRENs Navn." Og hans egne Forældre, hans Fader og Moder, skal gennembore ham, når han profeterer.
4 ೪ “ಆ ದಿನದಲ್ಲಿ ಯಾವ ಪ್ರವಾದಿಯೇ ಆಗಲಿ ಪ್ರವಾದನೆ ಮಾಡಬೇಕೆಂದಿರುವಾಗ ತನಗಾದ ದರ್ಶನವನ್ನು ಪ್ರಕಟಿಸಲು ನಾಚಿಕೆಪಡುವನು; ಯಾವನೂ ಮೋಸಕ್ಕಾಗಿ ಕಂಬಳಿಯನ್ನು ಹೊದ್ದುಕೊಳ್ಳನು;
På hin Dag skal hver en Profet skamme sig over sine Syner, når han profeterer, og han skal ikke klæde sig i lådden Kappe for at føre Folk bag Lyset,
5 ೫ ಒಬ್ಬನು, ‘ನಾನು ಪ್ರವಾದಿಯಲ್ಲ, ಹೊಲದ ಕೆಲಸದವನು; ಚಿಕ್ಕ ವಯಸ್ಸಿನಿಂದಲೂ ರೈತನಾಗಿದ್ದೇನೆ.’ ಎಂದು ಹೇಳಲು,
men sige: "Jeg er ingen Profet; jeg er Bonde og har dyrket Jord fra min Ungdom."
6 ೬ ಮತ್ತೊಬ್ಬನು ಅವನನ್ನು, ‘ನಿನ್ನ ಎದೆಯ ಮೇಲಿರುವ ಈ ಗಾಯಗಳು ಏನು?’ ಎಂದು ಕೇಳಿದರೆ ಅವನು, ‘ಮಿತ್ರರ ಮನೆಯಲ್ಲಿ ನನಗಾದ ಗಾಯಗಳು’” ಎಂದು ಉತ್ತರ ಕೊಡುವನು.
Og spørger man ham: "Hvad er det for Sår på dit Bryst?" skal han sige: "Dem fik jeg i mine Boleres Hus."
7 ೭ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.
Frem, Sværd, imod min Hyrde, mod Manden, som står mig nær, så lyder det fra Hærskarers HERRE. Hyrden vil jeg slå, så Fårehjorden spredes; mod Drengene løfter jeg Hånden.
8 ೮ “ದೇಶದೊಳಗೆಲ್ಲಾ ಮೂರರಲ್ಲಿ ಎರಡು ಭಾಗದವರು ಹತರಾಗಿ ಸಾಯುವರು, ಮೂರನೆಯ ಭಾಗದವರು ಅಲ್ಲಿ ಉಳಿಯುವರು” ಇದು ಯೆಹೋವನ ನುಡಿ.
Og i hele Landet lyder det fra HERREN, skal to Tredjedele udryddes og udånde, men een Tredjedel skal levnes.
9 ೯ “ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”
Og denne Tredjedel fører jeg i Ild og renser den, som man renser Sølv, prøver den, som man prøver Guld. Den skal påkalde mit Navn, og jeg svarer; jeg siger: "Den er mit Folk." Og den skal sige: "HERREN er min Gud."