< ಜೆಕರ್ಯನು 14 >
1 ೧ ಆಹಾ, ಚೀಯೋನೇ, ಯೆಹೋವನ ನ್ಯಾಯತೀರ್ಪಿನ ದಿನವು ಬರುತ್ತಿದೆ; ಸೂರೆಯಾದ ನಿನ್ನ ಆಸ್ತಿಯು ಆಗ ನಿನ್ನ ಮಧ್ಯದಲ್ಲಿ ಹಂಚಿಕೆಯಾಗುವುದು.
देख, ख़ुदावन्द का दिन आता है, जब तेरा माल लूटकर तेरे अन्दर बाँटा जाएगा।
2 ೨ ನಾನು ಸಕಲ ಜನಾಂಗಗಳನ್ನು ಯೆರೂಸಲೇಮಿಗೆ ವಿರುದ್ಧವಾಗಿ ಕೂಡಿಸುವೆನು; ಅವು ಪಟ್ಟಣವನ್ನು ಆಕ್ರಮಿಸಿಕೊಂಡು ಮನೆಗಳನ್ನು ಸೂರೆಮಾಡಿ ಹೆಂಗಸರನ್ನು ಕೆಡಿಸುವವು; ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು, ಉಳಿದ ಜನರೋ ಪಟ್ಟಣದಲ್ಲೇ ಉಳಿಯುವರು.
क्यूँकि मैं सब क़ौमों को जमा' करूँगा कि येरूशलेम से जंग करें, और शहर ले लिया जाएगा और घर लूटे जाएँगे और 'औरतें बे हुरमत की जायेंगी और आधा शहर ग़ुलामी में जाएगा, लेकिन बाक़ी लोग शहर ही में रहेंगे।
3 ೩ ಆಗ ಯೆಹೋವನು ಹೊರಟು, ಯುದ್ಧದ ದಿನದಲ್ಲಿ ಹೇಗೋ ಹಾಗೆಯೇ ಆ ಜನಾಂಗಗಳಿಗೆ ಪ್ರತಿಭಟಿಸುವನು.
तब ख़ुदावन्द ख़ुरूज करेगा और उन क़ौमों से लड़ेगा, जैसे जंग के दिन लड़ा करता था।
4 ೪ ಯೆರೂಸಲೇಮಿನ ಪೂರ್ವದಿಕ್ಕಿಗೆ ಎದುರಾಗಿರುವ ಎಣ್ಣೆಯ ಮರಗಳ ಗುಡ್ಡದ ಮೇಲೆ ಆತನ ಪಾದಗಳು ನಿಂತಿರಲು, ಆ ಗುಡ್ಡವು ಪೂರ್ವದಿಂದ ಪಶ್ಚಿಮದ ಉದ್ದಕ್ಕೂ ಸೀಳಿಹೋಗಿ ಮಧ್ಯದಲ್ಲಿ ದೊಡ್ಡ ಡೊಂಗರವಾಗುವುದು. ಗುಡ್ಡದ ಅರ್ಧಭಾಗವು ಉತ್ತರಕ್ಕೂ, ಅರ್ಧಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು.
और उस दिन वह को — हए — जै़तून पर जो येरूशलेम के पूरब में वाक़े' है खड़ा होगा और कोह — ए — ज़ैतून बीच से फट जाएगा; और उसके पूरब से पशचिम तक एक बड़ी वादी हो जाएगी, क्यूँकि आधा पहाड़ उत्तर को सरक जाएगा और आधा दक्खिन को।
5 ೫ ನೀವು ಯೆಹೋವನ ಗುಡ್ಡಗಳ ನಡುವಣ ಆ ಕಣಿವೆಯೊಳಗೆ ಓಡಿಹೋಗುವಿರಿ; ಏಕೆಂದರೆ ಆ ಕಣಿವೆಯು ಆಚೆಲಿನವರೆಗೂ ಮುಟ್ಟಿರುವುದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ಪರಿಶುದ್ಧ ದೇವರಾದ ಯೆಹೋವನು ಸಮಸ್ತ ದೇವದೂತರ ಸಮೇತ ಬರುವನು.
और तुम मेरे पहाड़ों की वादी से होकर भागोगे, क्यूँकि पहाड़ों की वादी अज़ल तक होगी; जिस तरह तुम शाह — ए — यहूदाह उज़्ज़ियाह के दिनों में ज़लज़ले से भागे थे, उसी तरह भागोगे; क्यूँकि ख़ुदावन्द मेरा ख़ुदा आएगा और सब कु़दसी उसके साथ
6 ೬ ಆ ದಿನದಲ್ಲಿ ಬೆಳಕಿರದು, ಜ್ಯೋತಿಗಳು ಅಡಗಿಹೋಗುವವು, ಇಂಥಾ ದಿನವು ಒಂದೇ,
और उस दिन रोशनी न होगी, और अजराम — ए — फ़लक छिप जाएँगे।
7 ೭ ಅದು ಯೆಹೋವನಿಗೆ ತಿಳಿದಿರುವುದು, ಅದು ಹಗಲೂ ಅಲ್ಲ, ಇರುಳೂ ಅಲ್ಲ, ಆದರೆ ಸಂಜೆಯ ವೇಳೆಯಲ್ಲಿ ಬೆಳಕಾಗುವುದು.
लेकिन एक दिन ऐसा आएगा जो ख़ुदावन्द ही को मा'लूम है। वह न दिन होगा न रात, लेकिन शाम के वक़्त रोशनी होगी।
8 ೮ ಆ ದಿನದಲ್ಲಿ ಜೀವಕರವಾದ ಜಲಪ್ರವಾಹವು ಯೆರೂಸಲೇಮಿನೊಳಗಿಂದ ಹೊರಡುವುದು; ಅರ್ಧಭಾಗವು ಪೂರ್ವಸಮುದ್ರಕ್ಕೂ, ಅರ್ಧಭಾಗವು ಪಶ್ಚಿಮ ಸಮುದ್ರಕ್ಕೂ ಹರಿಯುವುದು; ಬೇಸಿಗೆಕಾಲದಲ್ಲಿಯೂ, ಮಳೆಗಾಲದಲ್ಲಿಯೂ ಹರಿಯುತ್ತಲೇ ಇರುವುದು.
और उस दिन येरूशलेम से आब — ए — हयात जारी होगा, जिसका आधा बहर — ए — पूरब की तरफ़ बहेगा और आधा बहर — ए — पच्छिम की तरफ़, गमीं सदी में जारी रहेगा।
9 ೯ ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವುದು.
और ख़ुदावन्द सारी दुनिया का बादशाह होगा। उस दिन एक ही ख़ुदावन्द होगा, और उसका नाम वाहिद होगा।
10 ೧೦ ಆಗ ದೇಶವು ಗೆಬದಿಂದ ಯೆರೂಸಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೆ ತಗ್ಗಾಗಿ ಮಾರ್ಪಡುವುದು; ಯೆರೂಸಲೇಮೋ ಬೆನ್ಯಾಮೀನಿನ ಬಾಗಿಲಿನಿಂದ ಪೂರ್ವಕಾಲದ ಬಾಗಿಲಿನ ಸ್ಥಳದವರೆಗೆ, ಮೂಲೆಯ ಬಾಗಿಲಿನ ತನಕ, ಹನನೇಲನ ಬುರುಜಿನಿಂದ ಅರಸನ ದ್ರಾಕ್ಷಿಯ ಆಲೆಗಳವರೆಗೂ ಎತ್ತರದಲ್ಲಿ ನಿಂತಿರುವುದು.
और येरूशलेम के दक्खिन में तमाम मुल्क जिबा' से रिम्मोन तक मैदान की तरह हो जाएगा। लेकिन येरूशलेम बुलन्द होगा, और बिनयमीन के फाटक से पहले फाटक के मक़ाम या'नी कोने के फाटक तक, और हननएल के बुर्ज से बादशाह के अंगूरी हौज़ों तक, अपने मक़ाम पर आबाद होगा।
11 ೧೧ ಅದರಲ್ಲಿ ಜನರು ಸುರಕ್ಷಿತವಾಗಿ ವಾಸಿಸುವರು. ಇನ್ನು ಶಾಪವಿರದು; ಯೆರೂಸಲೇಮ್ ನೆಮ್ಮದಿಯಾಗಿ ನೆಲೆಗೊಂಡಿರುವುದು.
और लोग इसमें सुकूनत करेंगे और फिर ला'नत मुतलक़ न होगी, बल्कि येरूशलेम अमन — ओ — अमान से आबाद रहेगा।
12 ೧೨ ಯೆರೂಸಲೇಮಿನ ಮೇಲೆ ಯುದ್ಧ ಮಾಡಿದ ಸಕಲ ಜನಾಂಗಗಳಿಗೂ ಯೆಹೋವನು ಈ ವ್ಯಾಧಿಯು ಬರುವಂತೆ ಮಾಡುವನು, ಹೆಜ್ಜೆಯ ಮೇಲೆ ನಿಂತ ಹಾಗೆಯೇ ಅವರ ಮಾಂಸವು ಕೊಳೆತು ಹೋಗುವುದು, ಕಣ್ಣು ಕುಣಿಯಲ್ಲೇ ಇಂಗುವುದು, ನಾಲಿಗೆಯು ಬಾಯಲ್ಲೇ ಕ್ಷಯಿಸುವುದು.
और ख़ुदावन्द येरूशलेम से जंग करने वाली सब क़ौमों पर यह 'ऐज़ाब नाज़िल करेगा, कि खड़े खड़े उनका गोश्त सूख जाएगा, और उनकी आँखे चश्म खानों में गल जायेंगी और उनकी ज़बान उनके मुँह में सड़ जाएगी।
13 ೧೩ ಆ ದಿನದಲ್ಲಿ ಯೆಹೋವನು ಉಂಟುಮಾಡುವ ದೊಡ್ಡ ಗಲಿಬಿಲಿಯು ಅವರಲ್ಲಿ ಹರಡುವುದು; ಒಬ್ಬರ ಕೈಯನೊಬ್ಬರು ತಡೆಹಿಡಿಯುವರು, ಒಬ್ಬರ ಮೇಲೊಬ್ಬರು ಕೈಯೆತ್ತುವರು.
और उस दिन ख़ुदावन्द की तरफ़ से उनके बीच बड़ी हलचल होगी और एक दूसरे का हाथ पकड़ेंगे और एक दूसरे के ख़िलाफ़ हाथ उठाएगा।
14 ೧೪ ಯೆಹೂದವೂ ಯೆರೂಸಲೇಮಿನ ಪರವಾಗಿ ಯುದ್ಧಮಾಡುವುದು; ಸುತ್ತಣ ಸಕಲ ಜನಾಂಗಗಳ ಆಸ್ತಿಯು ಅಂದರೆ ಬೆಳ್ಳಿ, ಬಂಗಾರ ಮತ್ತು ಬಟ್ಟೆಗಳು ರಾಶಿರಾಶಿಯಾಗಿ ಕೂಡಿಸಲ್ಪಡುವವು.
और यहूदाह भी येरूशलेम के पास लड़ेगा, और चारों तरफ़ की सब क़ौमों का माल या'नी सोना — चाँदी और पोशाक बड़ी कसरत से इकठ्ठा किया जाएगा।
15 ೧೫ ಜನಾಂಗಗಳಿಗೆ ತಗಲುವಂಥ ವ್ಯಾಧಿಯೇ ಕುದುರೆ, ಹೇಸರಗತ್ತೆ, ಒಂಟೆ, ಕತ್ತೆ ಅಂತು ಆ ಪಾಳೆಯಗಳಲ್ಲಿನ ಸಮಸ್ತ ಪಶುಗಳಿಗೂ ತಗಲುವುದು.
और घोड़ों, खच्चरों, ऊँटों, गधों और सब हैवानों पर भी जो उन लश्करगाहों में होंगे, वही 'ऐज़ाब नाज़िल होगा
16 ೧೬ ಅನಂತರ ಯೆರೂಸಲೇಮಿನ ಮೇಲೆ ಬಿದ್ದ ಸಕಲ ಜನಾಂಗಗಳಲ್ಲಿ ಉಳಿದವರೆಲ್ಲರೂ ಸೇನಾಧೀಶ್ವರ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೂ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೂ ಪ್ರತಿವರ್ಷವೂ ಹೊರಟುಬರುವರು.
और येरूशलेम से लड़ने वाली क़ौमों में से जो बच रहेंगे, साल — ब — साल बादशाह रब्ब — उल — अफ़वाज को सिज्दा करने और 'ईद — ए — ख़ियाम मनाने को आएँगे।
17 ೧೭ ಲೋಕದ ಸಮಸ್ತ ಕುಲಗಳಲ್ಲಿ ಯಾವ ಕುಲದವರು ಸೇನಾಧೀಶ್ವರನಾದ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೆ ಯೆರೂಸಲೇಮಿಗೆ ಬರುವುದಿಲ್ಲವೋ ಅವರಿಗೆ ಮಳೆಬರುವುದಿಲ್ಲ.
और दुनिया के उन तमाम क़बाइल पर जो बादशाह रब्ब — उल — अफ़वाज के सामने सिज्दा करने को येरूशलेम में न आएँगे, मेंह न बरसेगा।
18 ೧೮ ಐಗುಪ್ತ ಕುಲದವರು ಹೊರಟು ಬರದಿದ್ದರೆ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೆ ಬರದಿದ್ದರೆ ಜನಾಂಗಗಳಿಗೆ ಯೆಹೋವನು ತಗಲಿಸುವ ಬಾಧೆಯು ಅವರಿಗೂ ತಗಲುವುದು.
और अगर क़बाइल — ए — मिस्र जिन पर बारिश नहीं होती न आएँ, तो उन पर वही 'ऐज़ाब नाज़िल होगा जिसको ख़ुदावन्द उन गै़र — क़ौमों पर नाज़िल करेगा, जो 'ईद — ए — ख़ियाम मनाने को न आएँगी।
19 ೧೯ ಐಗುಪ್ತಕ್ಕೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೆ ಬರದಿರುವ ಸಕಲ ಜನಾಂಗಗಳಿಗೂ ಸಂಭವಿಸುವ ದಂಡನೆಯು ಇದೇ.
अहल — ए — मिस्र और उन सब क़ौमों की, जो ईद — ए — ख़ियाम मनाने की न जाएँ यही सज़ा होगी।
20 ೨೦ ಆ ದಿನದಲ್ಲಿ, “ಯೆಹೋವನಿಗೆ ಮೀಸಲು” ಎಂಬ ಲಿಪಿಯು ಕುದುರೆಗಳ ಘಂಟೆಗಳ ಮೇಲೂ ಕೆತ್ತಿರುವುದು; ಯೆಹೋವನ ಆಲಯದ ಪಾತ್ರೆಗಳೆಲ್ಲವೂ ಯಜ್ಞವೇದಿಯ ಪಕ್ಕದ ಬೋಗುಣಿಗಳಂತೆ ಪರಿಶುದ್ಧವಾಗಿರುವವು.
उस दिन घोड़ों की घंटियों पर लिखा होगा, “ख़ुदावन्द के लिये पाक।” और ख़ुदावन्द के घर को देगें, मज़बह के प्यालों की तरह पाक होंगें।
21 ೨೧ ಅಲ್ಲದೆ ಯೆರೂಸಲೇಮಿನಲ್ಲಿಯೂ, ಯೆಹೂದದಲ್ಲಿಯೂ ಇರುವ ಸಕಲ ಪಾತ್ರೆಗಳು ಸೇನಾಧೀಶ್ವರ ಯೆಹೋವನಿಗೆ ಮೀಸಲಾಗಿರುವವು; ಯಜ್ಞಮಾಡುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಆ ಪಾತ್ರೆಗಳಲ್ಲಿ ಬೇಯಿಸುವರು; ಆ ದಿನದಲ್ಲಿ ಸೇನಾಧೀಶ್ವರ ಯೆಹೋವನ ಆಲಯದೊಳಗೆ ಯಾವ ವ್ಯಾಪಾರಿಯೂ ಇರುವುದಿಲ್ಲ.
बल्कि येरूशलेम और यहूदाह में की सब देगें, रब्ब — उल — अफ़वाज के लिए पाक होंगी, और सब ज़बीहे पेश करने वाले आयेंगे और उनको लेकर उनमें पकायेंगे और उस रोज़ फिर कोई कन'आनी रब्ब — उल — अफ़वाज के घर में न होगा।